ಕಲ್ಲಡ್ಕ ಮ್ಯೂಸಿಯಂ ವೀಕ್ಷಿಸಿದ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್

ಸುದ್ದಿಗಳು News

Posted by vidyamaana on 2024-06-30 19:51:42 |

Share: | | | | |


ಕಲ್ಲಡ್ಕ ಮ್ಯೂಸಿಯಂ ವೀಕ್ಷಿಸಿದ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್

ಬಂಟ್ವಾಳ : ತಾಲೂಕಿನ ವಿವಿಧ ಕಡೆಗಳಿಗೆ ತೆರಳಿ ಮಳೆಹಾನಿ ಬಗ್ಗೆ ವೀಕ್ಷಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ಜಿಲ್ಲೆಯಲ್ಲಿಯೇ ಖ್ಯಾತಿ ಪಡೆದಿರುವ ಕಲ್ಲಡ್ಕದ ಯಾಸೀರ್ ಅವರ ಅಪರೂಪದ ವಸ್ತುಗಳ ಸಂಗ್ರಹವಿರುವ ಕಲ್ಲಡ್ಕ ಮ್ಯೂಸಿಯಂಗೆ ಭೇಟಿ ನೀಡಿದರು.ಹಿಂದಿನ ಕಾಲದ ವಸ್ತುಗಳು, ನಾಣ್ಯ, ಪತ್ರಿಕೆಗಳ ಸಂಗ್ರಹವನ್ನು ವೀಕ್ಷಿಸಿ ರೋಮಾಂಚನಗೊಂಡ ಅವರು ಯಾಸೀರ್ ಅವರ ವಸ್ತುಗಳ ಸಂಗ್ರಹಣ ಕೌಶಲ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಅತ್ಯಂತ ಸಾವಕಾಶವಾಗಿ ಪ್ರತಿಯೊಂದು ವಸ್ತುಗಳನ್ನು ಕುತೂಹಲದಿಂದ ವೀಕ್ಷಿಸಿ ಅವುಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮೊಡಂಕಾಪುವಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದರು. ಇಲ್ಲಿನ ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ಎಲ್ಲರಿಗೂ ಕೈಕುಲುಕಿ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ ಮಕ್ಕಳಿಂದ ಅಂಬೇಡ್ಕರ್ ಬಗ್ಗೆ ಹಾಡು ಹಾಡಿಸಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿ ಗಮನ ಸೆಳೆದರು. ತಹಸೀಲ್ದಾರ್ ಅರ್ಚನಾ ಭಟ್, ವಿದ್ಯಾರ್ಥಿ ನಿಲಯ ಮೇಲ್ವಿಚಾರಕರು ಜೊತೆಗಿದ್ದರು.

 Share: | | | | |


ಮುಂಬೈನಲ್ಲಿ ಇಂಡಿಗೋ-ಏರ್ ಇಂಡಿಯಾ ವಿಮಾನಗಳು ಒಂದೇ ರನ್ವೇಯಲ್ಲಿ ಟೇಕ್ ಆಫ್

Posted by Vidyamaana on 2024-06-09 14:02:56 |

Share: | | | | |


ಮುಂಬೈನಲ್ಲಿ ಇಂಡಿಗೋ-ಏರ್ ಇಂಡಿಯಾ ವಿಮಾನಗಳು ಒಂದೇ ರನ್ವೇಯಲ್ಲಿ ಟೇಕ್ ಆಫ್

ಮುಂಬೈ :ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆಗುತ್ತಿದ್ದ ರನ್ ವೇಯಲ್ಲಿ ಇಂಡಿಗೋ ವಿಮಾನವೊಂದು ಇಳಿದ ನಂತರ ಪ್ರಯಾಣಿಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.ತ್ವರಿತ ಪ್ರತಿಕ್ರಿಯೆಯಲ್ಲಿ, ನಾಗರಿಕ ವಿಮಾನಯಾನ ನಿಯಮಿತ ನಿರ್ದೇಶನಾಲಯವು ತನಿಖೆಯನ್ನು ಪ್ರಾರಂಭಿಸಿದೆ ಮತ್ತು ಏರ್ ಟ್ರಾಫಿಕ್ ಕಂಟ್ರೋಲ್ ಅಧಿಕಾರಿಯನ್ನು ವಜಾಗೊಳಿಸಿದೆ.

ಸೋಷಿಯಲ್ ಮೀಡಿಯಾದಲ್ಲಿ ಹೊರಹೊಮ್ಮಿದ ವೀಡಿಯೊದಲ್ಲಿ, ಎರಡೂ ವಿಮಾನಗಳು ಒಂದೇ ರನ್ವೇಯಲ್ಲಿ ಕಂಡುಬರುತ್ತವೆ. ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ, ಇಂಡಿಗೊ ವಿಮಾನವು ಇಳಿಯುವುದನ್ನು ಕಾಣಬಹುದು. ಇಂಡಿಗೋ ವಿಮಾನವು ಇಂದೋರ್ ನಿಂದ ಮುಂಬೈಗೆ ಹಾರುತ್ತಿದ್ದರೆ, ಏರ್ ಇಂಡಿಯಾ ವಿಮಾನವು ಕೇರಳದ ತಿರುವನಂತಪುರಕ್ಕೆ ಹೊರಟಿತು.

ಬೆಳಗಾವಿ ಕೋರ್ಟ್ ಹಾಲ್ ನಲ್ಲೇ ಪಾಕ್ ಪರ ಘೋಷಣೆ ಕೂಗಿದ ಜೈಲು ಕೈದಿ ಪುತ್ತೂರು ಮೂಲದ ಜಯೇಶ್ ಪೂಜಾರಿ

Posted by Vidyamaana on 2024-06-12 16:27:10 |

Share: | | | | |


ಬೆಳಗಾವಿ ಕೋರ್ಟ್ ಹಾಲ್ ನಲ್ಲೇ ಪಾಕ್ ಪರ ಘೋಷಣೆ ಕೂಗಿದ ಜೈಲು ಕೈದಿ ಪುತ್ತೂರು ಮೂಲದ ಜಯೇಶ್ ಪೂಜಾರಿ

ಬೆಳಗಾವಿ, ಜೂನ್ 12: ಮಂಗಳೂರು ಮೂಲದ ನಟೋರಿಯಸ್ ಪಾತಕಿ ಜಯೇಶ್ ಪೂಜಾರಿ ಬೆಳಗಾವಿಯ ಜಿಲ್ಲಾ ನ್ಯಾಯಾಲಯದಲ್ಲೇ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾನೆ.‌ ಪಾಕಿಸ್ತಾನ್ ಪರ ಘೋಷಣೆ ಕೂಗುತ್ತಿದ್ದಂತೆ ವಕೀಲರು, ಸಾರ್ವಜನಿಕರು ಸೇರಿ ಕೋರ್ಟ್ ಒಳಗಡೆಯೇ ಧರ್ಮದೇಟು ನೀಡಿದ್ದಾರೆ.

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಒಡ್ಡಿರುವ ಪ್ರಕರಣ ಸೇರಿದಂತೆ ಹಲವಾರು ಕೇಸುಗಳನ್ನು ಎದುರಿಸುತ್ತಿರುವ ಜಯೇಶ್ ಪೂಜಾರಿ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದು ಇಂದು ಕೋರ್ಟಿಗೆ ಹಾಜರುಪಡಿಸಲು ಕರೆತಂದಿದ್ದಾಗ ಕೃತ್ಯ ನಡೆದಿದೆ. ಕೋರ್ಟ್ ಒಳ ಭಾಗದಲ್ಲೇ ವಕೀಲರು, ಸಾರ್ವಜನಿಕರು ಪೊಲೀಸರ ಸಮ್ಮುಖದಲ್ಲಿಯೇ ಥಳಿಸಿದ್ದಾರೆ. ಏಟು ಬೀಳುತ್ತಿದ್ದಂತೆ ಆರೋಪಿಯನ್ನು ರಕ್ಷಣೆ ಮಾಡಿ ಪೊಲೀಸರು ಹೊರಗಡೆ ಕರೆದುಕೊಂಡು ಹೋಗಿದ್ದಾರೆ.

ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

Posted by Vidyamaana on 2024-03-23 15:52:34 |

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


ಅಕ್ರಮ ಮದ್ಯ ಮಾರಾಟ ಪ್ರಕರಣದ ಆರೋಪಿಗೆ ಸಿಕ್ತು ನಿರೀಕ್ಷಣಾ ಜಾಮೀನು

Posted by Vidyamaana on 2023-06-28 17:47:21 |

Share: | | | | |


ಅಕ್ರಮ ಮದ್ಯ ಮಾರಾಟ ಪ್ರಕರಣದ ಆರೋಪಿಗೆ ಸಿಕ್ತು ನಿರೀಕ್ಷಣಾ ಜಾಮೀನು

ಪುತ್ತೂರು :ಅಕ್ರಮ ಮದ್ಯ ಮಾರಾಟ ಪ್ರಕರಣದ ಆರೋಪಿಯೆ ನ್ನಲಾಗಿದ್ದ ವಿನೋದ್ ಕುಮಾರ್ ರೈ ಯವರಿಗೆ ನಿರೀಕ್ಷಣಾ ಜಾಮೀನನ್ನು ಪುತ್ತೂರು ಐದನೇ ಹೆಚ್ಚುವರಿ  ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ಪುತ್ತೂರು ತಾಲೂಕು ಒಳಮೋಗ್ರು ಗ್ರಾಮದ ಕೈಕಾರ ಪನಡ್ಕ ಎಂಬಲ್ಲಿ  ಅಕ್ರಮವಾಗಿ ಯಾವುದೇ ಪರವಾನಿಗೆ ಇಲ್ಲದೆ, ಗೋಣಿಚೀಲದಲ್ಲಿ ಮದ್ಯವನ್ನು ಮಾರಾಟ ಮಾಡಿ, ಹಣ ಪಡೆದಿರುವುದಾಗಿ ಆರೋಪಿಯೆನ್ನಲಾಗಿದ್ದ ವಿನೋದ್ ಕುಮಾರ್ ರೈ ಯವರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ  ಕರ್ನಾಟಕ ಅಬಕಾರಿ ಕಾಯಿದೆಯನ್ವಯ ಪ್ರಕರಣ ದಾಖಲಿಲಾಗಿತ್ತು.

ಹೀಗಿರುವಾಗ,ಈ ವಿಚಾರ ತಿಳಿದ ವಿನೋದ್ ಕುಮಾರ್ ರೈ ಯವರು ಅವರ ಪರ ವಕೀಲರಾದ ಮಹೇಶ್ ಕಜೆ ಯವರ  ಮುಖಾಂತರ ಪುತ್ತೂರಿನ ಮಾನ್ಯ ಐದನೇ ಹೆಚ್ಚುವರಿ  ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿಯನ್ನು  ಸಲ್ಲಿಸಿದ್ದರು.ಈ ಮೇಲೆ ತಿಳಿಸಿದ ಆರೋಪಿಯು ಕೃತ್ಯವನ್ನು ಮಾಡಿದ್ದಾರೆ ಎಂಬುವುದಕ್ಕೆ ಸಂಬಂಧಿಸಿದಂತೆ ಯಾವುದೇ ಪೂರಕವಾದ ಸಾಕ್ಷ್ಯಧಾರಗಳು ಕಂಡು ಬಂದಿರುವುದಿಲ್ಲ. ಎಂಬಿತ್ಯಾದಿ ಅಂಶಗಳನ್ನು ವಾದಿಸಿದ್ದರು. ಸರಕಾರಿ ಅಭಿಯೋಜಕರು ಆರೋಪಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪವನ್ನು ಸಲ್ಲಿಸಿದ್ದರು. ವಾದ -ವಿವಾದವನ್ನು ಆಲಿಸಿದ 

ಪುತ್ತೂರಿನ ಮಾನ್ಯ ಐದನೇ ಹೆಚ್ಚುವರಿ  ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸರಿತಾ. ಡಿ ಯವರು ಆರೋಪಿಗೆ ಶರತ್ತು ಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುತ್ತಾರೆ.

ಪೆನ್‌ಡ್ರೈವ್‌ ಪ್ರಕರಣ: ಕುತೂಹಲ ಕೆರಳಿಸಿದ ಪ್ರೀತಮ್‌ ಗೌಡ ಮೌನ

Posted by Vidyamaana on 2024-05-03 08:25:04 |

Share: | | | | |


ಪೆನ್‌ಡ್ರೈವ್‌ ಪ್ರಕರಣ: ಕುತೂಹಲ ಕೆರಳಿಸಿದ ಪ್ರೀತಮ್‌ ಗೌಡ ಮೌನ

ಬೆಂಗಳೂರು : ಹಾಸನ ರಾಜಕಾರಣಕ್ಕೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಕುಟುಂಬದ ವಿರುದ್ಧ ತೊಡೆತಟ್ಟಿದ್ದ ಹಾಸನ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ಪ್ರೀತಮ್‌ ಗೌಡ ಅವರು, ಪ್ರಜ್ವಲ್‌ ರೇವಣ್ಣ ಪ್ರಕರಣ ದೇಶಾದ್ಯಂತ ತೀವ್ರ ಬಿರುಗಾಳಿ ಎಬ್ಬಿಸಿದರೂ ಸಾರ್ವಜನಿಕವಾಗಿ ಕಾಣಿಸಿಕೊಳ್ಳದಿರುವುದು ಚರ್ಚೆಗೆ ಗ್ರಾಸವಾಗಿದೆ.ತಮ್ಮ ವಾಟ್ಸಾಪ್‌ ನಂಬರ್‌ನಲ್ಲಿ ಆಗಾಗ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ಟೇಟಸ್‌ ಅಪ್‌ಡೇಟ್‌ ಮಾಡುತ್ತಿರುವುದನ್ನು ಬಿಟ್ಟರೆ, ಮಾಧ್ಯಮಗಳಿಗೆ ಹೇಳಿಕೆಯನ್ನೂ ಕೊಟ್ಟಿಲ್ಲ. ಪ್ರೀತಮ್‌ ಇದ್ದಕ್ಕಿದ್ದಂತೆ ತಟಸ್ಥರಾದಂತೆ ವರ್ತಿಸುತ್ತಿರುವುದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ಲಾಟರಿಯಲ್ಲಿ 80 ಲಕ್ಷ ರೂ. ಗೆದ್ದ ಸಂತಸದಲ್ಲಿ ಪಾರ್ಟಿ ಮಾಡುತ್ತಿದ್ದ ವ್ಯಕ್ತಿ ಮೃತ್ಯು

Posted by Vidyamaana on 2023-04-04 09:34:41 |

Share: | | | | |


ಲಾಟರಿಯಲ್ಲಿ 80 ಲಕ್ಷ ರೂ. ಗೆದ್ದ ಸಂತಸದಲ್ಲಿ ಪಾರ್ಟಿ ಮಾಡುತ್ತಿದ್ದ ವ್ಯಕ್ತಿ ಮೃತ್ಯು

ತಿರುವನಂತಪುರಂ: 80 ಲಕ್ಷ ರೂ. ಲಾಟರಿ ಹಣವನ್ನು ಗೆದ್ದ ಸಂತಸದಲ್ಲಿ ಸ್ನೇಹಿತರೊಂದಿಗೆ ಪಾರ್ಟಿ ಮಾಡುತ್ತಿದ್ದ ವ್ಯಕ್ತಿಯೊಬ್ಬ ನಿಗೂಢವಾಗಿ ಮೃತಪಟ್ಟಿರುವ ಘಟನೆ ಕೇರಳದ ತಿರುವನಂತಪುರಂನಲ್ಲಿರುವ ಪಂಗೋಡ್ ನಲ್ಲಿ ನಡೆದಿರುವುದು ವರದಿಯಾಗಿದೆ.ಪಂಗೋಡ್ ನಿವಾಸಿ ಸಜೀವ್ (35)‌ ಮೃತ ವ್ಯಕ್ತಿ.ಪಾರ್ಟಿ ಮಾಡುತ್ತಿದ್ದ ವೇಳೆ ಎಲ್ಲರೂ ಮದ್ಯದ ನಶೆಯಲ್ಲಿದ್ದರು. ಈ ವೇಳೆ ಸಂತೋಷ್ ಎಂಬ ವ್ಯಕ್ತಿ ಸಜೀವ್ ಅವರನ್ನು ತಳ್ಳಿದ್ದಾರೆ. ಪರಿಣಾಮ ಸಜೀವ್ , ರಬ್ಬರ್ ತೋಟದ ಆಳದ ಹೊಂಡಕ್ಕೆ ಬಿದ್ದಿದ್ದಾರೆ. ಆ ಬಳಿಕ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಸೋಮವಾರ ಸಂಜೆ ಅವರು ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.ಈ ಬಗ್ಗೆ ಕೇಸ್‌ ದಾಖಲಿಸಿದ್ದು, ಸಾವಿಗೆ ನಿಖರ ಕಾರಣವೇನೆಂಬುದು ಮರಣೋತ್ತರ ಪರೀಕ್ಷೆ ಬಳಿಕವೇ ತಿಳಿದು ಬರಲಿದೆ ಎಂದು ಪೊಲೀಸರು ಹೇಳಿದ್ದಾರೆ.



Leave a Comment: