ಎಸ್ ಪಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

ಸುದ್ದಿಗಳು News

Posted by vidyamaana on 2024-07-01 12:44:53 |

Share: | | | | |


ಎಸ್ ಪಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

ಹಾಸನ: ಪೊಲೀಸ್‌ ಕಾನ್‌ಸ್ಟೇಬಲ್‌ (Police Constable) ಒಬ್ಬ ತನ್ನ ಪತ್ನಿಯನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ (SP) ಕಚೇರಿ ಆವರಣದಲ್ಲೇ ಇರಿದು (Stabbed) ಕೊಂದುಹಾಕಿದ (Murder Case) ಘಟನೆ ಹಾಸನದಲ್ಲಿ ನಡೆದಿದೆ.ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕಾನ್‌ಸ್ಟೇಬಲ್‌, ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ.

ಕಳೆದ ನಾಲ್ಕೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿತ್ತು. ಪೊಲೀಸ್ ಗಂಡನ ವಿರುದ್ಧ ದೂರು ನೀಡಲೆಂದು ಪತ್ನಿ ಮಮತಾ(37) ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಆಗಮಿಸಿದ್ದರು. ಇದೇ ವೇಳೆ, ಹಿಂಬಾಲಿಸಿ ಬಂದಿದ್ದ ಲೋಕನಾಥ್ ಹಾಸನ ಎಸ್ಪಿ ಕಚೇರಿ ಎದುರಲ್ಲೇ ಪತ್ನಿಯ ಎದೆಗೆ ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದ್ದಾನೆ.‌

ಮಹಿಳೆಯನ್ನು ಕೂಡಲೇ ಪೊಲೀಸರು ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಸಾವು ಕಂಡಿದ್ದಾಳೆ.‌ ಆರೋಪಿ ಪತಿ ಲೋಕನಾಥ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 Share: | | | | |


ಮದ್ವೆಯಾದ 9 ತಿಂಗಳಿಗೆ ಕ್ರಿಮಿನಾಶಕ ಸೇವಿಸಿ ಪತ್ನಿ ಸಾವು: ಆಕೆಯ ಸಮಾಧಿ ಬಳಿ ವಿಷ ಕುಡಿದ ಗಂಡ

Posted by Vidyamaana on 2024-01-28 15:33:22 |

Share: | | | | |


ಮದ್ವೆಯಾದ 9 ತಿಂಗಳಿಗೆ ಕ್ರಿಮಿನಾಶಕ ಸೇವಿಸಿ ಪತ್ನಿ ಸಾವು: ಆಕೆಯ ಸಮಾಧಿ ಬಳಿ ವಿಷ ಕುಡಿದ ಗಂಡ

ಹೈದರಾಬಾದ್​: ನವವಿವಾಹಿತೆಯೊಬ್ಬಳು ಕ್ರಿಮಿನಾಶಕ ಸೇವಿಸಿ ಸಾವಿಗೆ ಶರಣಾದ ಸುದ್ದಿ ಕೇಳಿ ಆಕೆಯ ಗಂಡನೂ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಕರುಣಾಜನಕ ಘಟನೆ ತೆಲಂಗಾಣದ ಆದಿಲಬಾದ್​ನಲ್ಲಿ ನಡೆದಿದೆ.ಮೃತ ನವದಂಪತಿಯನ್ನು ವಿಜಯ್​ (28) ಮತ್ತು ಪಲ್ಲವಿ (20) ಎಂದು ಗುರುತಿಸಲಾಗಿದೆ.ಕ್ರಿಮಿನಾಶಕ ಸೇವಿಸಿದ್ದ ಪಲ್ಲವಿಯನ್ನು ಆದಿಲಬಾದ್​ನಲ್ಲಿರುವ ರಾಜೀವ್ ಗಾಂಧಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ರಿಮ್ಸ್​)ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.


ಆದಿಲಬಾದ್​ ಪೊಲೀಸರ ಪ್ರಕಾರ ಪಲ್ಲವಿ, ಶುಕ್ರವಾರ ಕ್ರಿಮಿನಾಶಕ ಸೇವನೆ ಮಾಡಿದ್ದಳು. ಶನಿವಾರ ಬೆಳಗ್ಗೆ ಅಸುನೀಗಿದ್ದಾಳೆ. ಸಾವಿನ ಸುದ್ದಿ ಕೇಳಿದ ವಿಜಯ್​, ಎಲ್ಲರ ನಿಂದನೆಗೆ ಗುರಿಯಾಗಬೇಕಾಗುತ್ತದೆ ಎಂದು ಹೆದರಿ, ಕೀಟನಾಶಕ ಸೇವಿಸಿ ಮಣ್ಣು ಮಾಡುವ ಜಾಗಕ್ಕೆ ತೆರಳಿ ಪತ್ನಿಯ ಬಳಿಯಲ್ಲೇ ಕೊನೆಯುಸಿರೆಳೆದಿದ್ದಾನೆ. ಇಬ್ಬರು ಕಳೆದ ವರ್ಷ ಮೇ 23ರಂದು ಶಾಸ್ತ್ರೋಕ್ತವಾಗಿ ಮದುವೆ ಆಗಿದ್ದರು.


ದಂಪತಿ ನಡುವೆ ಯಾವುದೇ ಕಲಹವಾಗಲಿ ಅಥವಾ ಭಿನ್ನಾಭಿಪ್ರಾಯವಾಗಲಿ ಇರಲಿಲ್ಲ. ಇಬ್ಬರು ಸುಂದರ ಜೀವನವನ್ನು ಸಾಗಿಸುತ್ತಿದ್ದರು. ಪಲ್ಲವಿಗೆ ಗಂಡನ ಮನೆ ಕೊಲ್ಹಾರಿಯಲ್ಲಿ ವಾಸಿಸಲು ಆಸಕ್ತಿ ಇರಲಿಲ್ಲ.ಹೀಗಾಗಿ ಮನೆಯಿಂದ ದೂರ ಉಳಿದಿದ್ದಳು. ಶುಕ್ರವಾರ ಆಕೆಯನ್ನು ಆಕೆಯ ಸಹೋದರ ಕೊಲ್ಹಾರಿಗೆ ಡ್ರಾಪ್ ಮಾಡಿದ್ದ. ಈ ವೇಳೆ ಕೀಟನಾಶಕ ಬಾಟಲಿ ತೆಗೆದುಕೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.


ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು

Posted by Vidyamaana on 2023-04-13 16:24:20 |

Share: | | | | |


ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು

ಬೆಳ್ತಂಗಡಿ : ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಸಿ.ಎಂ. ಬೊಮ್ಮಾಯಿಯವರು ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳ ಕ್ಷೇತ್ರಕ್ಕೆ ಆಗಮಿಸುತ್ತಿದ್ದಂತೆ ಅವರ ವಾಹನ ತಪಾಸಣೆಗೆ ಒಳಪಡಿಸಿದ ಘಟನೆಯ ಬೆನ್ನಲ್ಲೇ ಎ.13 ರಂದು ಚುನಾವಣಾ ಅಧಿಕಾರಿಗಳು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಜಿಲ್ಲಾಧ್ಯಕ್ಷ ಸುದರ್ಶನ ಅವರ ಕಾರನ್ನು ತಪಾಸಣೆ ನಡೆಸಿದ್ದಾರೆ.ಅಧಿಕಾರಿ ಜಯಕೀರ್ತಿ ಹೆಚ್.ಬಿ. ಅವರಿದ್ದ ತಂಡವು ಐದು ಪೊಲೀಸ್ ಭದ್ರತಾ ವಾಹನದೊಂದಿಗೆ ಬೆಂಗಳೂರಿನಿಂದ ಮಂಗಳೂರಿಗೆ ಚಾರ್ಮಾಡಿ ಘಾಟ್ ರಸ್ತೆ ಮೂಲಕ ಬರುತ್ತಿದ್ದಾಗ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ತಡೆದು ನಿಲ್ಲಿಸಿ ಕಾರು ಪರಿಶೀಲನೆ ನಡೆಸಿ ನಂತರ ಪ್ರಯಾಣಕ್ಕೆ ಅನುವು ಮಾಡಿಕೊಟ್ಟರು.ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಎಸ್.ಎಸ್.ಟಿ. ಅಧಿಕಾರಿ ಜಯಕೀರ್ತಿ ಹೆಚ್.ಬಿ., ಸುಖೇಶ್ ಜಿ, ಧರ್ಮಸ್ಥಳ ಪೊಲೀಸ್ ಸಿಬ್ಬಂದಿಗಳಾದ ಮಂಜುನಾಥ್, ಸುನಿಲ್ ಹಾಗೂ ಸಿ.ಆರ್.ಪಿ.ಎಫ್. ಪಡೆ ಸಿಬ್ಬಂದಿಗಳು ತಮ್ಮ ಕರ್ತವ್ಯ ನಿರ್ವಹಿಸಿದರು.

ಬಂಟ್ವಾಳ: ಲಾರಿ - ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ; ವಿದ್ಯಾರ್ಥಿನಿ ಸೇರಿ ಎಂಟು ಮಂದಿಗೆ ಗಾಯ

Posted by Vidyamaana on 2024-05-30 14:35:04 |

Share: | | | | |


ಬಂಟ್ವಾಳ: ಲಾರಿ - ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ; ವಿದ್ಯಾರ್ಥಿನಿ ಸೇರಿ ಎಂಟು ಮಂದಿಗೆ ಗಾಯ

ಬಂಟ್ವಾಳ : ಲಾರಿಯೊಂದು ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿಯಾದ ಪರಿಣಾಮ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿ ಸೇರಿದಂತೆ ಒಟ್ಟು ಎಂಟು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಗ್ಗ ಸಮೀಪದ ಕಾಡುಬೆಟ್ಟು ಕ್ರಾಸ್ ಬಳಿ ನಡೆದಿದೆ.ಬಸ್ ಚಾಲಕ ಉಮೇಶ್, ಪ್ರಯಾಣಿಕರಾದ ನಳಿನಿ ಬೆಳ್ತಂಗಡಿ, ವಿದ್ಯಾರ್ಥಿ‌ನಿ ಮಧುರಾ ಇರ್ವತ್ತೂರು, ರಕ್ಷಣ್ ವೇಣು ಗೋಪಾಲ ಕಾವಳಪಡೂರು, ತಾರಾನಾಥ ಗರ್ಡಾಡಿ, ರೋಹಿಣಿ ಮದ್ದಡ್ಕ, ಲಾರಿ ಚಾಲಕ ಚಿತ್ರದುರ್ಗ ಸಮೀಪದ ಹಿರಿಯೂರಿ‌ನ ಮಹೇಶ್ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಆರ್ಟಿಕಲ್ 370 ಸಿನಿಮಾಕ್ಕೆ ಪುತ್ತಿಲ ಪರಿವಾರದಿಂದ ಬೆಂಬಲ

Posted by Vidyamaana on 2024-02-27 21:02:57 |

Share: | | | | |


ಆರ್ಟಿಕಲ್ 370 ಸಿನಿಮಾಕ್ಕೆ ಪುತ್ತಿಲ ಪರಿವಾರದಿಂದ ಬೆಂಬಲ

ಪುತ್ತೂರು: ಆರ್ಟಿಕಲ್ 370 ವಿಧಿ ರದ್ದತಿಯ ನೈಜ ಚಿತ್ರಣದ ಸಿನಿಮಾ ಪುತ್ತೂರಿನಲ್ಲಿ ಪ್ರದರ್ಶನಗೊಳ್ಳುತ್ತಿದ್ದು, ಪುತ್ತಿಲ ಪರಿವಾರದಿಂದ ಒಂದು ಶೋ ಉಚಿತ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಿದೆ.

ಫೆ. 29ರಂದು ಸಂಜೆ 6ಕ್ಕೆ ಏಕಕಾಲಕ್ಕೆ 500 ಜನರಿಗೆ ಏಕಕಾಲದಲ್ಲಿ ಉಚಿತ ವೀಕ್ಷಣೆಯ ವ್ಯವಸ್ಥೆ ಮಾಡಲಾಗಿದೆ. 

ದೇಶದ ಸ್ವಾಭಿಮಾನದ ಮುಕುಟಶಿರ ಕಾಶ್ಮೀರದ ದೇವ ಭೂಮಿಗೆ ಕಳಂಕವಾಗಿದ್ದ ಆರ್ಟಿಕಲ್ 370 ವಿಧಿ ರದ್ಧತಿಯ ನೈಜ ಚಿತ್ರಣದ ಅದ್ಭುತ ದೃಶ್ಯ ಕಾವ್ಯ ಉಚಿತವಾಗಿ ನೋಡಲಿಚ್ಚಿಸುವವರು ಮುಂಚಿತವಾಗಿ ಬುಕ್ ಮಾಡಬೇಕು. ಸಂಪರ್ಕಕ್ಕೆ 9632636620, 81974 98978.

ಗುರುಪ್ರಸಾದ್ ರೈ ಮನೆ ದರೋಡೆ ಪ್ರಕರಣ

Posted by Vidyamaana on 2023-11-08 15:46:42 |

Share: | | | | |


ಗುರುಪ್ರಸಾದ್ ರೈ ಮನೆ ದರೋಡೆ ಪ್ರಕರಣ

ಪುತ್ತೂರು: ಕೊಲೆ ಪ್ರಕರಣವೊಂದರಲ್ಲಿ ಶಿಕ್ಷೆಯಾಗಿ ಜೈಲಲ್ಲಿರುವ ಅಪರಾಧಿ ರವಿ ಎಂಬಾತನನ್ನು ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ರಾಡಿ ಅವರ ಮನೆಯಲ್ಲಿ 2 ತಿಂಗಳ ಹಿಂದೆ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಕಣ್ಣೂರು ನ್ಯಾಯಾಲಯಿಂದ ಬಾಡಿವಾರಂಟ್ ಮೂಲಕ ಪಡೆದುಕೊಂಡ ಪೊಲೀಸರು ನ.8ರಂದು ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ 5 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಕೋವಿಡ್ ಬಂದರೆ 7 ದಿನ ಹೋಂ ಐಸೊಲೇಷನ್ ಕಡ್ಡಾಯ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು:ಸಚಿವ ದಿನೇಶ್ ಗುಂಡೂರಾವ್

Posted by Vidyamaana on 2023-12-26 17:26:25 |

Share: | | | | |


ಕೋವಿಡ್ ಬಂದರೆ 7 ದಿನ ಹೋಂ ಐಸೊಲೇಷನ್ ಕಡ್ಡಾಯ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು:ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಕೊರೋನಾ ಬಂದರೆ ರೋಗಿಗಳು 7 ದಿನ ಕಡ್ಡಾಯವಾಗಿ ಹೋಂ ಐಸೊಲೇಷನ್ ನಲ್ಲಿರಬೇಕು.ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಹಾಗೆಂದು ಜನರು ಆತಂಕಪಡುವ ಅಗತ್ಯವಿಲ್ಲ, ಕಾಳಜಿ ವಹಿಸಿಕೊಳ್ಳಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ಕೋವಿಡ್ ಸಂಪುಟ ಉಪಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕೋವಿಡ್ ಮಾರ್ಗಸೂಚಿಗಳ ಬಗ್ಗೆ ಮಾಹಿತಿ ನೀಡಿದರು. ಕೋವಿಡ್ ಸಂಪುಟ ಉಪಸಮಿತಿ ಸಭೆಯಲ್ಲಿ ತಜ್ಞರೊಂದಿಗೆ ಚರ್ಚೆ ನಡೆಸಿದ ನಂತರ ತಂದಿರುವ ಮಾರ್ಗಸೂಚಿಗಳೇನು ಎಂದು ವಿವರಿಸಿದರು. ಹೊಸ ವರ್ಷಕ್ಕೆ ಇಲ್ಲ ನಿರ್ಬಂಧ: ಹೊಸ ವರ್ಷ ಆಚರಣೆಗೆ ಯಾವುದೇ ನಿರ್ಬಂಧವಿಲ್ಲ.


ಜನರೇ ಜನದಟ್ಟಣಿಯಲ್ಲಿ ಸೇರದಂತೆ ತಮ್ಮನ್ನು ತಾವು ಸಾಧ್ಯವಾದಷ್ಟು ನಿರ್ಬಂಧ ಹೇರಿಕೊಳ್ಳಿ. ಜ್ವರ, ಕೆಮ್ಮು, ನೆಗಡಿ, ಶೀತ, ಗಂಟಲು ನೋವು ಬಂದರೆ ಮನೆಯಲ್ಲಿಯೇ ಉಳಿದುಕೊಳ್ಳಿ. ಇದು ಖಾಸಗಿ ವಲಯಕ್ಕೂ ನಿಯಮ ಅನ್ವಯವಾಗುತ್ತದೆ, ಕಡ್ಡಾಯವಾಗಿ ಉದ್ಯೋಗಿಗಳಿಗೆ ಕೋವಿಡ್ ರಜೆ ನೀಡಬೇಕು ಎಂದರು. ಶಾಲೆಗೆ ಕಳುಹಿಸಬೇಡಿ:ಕೋವಿಡ್ ಲಕ್ಷಣಗಳು, ಜ್ವರ, ಕೆಮ್ಮು ಮಕ್ಕಳಲ್ಲಿ ಕಂಡುಬಂದರೆ ಶಾಲೆಗೆ ಕಳುಹಿಸದೇ ಇರುವುದು ಉತ್ತಮ, ಮಕ್ಕಳಲ್ಲಿ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ನಿರ್ಬಂಧ ಹಾಕುವುದು ಉತ್ತಮ.


ಹೊರಗೆ ಓಡಾಡುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಳ್ಳಿ. ಶುಚಿತ್ವ ಕಾಪಾಡಿ, ಸ್ಯಾನಿಟೈಸರ್ ಬಳಸಿ ಎಂದರು. ಜೆಎನ್.1 ಉಪತಳಿ ಹೆಚ್ಚಾಗುವ ಸಾಧ್ಯತೆ: ರಾಜ್ಯದಲ್ಲಿ ಜೆಎನ್.1 ಉಪತಳಿ ಹೆಚ್ಚಾಗುವ ಸಾಧ್ಯತೆಗಳಿವೆ. ನಿನ್ನೆಯ 60 ಸ್ಯಾಂಪಲ್ಸ್ ನಲ್ಲಿ 34 JN.1 ಪ್ರಕರಣಗಳು ಪತ್ತೆಯಾಗಿವೆ. ಟೆಸ್ಟ್ ಹೆಚ್ಚಿಗೆ ಮಾಡಿದಷ್ಟು ಸ್ಪ್ರೆಡಿಂಗ್ ಗೊತ್ತಾಗುತ್ತೆ.


ಹೀಗಾಗಿ ಇಂದಿನಿಂದ ನಿತ್ಯ 5 ಸಾವಿರ ಟೆಸ್ಟ್ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.ಹಿಂದೆ ಆದ ತಪ್ಪು ಆಗಬಾರದು ಎಂದು ಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ. ಇದು ಆಶ್ಚರ್ಯ ಪಡುವ ವಿಚಾರ ಅಲ್ಲ.


ಇದು ಎಕ್ಸ್ಪೆಕ್ಟ್ ಮಾಡಲಾಗಿತ್ತು. Variant of interest ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ರಿಸ್ಕ್ ಫ್ಯಾಕ್ಟರಿ ಅಡೈಸರಿ ಬಂದಿಲ್ಲ. ಇದು ಸಮಾಧಾನಕರ ವಿಚಾರ.


ಆದರೂ ಎಚ್ಚರಿಕೆ ಅಗತ್ಯ ಎಂದು ಹೇಳಿದರು. ಸಿಎಂ ಎಚ್ಚರಿಕೆಯಿಂದ ಇರಿ ಎಂದು ಸಲಹೆ ನೀಡಿದ್ದಾರೆ. ಐಸಿಯು ಪರಿಶೀಲನೆ ನಡೆಸಲಿದ್ದೇವೆ. ಆಕ್ಸಿಜನ್ ಸಪ್ಲೈ , ಎಲ್ ಎಂಒ ರಾಜ್ಯದಲ್ಲಿ ಸಜ್ಜುಗೊಳಿಸಲು ತಿಳಿಸಲಾಗಿದೆ.


ಆಕ್ಸಿಜನ್ ಕೊರತೆಯಾಗದಂತೆ ಎಚ್ಚರವಹಿಸಲು ಸೂಚಿಸಲಾಗಿದೆ. 436 ಪಾಸಿಟಿವ್ ಪ್ರಕರಣಗಳ ಪೈಕಿ 400 ಜನ ಹೋಂ ಐಸೋಲೇಷನ್ ನಲ್ಲಿದ್ದಾರೆ. 7 ಜನ ಐಸಿಯುನಲ್ಲಿದ್ದಾರೆ. ಖುದ್ದು ನಮ್ಮ ಆರೋಗ್ಯ ಇಲಾಖೆ ಅಧಿಕಾರಿಗಳು ಟ್ರ್ಯಾಕಿಂಗ್ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.4 ಆಕ್ಸಿಜನ್ ಕಂಟೈನರ್ ಖರೀದಿ ಮಾಡಲಿದ್ದೇವೆ. ಆಸ್ಪತ್ರೆ ಮತ್ತು ಮನೆಯಲ್ಲಿ ಇರುವವರಿಗೆ ಈ ಆಕ್ಸಿಜನ್ ಕಂಟೈನರ್ ಉಪಯೋಗವಾಗಲಿದೆ. ಮೊದಲ ಹಾಗೂ ಎರಡನೇ ಡೋಸ್ ಪಡೆದಿದ್ದಾರೆ. ಅವರಿಗೆಲ್ಲ ಮುನ್ನೆಚ್ಚರಿಕೆಗಾಗಿ ಲಸಿಕೆ ನೀಡಲಾಗುತ್ತದೆ.


ಕೇಂದ್ರ ಸರ್ಕಾರದಿಂದ 30 ಸಾವಿರ ಮುನ್ನೆಚ್ಚರಿಕೆ ವ್ಯಾಕ್ಸಿನ್ ಕೇಳಿದ್ದು, ಉಪ ಸಮಿತಿಯಲ್ಲಿ ಖರೀದಿಗೆ ನಿರ್ಧಾರ ಮಾಡಲಾಗಿದೆ ಎಂದರು.ಕೋ ಮಾರ್ಬಿಟ್, ಹೆಲ್ತ್ ವರ್ಕಸ್ ಸೇರಿ ಹಲವರಿಗೆ ಮುನ್ನೆಚ್ಚರಿಕೆ ವ್ಯಾಕ್ಸಿನ್ ಕೊಡಲಾಗುತ್ತದೆ. ಸುವೆಜ್ ಸರ್ವಲೆನ್ಸ್ ಮೂಲಕ ಕೂಡಾ ಕೊವಿಡ್ ಟ್ಯ್ರಾಕ್ ಮಾಡಲಾಗುತ್ತದೆ. ಆರೋಗ್ಯ ಸಿಬ್ಬಂದಿಗೆ ಪ್ಲೂ ವ್ಯಾಕ್ಸಿನ್ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ 30 ಸಾವಿರ ಕೋರ್ಬಿ ವ್ಯಾಕ್ಸ್ ಖರೀದಿಸಲಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿವರಿಸಿದರು.



Leave a Comment: