ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

ಸುದ್ದಿಗಳು News

Posted by vidyamaana on 2024-07-24 22:11:50 |

Share: | | | | |


ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

‌ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು.ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ 8 ದಿನಗಳ ಬಳಿಕ ಮಂಗಳವಾರ ಸಿಕ್ಕಿದ್ದು ಪೋಸ್ಟ್ ಮಾರ್ಟಂ ಬಳಿಕ ಮೃತದೇಹವನ್ನು ಮನೆಯಿದ್ದ ಜಾಗಕ್ಕೆ ಸಾಗಿಸಿ ಅಂತಿಮ ಸಂಸ್ಕಾರ ನಡೆಸಲು ಪತ್ರಕರ್ತರಾದ ಶಶಿ ಬೆಳ್ಳಾಯರು, ಮೋಹನ್ ಕುತ್ತಾರ್, ಆರಿಫ್ ಯು.ಆರ್. ಗಿರೀಶ್ ಮಳಲಿ ಹಾಗೂ ಶಿವಶಂಕರ್ ನೆರವಾಗಿದ್ದರು

ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದನ್ನು ಗಮನಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಂದ ಪತ್ರಕರ್ತರ ಮಾಹಿತಿ ಪಡೆದು ಕಚೇರಿಯಲ್ಲಿ ಸನ್ಮಾನಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಅವರು ಜಿಲ್ಲಾಧಿಕಾರಿಯವರಿಗೆ ಪತ್ರಕರ್ತರ ಪರಿಚಯ ಮಾಡಿಕೊಟ್ಟರು.


ಬಳಿಕ ಮಾತಾಡಿದ ಜಿಲ್ಲಾಧಿಕಾರಿ ಅವರು, ನಿಮ್ಮ ಈ ಕಾರ್ಯ ಶ್ಲಾಘನೀಯವಾಗಿದೆ. ಇದೊಂದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆ ತರುವಂತಹ ಕಾರ್ಯ. ಮುಂದೆಯೂ ಇಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಿ, ಏನಾದರೂ ಅಗತ್ಯ ನೆರವು ಬೇಕಾದಲ್ಲಿ ಜಿಲ್ಲಾಡಳಿತ ನಿಮ್ಮ ಜೊತೆಗಿದೆ. ನಿಮ್ಮಂತಹ ಉತ್ಸಾಹಿ ತರುಣರ ಅವಶ್ಯಕತೆ ಸಮಾಜಕ್ಕೆ ಇದೆ ಎಂದು ಬೆನ್ನುತಟ್ಟಿದರು. ಅಲ್ಲದೇ ಶಿರೂರು ಮತ್ತು ಉಳುವರೆ ಗ್ರಾಮದ ಸದ್ಯದ ಸ್ಥಿತಿಗತಿಯ ಬಗ್ಗೆ ಪತ್ರಕರ್ತರಿಂದ ಮಾಹಿತಿ ಪಡೆದರು

 Share: | | | | |


ಬಪ್ಪಳಿಗೆ ಅನ್ಸಾರುಲ್ ಇಸ್ಲಾಂ ಯುವಕ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

Posted by Vidyamaana on 2023-09-13 11:05:38 |

Share: | | | | |


ಬಪ್ಪಳಿಗೆ ಅನ್ಸಾರುಲ್ ಇಸ್ಲಾಂ ಯುವಕ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಬಪ್ಪಳಿಗೆಯ ಉತ್ಸಾಹಿ ತರುಣರ ಸಂಘಟನೆಯಾದ ಅನ್ಸಾರುಲ್ ಇಸ್ಲಾಂ ಯುವಕ ಸಮಿತಿಯ 2023-25ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಮೋನು ಬಪ್ಪಳಿಗೆ ಯವರು ಪುನರಾಯ್ಕೆ ಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಸಾಹಿಕ್, ಕೋಶಾಧಿಕಾರಿಯಾಗಿ ಅಲ್ತಾಫ್ ಯು. ಕೆ ಆಯ್ಕೆಯಾದರು.

 ಸ್ಥಳೀಯ ಮದ್ರಸ  ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆಯು ನಡೆದಿದೆ. ಮಸ್ಜಿದುನ್ನೂರು ಮಸೀದಿ ಹಾಗೂ ಮದ್ರಸ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ಹಮೀದ್ ಹಾಜಿ ಲವ್ಲಿಯವರ ಅಧ್ಯಕ್ಷತೆಯಲ್ಲಿ, ಸ್ಥಳೀಯ ಖತೀಬರೂ ಸಮಿತಿಯ ಗೌರವಾಧ್ಯಕ್ಷರೂ ಆದ ಸಿರಾಜುದ್ದೀನ್ ಫೈಝಿ ಯವರು ಕಾರ್ಯಕ್ರಮವನ್ನು ಉದ್ಘಾಟಿಸಿ,ಸಾಂಘಿಕ ಕ್ಷೇತ್ರದಲ್ಲಿ ಯುವಕರ ಜವಾಬ್ದಾರಿಯನ್ನು ವಿವರಿಸಿದರು.ಮಸೀದಿಯ ಪ್ರಧಾನ ಕಾರ್ಯದರ್ಶಿಗಳಾದ ಇಕ್ಬಾಲ್ ಯು.ಕೆ.ಯವರು ನೂತನ ಸಮಿತಿಯ ಆಯ್ಕೆ ಪ್ರಕ್ರಿಯೆ ಗಳನ್ನು ನಿರ್ವಹಿಸಿದರು.

  ಕಳೆದ ನಲುವತ್ತಕ್ಕಿಂತಲೂ ಅಧಿಕ ವರ್ಷಗಳಿಂದ  ಮೊಹಲ್ಲಾ ಬಾಂಧವರ  ಸಾಮಾಜಿಕ, ಸಾಮುದಾಯಿಕ, ಶೈಕ್ಷಣಿಕ ಹಾಗೂ ಇನ್ನಿತರ ಕಾರ್ಯಗಳಿಗೆ ತನ್ನದೇ ಕೊಡುಗೆಗಳನ್ನು ನೀಡುತ್ತಾ ಬಂದಿರುವ ಸಮಿತಿಯು ಜನಪರ ಸೇವೆಗಳಿಂದ ಜನಪ್ರಿಯತೆ ಗಳಿಸಿದೆ.

ಯೌವ್ವನ ಒಳಿತಿಗಾಗಿ ಎಂಬ ಘೋಷ ವಾಕ್ಯದಡಿ ಸದಸ್ಯತ್ವ ನವೀಕರಣ ಹಾಗೂ ಹೊಸ ಸದಸ್ಯರ ಸೇರ್ಪಡೆಗಾಗಿ ಒಂದು ತಿಂಗಳ ಕಾಲ ನಡೆಸಿದ  ಸದಸ್ಯತ್ವ ಅಭಿಯಾನದ ಮೂಲಕ ಸಮಿತಿಗೆ ಸೇರ್ಪಡೆಗೊಂಡ ಸದಸ್ಯರಲ್ಲಿ ಇಪ್ಪತ್ತೊಂದು ಮಂದಿಯ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.

ಉಪಾಧ್ಯಕ್ಷರುಗಳಾಗಿ ಸವಾದ್ ಲಬಾಂಬ,

ಹಾಜಿ ಸಾದಿಕ್ ಕೆ.ವೈ.ಪಿ.,

ಜೊತೆಕಾರ್ಯದರ್ಶಿಗಳಾಗಿ ನೂರುದ್ದೀನ್ ಬಿ.ಹೆಚ್,

ಆಸೀಫ್ ಪಿ.ಬಿ ,ಸಂಘಟನಾ ಕಾರ್ಯದರ್ಶಿಗಳಾಗಿ ಬಶೀರ್ ಬಂಗಾರಿ,ಉಮರ್ ಕರ್ಕುಂಜ,

ತುರ್ತು ಸೇವೆಗಳ ಉಸ್ತುವಾರಿಗಳಾಗಿ ಶರೀಫ್,ಇಸಾಕ್ ಕರ್ಕುಂಜ, ರಮೀಝ್, ಮಸೂದ್, ಸವಾದ್ ಪಿ.ಬಿ, ಉಮರ್, ಆಶಿಕ್ ಜನತಾ ಸ್ಕೇಲ್.ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಜಲಾಲ್ ಪಿ.ಬಿ, ಶಾಕಿರ್, ಸಜಾಬ್ ಯಸ್. ಕೆ,  ಹುರೈಸ್ ಜನತಾ ಸ್ಕೇಲ್,   ಫಾರೂಕ್,ಕಲೀಲ್, ಸಫ್ವಾನ್,, ಶಿಹಾಬ್ ಪಿ.ಬಿ  ಯವರನ್ನು ಸದಸ್ಯರುಗಳನ್ನಾಗಿ ಆಯ್ಕೆ ಮಾಡಲಾಯಿತು .

ಬಿ.ಹೆಚ್.ಅಬ್ದುಲ್ ರಝಾಕ್ ಸ್ವಾಗತಿಸಿ, ವಂದಿಸಿದರು.

ಸಿಟಿ ಸ್ಕ್ಯಾನ್‌ ಕೊಠಡಿಯಲ್ಲಿ 13ರ ಬಾಲಕಿಗೆ ಕಿರುಕುಳ; ಆಪರೇಟರ್‌ ಅಮನ್ ರಾಜ್ ಅರೆಸ್ಟ್

Posted by Vidyamaana on 2024-09-01 16:01:46 |

Share: | | | | |


ಸಿಟಿ ಸ್ಕ್ಯಾನ್‌ ಕೊಠಡಿಯಲ್ಲಿ 13ರ ಬಾಲಕಿಗೆ ಕಿರುಕುಳ; ಆಪರೇಟರ್‌ ಅಮನ್ ರಾಜ್ ಅರೆಸ್ಟ್

ಕೋಲ್ಕತ್ತಾ: ತರಬೇತಿ ನಿರತ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದೇಶದೆಲ್ಲೆಡೆ ಸುದ್ದಿಯಾಗಿ ಮರೆಯಾಗುವ ಮುನ್ನವೇ ಪಶ್ಚಿಮ ಬಂಗಾಳದ ಆಸ್ಪತ್ರೆಯಲ್ಲೇ ಮತ್ತೊಂದು ಹೇಯ ಘಟನೆ ನಡೆದಿರುವುದು ವರದಿಯಾಗಿದೆ.

ಆಸ್ಪತ್ರೆಯ ಉದ್ಯೋಗಿಯೊಬ್ಬರು ಸಿಟಿ ಸ್ಕ್ಯಾನ್ ಕೊಠಡಿಯಲ್ಲಿ 13 ವರ್ಷದ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣ ಹೌರಾ ಆಸ್ಪತ್ರೆಯಲ್ಲಿ ನಡೆದಿರುವುದು ವರದಿಯಾಗಿದೆ.

ಅಡ್ಡಹೊಳೆ ; ಹೆದ್ದಾರಿ ಬದಿ ಅಂಗಡಿಯ ಮಹಿಳೆಯ ಸರ ಕಿತ್ತು ಪರಾರಿ ಯತ್ನ, ಬೆಂಗಳೂರು ಮೂಲದ ಯುವಕರಿಬ್ಬರ ಸೆರೆ

Posted by Vidyamaana on 2024-07-17 08:57:05 |

Share: | | | | |


ಅಡ್ಡಹೊಳೆ ; ಹೆದ್ದಾರಿ ಬದಿ ಅಂಗಡಿಯ ಮಹಿಳೆಯ ಸರ ಕಿತ್ತು ಪರಾರಿ ಯತ್ನ, ಬೆಂಗಳೂರು ಮೂಲದ ಯುವಕರಿಬ್ಬರ ಸೆರೆ

ಪುತ್ತೂರು: ಹೆದ್ದಾರಿ ಬದಿಯ ಅಂಗಡಿಯಲ್ಲಿದ್ದ ವೃದ್ದೆಯ ಚಿನ್ನದ ಸರ ಸೆಳೆದು ಪರಾರಿಯಾಗಲು ಯತ್ನಿಸಿದ ಬೆಂಗಳೂರು ಮೂಲದ ಇಬ್ಬರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಉಪ್ಪಿನಂಗಡಿ ಬಳಿಯ ಅಡ್ಡಹೊಳೆ ಎಂಬಲ್ಲಿ ನಡೆದಿದೆ. 

ನೆಲ್ಯಾಡಿ ಬಳಿಯ ಅಡ್ಡಹೊಳೆಯ ಹೆದ್ದಾರಿ ಬದಿಯ ಡ್ರೈ ಫ್ರುಟ್ಸ್ ಅಂಗಡಿಯಲ್ಲಿ ಒಂಟಿಯಾಗಿದ್ದ ವೃದ್ಧ ಮಹಿಳೆ ತ್ರೇಸ್ಯಮ್ಮ (60) ಅವರ ಕುತ್ತಿಗೆಯಲ್ಲಿದ್ದ ಸರವನ್ನು ಸೆಳೆದು ಯುವಕರು ಪರಾರಿಯಾಗಲು ಯತ್ನಿಸಿದ್ದರು.‌ ಮಹಿಳೆಯ ಬೊಬ್ಬೆ ಕೇಳಿ ಸ್ಥಳೀಯರು ಸೇರಿದ್ದು ಯುವಕರನ್ನು ಹಿಡಿದು ಥಳಿಸಿದ್ದಾರೆ.‌

ನಾಳೆ ಬೆಳಗ್ಗೆ 10.30ಕ್ಕೆ SSLC ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ

Posted by Vidyamaana on 2024-05-08 13:59:51 |

Share: | | | | |


ನಾಳೆ ಬೆಳಗ್ಗೆ 10.30ಕ್ಕೆ SSLC ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿಯು 2024ನೇ ಸಾಲಿನ ಎಸ್‌ಎಸ್‌ಎಲ್ಸಿ ಫಲಿತಾಂಶವನ್ನು ನಾಳೆ ಬೆಳಗ್ಗೆ 10.30 ಗಂಟೆಗೆ ಪ್ರಕಟಿಸಲಿದೆ.ರಾಜ್ಯಾದ್ಯಂತ 10 ನೇ ತರಗತಿ ಬೋರ್ಡ್ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಕೆಎಸ್‌ಇಎಬಿ 10 ನೇ ತರಗತಿ ಫಲಿತಾಂಶಗಳನ್ನು ಕರ್ನಾಟಕ ಫಲಿತಾಂಶಗಳ ಅಧಿಕೃತ ವೆಬ್ಸೈಟ್ನಲ್ಲಿ karresults.nic.in ನಲ್ಲಿ ಪರಿಶೀಲಿಸಬಹುದು.

ನೇರ ಲಿಂಕ್ ಅನ್ನು kseab.karnataka.gov.in ನಲ್ಲಿ ಪರಿಶೀಲಿಸಬಹುದು.ರಾಜ್ಯಾದ್ಯಂತ ಸುಮಾರು 8 ಲಕ್ಷ ಅಭ್ಯರ್ಥಿಗಳು ಕರ್ನಾಟಕ 10 ನೇ ತರಗತಿ ಬೋರ್ಡ್ ಪರೀಕ್ಷೆಗೆ ಹಾಜರಾಗಿದ್ದರು.

ದ.ಕ ಜಿಲ್ಲೆಯಲ್ಲಿ ಮುಂದಿನ 2 ದಿನ ಗುಡುಗು ಸಹಿತ ಆಲಿಕಲ್ಲು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Posted by Vidyamaana on 2023-03-20 02:58:57 |

Share: | | | | |


ದ.ಕ ಜಿಲ್ಲೆಯಲ್ಲಿ ಮುಂದಿನ 2 ದಿನ ಗುಡುಗು ಸಹಿತ ಆಲಿಕಲ್ಲು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಮಾರ್ಚ್ 21ರಿಂದ ಮತ್ತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿರುವಂತ ಹವಾಮಾನ ಇಲಾಖೆಯು, ಮೇಲೆ ಸುಳಿಗಾಳಿಯ ಪರಿಣಾಮದಿಂದಾಗಿ ರಾಜ್ಯದ ಕೊಡಗು, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ತುಮಕೂರು, ಉಡುಪಿ, ಬೀದರ್, ಬೆಳಗಾವಿ, ಬಾಗಲಕೋಟೆ, ಯಾದಗಿರಿ ಹಾಗೂ ಕಲಬುರ್ಗಿ ಜಿಲ್ಲೆಯಲ್ಲಿ ಮುಂದಿನ 2 ದಿನ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂಬುದಾಗಿ ಮುನ್ಸೂಚನೆ ನೀಡಿದೆ.ಅಂದಹಾಗೆ ಕಳೆದ ಭಾನುವಾರದಂದು ಮೈಸೂರಿನ ಹುಣಸೂರು, ತುಮಕೂರಿನ ಚಿಕ್ಕನಾಯಕನಹಳ್ಳಿ, ಉಡುಪಿಯ ಬ್ರಹ್ಮಾವರ, ಬಳ್ಳಾರಿಯ ಹಗರಿಬೊಮ್ಮನಹಳ್ಳಿ, ಚಾಮರಾಜನಗರದ ಹರದಹಳ್ಳಿ ಹಾಗೂ ವಿವಿಧೆಡೆ ಆಲಿಕಲ್ಲು ಸಹಿತ ಮಳೆಯಾಗಿತ್ತು. ಆಲಿಕಲ್ಲಿನ ಬೆಳ್ಳನೆಯ ರಾಶಿ ಕಂಡ ಜನರು ಕರ್ನಾಟಕ ಹಿಮಾಲಯವಾಗಿದೆ ಎಂಬುದಾಗಿ ಅಚ್ಚರಿಗೊಂಡಿದ್ದರು. ಈ ಬೆನ್ನಲ್ಲೆ ಮಾರ್ಚ್ 21ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಆಲಿಕಲ್ಲು ಸಹಿತ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಾರ್ಕಳ: ಅವಳಹೇನಕಾರಿ ಬ್ಯಾನರ್:ಅಮೂಲ್ಯ ಗ್ರಾಫಿಕ್ಸ್‌ನ ಮಾಲಕಿ ಸಹಿತ ಇಬ್ಬರು ಆರೋಪಿಗಳ ಬಂಧನ

Posted by Vidyamaana on 2024-09-03 21:26:28 |

Share: | | | | |


ಕಾರ್ಕಳ: ಅವಳಹೇನಕಾರಿ ಬ್ಯಾನರ್:ಅಮೂಲ್ಯ ಗ್ರಾಫಿಕ್ಸ್‌ನ ಮಾಲಕಿ ಸಹಿತ ಇಬ್ಬರು ಆರೋಪಿಗಳ ಬಂಧನ

ಕಾರ್ಕಳ: ಕಾರ್ಕಳ ಸಾಣೂರು ಗ್ರಾಮದ ಮುರತಂಗಡಿ ಕಮಲಾಕ್ಷ ನಗರ ಎಂಬಲ್ಲಿ ಮುಸ್ಲಿಮರ ಬಗ್ಗೆ ಅವಹೇಳನಕಾರಿಯಾಗಿ ಬ್ಯಾನರ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಸೆ.3ರಂದು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಬ್ಯಾನರ್‌ನಲ್ಲಿ ಹೆಸರು ಉಲ್ಲೇಖಿಸಿದ್ದ ಸ್ಥಳೀಯ ನಿವಾಸಿ ಸತೀಶ್ ದೇವಾಡಿಗ ಹಾಗೂ ಬ್ಯಾನರ್ ಮುದ್ರಿಸಿದ ಕಾರ್ಕಳ ಮಾರ್ಕೆಟ್ ರಸ್ತೆಯಲ್ಲಿರುವ ಅಮೂಲ್ಯ ಗ್ರಾಫಿಕ್ಸ್‌ನ ಮಾಲಕಿ ಪುಷ್ಪಲತಾ ಎಂದು ಗುರುತಿಸಲಾಗಿದೆ.

Recent News


Leave a Comment: