ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕ ಆರಂಭ: ಸಿಎಂ ಸಿದ್ದರಾಮಯ್ಯ

ಸುದ್ದಿಗಳು News

Posted by vidyamaana on 2024-07-01 19:16:06 |

Share: | | | | |


ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕ ಆರಂಭ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಬೆಂಗಳೂರು ಪ್ರೆಸ್ ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು.

ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದರು

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಅವರು ಉಪಸ್ಥಿತರಿದ್ದರು.

ಹಿರಿಯ ಪತ್ರಕರ್ತರಾದ ಕೃಷ್ಣಪ್ರಸಾದ್ ಅವರು ಪ್ರಧಾನ ಭಾಷಣದಲ್ಲಿ ಪತ್ರಿಕೋದ್ಯಮದ ಈ ಕ್ಷಣದ ಸ್ಥಿತಿಗತಿಯನ್ನು ವಿವರಿಸಿದರು.

 Share: | | | | |


ಬಂಟ್ವಾಳ ; ಕಾರಿನಲ್ಲಿ ಏಕಾಏಕಿ ಬೆಂಕಿ ಹೊತ್ತಿ ಉರಿದ ಡಸ್ಟರ್ ಕಾರು

Posted by Vidyamaana on 2024-04-08 15:04:44 |

Share: | | | | |


ಬಂಟ್ವಾಳ ; ಕಾರಿನಲ್ಲಿ ಏಕಾಏಕಿ ಬೆಂಕಿ ಹೊತ್ತಿ ಉರಿದ ಡಸ್ಟರ್ ಕಾರು

ಬಂಟ್ವಾಳ, ಎ.8: ರೆನಾಲ್ಟ್‌ ಡಸ್ಟರ್ ಕಾರು ಏಕಾಏಕಿ ಬೆಂಕಿ ಹತ್ತಿಕೊಂಡು ಉರಿದು ಭಸ್ಮಗೊಂಡ ಘಟನೆ ಬಂಟ್ವಾಳ- ಮೂಡುಬಿದಿರೆ ರಸ್ತೆಯ ರಾಯಿ ಬಳಿಯ ಕುದ್ಕೋಳಿ ಎಂಬಲ್ಲಿ ನಡೆದಿದೆ. 


ಸೋಮವಾರ ಬೆಳಗ್ಗೆ ರಸ್ತೆಯಲ್ಲಿ ಸಾಗುತ್ತಿದ್ದ ಕಾರಿನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿತ್ತು. ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕ ದಳದವರು ನೀರು ಹಾಯಿಸಿ ಬೆಂಕಿ ನಂದಿಸಿದ್ದಾರೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ಇಳಿದು ಅಪಾಯದಿಂದ ಪಾರಾಗಿದ್ದಾರೆ. ಆದರೆ ಕಾರು ಸಂಪೂರ್ಣ ಹೊತ್ತಿ ಉರಿದಿದೆ. ಘಟನೆಯಿಂದ ಸುಮಾರು ಒಂದು ತಾಸುಗಳ ಕಾಲ ಬಂಟ್ವಾಳ- ಮೂಡುಬಿದಿರೆ ರಸ್ತೆ ಬ್ಲಾಕ್ ಆಗಿತ್ತು.

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

Posted by Vidyamaana on 2024-05-26 06:37:52 |

Share: | | | | |


ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ಐದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಮೈಸೂರು, ತುಮಕೂರು, ಕೊಡುಗು ಜಿಲ್ಲೆಗಳ ಧಾರಾಕಾರ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಟ್ವಾಳ : ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ LIC ಏಜೆಂಟ್ ನಾರಾಯಣ ಕುಲಾಲ್ ಆತ್ಮಹತ್ಯೆ

Posted by Vidyamaana on 2023-10-02 07:54:25 |

Share: | | | | |


ಬಂಟ್ವಾಳ : ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ LIC  ಏಜೆಂಟ್ ನಾರಾಯಣ ಕುಲಾಲ್  ಆತ್ಮಹತ್ಯೆ

ಬಂಟ್ವಾಳ : ಮಾಣಿ - ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಅ 02 ಸೋಮವಾರ ಮುಂಜಾನೆ ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.


    ಮೃತನನ್ನು ಸೂರಿಕುಮೇರ್ ನಿವಾಸಿ ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ, ಎಲ್ಲೈಸಿ ಏಜೆಂಟ್ ನಾರಾಯಣ ಕುಲಾಲ್ ಎಂದು ಗುರುತಿಸಲಾಗಿದೆ.


  ಅ 2 ಸೋಮವಾರ ಮುಂಜಾನೆ 5 ರ ವೇಳೆಗೆ ಪರ್ಲೊಟ್ಟು ಎಂಬಲ್ಲಿನ ಕೆರೆಯ ಬಳಿ ಬೈಕ್, ಮೊಬೈಲ್, ಚಪ್ಪಲಿಯನ್ನು ನೋಡಿದ ಸ್ಥಳೀಯರು ಯಾರೋ ಕೆರೆಗೆ ಹಾರಿ ಆತ್ಮಹತ್ಯೆ ಗೈದಿರಬೇಕು ಎಂಬ ಸಂಶಯದಿಂದ ವಿಟ್ಲ ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ದಳದವರಿಗೆ ತಿಳಿಸಿದ್ದಾರೆ.


   ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು ಕೆರೆಯಲ್ಲಿ ಹುಡುಕಾಟ ನಡೆಸಿ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ. ಅಲ್ಲಿ ಸೇರಿದವರು ಮೃತನನ್ನು ಗುರುತಿಸಿದ್ದಾರೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿದ್ದು ಮುಂದಿನ ತನಿಖೆ ನಡೆಸುತ್ತಿದ್ದಾರೆ.


   ಪ್ರಥಮ ನೋಟದಲ್ಲಿ ಇದು ಆತ್ಮಹತ್ಯೆ ಎಂದು ಕಂಡುಬಂದರೂ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿಯಬೇಕಷ್ಟೆ.

ವಿಟ್ಲ ಚಂದಳಿಕೆ :ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

Posted by Vidyamaana on 2023-05-02 23:02:43 |

Share: | | | | |


ವಿಟ್ಲ ಚಂದಳಿಕೆ :ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು; ನಾನು ಬಿಜೆಪಿಯಲ್ಲಿರುವಾಗಲೇ ಕಳೆದ ಹಲವು ವರ್ಷಗಳಿಂದ ಉದ್ಯಮ ನಡೆಸುತ್ತಿದ್ದೇನೆ. ನಾನು ಮಾಡುವ ಎಲ್ಲಾ ವ್ಯವಹಾರವೂ ಪ್ರಾಮಾಣಿಕವಾಗಿಯೇ ಮಾಡುತ್ತಿದ್ದೇನೆ, ಸರಕಾರಕ್ಕೆ ಪಾವತಿಸಬೇಕಾದ ಎಲ್ಲಾ ತೆರಿಗೆಗಳನ್ನು ಸರಿಯಾದ ಸಮಯಕ್ಕೆ ಪಾವತಿಮಾಡುತ್ತಿದ್ದೇನೆ ಇದೆಲ್ಲವೂ ಬಿಜೆಪಿಗರಿಗೆ ಗೊತ್ತಿದೆ. ಇದೆಲ್ಲವೂ ಗೊತ್ತಿದ್ದೂ ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಹವಾ ಕಂಡು ಬೆದರಿದ ಬಿಜೆಪಿ ನನ್ನ ಮನೆಯ ಮೇಲೆ ಐ ಟಿ ದಾಳಿ ನಡೆಸಿ ನನ್ನನ್ನು ಕಟ್ಟಿಹಾಕುವ ಕೆಲಸವನ್ನು ಮಾಡಿದ್ದಲ್ಲದೆ ನನಗೆ ಮಾನಸಿಕ ಕಿರುಕುಳ ನೀಡುವ ಕೆಲಸವನ್ನು ಮಾಡುತ್ತಿದೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಸಭೆಯಲ್ಲಿ ಕಣ್ಣೀರು ಹಾಕಿದ ಘಟನೆ ವಿಟ್ಲ ವ್ಯಾಪ್ತಿಯ ಚಂದಳಿಕೆಯಲ್ಲಿ ನಡೆದಿದೆ.

ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಂ ಕೆ ಬಿ ಯವರ ಅಧ್ಯಕ್ಷತೆಯಲ್ಲಿ ಚಂದಳಿಕೆಯಲ್ಲಿ ನಡೆಯಿತು.

ಸಭೆಯಲ್ಲಿ ಮಾತನಾಡಿದ ಅಶೋಕ್ ರೈ ನನ್ನ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆಯಲ್ಲೆಲ್ಲಾ ಹುಡುಕಾಡಿ ಮನೆಯಲ್ಲಿದ್ದ ೧,೮೯೦೦೦ ರೂವನ್ನು ಕೊಂಡೊಯ್ದಿದ್ದಾರೆ. ನಾನು ಮನೆಯಲ್ಲಿ ಕೋಟಿಗಟ್ಟಲೆ ಹಣ ಇಟ್ಟಿದ್ದೇನೆ ಎಂಬ ತಪ್ಪು ಮಾಹಿತಿಯನ್ನು ಬಿಜೆಪಿಯೇ ನೀಡಿದೆ. ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಕಳೆದ ಕೆಲವು ದಿನಗಳಿಂದ ಕ್ಷೇತ್ರದಾದ್ಯಂತ ಪ್ರಚಾರ ಕಾರ್ಯದಲ್ಲಿ ಮಗ್ನನಾಗಿದ್ದೇನೆ. ನಾವು ಹೋದಲ್ಲೆಲ್ಲಾ, ಸಭೆ ನಡೆಸಿದಲ್ಲೆಲ್ಲಾ ಅಭೂತ ಪೂರ್ವ ಜನಬೆಂಬಲ ವ್ಯಕ್ತವಾಗುತ್ತಿದೆ ಇದನ್ನು ಕಂಡು ಸಹಿಸದ ಬಿಜೆಪಿ ಈ ಕೃತ್ಯಕ್ಕೆ ಕೈ ಹಾಕಿದೆ ಎಂದು ಹೇಳಿ ಭಾವುಕರಾದ ಅವರು ಮಾತನಾಡುತ್ತಲೇ ನೋವು ತಡೆಯಲಾರದೆ ಕಣ್ಣೀರು ಹಾಕಿದರು. ನಾನು ಯಾರಿಗೂ ಅನ್ಯಾಯ ಮಾಡಿಲ್ಲ, ಸರಕಾರದ , ಇಲಾಖೆಯ ಕಣ್ಣು ತಪ್ಪಿಸಿ ವ್ಯವಹಾರ ಮಾಡಿಲ್ಲ. ನಾನು ನನ್ನ ಉದ್ದಿಮೆಯ ಒಂದು ಪಾಲು ಬಡವರಿಗೆ ದಾನವಾಗಿ ನೀಡಿದ್ದೇನೆ ಅದೇ ಬಡವನ ಆಶೀರ್ವಾದದಿಂದ ನನಗೆ ಎಷ್ಟೇ ಕಿರುಕುಳ ಕೊಟ್ಟರೂ ಧೈರ್ಯವಾಗಿ ಮುನ್ನಡೆಯುತ್ತಿದ್ದೇನೆ. ಬಡ ಜೀವಗಳ ಆಶೀರ್ವಾದ ಇರುವ ತನಕ ನನ್ನನ್ನು ಏನೂ ಮಾಡಲು ಸಾಧ್ಯವಿಲ್ಲ ಎಂಬುದನ್ನು ಬಿಜೆಪಿಗರು ಅರಿತುಕೊಳ್ಳಬೇಕು ಎಂದು ಹೇಳಿದರು.

ಅಭಿವೃದ್ದಿ ಕೆಲಸ ಮಾಡಿದ್ದರೆ ಚರ್ಚೆಗೆ ಬನ್ನಿಬಿಜೆಪಿ ಶಾಸಕರು ಕಳೆದ ಐದು ವರ್ಷಗಳಿಂದ ಮಾಡಿದ ಅಭಿವೃದ್ದಿ ಕಾರ್ಯ ಏನು ಎಂಬುದನ್ನು ಜನರ ಮುಂದೆ ಇಡಿ, ಆ ವಿಚಾರದಲ್ಲಿ ನಾನು ಚರ್ಚೆ ಮಾಡುವ. ಜಿಲ್ಲೆಯಲ್ಲಿ ಏಳುಮಂದಿ ಶಾಸಕರು, ಇಬ್ಬರು ಮಂತ್ರಗಳಿದ್ದರೂ ಒಬ್ಬ ಬಡವನಿಗೆ ಸೂರು ಕಲ್ಪಿಸಲು ಸಾಧ್ಯವಾಗಿಲ್ಲ, ಬಡವನ ಮನೆಯನ್ನು ಬೆಳಗಿಸಲು ಸಾಧ್ಯವಾಗಿಲ್ಲ. ಅಭಿವೃದ್ದಿ ಕೆಲಸ ಮಾಡದೆ ಚುನವಣೆ ಸಂದರ್ಭದಲ್ಲಿ ಎದುರಾಳಿ ಅಭ್ಯರ್ಥಿಗೆ ಐಟಿ ದಾಳಿ ಮಾಡಿಸುವುದು, ನನ್ನ ಸಿಬಂದಿಗಳನ್ನು ದಿಗ್ಬಂದನದಲ್ಲಿರಿಸುವ ಕೆಲಸಕ್ಕೆ ಯಾಕೆ ಕೈ ಹಾಕುತ್ತೀರಿ. ಅಭಿವೃದ್ದಿ ಮಾಡಿದ್ದರೆ ಧೈರ್ಯವಾಗಿ ಬನ್ನಿ ಎಂದು ಬಿಜೆಪಿಗೆ ಸವಾಲು ಹಾಕಿದರು. ವಿಟ್ಲ- ಕಬಕ ರಸ್ತೆಯನ್ನು ೬೦% ನಲ್ಲಿ ಡಾಮರೀಕರಣ ಮಾಡಲಾಗಿದೆ. ಈ ಬಾರಿಯ ಮಳೆಗಾಲದಲ್ಲಿ ಡಾಮಾರು ಕೊಚ್ಚಿ ಹೋಗಬಹುದು, ವಿಟ್ಲದಲ್ಲಿ, ಪುತ್ತೂರಿನಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲ, ರಿಂಗ್ ರೋಡ್ ಮಾಡುವುದಾಗಿ ಹೇಳಿದವರು ಕಮಿಷನ್ ಪಡೆದು ತನ್ನ ಹಾಗೂ ತನ್ನ ಕುಟುಮಬದವರ ಕೈ ಬೆರಳಿಗೆ ಚಿನ್ನದ ರಿಂಗ್ ಹಾಕಿಸಿದ್ದು ಬಿಟ್ಟರೆ ಏನೂ ಅಭಿವೃದ್ದಿ ಕೆಲಸ ಮಾಡಿಲ್ಲ ಎಂದು ಹೇಳಿದರು.

ಬಡವರಿಗೆ ನೆರವು ನೀಡುವೆ ತಾಕತ್ತಿದ್ದರೆ ತಡೆಯಿರಿನಾನು ಬಡವರ ಸಮಾಜ ಸೇವೆ ಮಾಡಲೆಂದೇ ಚುನಾವಣಾ ಆಖಾಡಕ್ಕೆ ಇಳಿದಿದ್ದೇನೆ. ಕಳೆದ ೧೨ ವರ್ಷಗಳಿಂದ ಇದನ್ನೇ ಮಾಡುತ್ತಿದ್ದೇನೆ ಸಮಾಜ ಸೇವೆಯಲ್ಲಿ ನನಗೆ ಅತ್ಮ ತೃಪ್ತಿ ಇದೆ ಇದನ್ನು ತಡೆಯುವ ತಾಕತ್ತಿದ್ದರೆ ಬಂದು ತಡೆಯಿರಿ ಎಂದು ಬಿಜೆಪಿಗರಿಗೆ ಸವಾಲು ಹಾಕಿದರು. ತಾನು ಶಾಸಕನಾದಲ್ಲಿ ಬಡವರ ಮನೆಗೆ ಅಧಿಕಾರಿಗಳನ್ನು ಕಳಿಸಿ ಅವರ ಕೆಲಸವನ್ನು ಮಾಡಿಸುತ್ತೇನೆ. ಜನಪ್ರತಿನಿಧಿಯಾದವ ಜನಸೇವೆ ಮಾಡಬೇಕೇ ವಿನಾ ಸರಕಾರದ, ಜನರ ಸೊತ್ತನ್ನು ಲೂಟಿ ಹೊಡೆಯುವುದಲ್ಲ, ಮೋಜು ಮಸ್ತಿ ಮಾಡುವುದಲ್ಲ ಎಂದು ಖಾರವಾಗಿಯೇ ಪ್ರತಿಕ್ರಿಯಿಸಿದ ಅಶೋಕ್ ರೈ ಜನರ ಸೇವೆ ಮಾಡಲು ಸಾಧ್ಯವಾಗದ ಜನಪ್ರತಿನಿಧಿ ಚುನಾವಣೆಗೆ ಸ್ಪರ್ದಿಸಬಾರದು ಎಂದು ಹೇಳಿದರು.

೮ ಊಟದ ಲೆಕ್ಕವನ್ನು ತನಿಖೆ ಮಾಡಿದ ಮಠಂದೂರು ಇಂದಿರಾ ಕ್ಯಾಂಟೀನ್ ಬಂದ್ ಮಾಡಿಸಿದ್ದು ಯಾಕೆ; ಶಕುಂತಳಾ ಶೆಟ್ಟಿ

ಎಂಟು ಊಟ ಯಾರಿಗೆ ಕೊಟ್ಟಿದ್ದು ಎಂಬುದರ ತನಿಖೆ ಮಾಡಬೇಕು ಎಂದು ಹೇಳಿದ್ದ ಶಾಸಕ ಸಂಜೀವ ಮಠಂದೂರುರವರು ಬಡವರ ಇಂದಿರಾ ಕ್ಯಾಂಟೀನ್ ಬಂದ್ ಮಾಡಿಸಿದ್ದು ಯಾಕೆ? ಬಡವರು ಕನಿಷ್ಠ ದರಕ್ಕೆ ಊಟ ಮಾಡಬಾರದು ಎಂಬುದೇ ಬಿಜೆಪಿಯ ಉದ್ದೇಶವಾಗಿತ್ತು. ಕಾಂಗ್ರೆಸ್ ಸರಕರ ಜಾರಿಗೆ ತಂದಿದ್ದ ಎಲ್ಲಾ ಜನಪ್ರ ಯೋಜನೆಗಳನ್ನು ಬಂದ್ ಮಾಡಿದ್ದ ಬಿಜೆಪಿ ಮಕ್ಕಳಿಗೆ ಕೊಡುವ ಹಾಲು, ಮೊಟ್ಟೆ, ಶೂ ಭಾಗ್ಯ ಎಲ್ಲವನ್ನೂ ಬಂದ್ ಮಾಡಿದ್ದರು. ಬಿಜೆಪಿಗೆ ಮಾನವೀಯತೆ ಇದ್ದರೆ ಆಕೆಲಸ ಮಾಡುತ್ತಿದ್ರ ಎಂದು ಪ್ರಶ್ನಿಸಿದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಬಿಜೆಪಿಗರ ಅಮಾನವೀಯ ಕೃತ್ಯಗಳು ಮಿತಿಮೀರಿದ್ದು ಇದು ಇಂದು ಶಾಸಪವಾಗಿ ಅವರಿಗೆ ತಟ್ಟಿದೆ ಎಂದು ಹೇಳಿದರು. ಬೆಲೆ ಏರಿಕೆ ಮಾಡಿ ಬಡವರನ್ನು ಸುಲಿಗೆ ಮಾಡುತ್ತಿರುವ ಬಿಜೆಪಿಗೆ ಹಸಿದವನ ಕಣ್ಣೀರ ಒಂದೊಂದು ಹನಿಗಳೂ ಅವರಿಗೆ ಕಂಟಕವಾಗಿ ಚುಚ್ಚಲಿದೆ ಎಂಬುದನ್ನು ಅರಿತುಕೊಂಡರೆ ಉತ್ತಮ ಎಂದು ಹೇಳಿದ ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದ ವಿಜಯಾ ಬ್ಯಾಂಕನ್ನು ಮಾರ್ವಾಡಿಗಳ ಮುಳುಗುತ್ತಿದ್ದ ಬ್ಯಾಂಕ್ ಜೊತೆ ಮಾಡಿದೆ ವಿಜಯಾ ಬ್ಯಾಂಕ್ ಯಾವಾಗ ಮುಳುಗುತ್ತದೋ ಆದೇವರೇ ಬಲ್ಲ ಎಂದು ಹೇಳಿದರು. ಭೂ ಮಸೂದೆ ಕಾನೂನಿನಲ್ಲಿ ಭೂಮಿ ದೊರೆತ ಮನೆಯ ಯಜಮಾನನ ಮಕ್ಕಳು ಇಂದು ಭೂಮಿ ಕೊಟ್ಟ ಕಾಂಗ್ರೆಸ್ಸನ್ನು ಮರೆತು ಕೇಸರಿ ಶಾಲು ಹಾಕಿ ಬಿಜೆಪಿ ಜೊತೆ ಹೆಜ್ಜೆ ಹಾಕುತ್ತಿರುವುದು ಖೇದಕರ ಸಂಗತಿ ಎಂದು ಹೇಳಿದರು.

ವಿಟ್ಲ ಪಟ್ಟಣ ಪಂಚಾಯತ್ ದುರಾವಸ್ಥೆಯಿಂದ ಕೂಡಿದೆ: ಹೇಮನಾಥ ಶೆಟ್ಟಿ

ವಿಟ್ಲ ಪಟ್ಟಣಪಂಚಾಯತ್‌ಗೆ ಚುನಾವಣೇ ನಡೆದು ಹಲವು ತಿಂಗಳುಗಳೇ ಕಳೆದರೂ ಇನ್ನೂ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ನಡೆದಿಲ್ಲ. ಚುನಾಯಿತ ಸದಸ್ಯರು ಯಾವುದೇ ಕೆಲಸವನ್ನು ಮಾಡದಂತ ಸನ್ನಿವೇಶ ನಿರ್ಮಾಣವಾಗಿದೆ. ವಿಟ್ಲದಲ್ಲಿರುವ ಸಮಸ್ಯೆಗಳನ್ನು ಕೇಳುವವರೇ ಇಲ್ಲದಂತಾಗಿದೆ. ಒಳಚರಂಡಿ ಇಲ್ಲದೆ ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ ಇಲ್ಲದೆ ಜನ ಕಂಗೆಟ್ಟಿದ್ದಾರೆ. ಬಿಜೆಪಿಗೆ ಮತ ಕೊಟ್ಟ ಮತದಾರ ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ ಎಂದು ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಆರೋಪಿಸಿದರು. ಈ ಬರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈಗೆ ಗೆಲುವಾಗಲಿದೆ. ಇದನ್ನು ಕಂಡು ಬಿಜೆಪಿ ಬೆರಗಾಗಿದೆ. ಬಿಜೆಪಿಯವರ ಕೈಯ್ಯಲ್ಲಿದ್ದ ಹಿಂದುತ್ವವನ್ನು ಪಕ್ಷೇತರ ಅಭ್ಯರ್ಥಿ ಕೊಂಡು ಹೋಗಿದ್ದಾರೆ. ಈಗ ಬಿಜೆಪಿಯನ್ನು ಹಿಂಧೂ ಸಂಗಟನೆಗಳು ದೂರುತ್ತಿದೆ, ಹಿಂದೂ ಸಂಘಟನೆಗಳನ್ನು ಬಿಜೆಪಿ ತೆಗಳುವ ಕೆಲಸವನ್ನು ಮಾಡುತ್ತಿದೆ ಇದೆಲ್ಲವೂ ಶಾಫದ ಪರಿಣಾಮವಾಗಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಕೆಪಿಸಿಸಿ ಸದಸ್ಯರಾದ ಎಂ ಎಸ್ ಮಹಮ್ಮದ್, ಹಿರಿಯ ಕಾಂಗ್ರೆಸ್ ಮುಖಂಡ ದೇಜಪ್ಪ ಸೇರಿದಂತೆ ಹಲವು ಮಂದಿ ಕಾಂಗ್ರೆಸ್ ನಾಯಕರುಗಳು ಉಪಸ್ತಿತರಿದ್ದರು.

ಬೆಳ್ತಂಗಡಿ : ಮನೆಯಿಂದ ಕಾಲೇಜ್ ವಿದ್ಯಾರ್ಥಿ ಪುನೀತ್ ನಾಪತ್ತೆ

Posted by Vidyamaana on 2023-09-05 04:38:54 |

Share: | | | | |


ಬೆಳ್ತಂಗಡಿ : ಮನೆಯಿಂದ ಕಾಲೇಜ್ ವಿದ್ಯಾರ್ಥಿ ಪುನೀತ್ ನಾಪತ್ತೆ

ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿ ಮನೆಯಿಂದ ಏಕಾಏಕಿ ನಾಪತ್ತೆಯಾದ ಘಟನೆ ಬೆಳ್ತಂಗಡಿಯ ಗುರುದೇವ ಕಾಲೇಜಿನ ಬಳಿಯ ಮನೆಯಲ್ಲಿ ನಡೆದಿದೆ.


 ಗುರುದೇವ ಕಾಲೇಜಿನ ಬಳಿ ಇರುವ ಮನೆಯಲ್ಲಿ ವಾಸವಾಗಿರುವ ಶ್ರೀಮತಿ ಗೀತಾ ಎಂಬವರ ಮಗ ಪುನೀತ್ ಎಸ್.ಟಿ  (21) ಎಂಬಾತನು 3 ನೇ ವರ್ಷದ  ಬಿ.ಎಸ್.ಸಿ  ನಲ್ಲಿ ವಿಧ್ಯಾಭ್ಯಾಸ ಮಾಡಿಕೊಂಡಿದ್ದು ಸೆ 4 ರಂದು ಗೀತಾ ಅವರ ಮಗಳು ರಂಜಿತಾಳು ಬೆಳಿಗ್ಗೆ 7.45 ಗಂಟೆಗೆ ಕಾಲೇಜಿಗೆ ತೆರಳಿದ್ದು ಆ ಸಮಯ ಮನೆಯಲ್ಲಿ ಪುನೀತ್ ಎಸ್.ಟಿ ಎಂಬಾತನು ಒಬ್ಬನೇ ಇದ್ದು ತಾಯಿ ಸಕಲೇಶಪುರದಿಂದ ಮಧ್ಯಾಹ್ನ  3 ಗಂಟೆಗೆ ಬಂದು  ಮನೆಯ ಬೀಗ ತೆಗೆದು  ಒಳ ಹೋಗಿ ನೋಡಲಾಗಿ  ಅವರ ಮಗ ಮನೆಯ ಹಾಲ್ ನಲ್ಲಿರುವ ಬೇಡ್ ಮೇಲೆ ಒಂದು ಪತ್ರ ಬರೆದಿಟ್ಟು ಮನೆಯಲ್ಲಿ ಯಾರಿಗೂ ಹೆಳದೇ ಹೋಗಿದ್ದು ಆತನು ಮನೆಯಿಂದ ಹೋಗುವಾಗ ಆತನನ್ನು ನೆರೆ ಮನೆಯ ಗಿರಿಜಾ ಎಂಬುವವರು 12:30 ಗಂಟೆಗೆ ನೋಡಿದ್ದು ಆ ಬಳಿಕ ಆತನ ಬಗ್ಗೆ ಗೀತಾ ತಮ್ಮ ಗಂಡ ಮತ್ತು ಕುಟುಂಬದವರ ಬಳಿ ವಿಚಾರಿಸಿದಲ್ಲಿ ಇವರೇಗೆ ಪತ್ತೆಯಾಗದೇ ಇದ್ದು ಕಾಣೆಯಾದ ತಮ್ಮ ಮಗ ಪುನೀತ್ ಎಸ್.ಟಿ ಎಂಬಾತನನ್ನು ಪತ್ತೆ ಮಾಡಿಕೊಡಬೇಕಾಗಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮಗನನ್ನೇ ಹೊಡೆದು ಕೊಂದ ತಂದೆ!

Posted by Vidyamaana on 2023-04-05 03:18:22 |

Share: | | | | |


ಮಗನನ್ನೇ ಹೊಡೆದು ಕೊಂದ ತಂದೆ!

ಸುಳ್ಯ :  ಮೊಗ್ರ ಏರಣಗುಡ್ಡೆಯ ಮಾತೃ ಮಜಲು ನಿವಾಸಿ ಶೀನ ಮತ್ತು  ಮಗ ಶಿವರಾಮ ಎಂಬವರಿಗೂ ನಿನ್ನೆ ರಾತ್ರಿ 12 ಗಂಟೆಗೆ ಕೋಳಿ ಪದಾರ್ಥದ ವಿಚಾರವಾಗಿ ಜಗಳ ಆರಂಭವಾಯಿತು. ಶಿವರಾಮ ರಾತ್ರಿ ಮನೆಗೆ ಬರುವಾಗ ಕೋಳಿ ಪದಾರ್ಥ ಖಾಲಿ ಆಗಿತ್ತೆನ್ನಲಾಗಿದೆ. ಇದನ್ನು ಆಕ್ಷೇಪಿಸಿ ಆತ ಮಾತನಾಡತೊಡಗಿದಾಗ ತಂದೆ ಶೀನರಿಗೂ ಆತನಿಗೂ ಜಗಳ ಆರಂಭವಾಯಿತು. ಕೋಪಗೊಂಡ ಶೀನ ಬಡಿಗೆಯಿಂದ ಮಗನ ತಲೆಗೆ ಹೊಡೆದರೆನ್ನಲಾಗಿದೆ. ಏಟು ಬಲವಾಗಿ ಬಿದ್ದು ತಲೆಯ ಬುರುಡೆ ಒಡೆಯಿತು. ಪರಿಣಾಮವಾಗಿ ಶಿವರಾಮ ಸ್ಥಳದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದನೆನ್ನಲಾಗಿದೆ.

ವಿಷಯ ತಿಳಿದು ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿ ಶೀನನನ್ನು ಬಂಧಿಸಿದ್ದಾರೆ. ಶಿವರಾಮರ ಮೃತ ದೇಹವನ್ನು ಕಡಬ ಆಸ್ಪತ್ರೆಗೆ ಕೊಂಡಯ್ಯಲಾಗಿದೆ.

 ಮೃತ  ಶಿವರಾಮ (32) ಕೂಲಿ ಕೆಲಸಕ್ಕೆ ಹೋಗುತ್ತಿದ್ದು, ಪತ್ನಿ ಮತ್ತು ಇಬ್ಬರು ಪುಟ್ಟ ಮಕ್ಕಳನ್ನು ಅಗಲಿದ್ದಾರೆ.



Leave a Comment: