ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಸುದ್ದಿಗಳು News

Posted by vidyamaana on 2024-07-25 12:27:06 |

Share: | | | | |


ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಪಣಂಬೂರು: ಇಲ್ಲಿನ ಜೋಕಟ್ಟೆ ಗ್ರಾಮ ಪಂಚಾಯತ್ ಗುಡ್ಡೆ ಎಂಬಲ್ಲಿ ಮನೆಯ ಮೇಲೆ� ತಡೆಗೋಡೆ ಕುಸಿದು ಬಿದ್ದು ಯುವಕ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ‌.ಮುಲ್ಕಿ ಕೊಲ್ನಾಡು ನಿವಾಸಿ ಶಂಕರ ಎಂಬವರ ಪುತ್ರ ಶೈಲೇಶ್ (17) ಮೃತ ಯುವಕ. ಜೋಕಟ್ಟೆಯಲ್ಲಿರುವ ತನ್ನ ದೊಡಮ್ಮನ ಮಗಳ ಮನೆಗೆ ಬಂದಿದ್ದ ಶೈಲೇಶ್, ಇಲ್ಲಿಯೇ ಉಳಿದುಕೊಂಡಿದ್ದ.

ಮನೆಯಲ್ಲಿ ಶೈಲೇಶ್ ರವರ ದೊಡ್ಡಮನ ಮಗಳು ಸವಿತಾ, ಆಕೆಯ ಗಂಡ ಸುರೇಶ್ ಮತ್ತು ಮಗು ಸಾಕ್ಷಿ ಮನೆಯ ಒಂದು ಕೋಣೆಯಲ್ಲಿ ಮಲಗಿದ್ದು, ಶೈಲೇಶ್ ಇನ್ನೊಂದು ಕಡೆ ಮಲಗಿದ್ದ. ತಡೆಗೋಡೆ ಕುಸಿದು ಹಂಚಿನ ಮನೆಯ ಮೇಲೆ ಬಿದ್ದಿದ್ದರಿಂದ ಅಲ್ಲಿ ಮಲಗಿದ್ದ ಶೈಲೇಶ್ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ. ಇನ್ನೊಂದು ಕೋಣೆಯಲ್ಲಿ ಮಲಗಿದ್ದ ಇತರ ಮೂರು ಜನರಲ್ಲಿ ಸವಿತಾ ಅವರಿಗೆ ಸಣ್ಣ ಗಾಯವಾಗಿದ್ದು‌, ಚಿಕಿತ್ಸೆ ಪಡೆದಿದ್ದಾರೆ‌ ಎಂದು ತಿಳಿದು ಬಂದಿದೆ.

ಶೈಲೇಶ್ ಅವರ ಮೃತದೇಹವನ್ನು ನಗರದ ಎ.ಜೆ.ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು, ಸ್ಥಳಕ್ಕೆ ಪಣಂಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

 Share: | | | | |


ವಿಟ್ಲ : ಅಳಕೆಮಜಲು ನಿವಾಸಿ ಧೀರಜ್ ನೇಣು ಬಿಗಿದು ಆತ್ಮಹತ್ಯೆ

Posted by Vidyamaana on 2023-05-31 07:07:26 |

Share: | | | | |


ವಿಟ್ಲ : ಅಳಕೆಮಜಲು ನಿವಾಸಿ ಧೀರಜ್ ನೇಣು ಬಿಗಿದು ಆತ್ಮಹತ್ಯೆ

ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಅಳಕೆಮಜಲು ಸಮೀಪ ನಡೆದಿದೆ.

ಅಳಕೆಮಜಲು ನಿವಾಸಿ ಧೀರಜ್ (30) ಮೃತಪಟ್ಟ ವ್ಯಕ್ತಿ ಧೀರಜ್ ಬಿ.ಸಿ.ರೋಡ್ ನ ಹೋಂಡಾ ಶೋ ರೂಂ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಒಂದು ವರುಷದ ಹಿಂದಷ್ಟೇ ವಿವಾಹವಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ತೀರ್ಥಹಳ್ಳಿಯಲ್ಲಿ ಬಿಜೆಪಿ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದ ಎನ್.ಐ.ಎ.

Posted by Vidyamaana on 2024-04-05 12:25:05 |

Share: | | | | |


ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ತೀರ್ಥಹಳ್ಳಿಯಲ್ಲಿ ಬಿಜೆಪಿ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದ ಎನ್.ಐ.ಎ.

ಶಿವಮೊಗ್ಗ, ಎ.5: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತೀರ್ಥಹಳ್ಳಿಯಲ್ಲಿ ಬಿಜೆಪಿ ನಗರ ಘಟಕದ ಮುಖಂಡನನ್ನು ಎನ್.ಐ.ಎ. ವಿಚಾರಣೆಗೆ ಒಳಪಡಿಸಿದೆ ಎಂದು ತಿಳಿದುಬಂದಿದೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ 10 ದಿನಗಳ ಹಿಂದೆ ಮುಂಜಾನೆ ಎನ್ಐಎ ಹಲವು ಮನೆ ಹಾಗೂ ಅಂಗಡಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿತ್ತು.

ನಿಜವಾದ ಸೇವಕ ಎಂದಿಗೂ ಅಹಂಕಾರಿಯಲ್ಲ. ಚುನಾವಣೆಗಳಲ್ಲಿ ಶಿಷ್ಟಾಚಾರವನ್ನು ಪಾಲಿಸಲಾಗಿಲ್ಲ: ಮೋಹನ್ ಭಾಗವತ್

Posted by Vidyamaana on 2024-06-11 10:17:17 |

Share: | | | | |


ನಿಜವಾದ ಸೇವಕ ಎಂದಿಗೂ ಅಹಂಕಾರಿಯಲ್ಲ. ಚುನಾವಣೆಗಳಲ್ಲಿ ಶಿಷ್ಟಾಚಾರವನ್ನು ಪಾಲಿಸಲಾಗಿಲ್ಲ: ಮೋಹನ್ ಭಾಗವತ್

ನವದೆಹಲಿ: ಲೋಕಸಭೆಯಲ್ಲಿ ಬಿಜೆಪಿಗೆ ಬಹುಮತದ ಕೊರತೆಯಾದ ಚುನಾವಣೆಯ ಫಲಿತಾಂಶದ ಬಗ್ಗೆ ತಮ್ಮ ಮೊದಲ ಸಾರ್ವಜನಿಕ ಹೇಳಿಕೆಯಲ್ಲಿ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೋಮವಾರ ನಿಜವಾದ ಸೇವಕ ಅಹಂಕಾರ  ಹೊಂದಿರುವುದಿಲ್ಲ ಮತ್ತು ಇತರರಿಗೆ ಯಾವುದೇ ಹಾನಿಯಾಗದಂತೆ ಕೆಲಸ ಮಾಡುತ್ತಾನೆ ಎಂದು ಹೇಳಿದರು.

ಕಹಿ ಚುನಾವಣಾ ಪ್ರಚಾರವನ್ನು ಉಲ್ಲೇಖಿಸಿದ ಅವರು, ಶಿಷ್ಟಾಚಾರವನ್ನು ಕಾಪಾಡಿಕೊಳ್ಳಲಾಗಿಲ್ಲ ಎಂದು ಹೇಳಿದರು.


ಹೊಸ ಬಿಜೆಪಿ ನೇತೃತ್ವದ ಮೈತ್ರಿಕೂಟವು ತನ್ನ ಮೊದಲ ಕ್ಯಾಬಿನೆಟ್ ಸಭೆಯನ್ನು ನಡೆಸಿದ ದಿನದಂದು ನಾಗ್ಪುರದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ಆವರ್ತಕ ತರಬೇತಿ ಕಾರ್ಯಕ್ರಮವಾದ ಕಾರ್ಯಕರ್ತರ ವಿಕಾಸ್ ವರ್ಗ್ ಸಮಾರೋಪದ ನಂತರ ಆರ್‌ಎಸ್‌ಎಸ್ ನಾಯಕರು ಮತ್ತು ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಭಾಗವತ್, ಒಮ್ಮತವನ್ನು ನಿರ್ಮಿಸುವ ಮಹತ್ವವನ್ನು ಒತ್ತಿ ಹೇಳಿದರು.

ಟೊಪ್ಪಿ ಹೆಲ್ಮೆಟ್ ಧರಿಸಿಕೊಂಡು ವಾಹನ ಚಲಾಯಿಸಿದರೆ ಬೀಳುತ್ತೆ ದಂಡ

Posted by Vidyamaana on 2023-08-04 09:10:15 |

Share: | | | | |


ಟೊಪ್ಪಿ ಹೆಲ್ಮೆಟ್ ಧರಿಸಿಕೊಂಡು ವಾಹನ ಚಲಾಯಿಸಿದರೆ ಬೀಳುತ್ತೆ ದಂಡ

 ಪುತ್ತೂರು: ಅಪಘಾತ ಸಂದರ್ಭ ತಲೆಯನ್ನು ರಕ್ಷಿಸುವ ದೃಷ್ಟಿಯಿಂದ ಹೆಲ್ಮೆಟ್ ಧಾರಣೆಯನ್ನು ಈಗಾಗಲೇ ಕಡ್ಡಾಯ ಮಾಡಲಾಗಿದೆ. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಅರ್ಧ ಹೆಲ್ಮೆಟ್ ಧಾರಣೆಗೆ ಮತ್ತು ಐ.ಎಸ್.ಐ ಮಾರ್ಕ್ ಇಲ್ಲದ ಹೆಲ್ಮೆಟ್ ಗಳಿಗೂ ಪುತ್ತೂರಿನಲ್ಲೂ ಶೀಘ್ರವೇ ಮುಕ್ತಿ ಸಿಗಲಿದೆ ಎಂದು ತಿಳಿದುಬಂದಿದೆ.

ಹೆಲ್ಮೆಟ್ ಕಡ್ಡಾಯ ಮಾಡುತ್ತಿದ್ದಂತೆ, ವಿವಿಧ ವಿನ್ಯಾಸದ ಹೆಲ್ಮೆಟ್‌ಗಳು ಮಾರುಕಟ್ಟೆ ಪ್ರವೇಶಿಸಿದ್ದವು. ದ್ವಿಚಕ್ರ ವಾಹನ ಸವಾರರು ವೈವಿಧ್ಯಮಯವಾದ ಹೆಲ್ಮೆಟ್‌ಗಳನ್ನು ಧರಿಸಿಕೊಂಡು ಓಡಾಡುವುದನ್ನು ಕಾಣಬಹುದು. ಇದರಲ್ಲಿ ಕೆಲವಷ್ಟೇ ಭದ್ರತೆಯನ್ನು ನೀಡಿದರೆ, ಉಳಿದವುಗಳು ಕೇವಲ ಫ್ಯಾಷನ್‌ಗಷ್ಟೇ ಸೀಮಿತವಾಗಿವೆ. ಇಂತಹ ಹೆಲ್ಮೆಟ್‌ಗಳು ಜೀವಕ್ಕೆ ಭದ್ರತೆಯನ್ನು ನೀಡುವಲ್ಲಿ ವಿಫಲವಾಗಿವೆ. ಇದರಲ್ಲಿ ಅರ್ಧ ಹೆಲ್ಮೆಟ್‌ಗಳು ಕೂಡ ಒಂದು.

ಇನ್ನು ಐ.ಎಸ್.ಐ ಮಾರ್ಕ್ ಇಲ್ಲದ ಹೆಲ್ಮೆಟ್ ಗಳು ಅಪಘಾತದ ಸಂದರ್ಭದಲ್ಲಿ ಸವಾರನಿಗೆ ರಕ್ಷಣೆ ನೀಡುವುದಿಲ್ಲ ಬದಲಾಗಿ ಇದು ಕಡಿಮೆ ಬೆಲೆಗೆ ಸಿಗುತ್ತದೆ ಎಂದು ಹಲವರು ಐ.ಎಸ್.ಐ ಮಾರ್ಕ್ ಇಲ್ಲದ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುತ್ತಾರೆ.

ಅರ್ಧ ಹೆಲ್ಮೆಟ್‌ಗಳು ಮುಖದ ಭಾಗಕ್ಕೆ, ಕತ್ತಿನ ಭಾಗಕ್ಕೆ ಹಾಗೂ ತಲೆಯ ಎರಡು ಬದಿಗಳಿಗೆ ರಕ್ಷಣೆಯನ್ನು ನೀಡುವುದಿಲ್ಲ. ಅಪಘಾತ ಸಂಭವಿಸಿದಾಗ ಮುಖದ ಹಾಗೂ ತಲೆಯ ಹಿಂಬದಿ ಭಾಗಕ್ಕೆ ಗಂಭೀರ ಗಾಯಗಳಾಗುವ ಸಾಧ್ಯತೆಗಳೇ ಅಧಿಕ. ಈ ಎಲ್ಲಾ ದೃಷ್ಟಿಯಿಂದ ಅರ್ಧ ಹೆಲ್ಮೆಟ್‌ಗಳಿಗೆ ಮುಕ್ತಿ ನೀಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳು ತಲೆಕೆಡಿಸಿಕೊಂಡಿದ್ದಾರೆ.

ಎಲ್ಲವೂ ಅಂದುಕೊಂಡಂತೆ ನಡೆದರೆ ಕೆಲವೇ ದಿನಗಳಲ್ಲಿ ಪುತ್ತೂರಿನಲ್ಲಿ ಅರ್ಧ ಹೆಲ್ಮೆಟ್‌ಗಳಿಗೆ ಮತ್ತು ಐ.ಎಸ್.ಐ ಮಾರ್ಕ್ ರಹಿತ ಹೆಲ್ಮೆಟ್ ಗಳಿಗೆ ಮುಕ್ತಿ ಸಿಗುವುದು ಪಕ್ಕಾ. ಫ್ಯಾಶನ್ ಬದಲು ವಾಹನ ಸವಾರರ ಜೀವ ಉಳಿಸಲು ಒತ್ತು ನೀಡಬೇಕು ಎನ್ನುವ ಆಶಯ ಇದರ ಹಿಂದಿದೆ.

ಬೆಂಗಳೂರಿನ ಕಾಫಿ ಶಾಪ್ ವಾಶ್ ರೂಂನಲ್ಲಿ ಮೊಬೈಲ್ ಇಟ್ಟು ವೀಡಿಯೋ ರೆಕಾರ್ಡ್‌: ಆರೋಪಿ ಮನೋಜ್ ಅರೆಸ್ಟ್

Posted by Vidyamaana on 2024-08-11 23:11:23 |

Share: | | | | |


ಬೆಂಗಳೂರಿನ ಕಾಫಿ ಶಾಪ್ ವಾಶ್ ರೂಂನಲ್ಲಿ ಮೊಬೈಲ್ ಇಟ್ಟು ವೀಡಿಯೋ ರೆಕಾರ್ಡ್‌: ಆರೋಪಿ ಮನೋಜ್ ಅರೆಸ್ಟ್

ಬೆಂಗಳೂರು: ಕೆಫೆಯ ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಮೊಬೈಲ್ ಇಟ್ಟಿದ್ದ ಆರೋಪಿಯನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ಮೂಲದ 23 ವರ್ಷದ ಮನೋಜ್ ಬಂಧಿತ ಆರೋಪಿ.

9/11 ಸಮಸ್ಯೆ ಶೀಘ್ರವೇ ಇತ್ಯರ್ಥ: ಶಾಸಕ ಅಶೋಕ್ ರೈಗೆ ಭರವಸೆ ನೀಡಿದ ಸಚಿವ ಖರ್ಗೆ*

Posted by Vidyamaana on 2024-07-12 07:48:56 |

Share: | | | | |


9/11 ಸಮಸ್ಯೆ ಶೀಘ್ರವೇ ಇತ್ಯರ್ಥ: ಶಾಸಕ ಅಶೋಕ್ ರೈಗೆ ಭರವಸೆ ನೀಡಿದ ಸಚಿವ ಖರ್ಗೆ*

ಪುತ್ತೂರು: ೯/೧೧ ಸಮಸ್ಯೆಯಿಂದ ಜನರಿಗೆ ತುಂಬಾ ಕಷ್ಟವಾಗಿದ್ದು ಅದರಲ್ಲೂ ಗ್ರಾಮೀಣ ಭಾಗದ ಬಡವರಿಗೆ ತೀವ್ರ ಸಂಕಷ್ಟ ಎದುರಾಗಿದ್ದು ಈ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆಅವರಿಗೆ ಮನವಿ ಮಾಡಿದ್ದು ಸಮಸ್ಯೆಯನ್ನು ಶೀಘ್ರವೇ ಇತ್ಯರ್ಥಪಡಿಸುವ ಭರವಸೆ ನೀಡಿದ್ದಾರೆ.

ಗುರುವಾರ ಬೆಂಗಳೂರಿನಲ್ಲಿ ಸಚಿವರ ಕಚೇರಿಗೆ ಭೇಟಿ ನೀಡಿದ ಶಾಸಕ ಅಶೋಕ್ ರೈಯವರು ೯/೧೧ ಸಮಸ್ಯೆ ಗಂಭೀರವಾಗಿದೆ. ಮನೆ ಕಟ್ಟುವಲ್ಲಿ ಅಗತ್ಯವಾಗಿ ಬೇಕಾದ ಈ ಪತ್ರಕ್ಕಾಗಿ ಜನ ಪರದಾಟ ನಡೆಸುವಂತಾಗಿದೆ. ಈ ಹಿಂದೆ ಗ್ರಾಪಂ ಕಚೇರಿಯಲ್ಲೇ ೯/೧೧ ಪತ್ರವನ್ನು ನೀಡಲಾಗುತ್ತಿತ್ತು. ಅಧಿಕಾರ ಅವಧಿಯ ಕೊನೇ ಗಳಿಗೆಯಲ್ಲಿ ಕಳೆದ ಅವಧಿಯ ಬಿಜೆಪಿ ಸರಕಾರ ಈ ವ್ಯವಸ್ಥೆಯನ್ನು ಗ್ರಾಪಂ ನಿಂದ ಮೂಡಾಕ್ಕೆ ವರ್ಗಾವಣೆ ಮಾಡಿತ್ತು. ಆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದರೂ ಅದೇ ಸಮಸ್ಯೆ ಮುಂದುವರೆದಿದೆ. ಜನರಿಗೆ ತೊಂದರೆ ನೀಡುವ ಯಾವುದೇ ಕಾನೂನು ಇಲ್ಲಿ ಬೇಡ. ೯/೧೧ ಗ್ರಾಮದ ಕಟ್ಟಕಡೇಯ ವ್ಯಕ್ತಿಗೂ ಅಗತ್ಯವಾಗಿ ಬೇಕಾಗಿದೆ. ಮನೆ ಕಟ್ಟುವ ವೇಳೆ ಈ ದಾಖಲೆ ಪತ್ರಕ್ಕಾಗಿ ಮಂಗಳೂರಿನ ಮುಡಾ ಕಚೇರಿಗೆ ತೆರಳಬೇಕಾಗಿದೆ. ಕಚೇರಿ ಅಲೆದಾಟ ಬಗ್ಗೆ ಪರಿಜ್ಞಾನವಿಲ್ಲದ ಬಡವರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಸರಕಾರ ಕೂಡಲೇ ಎಚ್ಚೆತ್ತು ೯/೧೧ ಸಮಸ್ಯೆಯನ್ನು ಇತ್ಯರ್ಥ ಮಾಡಬೇಕು ಎಂದು ಶಾಸಕರು ಸಚಿವರಲ್ಲಿ ಮನವಿ ಮಾಡಿದ್ದಾರೆ.

Recent News


Leave a Comment: