ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಸುದ್ದಿಗಳು News

Posted by vidyamaana on 2024-07-24 18:06:21 | Last Updated by Vidyamaana on 2024-07-24 18:06:21

Share: | | | | |


ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಕಾರವಾರ: ಉತ್ತರ ಕನ್ನಡದ ಶಿರೂರಿನ ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಕೋಝಿಕ್ಕೋಡ್ ಮೂಲದ ಅರ್ಜುನ್ ಅವರ ಲಾರಿ ಎಂದು ನಂಬಲಾದ ಟ್ರಕ್ ನದಿಯ ಆಳದಲ್ಲಿ ಇರುವ ಸುಳಿವು ಲಭ್ಯವಾಗಿದೆ. ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇದನ್ನು ಖಚಿತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಸಚಿವರು ಮಾಹಿತಿ ನೀಡಿದ್ದಾರೆ.

ನದಿಯ ಕೆಳಭಾಗದಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ತಿಳಿದು ಬಂದಿದ್ದು ಅದಕ್ಕಾಗಿ ಶೋಧ ನಡೆಯುತ್ತಿದೆ.

ಶಿರೂರಿನಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯ ಒಂಬತ್ತನೇ ದಿನದಂದು, ಲಾರಿಯ ಬಗ್ಗೆ ನಿರ್ಣಾಯಕ ಮಾಹಿತಿಯನ್ನು ಪಡೆಯಲಾಗಿದೆ. ಇಂದು ಬೆಳಗ್ಗೆ ಬೂಮ್ ಲೆಂಗ್ತ್ ಕ್ರೇನ್ ಬಂದಿದ್ದು, ತಪಾಸಣೆ ಪುನರಾರಂಭವಾಗಿದೆ. ಈ ಯಂತ್ರವು 60 ಅಡಿ ಆಳದವರೆಗೆ ಹುಡುಕಬಲ್ಲ ಸಾಮರ್ಥ್ಯ ಹೊಂದಿದೆ. ಪೊಲೀಸ್ ವಾಹನದೊಂದಿಗೆ ವಾಹನವನ್ನು ಸ್ಥಳಕ್ಕೆ ತರಲಾಗಿದೆ.

ಈ ಕುರಿತು ಕೃಷ್ಣ ಬೈರೇಗೌಡ Xನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮ X ಖಾತೆಯಲ್ಲಿ ಈ ರೀತಿ ಬರೆದುಕೊಂಡಿದ್ದಾರೆ.ಜುಲೈ 16 ರಂದು ಬೆಳಿಗ್ಗೆ ಕೋಝಿಕ್ಕೋಡ್‌ನ ಕಂಡ್ಯಕ್ಕಲ್ ಮೂಲದ ಅರ್ಜುನ್ (30) ಕರ್ನಾಟಕ-ಗೋವಾ ಗಡಿಯಲ್ಲಿ ಹಾದು ಹೋಗುವ ಪನ್ವೇಲ್-ಕನ್ಯಾಕುಮಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದರು. ಭೂಕುಸಿತದಲ್ಲಿ ಟೀ ಅಂಗಡಿ ಮಾಲೀಕ ಸೇರಿದಂತೆ 10 ಜನರು ಸಾವನ್ನಪ್ಪಿದ ಸ್ಥಳದಲ್ಲಿ ಲಾರಿಯ ಜಿಪಿಎಸ್ ಸ್ಥಳವನ್ನು ಕೊನೆಯದಾಗಿ ಪತ್ತೆ ಹಚ್ಚಲಾಯಿತು.

 Share: | | | | |


ಯಶಶ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮುಂದುವರೆಸಿ

Posted by Vidyamaana on 2023-06-11 14:59:30 |

Share: | | | | |


ಯಶಶ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮುಂದುವರೆಸಿ

ಪುತ್ತೂರು: ಆರೋಗ್ಯ ತುರ್ತು ಸಂದರ್ಭದಲ್ಲಿ ಬಡವರಿಗೆ ವರದಾನವಾಗಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಹಿಂದಿನ ಸರಕಾರ ನಿಷ್ಕ್ರೀಯಗೊಳಿಸಿದ್ದು ಅದನ್ನು ಮುಂದುವರೆಸುವಂತೆ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಮನವಿ ಮಾಡಿದ್ದಾರೆ.


 ಗ್ರಾಮೀಣ ಪ್ರದೇಶಗಳ ಸಹಾಕಾರಿ ಸಂಘಗಳ ಸದಸ್ಯರು, ಸ್ತ್ರೀ ಶಕ್ತಿ ಗುಂಪು ಸ್ವ-ಸಹಾಯ ಸಂಘ ಸದಸ್ಯರು ಹಾಗೂ ಗ್ರಾಮೀಣ ಪ್ರದೇಶದಲ್ಲಿರುವ ಸಹಕಾರಿ ಸಂಘ ಸಹಕಾರಿ ಬ್ಯಾಂಕ್‌ಗಳಲ್ಲಿ ಹಣಕಾಸಿನ ವಹಿವಾಟು ಹೊಂದಿರುವ ಸ್ವ-ಸಹಾಯ ಗುಂಪಿನ ಸದಸ್ಯರು ಈ ಯೋಜನೆಗೆ ಒಳಪಡುತ್ತಾರೆ. ಈ ಯೋಜನೆಯಲ್ಲಿ ಹಲವಾರು ಚಿಕಿತ್ಸೆ, ಶಸ್ತ್ರ ಚಿಕಿತ್ಸೆಗಳು ಒಳಗೊಂಡಿರತ್ತದೆ, ಈ ಹಿಂದೆ ಚಿಕಿತ್ಸೆ ನೀಡಿದ್ದ ಆಸ್ಪತ್ರೆಗಳಿಗೆ ಸರ್ಕಾರದಿಂದ ಮೊತ್ತ ಪಾವತಿಯಾಗದಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ  ಯೋಜನೆಯನ್ನು ನಿಷ್ಕ್ರೀಯಗೊಳಿಸಿರುತ್ತಾರೆ, ಪುತ್ತೂರು  ತಾಲೂಕಿನ ಯಾವ ಆಸ್ಪತ್ರೆಯು ಈ ಯೋಜನೆಯಲ್ಲಿ ಒಳಗೊಂಡಿರುವುದಿಲ್ಲ. ಯಶಸ್ವಿನಿ ಆರೋಗ್ಯ ಯೋಜನೆಯು ಬಡವರ ಪಾಲಿಗೆ ಅತೀ  ಅಮೂಲ್ಯವಾದ ಉಚಿತ ಆರೋಗ್ಯ ಯೋಜನೆಯಾಗಿರುವುದರಿಂದ ದಕ್ಷಿಣಕನ್ನಡ ಜಿಲ್ಲೆ ಹಾಗೂ ಪುತ್ತೂರಿನ ಎಲ್ಲಾ ಆಸ್ಪತ್ರೆಗಳಲ್ಲಿ ಪ್ರಾರಂಭಿಸುವಂತೆ ಉಸ್ತುವಾರಿ ಸಚಿವರ ಮೂಲಕ ಸರಕಾರವನ್ನು ಆಗ್ರಹಿಸಿದ್ದಾರೆ.

142 ಕೋಟಿ ಜನಸಂಖ್ಯೆಯೊಂದಿಗೆ ಚೀನಾವನ್ನು ಹಿಂದಿಕ್ಕಿದ ಭಾರತ

Posted by Vidyamaana on 2023-04-19 08:33:01 |

Share: | | | | |


142 ಕೋಟಿ ಜನಸಂಖ್ಯೆಯೊಂದಿಗೆ ಚೀನಾವನ್ನು ಹಿಂದಿಕ್ಕಿದ ಭಾರತ

ಹೊಸದಿಲ್ಲಿ: ಭಾರತವು 142.86 ಕೋಟಿ ಜನಸಂಖ್ಯೆಯೊಂದಿಗೆ ಚೀನಾವನ್ನು ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿದೆ ಎಂದು ವಿಶ್ವಸಂಸ್ಥೆ ಇಂದು ಬಿಡುಗಡೆ ಮಾಡಿರುವ  ಅಂಕಿ-ಅಂಶಗಳಿಂದ ತಿಳಿದುಬಂದಿದೆ.

1960ರಲ್ಲಿ ಮಾಜಿ ನಾಯಕ ಮಾವೋ ಝೆಡಾಂಗ್ ಅವರ ವಿನಾಶಕಾರಿ ಕೃಷಿ ನೀತಿಗಳ ಅಡಿಯಲ್ಲಿ ಲಕ್ಷಾಂತರ ಜನರು ಹಸಿವಿನಿಂದ ಸತ್ತ ನಂತರ ಮೊದಲ ಬಾರಿಗೆ ಚೀನಾದಲ್ಲಿ ಜನರ ಸಂಖ್ಯೆ ಕಳೆದ ವರ್ಷ ಕುಸಿತ ಕಂಡಿತ್ತು.

ಪ್ರವೀಣ್ ನೆಟ್ಟಾರು ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Posted by Vidyamaana on 2023-05-12 10:23:34 |

Share: | | | | |


ಪ್ರವೀಣ್ ನೆಟ್ಟಾರು ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಪುತ್ತೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿ, ಪ್ರವೀಣ್ ಹೆತ್ತವರೊಂದಿಗೆ ಮಾತನಾಡಿದರು.

ಸಿಎಂ-ಡಿಸಿಎಂ ನೋಡಿದ್ರೆ ಒಂದು ವರ್ಷ ಯಾರೂ ಅನುದಾನ ಕೇಳ್ಬೇಡಿ ಹೇಳ್ತಿದ್ದಾರೆ

Posted by Vidyamaana on 2024-03-21 20:48:00 |

Share: | | | | |


ಸಿಎಂ-ಡಿಸಿಎಂ ನೋಡಿದ್ರೆ ಒಂದು ವರ್ಷ ಯಾರೂ ಅನುದಾನ ಕೇಳ್ಬೇಡಿ ಹೇಳ್ತಿದ್ದಾರೆ

ಪುತ್ತೂರು: ಕರ್ನಾಟಕ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆದು ಸುಮಾರು 300 ದಿವಸಗಳು ಆಗಿದ್ದು ಈ ಸಮಯದಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ತಾವು ಚುನಾವಣೆ ಸಂದರ್ಭ ಘೋಷಿಸಿದ ಗ್ಯಾರಂಟಿಗಳಿಗೋಸ್ಕರ ಒಂದು ವರ್ಷದ ಅವಧಿಗೆ ಯಾವುದೇ ಅಭಿವೃದ್ಧಿ ಅನುದಾನ 2023-24ರ ಅವಧಿಗೆ ದೊರೆಯುವುದಿಲ್ಲ ಎಂದಿದ್ದಾರೆ. ಆದ್ದರಿಂದ ರಾಜ್ಯದ ಎಲ್ಲಾ ಶಾಸಕರು ಸಹಕಾರ ಮಾಡಬೇಕು ಎಂದು ವಿನಂತಿಸಿರುವ ಈ ಸಂದರ್ಭದಲ್ಲಿ ಬಹಳಷ್ಟು ಕಾಂಗ್ರೇಸ್ ಪಾರ್ಟಿಯ ಶಾಸಕರು ಅಪಸ್ವರ ಎಬ್ಬಿಸಿರುವ ವರದಿಯನ್ನು ಪತ್ರಿಕೆಗಳಲ್ಲಿ ನೋಡಿದ್ದೇವೆ. ಆದರೆ ಪುತ್ತೂರಿನ ಶಾಸಕರು, ಪುತ್ತೂರಿಗೆ ಹಣದ ಹೊಳೆಯೇ ಹರಿದು ಬಂದಿದೆ. ಶಿಲಾನ್ಯಾಸ ಮಾಡಲು ಸಮಯ ಇಲ್ಲದಷ್ಟು ಅನುದಾನ ಬಂದಿದೆ ಎಂದು ಹೇಳುತ್ತಾ ಪುತ್ತೂರಿನ ಪ್ರಜ್ಞಾವಂತ ಮತದಾರರನ್ನು ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.

ಪುತ್ತೂರಿಗೆ 1474.29 ಕೋಟಿ ಅನುದಾನ ಬಂದಿದೆ ಎಂದು ಬ್ಯಾನ‌ರ್ ಬರೆದು ಬಿಜೆಪಿ ಕಾರ್ಯಕರ್ತನ ಮನೆಗೆ ಚೆಂಡೆಯ ಶಬ್ದದೊಂದಿಗೆ ನುಗ್ಗಿ ದಾಂಧಲೆ ಎಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಹಾಲಿ ಶಾಸಕರು ಪ್ರಕಟಿಸಿರುವ ಬ್ಯಾನರ್‌ನಲ್ಲಿ ಮತ್ತು ಅವರು ಭಾಷಣಗಳಲ್ಲಿ ಘೋಷಿಸುವ ಅನುದಾನಗಳು ಪ್ರಸ್ತುತ ಅವರ ಅವಧಿಯಲ್ಲಿ ಬಿಡುಗಡೆಗೊಂಡ ಅನುದಾನಗಳ ಮೊತ್ತ ಎಷ್ಟು? ಹಿಂದಿನ ಭಾಜಪಾ ಸರಕಾರ ಇದ್ದಾಗ ಬಿಡುಗಡೆಗೊಂಡ ಅನುದಾನಗಳು ಎಷ್ಟು? ಎಂಬುದನ್ನು ಮರೆತು ಎಲ್ಲವೂ ನಮ್ಮದೇ ಸರಕಾರ, ನಾನೇ ಮಾಡಿದೆ ಎನ್ನುವ ರೀತಿಯಲ್ಲಿ ಪ್ರಕಟಿಸಿದ್ದಾರೆ. ಅವರು ಬ್ಯಾನರ್ ನಲ್ಲಿ ಹಾಕಿರುವ ಅನುದಾನ ಯಾವ ವರ್ಷ? ಯಾವ ಸರಕಾರ? ಯಾವ ಶಾಸಕರ ಅವಧಿಯಲ್ಲಿಲ್ಲಿ ಬಂತು ಎಂಬುದರ ವಿವರವನ್ನು ದಾಖಲೆ ಸಮೇತವಾಗಿ ಈ ಮೂಲಕ ನೀಡುತ್ತಿದ್ದೇವೆ ಎಂದ ಅವರು ಸುಳ್ಳು ಹೇಳುತ್ತಿರುವ ರೂ.1474.29 ಕೋಟಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸೇರಿ ರೂ.1219 ಕೋಟಿ ನಮ್ಮ ಸರಕಾರದ ಯೋಜನೆಗಳು. ಅಲ್ಲದೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಡದ ನಮ್ಮ ಬಿಜೆಪಿ ಶಾಸಕರಿಂಸ ಸುಳ್ಯ ಕ್ಷೇತ್ರದ ಕೊಯಿಲಾ ಪಶು ವೈದ್ಯಕೀಯ ಕಾಲೇಜು, ನೀರಿನ ಸರಬರಾಜು ಮತ್ತು ಕೊಯಿಲಾ ಸಬ್ ಸ್ಟೇಷನ್ ಸೇರಿ 483 ಕೋಟಿಯ ಯೋಜನೆಯನ್ನು ಸೇರಿಸಿರುತ್ತಾರೆ.ಇದು ನಮ್ಮ ಹಿಂದಿನ ಸರಕಾರದ ಸಾಧನೆ. ಇವೆರಡನ್ನು ಕಾಂಗ್ರೆಸ್ ನ ದಾಸಕರ ಪ್ರಕಟಿಸಿರುವ ಅನುದಾನಗಳಲ್ಲಿ ಕಡಿತಗೊಳಿಸಿದರೆ ಕೇವಲ 104 ಕೋಟಿ ಇವರ ಅವಧಿಯದ್ದು ಕಾಣಬಹುದು. ಆದರೆ ಇದು ಅವರ ಬರೀ ಆಶ್ವಾಸನೆಯೂ ಎಂಬುದನ್ನು ಕಾಲವೇ ಉತ್ತರಿಸಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಯುವರಾಜ್ ಪೆರಿಯತ್ತೋಡಿ ಉಪಸ್ಥಿತರಿದ್ದರು.

ವಿಟ್ಲಮುಡ್ನೂರು ಬೇರಿಕೆ ಓಟೆ ರಸ್ತೆ ಕಾಮಗಾರಿಗೆ ಶಿಲಾನ್ಯಾಸ

Posted by Vidyamaana on 2023-11-30 08:43:51 |

Share: | | | | |


ವಿಟ್ಲಮುಡ್ನೂರು ಬೇರಿಕೆ ಓಟೆ ರಸ್ತೆ ಕಾಮಗಾರಿಗೆ ಶಿಲಾನ್ಯಾಸ

ಪುತ್ತೂರು; ರಾಜ್ಯದ ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದಾಗ ಅದರ ಬಗ್ಗೆ ವಿರೋಧ ಪಕ್ಷಗಳು ಭಾರೀ ಟೀಕೆಗಳನ್ನೇ ಮಾಡಿತ್ತು, ಜನರನ್ನು ಮೋಸಗೊಳಿಸುವ ಯೋಜನೆ ಇದು ಕಾರ್ಯರೂಪಕ್ಕೆ ಬರುವುದೇ ಇಲ್ಲ ಎಂದು ಹೇಳಿದ್ದರು ಆದರೆ ಸರಕರ ಆಡಳಿತಕ್ಕೆ ಬಂದು ಒಂದೇ ತಿಂಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಕಾಂಗ್ರೆಸ್ ಕೊಟ್ಟಮಾತನ್ನು ಉಳಿಸಿಕೊಂಡಿದೆ, ಆದರೆ ಬಿಜೆಪಿ ಮತ್ರ ಈ ಯೋಜನೆ ನಿಲ್ಲುತ್ತದೆ ಎಂದು ಅಪಪ್ರಚಾರ ಮತ್ತು ಸುಳ್ಳನ್ನು ಜನರ ನಡುವೆ ಬಿತ್ತರಿಸುತ್ತಿದೆ ಈ ಕೆಲಸವನ್ನು ಅವರು ನಿಲ್ಲಿಸಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.


ಅವರು ವಿಟ್ಲ ಮುಡ್ನೂರು ಗ್ರಾಮದ ಬೇರಿಕೆ ಓಟೆ ರಸ್ತೆ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.


ಗ್ಯಾರಂಟಿ ಯೋಜನೆ ಮಾಡಿದ್ದರಿಂದ ಈ ಬಾರಿ ರಸ್ತೆಗೆ ಸೇರಿದಂತೆ ಇತರೆ ಯಾವುದೇ ಕಾಮಗಾರಿಗೆ ಅನುದಾನ ನೀಡುವುದಿಲ್ಲ ಎಂದು ಬಿಜೆಪಿಯವರು ಹೇಳಿಕೊಂಡಿದ್ದರು ಆದರೆ ರಾಜ್ಯ ಸರಕಾರ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಿದ ಬಳಿಕ ಇತರೆ ಕಾಮಗಾರಿಗಳಿಗೂ ಅನುದಾನವನ್ನು ನೀಡುತ್ತಿದ್ದು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ೪೦ ಮಿಕ್ಕಿ ಗ್ರಾಮೀಣ ರಸ್ತೆಗಳಿಗೆ ಅನುದಾನವನ್ನು ಬಿಡುಗಡೆಗೊಳಿಸುವ ಮೂಲಕ ವಿರೋಧ ಪಕ್ಷದವರ ಸುಳ್ಳು ಪ್ರಚಾರಕ್ಕೆ ಪ್ರತ್ಯುತ್ತರವನ್ನು ನೀಡಿದೆ. ರಾಜ್ಯದಲ್ಲಿ ಈ ಹಿಂದೆ ಆಡಳಿತ ನಡೆಸಿದ ಬಿಜೆಪಿ ಸರಕಾರ ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದು. ರಾಜ್ಯದಲ್ಲಿ ಅಶಾಂತಿ, ಅರಾಜಕತೆ ಸೃಷ್ಟಿಯಾಗಿತ್ತು, ರಾಜ್ಯದ ಜನತೆ ಸುಭದ್ರ ಸರಕಾರವನ್ನು ಬಯಸಿದ್ದರು ಅದಕ್ಕಾಗಿ ಕಾಂಗ್ರೆಸ್ ಅಭೂತಪೂರ್ವ ಜಯವನ್ನು ಗಳಿಸಿತ್ತು ಎಂದು ಶಾಸಕರು ಹೇಳಿದರು.


ಅಭಿವೃದ್ದಿ ಜೊತೆ ಕೈಜೋಡಿಸಿ ನಾನು ಶಾಸಕನಾದ ಬಳಿಕ ಅಭಿವೃದ್ದಿಯಲ್ಲಿ ಯಾವುದೇ ರಾಜಕೀಯ ಮಾಡಿಲ್ಲ, ಶಾಕನಾಗ ರಾಜಧರ್ಮವನ್ನು ಪಾಲನೆ ಮಾಡುತ್ತಿದ್ದೇನೆ. ನಾನು ಕ್ಷೇತ್ರದ ಎಲ್ಲಾ ಜನರ ಶಾಸಕನಾಗಿ ಕೆಲಸ ಮಾಡುತ್ತಿದ್ದು ಕ್ಷೇತ್ರದ ಅಭಿವೃದ್ದಿ ಮತ್ತು ನೆಮ್ಮದಿಯ ವಾತಾವರಣದ ಸೃಷ್ಟಿಯೇ ನನ್ನ ಗುರಿಯಾಗಿದೆ ಎಂದು ಹೇಳಿದರು.


ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ. ರಾಜಾರಾಂ ಮಾತನಾಡಿ ವಿಟ್ಲ ಮುಡ್ನೂರು ಗ್ರಾಮದ ಬೇರಿಕೆ ಓಟೆ ರಸ್ತೆಕಾಮಗಾರಿ ಇಲ್ಲಿನ ಜನತೆಯ ಬಹುಕಾಲದ ಬೇಡಿಕೆಯಾಗಿತ್ತು ಈ ಬರಿ ಅದು ಈಡೇರಿದೆ. ಅಶೋಕ್ ರೈ ಶಾಸಕರಾದ ಬಳಿಕ ಕ್ಷೇತ್ರ ದಿನದಿಂದ ದಿನಕ್ಕೆ ಅಭಿವೃದ್ದಿ ಹೊಂದುತ್ತಿರುವುದು ಮಾತ್ರವಲ್ಲದೆ ಭೃಷ್ಟಾಚಾರ ಮುಕ್ತ ಕ್ಷೆತ್ರವಾಗಿ ಮುಂದುವರೆಯುತ್ತಿರುವುದು ಜನ ಸಾಮಾನ್ಯರಲ್ಲಿ ನೆಮ್ಮದಿಗೆ ಕಾರಣವಾಗಿದೆ ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಇಂಟಕ್ ಅಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಮಾನಾಥ ಶೆಟ್ಟಿ ಪೆರ್ನೆ, ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಎಲ್ಯಣ್ಣ ಪೂಜಾರಿ, ಬೂತ್ ಅಧ್ಯಕ್ಷರಾದ ನವೀನ್ ಗೌಡ, ಅಕ್ರಮಸಕ್ರಮ ಸಮಿತಿ ಸದಸ್ಯ ರಾಮಣ್ಣ ಪಿಲಿಂಜ, ಹೊನ್ನಪ್ಪ ನಾಯ್ಕ, ಮಹೇಶ್ ಗೌಡ ಓಟೆ, ವಿಶ್ವನಾಥ ಪೂಜಾರಿ, ಚೆನ್ನಪ್ಪ ಗೌಡ, ಲೋಹಿತ್‌ಪೂಜಾರಿ, ಸುಶಾಂತ್ ಶೆಟ್ಟಿ, ಸುಮಿತ್ ಶೆಟ್ಟಿ, ರವೀಂದ್ರ ಶೆಟ್ಟಿ ಸೇನರಮಜಲು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ನೈತಿಕ ಪೊಲೀಸ್ ಗಿರಿ

Posted by Vidyamaana on 2023-08-03 05:13:52 |

Share: | | | | |


ಬೆಳ್ತಂಗಡಿ : ಧರ್ಮಸ್ಥಳದಲ್ಲಿ ನೈತಿಕ ಪೊಲೀಸ್ ಗಿರಿ

ಬೆಳ್ತಂಗಡಿ : ಬೆಂಗಳೂರಿನ ನಿವಾಸಿ ಹಿಂದೂ ವಿದ್ಯಾರ್ಥಿನಿಯೊಬ್ಬಳು ಉಜಿರೆ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಕಳೆದ ವಾರ ಕಾಲೇಜ್ ಕೊನೆಗೊಂಡಿದ್ದು. ಬುಧವಾರ ರಾತ್ರಿ ಬೆಂಗಳೂರು ಊರಿಗೆ ಲಗೇಜ್ ಜೊತೆ ತೆರಳಲು ಉಜಿರೆ ದ್ವಾರದ ಎದುರು ನಿಂತು ಪರಿಚಯಸ್ಥ ಮುಸ್ಲಿಂ ಆಟೋ ಚಾಲಕನಿಗೆ ಕರೆ ಮಾಡಿದ್ದು ಆತ ಬಂದು ಉಜಿರೆಯಿಂದ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಆ.2 ರಂದು ರಾತ್ರಿ ಸುಮಾರು 9 ಗಂಟೆಗೆ ಡ್ರಾಪ್ ಮಾಡಿ ಹೊರಡುವಾಗ ಅಪರಿಚಿತ ಯುವಕರ ತಂಡ ನಿನಗೆ ಹಿಂದೂ ಯುವತಿಯರೆ ಬೇಕಾ ಎಂದು ಬೆದರಿಕೆ ಹಾಕಿ ಹಲ್ಲೆ ಹಾಕಿ ಹಲ್ಲೆ ನಡೆಸಿದ್ದಾರೆ.ಯುವಕ ಸಾಧ್ಯ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಅತ್ತಾಜೆ ನಿವಾಸಿ ಅಬ್ದುಲ್ ಹಮೀದ್ ಅವರ ಏಳನೇ ಪುತ್ರ ಆಟೋ ಚಾಲಕ ಮೊಹಮ್ಮದ್ ಅಶೀಕ್(22) ಮೇಲೆ ಆ‌.2 ರಂದು ರಾತ್ರಿ ಸುಮಾರು9 ಗಂಟೆಗೆ ಧರ್ಮಸ್ಥಳ ದ್ವಾರದ ಮುಂಭಾಗದ ಬಸ್ ನಿಲ್ದಾಣದ ಮುಂದೆ ಹಲ್ಲೆದ್ದು . ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಅನಿಲ್‌ ಕುಮಾರ್ ತಂಡದಿಂದ ಧರ್ಮಸ್ಥಳ ಸುತ್ತಮುತ್ತಲಿನ ಸಿಸಿಕ್ಯಾಮರದ ಸಹಾಯದಿಂದ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Recent News


Leave a Comment: