ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

ಸುದ್ದಿಗಳು News

Posted by vidyamaana on 2024-06-30 19:31:43 |

Share: | | | | |


ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

ಕೋಟ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್‍ತಿ (97) ವಯೋಸಹಜ ಅಸೌಖ್ಯದಿಂದ

ಜೂ.30ರಂದು ನಿಧನ ಹೊಂದಿದರು. ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ

 Share: | | | | |


ICC ODI World Cup: ಟೀಂ ಇಂಡಿಯಾ ಪ್ರಕಟ - ಯಾರಿಗೆಲ್ಲಾ ಸಿಕ್ತು ಚಾನ್ಸ್??

Posted by Vidyamaana on 2023-09-05 15:31:58 |

Share: | | | | |


ICC ODI World Cup: ಟೀಂ ಇಂಡಿಯಾ ಪ್ರಕಟ - ಯಾರಿಗೆಲ್ಲಾ ಸಿಕ್ತು ಚಾನ್ಸ್??

ಮುಂಬೈ: ಅಕ್ಟೋಬರ್ 5ರಿಂದ ತವರಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಕೂಟಕ್ಕೆ ಭಾರತ ತಂಡವನ್ನು ಅಂತಿಮಗೊಳಿಸಲಾಗಿದೆ. 15 ಜನರ ತಂಡವನ್ನು ಆಯ್ಕೆ ಮಾಡಿದ್ದು, ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.

ಪುರುಷರ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರು ತಂಡದ ಆಯ್ಕೆ ಬಗ್ಗೆ ಪ್ರಕಟಿಸಿದರು.


ಏಷ್ಯಾ ಕಪ್ ನಲ್ಲಿ ಆಡುತ್ತಿರುವ ತಂಡವೇ ಬಹುತೇಕ ಅಂತಿಮವಾಗಿದೆ. ವಿಶ್ವಕಪ್ ಗೆ 15 ಜನರ ತಂಡ ಪ್ರಕಟಿಸಬೇಕಾದ ಕಾರಣ 17 ಜನರ ಏಷ್ಯಾ ಕಪ್ ತಂಡದಲ್ಲಿದ್ದ ಯುವ ಆಟಗಾರರಾದ ತಿಲಕ್ ವರ್ಮಾ ಮತ್ತು ಕನ್ನಡಿಗ ಪ್ರಸಿಧ್ ಕೃಷ್ಣ ವಿಶ್ವಕಪ್ ಕೂಟಕ್ಕೆ ಸ್ಥಾನ ಪಡೆದಿಲ್ಲ.


ಕನ್ನಡಿಗ ಕೆ.ಎಲ್ ರಾಹುಲ್ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ಯಶಸ್ವಿಯಾಗಿದ್ದಾರೆ. ಕಳೆದ ಐಪಿಎಲ್ ವೇಳೆ ಗಾಯಗೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕೆಎಲ್ ರಾಹುಲ್ ಹಲವು ತಿಂಗಳ ಚೇತರಿಕೆಯ ಬಳಿಕ ಏಷ್ಯಾ ಕಪ್ ಗೆ ಆಯ್ಕೆಯಾಗಿದ್ದರು. ಆದರೆ ಸರಿಯಾಗಿ ಫಿಟ್ ಆಗದ ಕಾರಣ ಮೊದಲೆರಡು ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.ವಿಕೆಟ್ ಕೀಪರ್ ಕೋಟಾದಲ್ಲಿ ಕೆಎಲ್ ರಾಹುಲ್ ಮತ್ತು ಎಡಗೈ ಆಟಗಾರ ಇಶಾನ್ ಕಿಶನ್ ಆಯ್ಕೆಯಾಗಿದ್ದಾರೆ. ಏಷ್ಯಾ ಕಪ್ ಗೆ ಬ್ಯಾಕಪ್ ಆಟಗಾರನಾಗಿದ್ದ ಸಂಜು ಸ್ಯಾಮ್ಸನ್ ರನ್ನು ವಿಶ್ವಕಪ್ ನಿಂದ ಕೈಬಿಡಲಾಗಿದೆ.



ಬ್ಯಾಟಿಂಗ್ ವಿಭಾಗದಲ್ಲಿ ನಾಯಕ ರೋಹಿತ್ ಶರ್ಮಾ, ಅನುಭವಿ ವಿರಾಟ್ ಕೊಹ್ಲಿ ಜೊತೆಗೆ ಶುಭಮನ್ ಗಿಲ್, ಶ್ರೇಯಸ್ ಅಯ್ಯರ್ ಮತ್ತು ಸೂರ್ಯಕುಮಾರ್ ಯಾದವ್ ಆಯ್ಕೆಯಾಗಿದ್ದಾರೆ. ಏಕದಿನ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡದ ಹೊರತಾಗಿಯೂ ಸೂರ್ಯ ವಿಶ್ವಕಪ್ ಸ್ಕ್ಯಾಡ್ ನಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.



ಆಲ್ ರೌಂಡರ್ ಗಳಾಗಿ ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್ ಮತ್ತು ಅಕ್ಷರ್ ಪಟೇಲ್ ಆಯ್ಕೆಯಾಗಿದ್ದಾರೆ.


ತಂಡದಲ್ಲಿ ಸ್ಪಿನ್ನರ್ ಗಳಾಗಿ ಕುಲದೀಪ್ ಯಾದವ್ ಸ್ಥಾನ ಪಡೆದಿದ್ದಾರೆ. ಉಳಿದಂತೆ ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಅವರು ಸ್ಪಿನ್ನರ್ ಗಳಾಗಿದ್ದಾರೆ. ಏಷ್ಯಾಕಪ್ ನಲ್ಲಿ ಸ್ಥಾನ ಪಡೆಯದ ಅನುಭವಿ ಸ್ಪಿನ್ನರ್ ಗಳಾದ ಯುಜುವೇಂದ್ರ ಚಾಹಲ್ ಮತ್ತು ರವಿಚಂದ್ರನ್ ಅಶ್ವಿನ್ ಅವರಿಗೆ ವಿಶ್ವಕಪ್ ಗೂ ಅವಕಾಶ ಸಿಕ್ಕಿಲ್ಲ.


ವೇಗದ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ಇದ್ದಾರೆ.


ವಿಶ್ವಕಪ್ ಗೆ ಭಾರತ ತಂಡ


ರೋಹಿತ್ ಶರ್ಮಾ (ನಾ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ  ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮತ್ತು ಮೊಹಮ್ಮದ್ ಸಿರಾಜ್.

ಹೈಸ್ಕೂಲ್ ದಿನಗಳಲ್ಲಿ ಪ್ರೀತಿಸಿ ಮದುವೆಯಾದ ದಂಪತಿಗೆ ಜೀವ ಬೆದರಿಕೆ, ಎಸ್ಪಿ ಕಚೇರಿಗೆ ಬಂದ ಜೋಡಿ ಹಕ್ಕಿಗಳು!

Posted by Vidyamaana on 2024-01-29 15:26:03 |

Share: | | | | |


ಹೈಸ್ಕೂಲ್ ದಿನಗಳಲ್ಲಿ ಪ್ರೀತಿಸಿ ಮದುವೆಯಾದ ದಂಪತಿಗೆ ಜೀವ ಬೆದರಿಕೆ, ಎಸ್ಪಿ ಕಚೇರಿಗೆ  ಬಂದ ಜೋಡಿ ಹಕ್ಕಿಗಳು!

ಜೋಡಿ ಹಕ್ಕಿ ಬಳ್ಳಾರಿಯಿಂದ ಆಂದ್ರಕ್ಕೆ ಹೋಗಿ ನರಸಿಂಹ ದೇವಸ್ಥಾನದಲ್ಲಿ ಹಾರ ಬದಲಾಯಿಸಿ ಮದುವೆ ಆಗಿದ್ದಾರೆ. ಹುಡುಗನ ಮನೆಯಲ್ಲಿ ಶಿಲ್ಪಾಳನ್ನ ಸೊಸೆ ಅಂತಾ ಒಪ್ಪಿಕೊಳ್ಳಲು ತಯಾರಿದ್ದಾರೆ. ಆದರೆ ಯುವತಿ ಮನೆಯಲ್ಲಿ ಅಳಿಯನನ್ನ ಒಪ್ಪಿಕೊಳ್ಳುತ್ತಿಲ್ಲ. ಹೀಗಾಗಿ ಹುಡುಗಿ ಪೋಷಕರಿಂದ ಏನಾದರೂ ಅನಾಹುತ ಆಗಬಹುದು ಅಂತಾ ರಕ್ಷಣೆಗಾಗಿ ಎಸ್ಪಿ ಕಚೇರಿಗೆ ಬಂದಿದ್ದಾರೆ.ಅವರಿಬ್ಬರೂ ಪರಸ್ಪರ ಐದು ವರ್ಷಗಳಿಂದ ಪ್ರೀತಿ ಮಾಡ್ತಾ ಇದ್ರು, ಅವರ ಪ್ರೀತಿಗೆ ಮನೆಯಲ್ಲಿ ಒಪ್ಪದ ಕಾರಣ ಮನೆ ಬಿಟ್ಟು ಓಡಿಬಂದು ನರಸಿಂಹ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ.. ಮದುವೆಯಾದ ಜೋಡಿಗೀಗ ಮನೆಯವರಿಂದಲೇ ಪ್ರಾಣ ಬೆದರಿಕೆ ಶುರುವಾಗಿದೆ, ಹೀಗಾಗಿ ರಕ್ಷಣೆಗಾಗಿ ಆ ಜೋಡಿ ಠಾಣೆ ಮೆಟ್ಟಿಲು ಏರಿದ್ದಾರೆ… ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ.


ಹೌದು ಹೀಗೆ ಮುದ್ದುಮುದ್ದಾಗಿ ಕಾಣುವ ಈ ಜೋಡಿ ಕಳೆದ ಐದು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ರು, ಒಂದೇ ಜಾತಿಯವರಾದ್ರು ಮನೆಯಲ್ಲಿ ಮದುವೆಗೆ ಒಪ್ಪಿಲ್ಲ, ಹೀಗಾಗಿ ಮನೆ ಬಿಟ್ಟು ಓಡಿ ಬಂದು ಆಂದ್ರದಲ್ಲಿ ನರಸಿಂಹ ದೇವಸ್ಥಾನದ ಮುಂದೆ ಮದುವೆಯಾಗಿದ್ದಾರೆ.. ಮದುವೆಯಾದ ವಿಷಯ ಹುಡಗಿ ಕುಟುಂಬಕ್ಕೆ ತಿಳಿಯುತ್ತಿದ್ದಂತೆ ಹುಡಗನ ಮೇಲೆ ಗರಂ ಆಗಿದ್ದಾರೆ.


ಹೀಗಾಗಿ ಬೆದರಿದ ಈ ಜೋಡಿ ಬಳ್ಳಾರಿ ಎಸ್ಪಿ ಕಚೇರಿಗೆ ಬಂದು ಜೀವ ರಕ್ಷಣೆಗೆ ಮನವಿ ಮಾಡಿದ್ದಾರೆ.. ಎಸ್ ಹೀಗೆ ಕಾಣುವ ಈ ಜೋಡಿ ಹೆಸರು ನಾರಾಯಣ (25) ಮತ್ತು ಶಿಲ್ಪಾ (20) ಅಂತಾ ಯುವಕ ನಾರಾಯಣ ಬಳ್ಳಾರಿ ತಾಲೂಕಿನ ಗೋನಾಳ ಗ್ರಾಮದವನಾದ್ರೆ, ಯುವತಿ ಶಿಲ್ಪಾ ಸಿರಗುಪ್ಪ ತಾಲೂಕಿ‌ನ ಊಳೂರು ಗ್ರಾಮದವಳು.. ಶಿಲ್ಪಾ 9 ನೇ ತರಗತಿ ಇರುವಾಗ ಗೋನಾಳ ಗ್ರಾಮದಲ್ಲಿರುವ ಅವಳ ದೊಡ್ಡಮ್ಮನ ಮನೆಗೆ ಬಂದಿದ್ದಳಂತೆ ಆಗ ನಾರಾಯಣನ ಪರಿಚಯವಾಗಿದೆ.. ಪರಿಚಯ ಪ್ರೇಮಕ್ಕೆ ತಿರುಗಿ ಈಗ ಈ ಜೋಡಿ ಮದುವೆ ಆಗಿದ್ದಾರೆ.. ಯುವಕ ಯುವತಿ ಕುರುಬ ಸಮುದಾಯಕ್ಕೆ ಸೇರಿದ್ದಾರೆ ಯಾವುದೇ ಜಾತಿ ಸಮಸ್ಯೆ ಇಲ್ಲ ಆದರೂ ಮನೆಯಲ್ಲಿ ಒಪ್ಪಿಲ್ಲ ಹೀಗಾಗಿ ಶಿಲ್ಪಾ ಮನೆ ಬಿಟ್ಟು ಬಂದು ಈ ಯುವಕನನ್ನ ಮದುವೆ ಆಗಿದ್ದಾಳೆ.


ಇನ್ನು ಯುವಕ ನಾರಾಯಣ ಬಳ್ಳಾರಿ ಜಿಲ್ಲಾ ಪಂಚಾಯತ್​​ನಲ್ಲಿ ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದಾನೆ.. ನೋಡಲು ಸ್ಮಾಟ್೯ ಆಗಿದ್ದಾನೆ.. ಯುವತಿ ಶಿಲ್ಪಾ ಪಿಯುಸಿ ಮುಗಿಸಿದ್ದಾಳೆ ಇವಳು ಕೂಡ ಸುಂದರವಾಗಿದ್ದಾಳೆ. ಪರಸ್ಪರ ಇಬ್ಬರೂ ಒಬ್ಬರನ್ನೊಬ್ಬರು ಬಿಟ್ಟು ಇರದಂತ ಪ್ರೀತಿ ಮಾಡಿದ್ದಾರೆ..


ಆದರೆ ಈ ಪ್ರೀತಿಗೆ ಹುಡುಗಿ ಪೋಷಕರು ಒಪ್ಪಿಗೆ ನೀಡಿಲ್ಲ, ಇದಕ್ಕೆ ಕಾರಣ ಅಂದ್ರೆ ಹುಡಗನಿಗೆ ಆಸ್ತಿಯಿಲ್ಲ ಬಡವ ಇದ್ದಾನೆ ಅಂತಾ. ಆದರೆ ಐದು ವರ್ಷದ ಪ್ರೀತಿ ಹೇಗೆ ಬಿಟ್ಟು ಕೊಡುವುದಕ್ಕೆ ಆಗುತ್ತೆ ಅಂತಾ ಶಿಲ್ಪಾ ಜ. 27 ನೇ ತಾರೀಖು ಮನೆ ಬಿಟ್ಟು ಬಂದಿದ್ದಾಳೆ.. ಮನೆ ಬಿಟ್ಟು ಬಂದು ನನ್ನ ಮದುವೆ ಆಗು ಅಂತಾ ನಾರಾಯಣನಿಗೆ ಹೇಳಿದ್ದಾಳೆ.ಆಗ ಇಬ್ಬರು ಬಳ್ಳಾರಿ ಯಿಂದ ಆಂದ್ರಪ್ರದೇಶಕ್ಕೆ ಹೋಗಿ ಅಲ್ಲಿರುವ ನರಸಿಂಹ ದೇವಸ್ಥಾನದ ಮುಂದೆ ಹಾರ ಬದಲಾಯಿಸಿ ಮದುವೆ ಆಗಿದ್ದಾರೆ.. ಹುಡುಗನ ಮನೆಯಲ್ಲಿ ಶಿಲ್ಪಾಳನ್ನ ಸೊಸೆ ಅಂತಾ ಒಪ್ಪಿಕೊಳ್ಳಲು ತಯಾರಿದ್ದಾರೆ. ಆದರೆ ಯುವತಿ ಮನೆಯಲ್ಲಿ ನಾರಾಯಣನನ್ನ ಅಳಿಯ ಅಂತಾ ಒಪ್ಪಿಕೊಳ್ಳುತ್ತಿಲ್ಲ.. ಹೀಗಾಗಿ ಹುಡುಗಿ ಪೋಷಕರಿಂದ ಏನಾದರೂ ಅನಾಹುತ ಆಗ ಬಹುದು ಅಂತಾ ರಕ್ಷಣೆಗಾಗಿ ಎಸ್ಪಿ ಕಚೇರಿಗೆ ಬಂದಿದ್ದಾರೆ.


ಒಟ್ಟಿನಲ್ಲಿ ಐದು ವರ್ಷದಿಂದ ಪ್ರೀತಿ ಪ್ರೇಮದಲ್ಲಿ ಮುಳಗಿದ್ದ ಜೋಡಿ ಮದುವೆ ಆಗಿದ್ದಾರೆ.. ಆದರೆ ಈ ಮದುವೆಗೆ ಹುಡುಗಿ ಪೋಷಕರು ಒಪ್ಪಿಗೆ ನೀಡಿಲ್ಲ.. ಹೀಗಾಗಿ ರಕ್ಷಣೆ ಬೇಕು ಅಂತಾ ಠಾಣೆ ಮೆಟ್ಟಿಲೇರಿದ್ದಾರೆ.. ಇನ್ನಾದರೂ ಎರಡೂ ಕುಟುಂಬಗಳು ಹಗೆ ಸಾಧಿಸದೆ ಈ ಜೋಡಿಯನ್ನ ಒಪ್ಪಿ ಆಶೀರ್ವದಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ ಎಂದು ನಂಬಿ: ಕಾಂಗ್ರೆಸ್ ಮನವಿ

Posted by Vidyamaana on 2023-11-11 08:25:04 |

Share: | | | | |


ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ ಎಂದು ನಂಬಿ: ಕಾಂಗ್ರೆಸ್ ಮನವಿ

ಬೆಂಗಳೂರು: ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ, ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಆಯ್ಕೆಗೊಂಡಿದ್ದಕ್ಕೆ ಕಾಂಗ್ರೆಸ್ ಪ್ರತಿಕ್ರಿಯಿಸಿದೆ. ವಿಡಂಬನೆಯಿಂದ ಕೂಡಿದ ಆ ಪ್ರತಿಕ್ರಿಯೆ ನಾಡಿನ ಗಮನ ಸೆಳೆದಿದೆ.ಯಡಿಯೂರಪ್ಪನವರ ಮಗ’ ಎಂಬ ಅರ್ಹತೆಯಲ್ಲಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ‘ಯಡಿಯೂರಪ್ಪನವರ ಮಗ’ನಿಗೆ ಅಭಿನಂದನೆಗಳು ಎಂದು ಕರ್ನಾಟಕ ಕಾಂಗ್ರೆಸ್​ನ ಸೋಷಿಯಲ್ ಮೀಡಿಯಾದಲ್ಲಿ ಶುಭ ಹಾರೈಸಿದೆ.


ಮಾತ್ರವಲ್ಲ, ‘ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ’ ಎಂಬ ಸುಳ್ಳನ್ನು ನಂಬಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇವೆ ಎಂಬುದಾಗಿಯೂ ಹೇಳಿಕೊಂಡಿದೆ.ಕಾಂಗ್ರೆಸ್​ನ ಪ್ರತಿಕ್ರಿಯೆಗೆ ಪರ-ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ.

ಒಡಿಶಾ ರೈಲು ದುರಂತಕ್ಕೆ ಕೋಮು ಬಣ್ಣ: ಪೊಲೀಸರ ಎಚ್ಚರಿಕೆ

Posted by Vidyamaana on 2023-06-04 13:54:44 |

Share: | | | | |


ಒಡಿಶಾ ರೈಲು ದುರಂತಕ್ಕೆ ಕೋಮು ಬಣ್ಣ: ಪೊಲೀಸರ ಎಚ್ಚರಿಕೆ

ಬಾಲಾಸೋರ್ : ಶುಕ್ರವಾರ ನಡೆದ ಭೀಕರ ರೈಲು ದುರಂತಕ್ಕೆ ಕೆಲವರು ಕೋಮು ಬಣ್ಣ ನೀಡಲು ಮುಂದಾಗಿದ್ದು ಒಡಿಶಾ ಪೊಲೀಸರು ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ರವಾನಿಸಿದ್ದಾರೆ.ಬಾಲಸೋರ್‌ನಲ್ಲಿ ಸಂಭವಿಸಿದ ದುರಂತ ರೈಲು ಅಪಘಾತಕ್ಕೆ ಕೆಲವು ಸಾಮಾಜಿಕ ಮಾಧ್ಯಮಗಳಲ್ಲಿ ಕಿಡಿಗೇಡಿತನದಿಂದ ಕೋಮು ಬಣ್ಣವನ್ನು ನೀಡುತ್ತಿರುವುದು ಗಮನಕ್ಕೆ ಬಂದಿದೆ. ಇದು ಅತ್ಯಂತ ದುರದೃಷ್ಟಕರ. ಅಪಘಾತದ ಕಾರಣ ಮತ್ತು ಇತರ ಎಲ್ಲ ಅಂಶಗಳ ಕುರಿತು ಒಡಿಶಾದ ಜಿಆರ್‌ಪಿಯಿಂದ ತನಿಖೆ ನಡೆಯುತ್ತಿದೆ ಎಂದು ಒಡಿಶಾ ಪೊಲೀಸರು ಟ್ವೀಟ್ ಮಾಡಿದ್ದಾರೆಇಂತಹ ಸುಳ್ಳು ಮತ್ತು ದುರುದ್ದೇಶಪೂರಿತ ಪೋಸ್ಟ್‌ಗಳನ್ನು ಪ್ರಸಾರ ಮಾಡುವುದನ್ನು ತಡೆಯಲು ನಾವು ಸಂಬಂಧಪಟ್ಟ ಎಲ್ಲರಿಗೂ ಮನವಿ ಮಾಡುತ್ತೇವೆ. ವದಂತಿಗಳನ್ನು ಹಬ್ಬಿಸಿ ಕೋಮು ಸೌಹಾರ್ದತೆ ಸೃಷ್ಟಿಸಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.” ಎಂದು ಎಚ್ಚರಿಕೆ ನೀಡಿದ್ದಾರೆ.

   ಮೃತ ಪಟ್ಟವರ ಸಂಖ್ಯೆ 275 ಆಗಿದ್ದು 288 ಅಲ್ಲ. ದತ್ತಾಂಶವನ್ನು ಡಿಎಂ ಪರಿಶೀಲಿಸಿದ್ದಾರೆ ಮತ್ತು ಕೆಲವು ದೇಹಗಳನ್ನು ಎರಡು ಬಾರಿ ಎಣಿಸಲಾಗಿದೆ ಎಂದು ಕಂಡುಬಂದಿದೆ, ಆದ್ದರಿಂದ ಸಾವಿನ ಸಂಖ್ಯೆಯನ್ನು 275 ಕ್ಕೆ ಪರಿಷ್ಕರಿಸಲಾಗಿದೆ. 275 ರಲ್ಲಿ 88 ದೇಹಗಳನ್ನು ಗುರುತಿಸಲಾಗಿದೆ ಎಂದು ಒಡಿಶಾ ಮುಖ್ಯ ಕಾರ್ಯದರ್ಶಿ ಪ್ರದೀಪ್ ಜೆನಾ ತಿಳಿಸಿದ್ದಾರೆ.ಪುರಿ, ಭುವನೇಶ್ವರ, ಕಟಕ್‌ನಿಂದ ಕೋಲ್ಕತಾಗೆ ಉಚಿತ ಬಸ್ ಸೇವೆಯನ್ನು ಒಡಿಶಾ ಸಿಎಂ ನವೀನ್ ಪಟ್ನಾಯಕ್ ಘೋಷಿಸಿದ್ದಾರೆ ಬಹನಾಗಾ ರೈಲು ದುರಂತದಿಂದ ಉಂಟಾದ ರೈಲು ಸೇವೆಗಳ ಅಡಚಣೆಯನ್ನು ಗಮನದಲ್ಲಿಟ್ಟುಕೊಂಡು ಉಚಿತ ಬಸ್ ಸೇವೆಯನ್ನು ಘೋಷಿಸಿದ್ದಾರೆ. ಸಂಪೂರ್ಣ ವೆಚ್ಚವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಭರಿಸಲಾಗುವುದು ಮತ್ತು ಬಲೇಶ್ವರ ಮಾರ್ಗದಲ್ಲಿ ಸಾಮಾನ್ಯ ರೈಲು ಸೇವೆಗಳನ್ನು ಮರುಸ್ಥಾಪಿಸುವವರೆಗೆ ವ್ಯವಸ್ಥೆ ಮುಂದುವರಿಯುತ್ತದೆ ಎಂದು ತಿಳಿಸಿದ್ದಾರೆ.

ಮಂಗಳೂರುನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ

Posted by Vidyamaana on 2024-02-18 07:21:07 |

Share: | | | | |


ಮಂಗಳೂರುನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ

ಪುತ್ತೂರು:ಮಂಗಳೂರು ಅಡ್ಯಾ‌ರ್ ಸಹ್ಯಾದ್ರಿ ಕಾಲೇಜಿನ ಮುಂಭಾಗ ಫೆ.17ರಂದು ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶ ಅದ್ದೂರಿಯಾಗಿ ನಡೆದಿದೆ. ಪುತ್ತೂರು, ಕಡಬ ಸೇರಿದಂತೆ ಎರಡೂ ತಾಲೂಕುಗಳಿಂದ ಮತ್ತು ವಿಟ್ಲ ವ್ಯಾಪ್ತಿಯಿಂದ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಪುತ್ತೂರಿನಿಂದ ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃದಲ್ಲಿ ಸುಮಾರು 6 ಸಾವಿರಕ್ಕೂ ಮಿಕ್ಕಿ ಕಾರ್ಯಕರ್ತರು ಬಸ್ಸುಗಳು .ಹಾಗೂ ಇತರ ವಾಹನಗಳಲ್ಲಿ ಸಮಾವೇಶಕ್ಕೆ ತೆರಳಿದ್ದರು.ಸಮಾವೇಶಕ್ಕೆ ತೆರಳಿದ ವಾಹನಗಳ ರ್ಯಾಲಿಗೆ ಬೆಳಿಗ್ಗೆ ದರ್ಬೆ ಬೈಪಾಸ್‌ನಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿ ಬಳಿ ತೆಂಗಿನ ಕಾಯಿ ಒಡೆಯುವ ಮೂಲಕ ಶಾಸಕ ಅಶೋಕ್ ಕುಮಾ‌ರ್ ರೈಯವರು ಚಾಲನೆ ನೀಡಿದರು.


ಪುತ್ತೂರಿನಿಂದ ಸುಮಾರು 60 ಬಸ್‌ಗಳಲ್ಲಿ ಹಾಗೂ 75 ಕಾರುಗಳಲ್ಲಿ ಕಾರ್ಯಕರ್ತರು, ಪಕ್ಷದ ಪ್ರಮುಖರು ಮಂಗಳೂರಿಗೆ ತೆರಳಿದ್ದರು.ಬಸ್‌ಗಳು ಸಮಾವೇಶಕ್ಕೆ ತೆರಳುವ ಮೊದಲು ಶಾಸಕ ಅಶೋಕ್ ಕುಮಾರ್ ರೈ ಅವರು ಪ್ರತಿ ಬಸ್ಸಿನ ಬಳಿ ಹೋಗಿ ಬಸ್‌ನಲ್ಲಿದ್ದ • ಕಾರ್ಯಕರ್ತರನ್ನು ಮಾತನಾಡಿಸಿ ಗಮನ ಸೆಳೆದರು.ಈ ಸಂದರ್ಭ ಕಾಂಗ್ರೆಸ್ ಪಕ್ಷ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜೈ ಕಾರ ಕೂಗಲಾಯಿತಲ್ಲದೆ ಶಾಸಕ ಅಶೋಕ್ ಕುಮಾರ್ ರೈ ಅವರಿಗೂ ಜೈ ಕಾರ ಹಾಕಿದರು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್.ಮಹಮ್ಮದ್ ಆಲಿ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ., ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ಅರಸ್, ಪುಡಾ ಮಾಜಿ ಅಧ್ಯಕ್ಷ ಪ್ರಸಾದ್‌ಕೌಶಲ್ ಶೆಟ್ಟಿ, ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಂಜಿ ಗುಡ್ಡೆ ಈಶ್ವರ ಭಟ್, ತಾ.ಪಂ.ಮಾಜಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು, ಭೂನ್ಯಾಯ ಮಂಡಳಿ ಸದಸ್ಯ ಕೃಷ್ಣಪ್ರಸಾದ್‌ ಆಳ್ವ,ತಾಲೂಕು ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರು, ರೋಶನ್ ರೈ ಬನ್ನೂರು ಸಹಿತ ಹಲವಾರು ಪ್ರಮುಖರು ಉಪಸ್ಥಿತರಿದ್ದರು.

ಉಡುಪಿ ಹತ್ಯಾಕಾಂಡ: ಜಿಲ್ಲಾ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

Posted by Vidyamaana on 2024-02-13 15:12:16 |

Share: | | | | |


ಉಡುಪಿ ಹತ್ಯಾಕಾಂಡ: ಜಿಲ್ಲಾ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

ಉಡುಪಿ: ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಅನ್ನು ಪೊಲೀಸರು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.


ನವೆಂಬರ್ 12 ರಂದು ಒಂದೇ ಕುಟುಂಬದ ಹಸೀನಾ ಮತ್ತು ಮೂವರು ಮಕ್ಕಳ ಕೊಲೆ ನಡೆದಿದ್ದು, ಆರೋಪಿ ಪ್ರವೀಣ್ ಚೌಗುಲೆಯನ್ನು ಪೊಲೀಸರು ಬಂಧಿಸಿದ್ದರು.


ಈಗಾಗಲೇ ತನಿಖೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಮತ್ತು ಚಾರ್ಜ್ ಶೀಟ್ ಸಲ್ಲಿಸಲು ಫೆ.12 ಕೊನೆಯ ದಿನವಾಗಿರುವುದರಿಂದ ಶನಿವಾರ ಪ್ರಕರಣದ ತನಿಖಾಧಿಕಾರಿಯಾಗಿರುವ ಮಲ್ಪೆ ವೃತ್ತ ನಿರೀಕ್ಷಕರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.



Leave a Comment: