ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ಮಾಜಿ ಸಚಿವ ಕೆ.ಗಂಗಾಧರ ಗೌಡ ಅವರ ಮನೆಗೆ ಐಟಿ ದಾಳಿ

Posted by Vidyamaana on 2023-04-24 04:45:02 |

Share: | | | | |


ಮಾಜಿ ಸಚಿವ ಕೆ.ಗಂಗಾಧರ ಗೌಡ ಅವರ ಮನೆಗೆ ಐಟಿ ದಾಳಿ

ಬೆಳ್ತಂಗಡಿ: ಮಾಜಿ ಸಚಿವ ಕೆ.ಗಂಗಾಧರ ಗೌಡ ಅವರ ಮನೆಗೆ ಬೆಳ್ಳಂಬೆಳಗ್ಗೆ ಆದಾಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಇಂದಬೆಟ್ಟು, ಬೆಳ್ತಂಗಡಿಯಲ್ಲಿರುವ ಮನೆ ಸೇರಿದಂತೆ ಅವರಿಗೆ ಸೇರಿದ ಶಿಕ್ಷಣ ಸಂಸ್ಥೆಗೆ ದಾಳಿ ನಡೆಸಿದೆ.ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಇತ್ತೀಚೆಗೆ ಟಿಕೆಟ್‌ ರಕ್ಷಿತ್ ಶಿವರಾಂ ಅವರಿಗೆ ಲಭಿಸುತ್ತಲೆ ರಾಜಕೀಯ ಓಡಾಟದಿಂದ ಹಿಂದೆ ಸರಿದಿದ್ದರು. ಇದೀಗ ಐಟಿ ದಾಳಿ ಶಾಕ್ ನೀಡಿದೆ.

ಯುಪಿ ಪೊಲೀಸ್ ಡಿಪಾರ್ಟ್ಮೆಂಟ್ ಸೇರ್ತಾರ ಪೆಟ್ ಕಿಂಗ್ ಸನ್ನಿ ಲಿಯೋನ್!?

Posted by Vidyamaana on 2024-02-18 15:57:23 |

Share: | | | | |


ಯುಪಿ ಪೊಲೀಸ್ ಡಿಪಾರ್ಟ್ಮೆಂಟ್ ಸೇರ್ತಾರ ಪೆಟ್ ಕಿಂಗ್ ಸನ್ನಿ ಲಿಯೋನ್!?

ಉತ್ತರ ಪ್ರದೇಶ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರದಲ್ಲಿ ನಟಿ ಸನ್ನಿ ಲಿಯೋನ್ ಅವರ ಹೆಸರಿನೊಂದಿಗೆ ಕಾಣಿಸಿಕೊಂಡಿರುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಸನ್ನಿ ಲಿಯೋನ್ ಹೆಸರಿನ ಪ್ರವೇಶ ಪತ್ರ ಮತ್ತು ಆಕೆಯ ಎರಡು ಚಿತ್ರಗಳನ್ನು ಹಂಚಿಕೊಳ್ಳಲಾಗಿದೆ.

ಉತ್ತರ ಪ್ರದೇಶದ ಯುಪಿ ಪೊಲೀಸ್ ಕಾನ್ಸ್‌ಟೇಬಲ್(Police Constable) ನೇಮಕಾತಿ ಪರೀಕ್ಷೆಯಂದು ಪ್ರವೇಶಪತ್ರವೊಂದರಲ್ಲಿ ಸನ್ನಿ ಲಿಯೋನ್(Sunny Leone) ಚಿತ್ರ ಇರುವುದು ಕಂಡುಬಂದಿದೆ. ಈ ಪೋಸ್ಟರ್ ಎಲ್ಲೆಡೆ ವೈರಲ್ ಆಗಿದೆ. ಪರೀಕ್ಷೆಯ ಮೊದಲ ದಿನ, ಕನೌಜ್ ಜಿಲ್ಲೆಯಲ್ಲಿ ಪೊಲೀಸ್ ನೇಮಕಾತಿ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಯ ಪ್ರವೇಶ ಪತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಅಡ್ಮಿಟ್ ಕಾರ್ಡ್ ಬಗ್ಗೆ ಅಧಿಕಾರಿಗಳು ತಲೆ ಕೆಡಿಸಿಕೊಂಡಿರುವಾಗಲೇ ಈ ಅಡ್ಮಿಟ್ ಕಾರ್ಡ್ ಇಡೀ ದೇಶದಲ್ಲಿ ಚರ್ಚೆಗೆ ಗ್ರಾಸವಾಯಿತು. ಅಷ್ಟಕ್ಕೂ ಈ ಅಡ್ಮಿಟ್ ಕಾರ್ಡ್ ನಲ್ಲಿ ಏನಿತ್ತು ಇಲ್ಲಿದೆ ಮಾಹಿತಿ.


ಈ ಘಟನೆಯು ಕನೌಜ್ ಜಿಲ್ಲೆಯ ತಿರ್ವಾ ಪಟ್ಟಣ ಪ್ರದೇಶದಲ್ಲಿರುವ ಸೋನಶ್ರೀ ಬಾಲಕಿಯರ ಕಾಲೇಜಿನಲ್ಲಿ ನಡೆದಿದೆ, ಅಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ನಡೆಯುತ್ತಿತ್ತು, ಅದೇ ಪರೀಕ್ಷಾ ಕೇಂದ್ರದಲ್ಲಿ, ಅಭ್ಯರ್ಥಿ ಅಂಕಿತ್‌ನ ಪ್ರವೇಶ ಪತ್ರದಲ್ಲಿ ಸಿನಿ ತಾರೆ ಸನ್ನಿ ಲಿಯೋನ್ ಚಿತ್ರವನ್ನು ಅಂಟಿಸಲಾಗಿತ್ತು. ಮಹೋಬಾ ಜಿಲ್ಲೆಯ ನಿವಾಸಿ, ಅಂಕಿತ್ ಚಿತ್ರದ ಜಾಗದಲ್ಲಿ ಈ ಫೋಟೊವಿತ್ತು. ಈ ಅಡ್ಮಿಟ್ ಕಾರ್ಡ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ತಕ್ಷಣ ಸುದ್ದಿ ರಾಜ್ಯಾದ್ಯಂತ ಹಬ್ಬಿತ್ತು.


ಅಡ್ಮಿಟ್ ಕಾರ್ಡ್‌ನಲ್ಲಿ ಬರೆದಿರುವ ನಂಬರ್‌ನಲ್ಲಿ ಫೋನ್‌ನಲ್ಲಿ ಮಾಹಿತಿ ತೆಗೆದುಕೊಂಡಾಗ, ವಿದ್ಯಾರ್ಥಿ ಅಂಕಿತ್ ಅವರು ಸಾರ್ವಜನಿಕ ಸೇವಾ ಕೇಂದ್ರದಿಂದ ಅರ್ಜಿಯನ್ನು ಭರ್ತಿ ಮಾಡಿರುವುದಾಗಿ ಹೇಳಿದರು. ಆದರೆ ಫೋಟೋವನ್ನು ಹೇಗೆ ಬದಲಾಯಿಸಲಾಗಿದೆ ಎಂಬುದು ತಿಳಿದಿಲ್ಲ.


ಈ ಫೋಟೋವನ್ನು ಬದಲಾಯಿಸಿದ್ದರಿಂದ, ಅವರು ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಲಿಲ್ಲ. ಈ ಪ್ರವೇಶ ಪತ್ರದಲ್ಲಿ ನಮೂದಿಸಿರುವ ವಿಳಾಸ ಮುಂಬೈ. ಆದರೆ ನೋಂದಣಿ ಸಮಯದಲ್ಲಿ ತವರು ಜಿಲ್ಲೆಯನ್ನು ಕನ್ನೌಜ್ ಎಂದು ಉಲ್ಲೇಖಿಸಲಾಗಿದೆ. ಕಾಲೇಜು ಆಡಳಿತ ಮಂಡಳಿ ಪ್ರಕಾರ, ಈ ಪ್ರವೇಶ ಪತ್ರದಲ್ಲಿ ಯಾವುದೇ ಅಭ್ಯರ್ಥಿ ಪರೀಕ್ಷೆಗೆ ಹಾಜರಾಗಲಿಲ್ಲ.

ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಇಡೀ ರಾಜ್ಯದಾದ್ಯಂತ ಏಕ ಕಾಲಕ್ಕೆ ಜನತಾ ದರ್ಶನ

Posted by Vidyamaana on 2023-09-25 07:44:13 |

Share: | | | | |


ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಇಡೀ ರಾಜ್ಯದಾದ್ಯಂತ ಏಕ ಕಾಲಕ್ಕೆ ಜನತಾ ದರ್ಶನ

ಬೆಂಗಳೂರು: ರಾಜ್ಯದ ಇತಿಹಾದಲ್ಲೇ ಮೊದಲ ಬಾರಿಗೆ ಇಡಿ ರಾಜ್ಯದಾದ್ಯಂತ ಏಕ ಕಾಲಕ್ಕೆ “ಜನತಾ ದರ್ಶನ”ಕ್ಕೆ ಇಂದು ಕರ್ನಾಟಕ ಸಾಕ್ಷಿಯಾಗಲಿದೆ.


ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ನಡೆಯಲಿರುವ ಈ ಅರ್ಥಪೂರ್ಣ ಕಾರ್ಯಕ್ರಮದ ಹೊಣೆಗಾರಿಕೆ ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಮೇಲಿದೆ. ಜಿಲ್ಲಾ ಉಸ್ತುವಾರಿ ಸಚಿವರುಗಳ ಸಮ್ಮುಖದಲ್ಲೇ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಮತ್ತು ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಕಾಳಜಿ ಈ ಜನತಾ ದರ್ಶನದ ಹಿಂದಿದೆ.


ಮುಖ್ಯಮಂತ್ರಿಗಳ ಸೂಚನೆ ಏನು?


ಆಡಳಿತಕ್ಕೆ ಚುರುಕು ಮುಟ್ಟಿಸಿ, ಸರ್ಕಾರಿ ಯಂತ್ರಾಂಗವನ್ನು ಕ್ರಿಯಾಶೀಲಗೊಳಿಸುವ ಪ್ರಯತ್ನವಾಗಿ ನಡೆಸಿದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹತ್ತು ದಿನಗಳ ಹಿಂದೆ ಒಂದು ಸೂಚನೆ ನೀಡಿದ್ದರು.

“ಜಾತಿ ಪ್ರಮಾಣಪತ್ರ, ಖಾತೆ ಬದಲಾವಣೆ, ಟ್ರಾನ್ಸ್ ಫಾರ್ಮರ್ ರಿಪೇರಿ, ವಿದ್ಯುತ್ ಕಂಬ ಅಳವಡಿಕೆಯಂತಹ ಸಣ್ಣ ಪುಟ್ಟ ಕೆಲಸಗಳಿಗೂ ಜನ ನನ್ನ ಬಳಿಗೆ ಬರುತ್ತಿದ್ದಾರೆ. ನಾನು ಜಿಲ್ಲೆಗಳಿಗೆ ಭೇಟಿ ನೀಡಿದಾಗ ಜನರು ಇಷ್ಟು ಸಣ್ಣ ಪುಟ್ಟ ಕೆಲಸಗಳಿಗೂ ನನ್ನನ್ನು ಹುಡುಕಿಕೊಂಡು ಬರುವಂತಾಗಿದೆ ಎಂದರೆ ನೀವುಗಳಿದ್ದೂ ಏನು ಪ್ರಯೋಜನ ಎಂದು ಸಭೆಯಲ್ಲಿ ಪ್ರಶ್ನಿಸಿದ್ದರು. ಬಳಿಕ ಪ್ರತಿ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲೂ ಜನತಾ ದರ್ಶನ ನಡೆಸಬೇಕು ಎನ್ನುವ ಸೂಚನೆಯನ್ನೂ ನೀಡಿದ್ದರು.


ಈ ಸೂಚನೆಯ ಫಲವೇ ಇಂದು (ಸೆ.25ರ ಸೋಮವಾರ) ರಾಜ್ಯದಾದ್ಯಂತ ಏಕ ಕಾಲಕ್ಕೆ ನಡೆಯಲಿರುವ “ಜನತಾ ದರ್ಶನ” ಕಾರ್ಯಕ್ರಮ. ಇದು ನಿಗದಿತವಾಗಿ ನಡೆಯಲಿದೆ.


ಸ್ವರೂಪ ಏನು?


ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಜನತಾ ದರ್ಶನ ನಡೆಸುತ್ತಾರೆ. ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿರುತ್ತಾರೆ. ಇವರೆಲ್ಲರ ನಡುವೆ ಸಮನ್ವಯ ಸಾಧಿಸಿ ಜನತಾ ದರ್ಶನ ಅರ್ಥಪೂರ್ಣವಾಗಿ ಮತ್ತು ಫಲಪ್ರದವಾಗುವಂತೆ ನೋಡಿಕೊಳ್ಳುವ ಜವಾಬ್ದಾರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಹಿರಿಯ ಐಎಎಸ್ ಅಧಿಕಾರಿಗಳ ಮೇಲೆ ಇರುತ್ತದೆ.


ಪ್ರತಿ ಜಿಲ್ಲೆಯಲ್ಲೂ ಜನತಾ ದರ್ಶನ ನಡೆಯುವ, ನಡೆಸುವ ಬಗ್ಗೆ ಸಾರ್ವಜನಿಕರಿಗೆ ಈಗಾಗಲೇ ತಿಳಿವಳಿಕೆ ನೀಡಲಾಗಿದೆ. ನಿಗದಿತ ಸ್ಥಳದಲ್ಲಿ ನಿಗದಿತ ಸಮಯಕ್ಕೆ ಸರಿಯಾಗಿ ಜನತಾ ದರ್ಶನ ಆರಂಭವಾಗಬೇಕು ಎನ್ನುವ ಸೂಚನೆ ಸರ್ಕಾರದ ಕಡೆಯಿಂದ ಹೋಗಿದೆ. ಇಲ್ಲಿ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು. ಈ ಅಹವಾಲುಗಳಿಗೆ ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಒದಗಿಸುವುದು ಪ್ರಥಮ ಆಧ್ಯತೆಯಾಗಿರುತ್ತದೆ. ತಾಂತ್ರಿಕ ಕಾರಣಗಳಿಂದ ಇದು ಸಾಧ್ಯವಾಗದಿದ್ದರೆ ಸಾರ್ವಜನಿಕರ ಅಹವಾಲುಗಳು ಸ್ಥಳದಲ್ಲೇ ದಾಖಲಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ವರ್ಗಾವಣೆಗೊಳ್ಳುತ್ತವೆ. ಎಲ್ಲದಕ್ಕೂ ಕಾಲ ಮಿತಿಯಲ್ಲಿ ಪರಿಹಾರ ಒದಗಿಸುವ ಮತ್ತು ಸಾರ್ವಜನಿಕರು ನೀಡಿದ ಅಹವಾಲಿನ ಸ್ಥಿತಿಗತಿಯನ್ನು ಅರ್ಜಿದಾರರಿಗೆ ಮನವರಿಕೆ ಮಾಡಿಸುವ ಜವಾಬ್ದಾರಿ ಕೂಡ ಜಿಲ್ಲಾಡಳಿತದ ಮೇಲೆ ಇರುತ್ತದೆ.


ಸಾರ್ವಜನಿಕರ ಅಹವಾಲು ಎಲ್ಲಿ ದಾಖಲಾಗುತ್ತವೆ?


ಜನತಾ ದರ್ಶನದಲ್ಲಿ ಸಲ್ಲಿಕೆಯಾಗುವ ಸಾರ್ವಜನಿಕರ ಅಹವಾಲುಗಳು ಈಗಾಗಲೇ ಚಾಲ್ತಿಯಲ್ಲಿರುವ “ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ (ಐಪಿಜಿಆರ್‌ಎಸ್-ಇಂಟೆಗ್ರೇಟೆಡ್ ಪಬ್ಲಿಕ್ ಗ್ರಿವಿಯೆನ್ಸ್ ರಿಡ್ರೆಸಲ್ ಸಿಸ್ಟಂ) ತಂತ್ರಾಂಶದಲ್ಲಿ ದಾಖಲಾಗುತ್ತದೆ ಮತ್ತು ಇಲ್ಲಿಂದಲೇ ಸಂಬಂಧಪಟ್ಟ ಇಲಾಖೆಯ ಟೇಬಲ್ಲಿಗೆ ಅರ್ಜಿಗಳ ವಿಲೇವಾರಿಯೂ ನಡೆಯುತ್ತದೆ. ಬಳಿಕ ಕಾಳಜಿ ವಹಿಸಿ ಕಾಲಮಿತಿಯಲ್ಲಿ ಪರಿಹಾರ ಒದಗಿಸಲು ಕ್ರಮ ವಹಿಸಬೇಕು ಎನ್ನುವ ಸೂಚನೆ ಈಗಾಗಲೇ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ರವಾನೆಯಾಗಿದೆ.


ತಾಲ್ಲೂಕು ಮಟ್ಟದ ಜನತಾ ದರ್ಶನ


ಇಂದು ಪೂರ್ತಿ ರಾಜ್ಯಾದ್ಯಂತ ಜಿಲ್ಲಾ ಮಟ್ಟದ ಜನತಾ ದರ್ಶನ ಸಭೆ ನಡೆದ ಬೆನ್ನಲ್ಲೇ ಪ್ರತಿ ಹದಿನೈದು ದಿನಗಳಿಗೆ ಒಮ್ಮೆ ಜಿಲ್ಲಾಧಿಕಾರಿಗಳು ಒಂದು ತಾಲ್ಲೂಕನ್ನು ಆರಿಸಿಕೊಂಡು ತಾಲ್ಲೂಕು ಮಟ್ಟದ ಜನತಾ ದರ್ಶನ ಸಭೆ ನಡೆಸಬೇಕು ಎನ್ನುವ ಆದೇಶವನ್ನೂ ಈಗಾಗಲೇ ಮುಖ್ಯಮಂತ್ರಿಗಳ ಸೂಚನೆಯಂತೆ, ಅಪರ ಮುಖ್ಯ ಕಾರ್ಯದರ್ಶಿ ಆಗಿರುವ ರಜನೀಶ್ ಗೋಯಲ್ ಅವರು ಹೊರಡಿಸಿದ್ದಾರೆ.


ಪರಿಣಾಮ


ಸಾರ್ವಜನಿಕರು ಪದೇ ಪದೇ ಸಣ್ಣ ಪುಟ್ಟ ಕೆಲಸಗಳಿಗೂ ಸರ್ಕಾರಿ ಕಚೇರಿಗಳಿಗೆ, ಶಾಸಕರ, ಜಿಲ್ಲಾ ಮಂತ್ರಿಗಳ, ಮುಖ್ಯಮಂತ್ರಿಗಳ ಬಳಿಗೆ ಅಲೆಯುವುದು ತಪ್ಪುತ್ತದೆ. ಅರ್ಜಿದಾರರ ದೂರು ಸತ್ಯವಾಗಿದ್ದು, ಯಾವುದೇ ದುರುದ್ದೇಶದಿಂದ ಕೂಡಿರದಿದ್ದರೆ ಅಂತಹ ಅರ್ಜಿಗಳಿಗೆ ಸೂಕ್ತ ಪರಿಹಾರ ಒದಗಿಸದಿದ್ದರೆ ಸಂಬಂಧಪಟ್ಟ ಅಧಿಕಾರಿಯನ್ನು ಇದಕ್ಕೆ ಹೊಣೆಗಾರರನ್ನಾಗಿಸಿ ಸರ್ಕಾರ ಕ್ರಮ ಜರುಗಿಸಲಿದೆ.


ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಇಡೀ ರಾಜ್ಯದಾದ್ಯಂತ ಏಕ ಕಾಲಕ್ಕೆ ಒಂದೇ ದಿನ ಜನತಾ ದರ್ಶನ ದಾಖಲಾಗುತ್ತಿದೆ.

ಅಡ್ಯಾರ್ ಬಳಿ ಬೈಕ್ ಅಪಘಾತ : ವಿಟ್ಲ ಮೂಲದ ಕಾರ್ತಿಕ್ ಮೃತ್ಯು.!

Posted by Vidyamaana on 2023-02-11 04:31:42 |

Share: | | | | |


ಅಡ್ಯಾರ್ ಬಳಿ ಬೈಕ್ ಅಪಘಾತ : ವಿಟ್ಲ ಮೂಲದ ಕಾರ್ತಿಕ್ ಮೃತ್ಯು.!

ವಿಟ್ಲ: ಬೈಕ್ ಅಪಘಾತ ಸಂಭವಿಸಿ ವಿಟ್ಲ ಮೂಲದ ಯುವಕನೋರ್ವ ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.ಮೃತ ಯುವಕನನ್ನು ಮಾಣಿಲ ಗ್ರಾಮದ ಪಕಳಕುಂಜ ಬಾಳೆಕಾನ ನಿವಾಸಿ ಗೋಪಾಲಕೃಷ್ಣ ಮಣಿಯಾನಿ ಮತ್ತು ಸುಧಾಮಣಿ ದಂಪತಿಗಳ ಪುತ್ರ ಕಾರ್ತಿಕ್ ಮಣಿಯಾನಿ (24) ಎಂದು ಗುರುತಿಸಲಾಗಿದೆ.

ಕಾರ್ತಿಕ್ ಮಂಗಳೂರಿನಲ್ಲಿ ಡೆಕೋರೇಷನ್ ಕೆಲಸ ನಿರ್ವಹಿಸುತ್ತಿದ್ದು, ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಅಡ್ಯಾರ್ ಬಳಿ ಅಪಘಾತ ನಡೆದಿದೆ ಎನ್ನಲಾಗಿದೆ.

ಮೃತರು ತಂದೆ, ತಾಯಿ, ಓರ್ವ ಸಹೋದರ ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ

ಮೈಸೂರು ಭೇಟಿ ವೇಳೆ ಝಿರೋ ಟ್ರಾಫಿಕ್ ಮಾಡಿದ್ದಕ್ಕೆ ಗರಂ ಆದ ಸಿಎಂ

Posted by Vidyamaana on 2023-06-10 14:17:25 |

Share: | | | | |


ಮೈಸೂರು ಭೇಟಿ ವೇಳೆ ಝಿರೋ ಟ್ರಾಫಿಕ್ ಮಾಡಿದ್ದಕ್ಕೆ ಗರಂ ಆದ ಸಿಎಂ

ಮೈಸೂರು : ತಮ್ಮ ಪ್ರಯಾಣದ ವೇಳೆ ಝೀರೋ ಟ್ರಾಫಿಕ್ ಮಾಡಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಯಾಕಾಗಿ ಝೀರೋ ಟ್ರಾಫಿಕ್ ಮಾಡಿದ್ದೀರಾ? ಎಂದು ಮೈಸೂರು ಪೊಲೀಸ್ ಆಯುಕ್ತರನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.ಸಿಎಂ ಸಿದ್ದರಾಮಯ್ಯ ಮೈಸೂರು ವಿಮಾನ ನಿಲ್ದಾಣದಿಂದ ಜಿಲ್ಲಾ ಪಂಚಾಯತ್ ಕಚೇರಿಗೆ ಆಗಮಿಸಿದ್ದರು.ಈ ವೇಳೆ ಅವರಿಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದರಿಂದ ಸಿಟ್ಟಾದ ಸಿದ್ದರಾಮಯ್ಯ ಪೊಲೀಸ್ ಆಯುಕ್ತರನ್ನು ಪ್ರಶ್ನಿಸಿ, ನಿಮಗೆ ಗೊತ್ತಿದೆಯಾ, ನಾನು ಝೀರೋ ಟ್ರಾಫಿಕ್ ಮಾಡಬೇಡಿ ಎಂದು ಹೇಳಿದ್ದೇನೆ. DONT DO THAT ಎಂದು ಹೇಳುತ್ತಾ ಖಡಕ್ ವಾರ್ನಿಂಗ್ ನೀಡಿದ ಘಟನೆ ಜಿ.ಪಂ ಆವರಣದಲ್ಲಿ ನಡೆದಿದೆ.ಸಿದ್ದರಾಮಯ್ಯ ಎರಡನೇ ಬಾರಿಗೆ ಸಿಎಂ ಆಗಿ ಅಧಿಕಾರ ವಹಿಸುತ್ತಿದ್ದಂತೆ ತಮ್ಮ ವಾಹನ ಸಂಚಾರಕ್ಕೆ ನೀಡಲಾಗಿದ್ದ ಝೀರೋ ಟ್ರಾಫಿಕ್​ ಸೌಲಭ್ಯವನ್ನು ಹಿಂಪಡೆಯುವಂತೆ ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದರು. ಝೀರೋ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದರು.ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಹಲವು ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ಈ ವೇಳೆ ಸಚಿವರಾದ ಎಚ್‌.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಶಾಸಕರಾದ ಜಿ.ಟಿ.ದೇವೇಗೌಡ, ತನ್ವೀರ್‌ ಸೇಠ್, ಶ್ರೀವತ್ಸ, ರವಿಶಂಕರ್, ಅನಿಲ್ ಚಿಕ್ಕಮಾದು, ಜಿ.ಡಿ.ಹರೀಶ್‌ ಗೌಡ, ವಿಧಾನ ಪರಿಷತ್ ಸದಸ್ಯ ತಿಮ್ಮಯ್ಯ ಸೇರಿ ಹಲವರು ಭಾಗಿಯಾಗಿದ್ದರು.

ಗೌಡರಿಗೆ ಮಂಡಿಯೂರಿ ನಮಸ್ಕರಿಸಿದ ಪ್ರತಾಪ್‌ಸಿಂಹ; ಮೈತ್ರಿ ನಡುವೆ ಸಂಬಂಧ ಗಟ್ಟಿ ಮಾಡಿಕೊಂಡ ಸಂಸದ!

Posted by Vidyamaana on 2023-09-12 17:59:56 |

Share: | | | | |


ಗೌಡರಿಗೆ ಮಂಡಿಯೂರಿ ನಮಸ್ಕರಿಸಿದ ಪ್ರತಾಪ್‌ಸಿಂಹ; ಮೈತ್ರಿ ನಡುವೆ ಸಂಬಂಧ ಗಟ್ಟಿ ಮಾಡಿಕೊಂಡ ಸಂಸದ!

ಮೈಸೂರು: ಲೋಕಸಭಾ ಚುನಾವಣೆಯ (Parliament Elections 2024) ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಮಧ್ಯೆ ಮೈತ್ರಿ (BJP-JDS Alliance) ಏರ್ಪಡಲಿದೆ ಎಂಬ ಸುದ್ದಿ ಕೇಳುತ್ತಿದ್ದಂತೆಯೇ ಹಲವಾರು ಬಿಜೆಪಿ ನಾಯಕರು ಥ್ರಿಲ್ಲಾಗಿದ್ದಾರೆ. ಈ ಬಾರಿಯ ಕಾಂಗ್ರೆಸ್‌ ಅಬ್ಬರದಲ್ಲಿ ಸೋಲಬಹುದೇ ಎಂಬ ಭಯದಲ್ಲಿದ್ದವರಿಗೂ ಜೆಡಿಎಸ್‌ ಮತಗಳು ಬಲ ತುಂಬಬಹುದು ಎಂಬ ನಿರೀಕ್ಷೆ ಹೆಚ್ಚಾಗಿದೆ.ಹೀಗಾಗಿ ಜೆಡಿಎಸ್‌ ಜತೆಗಿನ ಮೈತ್ರಿಯನ್ನು ಬಹುತೇಕರು ತುಂಬು ಹೃದಯದಿಂದ ಸ್ವಾಗತಿಸಿದ್ದಾರೆ. ಮೈಸೂರಿನ ಸಂಸದರಾಗಿರುವ ಪ್ರತಾಪ್‌ಸಿಂಹ (MP Pratapsimha) ಅವರಂತೂ ಮಾಜಿ ಪ್ರಧಾನಿ ದೇವೇಗೌಡರ (HD Devegowda) ಮುಂದೆ ಮಂಡಿಯೂರಿ ನಮಸ್ಕರಿಸುವ ಮೂಲಕ ಸಂಬಂಧವನ್ನು ಇನ್ನಷ್ಟು ಗಟ್ಟಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.


ಹೀಗೆ ಮಂಡಿಯೂರಿ ನಮಸ್ಕರಿಸಿದ ಘಟನೆ ನಡೆದಿರುವುದು ಸೋಮವಾರ ಮೈಸೂರಿನಲ್ಲಿ. ಆದಿ ಚುಂಚನಗಿರಿ ನೂತನ ಶಾಖಾ ಮಠದ ಉದ್ಘಾಟನೆ ಕಾರ್ಯಕ್ರಮದ ವೇಳೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಸಮ್ಮುಖದಲ್ಲಿ ಪ್ರತಾಪ್‌ ಸಿಂಹ ಅವರು ಎಚ್.ಡಿ ದೇವೇಗೌಡ ಹಾಗೂ ಜಿ.ಟಿ ದೇವೇಗೌಡ ಇಬ್ಬರನ್ನೂ ಭೇಟಿ ಮಾಡಿ ಮಾತುಕತೆ ಕಡೆಸಿದರು. ಭೇಟಿಯ ವೇಳೆ ಅವರು ಮಂಡಿಯೂರಿ ನಮಸ್ಕರಿಸಿದ್ದನ್ನು ನೋಡಿ ಸ್ವತಃ ದೇವೇಗೌಡರು, ಸ್ವಾಮೀಜಿಗಳು ಮತ್ತು ಜಿ.ಟಿ. ದೇವೇಗೌಡರು ನಕ್ಕಿರುವ ಚಿತ್ರಗಳು ವೈರಲ್‌ ಆಗುತ್ತಿವೆ.


ಲೋಕಸಭಾ ಚುನಾವಣೆಗೆ ಬಿಜೆಪಿ, ಜೆಡಿಎಸ್ ಮೈತ್ರಿ ನಡೆಯಲಿದೆ ಎಂಬ ಸುದ್ದಿಯ ಬೆನ್ನಲ್ಲೇ ಸಂಸದ ಪ್ರತಾಪ್‌ ಸಿಂಹ ಅವರು ಅಲರ್ಟ್‌ ಆಗಿದ್ದು, ಜೆಡಿಎಸ್ ವರಿಷ್ಠರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಮಾತುಕತೆ ನಡೆಸಿದ್ದಾರೆ.


ಪ್ರತಾಪ್ ಸಿಂಹ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದರು. ಮೈತ್ರಿಯ ಅನುಸಾರ ಮೈಸೂರಿನಲ್ಲಿ ಜೆಡಿಎಸ್‌ ಬಿಜೆಪಿಗೆ ಬೆಂಬಲ ನೀಡಲಿದೆ ಎನ್ನಲಾಗುತ್ತಿದೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಪ್ರಾಬಲ್ಯ ಹೊಂದಿರುವುದು ಒಕ್ಕಲಿಗರು. ಅವರನ್ನು ಒಲಿಸಿಕೊಳ್ಳುವ ನಿಟ್ಟಿನಲ್ಲಿ ಇದೊಂದು ಸಣ್ಣ ಪ್ರಯತ್ನ ಎಂದು ಹೇಳಲಾಗುತ್ತಿದೆ.ದೇವೇಗೌಡರಿಗೆ ನಮಸ್ಕರಿಸಿದ ಪ್ರತಾಪ್‌ ಸಿಂಹ

ನಿಜವೆಂದರೆ, ಪ್ರತಾಪ್‌ ಸಿಂಹ ಅವರು ಮೈಸೂರು ಭಾಗದ ಜೆಡಿಎಸ್‌ ನಾಯಕರ ಜತೆಗೆ ಉತ್ತಮ ಬಾಂಧವ್ಯವನ್ನೇ ಹೊಂದಿದ್ದಾರೆ. ಜಿ.ಟಿ. ದೇವೇಗೌಡ, ಸಾರಾ ಮಹೇಶ್‌ ಅವರೂ ಆಪ್ತರೇ ಆಗಿದ್ದಾರೆ. ಪ್ರತಾಪ್‌ಸಿಂಹ ಅವರಿಗೆ ಬಿಜೆಪಿಯಲ್ಲೇ ಕೆಲವರು ವಿರೋಧಿಗಳಿರಬಹುದು. ಆದರೆ, ಜೆಡಿಎಸ್‌ನಲ್ಲಿ ಇಲ್ಲ ಎಂಬ ಮಾತಿದೆ. ಅಷ್ಟು ಚೆನ್ನಾಗಿ ಸಂಬಂಧ ಇಟ್ಟುಕೊಂಡಿದ್ದಾರೆ.


ನಿಜವೆಂದರೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರತಾಪ್‌ ಸಿಂಹ ಅವರ ಗೆಲುವಿನಲ್ಲಿ ಕೊನೆಯ ಕ್ಷಣದಲ್ಲಿ ತಿರುಗಿದ ಜೆಡಿಎಸ್‌ ಮತಗಳ ಪ್ರಭಾವ ಇದೆ ಎಂದು ಹೇಳಲಾಗುತ್ತಿದೆ. ಸ್ವತಃ ದೇವೇಗೌಡರೇ ಇಲ್ಲ ಪ್ರತಾಪ್‌ ಪರ ನಿಂತರು ಎನ್ನಲಾಗುತ್ತಿತ್ತು. ಕಳೆದ ಬಾರಿ ಹೇಗೋ ಗೊತ್ತಿಲ್ಲ. ಆದರೆ, ಈ ಬಾರಿ ಅವರು ಪ್ರತಾಪ್‌ ಸಿಂಹ ಅವರಿಗೆ ಮುಕ್ತವಾಗಿ ಬೆಂಬಲ ನೀಡುವುದು ಖಚಿತವಾಗಿದೆ.


ಹ್ಯಾಟ್ರಿಕ್ ಗೆಲುವಿಗೆ ಚುನಾವಣಾ ರಣತಂತ್ರ ಹೆಣೆಯುತ್ತಿರುವ ಸಂಸದ ಪ್ರತಾಪ್‌ ಸಿಂಹ ಅವರಿಗೆ ಜೆಡಿಎಸ್‌ ಮೈತ್ರಿ ಬಲವನ್ನು ಕೊಟ್ಟಿದೆ. ದೇವೇಗೌಡರ ಆಶೀರ್ವಾದವಿದ್ದರೆ ಗೆಲುವು ಕಷ್ಟವಲ್ಲ ಎನ್ನುವುದು ಪ್ರತಾಪ್‌ ಸಿಂಹ ಅವರಿಗೂ ಗೊತ್ತಿದೆ. ಈ ನಡುವೆ, ಅವರ ವಿರುದ್ಧ ಕಾಂಗ್ರೆಸ್‌ನಿಂದ ಯಾರು ಕಣಕ್ಕಿಳಿಯುತ್ತಾರೆ ಎನ್ನುವುದರ ಆಧಾರದ ಮೇಲೆ ಹೊಸ ಕಾರ್ಯತಂತ್ರಗಳು ರೂಪುಗೊಳ್ಳಲಿವೆ.



Leave a Comment: