ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಸುದ್ದಿಗಳು News

Posted by vidyamaana on 2024-07-25 16:43:22 |

Share: | | | | |


ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

 ಮುಂಬೈ: ಇಂಜಿನಿಯರ್ ಒಬ್ಬರು ತಮ್ಮ ಕಾರನ್ನು ಅಟಲ್ ಸೇತುವಿನಲ್ಲಿ ನಿಲ್ಲಿಸಿ ಸೇತುವೆಯಿಂದ ಕೆಳಗೆ ಹಾರಿದ್ದಾರೆ. ಈ ದೃಶ್ಯ ಅಲ್ಲಿ ಇದ್ದ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ.

ಸೇತುವೆಯಿಂದ ಕೆಳಗೆ ಹಾರಿದವರನ್ನು ಡೊಂಬಿವಿಲಿಯ ಪಲ್ಲವ ನಗರದ ನಿವಾಸಿ ಕರ್ತುರಿ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಇವರು ತಮ್ಮ ಪತ್ನಿ ಹಾಗೂ ಮಗಳೊಂದಿಗೆ ವಾಸ ಮಾಡುತ್ತಿದ್ದರು.

ಮಧ್ಯಾಹ್ನ 12.35ರ ಸುಮಾರಿಗೆ ಇವರು ತಮ್ಮ ಕಾರಿನಲ್ಲಿ ಆಟಲ್ ಸೇತು ಬ್ರಿಡ್ಜ್ ಮೇಲೆ ಬಂದಿದ್ದು, ಸೇತುವೆ ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ್ದಾರೆ. ಇದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಟೋಲ್ ಕಂಟ್ರೋಲ್‌ ರೂಮ್‌ನವರ ಗಮನಕ್ಕೆ ಬಂದಿದೆ. ಕೂಡಲೇ ಅವರು ನವಶೇವ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ.

ಕೂಡಲೇ ಎಂಟಿಹೆಚ್‌ಎಲ್‌ನಿಂದ ರಕ್ಷಣಾ ತಂಡ ಹಾಗೂ ಕರಾವಳಿ ಭದ್ರತಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಹಣಕಾಸಿನ ತೊಂದರೆಯಿಂದಲೇ ಶ್ರೀನಿವಾಸ್ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಾರಿನಲ್ಲಿ ಕೇವಲ ತನ್ನ ಪರ್ಸ್ ಮಾತ್ರ ಬಿಟ್ಟು ಶ್ರೀನಿವಾಸ್ ಸಮುದ್ರಕ್ಕೆ ಹಾರಿದ್ದಾರೆ. ಈ ಪರ್ಸ್‌ನಲ್ಲಿ ಆಧಾರ್ ಕಾರ್ಡ್‌, ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಯ ಐಡಿ ಕಾರ್ಡ್ ಇತ್ತು. ಡೆತ್‌ನೋಟ್ ಆಗಲಿ, ಫೋನ್ ಆಗಲಿ ಕಾರಿನಲ್ಲಿ ಪತ್ತೆಯಾಗಿಲ್ಲ ಎಂದ ಪೊಲೀಸ್ ಇನ್ಸ್‌ಪೆಕ್ಟರ್ ಅಂಜುಮನ್ ಬಾಗ್ವಾನ್ ಹೇಳಿದ್ದಾರೆ.

ಬಿಟೆಕ್ ಮಾಡಿದ್ದ ಶ್ರೀನಿವಾಸ್ ಮುಂಬೈನ ಲೋಧಾದಲ್ಲಿ 2023ರಲ್ಲಿ ಕೆಲ ಕಾಲ ಕೆಲಸ ಮಾಡಿದ್ದರು. ಇದಕ್ಕೂ ಮೊದಲು ಅರಬ್ ರಾಷ್ಟ್ರ ಕುವೈತ್‌ನಲ್ಲಿ ಕೆಲಸ ಮಾಡಿದ್ದರು. 2023ರಲ್ಲಿ ಮುಂಬೈಗೆ ವಾಪಸಾದ ಅವರು ಲೋಧಾ ಗ್ರೂಪ್‌ಗೆ ಕೆಲಸಕ್ಕೆ ಸೇರಿದ್ದರು. ಇದಾದ ನಂತರ ಇವರು ತಮ್ಮ ಪಾಲುದಾರರ ಜೊತೆಗೂಡಿ ಇಲೆಕ್ಟ್ರಿಕ್ ಕಂಟ್ರಾಕ್ಟ್ ಕೆಲಸ ಶುರು ಮಾಡಿದ್ದರು. ಶ್ರೀನಿವಾಸ್ ಪತ್ನಿಯಿಂದಲೂ ಪೊಲೀಸರು ಹೇಳಿಕೆ ಪಡೆದುಕೊಂಡಿದ್ದು, ಶ್ರೀನಿವಾಸ್ ಈ ಹಿಂದೆಯೂ ಕುವೈತ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಜೀವ ಕಳೆದುಕೊಳ್ಳಲು ಮುಂದಾಗಿದ್ದರು. ಈ ವೇಳೆ ಸಮಯಕ್ಕೆ ಸರಿಯಾಗಿ ಯಾರೋ ಪಾರು ಮಾಡಿದ್ದರಿಂದ ಅವರ ಜೀವ ಉಳಿದಿತ್ತು ಎಂದು ಪತ್ನಿ ಹೇಳಿದ್ದಾರೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಶ್ರೀನಿವಾಸ್ ಕಡೆಯದಾಗಿ ಸಂಬಂಧಿಕರೊಬ್ಬರ ಜೊತೆ ಮಾತನಾಡಿದ್ದು, ಈ ವೇಳೆ ಅವರು ಸಹಜವಾಗಿ ಮಾತನಾಡಿದ್ದರು ಎಂದು ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಇದುವರೆಗೂ ನೀರಿಗೆ ಹಾರಿದ ಶ್ರೀನಿವಾಸ್ ಅವರನ್ನು ಪತ್ತೆ ಮಾಡಲು ಸಾಧ್ಯವಾಗಿಲ್ಲ. ಇದು ಮೊದಲ ಪ್ರಕರಣ ಅಲ್ಲ ಈ ಹಿಂದೆ ಮಹಿಳಾ ವೈದ್ಯರೊಬ್ಬರು ಅಟಲ್ ಸೇತುವಿನಿಂದ ಕೆಳಗೆ ಹಾರಿ ತಮ್ಮ ಜೀವನವನ್ನು ಅಂತ್ಯಗೊಳಿಸಿದ್ದರು.

 Share: | | | | |


ಪುತ್ತೂರು ಶಾಸಕರ ಇಂದಿನ ಕಾರ್ಯಕ್ರಮ(ಜೂನ್ 20)

Posted by Vidyamaana on 2023-06-20 01:32:04 |

Share: | | | | |


ಪುತ್ತೂರು ಶಾಸಕರ ಇಂದಿನ ಕಾರ್ಯಕ್ರಮ(ಜೂನ್ 20)

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಜೂ 20 ರಂದು

ಬೆಳಿಗ್ಗೆ 10  ಖಾಸಗಿ ಕಾರ್ಯಕ್ರಮ (official)

ಅಪರಾಹ್ನ 4 ಗಂಟೆಗೆ ಹಿರೆಬಂಡಾಡಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ಮತ್ತು 

ಸಂಜೆ  5 ಗಂಟೆಗೆ ಉಪ್ಪಿನಂಗಡಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಬಿಗ್​ಬಾಸ್​ನಲ್ಲಿ ಮತ್ತೊಂದು ಅವಾಂತರ;​ ಸ್ಪರ್ಧಿ ತನಿಷಾ ಕುಪ್ಪಂಡ ವಿರುದ್ಧ ಪ್ರಕರಣ ದಾಖಲು

Posted by Vidyamaana on 2023-11-15 05:58:49 |

Share: | | | | |


ಬಿಗ್​ಬಾಸ್​ನಲ್ಲಿ ಮತ್ತೊಂದು ಅವಾಂತರ;​ ಸ್ಪರ್ಧಿ ತನಿಷಾ ಕುಪ್ಪಂಡ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್​ ಬಾಸ್​ ಸೀಸನ್​-10 ಈ ಬಾರಿ ಒಂದಿಲ್ಲೊಂದು ವಿಚಾರಕ್ಕೆ ಹೆಚ್ಚು ಸದ್ದು ಮಾಡುತ್ತಿದ್ದು, ಇದೀಗ ಬಿಗ್ ಬಾಸ್​ ಮನೆಯ ಸ್ಪರ್ಧಿ ವಿರುದ್ಧ ಎರಡನೇ ಪ್ರಕರಣ ದಾಖಲಾಗಿದೆ. ಈ ಹಿಂದೆ ಹುಲಿ ಉಗುರು ಧರಿಸಿದ್ದರೆಂಬ ಕಾರಣಕ್ಕೆ ಬಿಗ್​ ಬಾಸ್​ ಸ್ಪರ್ಧಿ ವರ್ತೂರು ಸಂತೋಷ್​ ಅವರನ್ನು ಬಂಧಿಸಲಾಗಿತ್ತು.ಇದೀಗ ಬಿಗ್​ಬಾಸ್​ ಸ್ಪರ್ಧಿ, ನಟಿ ತನಿಷಾ ಕುಪ್ಪಂಡ ಅವಹೇಳನಕಾರಿಯಾಗಿ ಮಾತನಾಡಿದ್ದಾರ ಎಂದು ಆರೋಪಿಸಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಎಸ್​ಸಿ-ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ನಟಿ ತನಿಷಾ ವಿರುದ್ಧ ಕುಂಬಳಗೋಡು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.


ತನಿಷಾ, ವಡ್ಡ ಎಂಬ ಪದ ಬಳಸೂವ ಮೂಲಕ ಭೋವಿ ಸಮುದಾಯಕ್ಕೆ ಅಪಮಾನ ಎಸಗಿದ್ದಾರೆ. ಭೋವಿ ಸಮುದಾಯವು ಪರಿಶಿಷ್ಟ ಜಾತಿಗೆ ಸೇರಿದೆ ಎಂದು ತಿಳಿದೂ ಸಹ ಅಪಮಾನ ಮಾಡಲಾಗಿದೆ. ತನಿಷಾ ಅವರನ್ನು ಈ ಕೂಡಲೇ ಬಿಗ್​ಬಾಸ್ ಮನೆಯಿಂದ ಹೊರಗೆ ಕಳಿಸಬೇಕು, ಪೊಲೀಸರು ತನಿಷಾರನ್ನು ಬಂಧಿಸಬೇಕು. ಭೋವಿ ಸಮುದಾಯಕ್ಕೆ ಮಾಡಲಾದ ಅಪಮಾನದ ವಿರುದ್ಧ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಭೋವಿ ಸಮುದಾಯವು ಪ್ರತಿಭಟನೆ ನಡೆಸಲಿದೆ ಎಂದು ಉಲ್ಲೇಖಿಸಲಾಗಿದೆ. ಇತ್ತೀಚಿನ ಸಂಚಿಕೆಯೊಂದರಲ್ಲಿ ನಟಿ ತನಿಷಾ ಡ್ರೋನ್​ ಪ್ರತಪಾ​ ಅವರೊಂದಿಗೆ ಮಾತನಾಡುವ ವೇಳೆ ಬೋವಿ ಜನಾಂಗದ ಬಗ್ಗೆ ಅವಮಾನಕರ ಪದ ಬಳಸಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ.ಪದ್ಮಾ ಎಂಬುವವರು ಕುಂಬಳಗೋಡು ಪೊಲೀಸ್​ ಠಾಣೆಯಲ್ಲಿ ಜಾತಿ ನಿಂದನೆ (Atrocity), ಎಸ್​ಸಿ-ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ. 


ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಅವಹೇಳನಕಾರಿ ಪದ ಬಳಕೆ ಆರೋಪ ಮಾಡಲಾಗಿದೆ. ಪದಬಳಕೆ ಮಾಡಿ ಬೋವಿ ಜನಾಂಗಕ್ಕೆ ಅವಮಾನ ಮಾಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಖಾಸಗಿ ಬಸ್ ಪಲ್ಟಿ: ಇಬ್ಬರು ಪ್ರಯಾಣಿಕರ ಸಾವು, 7 ಮಂದಿ ಗಂಭೀರ

Posted by Vidyamaana on 2024-06-03 11:35:47 |

Share: | | | | |


ಖಾಸಗಿ ಬಸ್ ಪಲ್ಟಿ: ಇಬ್ಬರು ಪ್ರಯಾಣಿಕರ ಸಾವು, 7 ಮಂದಿ ಗಂಭೀರ

ಯಾದಗಿರಿ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಮೃತಪಟ್ಟು, 7 ಜನ ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹತ್ತಿಗುಡೂರು ಬಳಿ ನಡೆದಿದೆ.

ಪುತ್ತೂರು: ಮೆಸ್ಕಾಂ ಕಛೇರಿಯಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Posted by Vidyamaana on 2024-08-15 22:59:53 |

Share: | | | | |


ಪುತ್ತೂರು: ಮೆಸ್ಕಾಂ ಕಛೇರಿಯಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

ಪುತ್ತೂರು :ಮೆಸ್ಕಾಂ ಪುತ್ತೂರು ವಿಭಾಗ ಕಛೇರಿಯಲ್ಲಿ, ಮೆಸ್ಕಾಂ ಪುತ್ತೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ರಾಮಚಂದ್ರ. ಎ ಇವರು ದ್ವಜಾರೋಹಣ ಮಾಡುವುದರೊಂದಿದೆ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. 

ಈ ಕಾರ್ಯಕ್ರಮಕ್ಕೆ ಶ್ರೀಮತಿ ವಿಜಯಲಕ್ಹ್ಮೀ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ (ವಿ) ಮೆಸ್ಕಾಂ ಪುತ್ತೂರು ಹಾಗೂ ವಿದ್ಯುತ್ ಗುತ್ತಿಗೆದಾರರ ಸಂಘದ ಪುತ್ತೂರು ಘಟಕದ ಅಧ್ಯಕ್ಷರಾದ ಸೂರ್ಯನಾಥ ಆಳ್ವ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿರುತ್ತಾರೆ.  

ಕಾರಿನೊಳಗೆ ಶವವಾಗಿ ಪತ್ತೆಯಾದ ಮಲಯಾಳಂ ನಟ ವಿನೋದ್ ಥಾಮಸ್

Posted by Vidyamaana on 2023-11-19 09:40:35 |

Share: | | | | |


ಕಾರಿನೊಳಗೆ ಶವವಾಗಿ ಪತ್ತೆಯಾದ ಮಲಯಾಳಂ ನಟ ವಿನೋದ್ ಥಾಮಸ್

ಕೊಟ್ಟಾಯಂ: 45 ವರ್ಷ ವಯಸ್ಸಿನ ಮಲಯಾಳಂ ನಟ ವಿನೋದ್ ಥಾಮಸ್ ಕೊಟ್ಟಾಯಂನ ಪಂಪಾಡಿ ಬಳಿಯ ಹೋಟೆಲ್‌ನಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದಾರೆ.



ತನ್ನ ಆವರಣದಲ್ಲಿ ದೀರ್ಘಕಾಲದಿಂದ ನಿಲ್ಲಿಸಿದ ಕಾರಿನೊಳಗೆ ವ್ಯಕ್ತಿಯೊಬ್ಬರಿದ್ದಾರೆಂದು ಹೋಟೆಲ್ ಆಡಳಿತವು ಪೊಲೀಸರಿಗೆ ತಿಳಿಸಿದ ನಂತರ, ವಿನೋದ್ ಥಾಮಸ್ ಸಾವಿಗೆ ಘಟನೆಗೆ ಬೆಳಕಿಗೆ ಬಂದಿದೆ.


“ಅವರನ್ನು ಕಾರಿನೊಳಗೆ ನಾವು ಪತ್ತೆ ಮಾಡಿದೆವು, ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದೇವೆ. ವೈದ್ಯರು ಅವನನ್ನು ಪರೀಕ್ಷಿಸಿದ ನಂತರ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಸಾವಿನ ಕಾರಣವನ್ನು ಖಚಿತಪಡಿಸಿಕೊಳ್ಳಲು ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ” ಎಂದು ಪೊಲೀಸರು ಹೇಳಿದರು.


ವಿನೋದ್ ಥಾಮಸ್ ಸಾವಿನ ಹಿಂದಿನ ಕಾರಣವನ್ನು ಬಹಿರಂಗಪಡಿಸಲಾಗಿಲ್ಲ. ವಿವಿಧ ವರದಿಗಳ ಪ್ರಕಾರ, ಕಾರಿನ ಎಸಿಯಿಂದ ವಿಷಕಾರಿ ಅನಿಲವನ್ನು ಉಸಿರಾಡಿದ್ದರಿಂದ ಸಾವಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆದರೆ, ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಈ ಬಗ್ಗೆ ಖಚಿತ ಮಾಹಿತಿ ದೊರೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.



ಥಾಮಸ್ ಅವರು ‘ಅಯ್ಯಪ್ಪನುಮ್ ಕೊಶ್ಯುಮ್’, ‘ನಾಥೋಲಿ ಒರು ಚೆರಿಯ ಮೀನಲ್ಲಾ’, ‘ಒರು ಮುರೈ ವಂತ್ ಪಾಥಾಯ’, ‘ಹ್ಯಾಪಿ ವೆಡ್ಡಿಂಗ್’ ಮತ್ತು ‘ಜೂನ್’ ಮುಂತಾದ ಚಲನಚಿತ್ರಗಳಲ್ಲಿನ ಪಾತ್ರಗಳಿಗೆ ಹೆಸರುವಾಸಿಯಾಗಿದ್ದಾರೆ.

Viral Video | ಗೆಳೆಯನೊಂದಿಗೆ ವಾಗ್ವಾದ; ನೋಡನೋಡುತ್ತಲೇ ರೈಲಿನ ಮುಂದೆ ಹಾರಿ ಪ್ರಾಣ ಬಿಟ್ಟ ಯುವತಿ

Posted by Vidyamaana on 2024-05-28 12:05:02 |

Share: | | | | |


Viral Video | ಗೆಳೆಯನೊಂದಿಗೆ ವಾಗ್ವಾದ; ನೋಡನೋಡುತ್ತಲೇ ರೈಲಿನ ಮುಂದೆ ಹಾರಿ ಪ್ರಾಣ ಬಿಟ್ಟ ಯುವತಿ

ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ನೋಡುಗರ ಎದೆ ನಡುಗಿಸುವಂತಿದೆ. ತನ್ನ ಗೆಳೆಯನ ಜೊತೆ ವಾಗ್ವಾದ ಮಾಡುತ್ತಿದ್ದ ಯುವತಿಯೊಬ್ಬಳು ನೋಡ ನೋಡುತ್ತಿದ್ದಂತೆ ರೈಲಿನ ಮುಂದೆ ಹಾರಿ ಪ್ರಾಣ ಕಳೆದುಕೊಂಡಿದ್ದಾಳೆ.

ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಆಗ್ರಾದ ರಾಜಾ ಕಿ ಮಂಡಿ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಅಲ್ಲಿನ ಫ್ಲಾಟ್ ಫಾರಂ ಸಂಖ್ಯೆ ಒಂದರಲ್ಲಿ ಯುವತಿಯೊಬ್ಬಳು ತನ್ನ ಗೆಳೆಯನ ಜೊತೆ ಕುಳಿತಿರುತ್ತಾಳೆ. ಇಬ್ಬರ ನಡುವೆ ಯಾವುದೋ ಕಾರಣಕ್ಕೆ ಪರಸ್ಪರ ವಾಗ್ವಾದ ನಡೆಯುತ್ತಿರುತ್ತದೆ. ಈ ಸಂದರ್ಭದಲ್ಲಿ ಏಕಾಏಕಿ ಎದ್ದು ನಿಂತ ಆಕೆ ರೈಲ್ವೆ ಟ್ರ್ಯಾಕಿನ ಮೇಲೆ ಹಾರಿ ವಾಗ್ವಾದ ಮುಂದುವರಿಸಿದ್ದಾಳೆ.

Recent News


Leave a Comment: