ಜ 27 : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಪುತ್ತೂರು ತಾಲೂಕು ವತಿಯಿಂದ ಪತ್ರಿಕಾ ದಿನಾಚರಣೆ, ಉಪನ್ಯಾಸ - ಸನ್ಮಾನ ಕಾರ್ಯಕ್ರಮ

ಸುದ್ದಿಗಳು News

Posted by vidyamaana on 2024-07-26 08:10:52 |

Share: | | | | |


ಜ 27 : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಪುತ್ತೂರು ತಾಲೂಕು ವತಿಯಿಂದ ಪತ್ರಿಕಾ ದಿನಾಚರಣೆ, ಉಪನ್ಯಾಸ - ಸನ್ಮಾನ ಕಾರ್ಯಕ್ರಮ

ಪುತ್ತೂರು : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಪುತ್ತೂರು ತಾಲೂಕು ವತಿಯಿಂದ ವಿವೇಕಾನಂದ ಕಾಲೇಜು(ಸ್ವಾಯತ್ತ) ಪುತ್ತೂರು ಹಾಗೂ ಪತ್ರಿಕೋದ್ಯಮ ವಿಭಾಗ ಇದರ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ, ಉಪನ್ಯಾಸ - ಸನ್ಮಾನ ಕಾರ್ಯಕ್ರಮವು ಜ 27 ಶನಿವಾರ ಅಪರಾಹ್ನ ಗಂಟೆ 2:00ರಿಂದ ಪುತ್ತೂರು ನೆಹರೂ ನಗರ ವಿವೇಕಾನಂದ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಅಶೋಕ್ ಕುಮಾರ್ ರೈ ಶಾಸಕರು ಪುತ್ತೂರು ವಿಧಾನಸಭಾ ಕ್ಷೇತ್ರ ಇವರು ನಡೆಸಲಿದ್ದಾರೆ. ರಾಮದಾಸ್‌ ಶೆಟ್ಟಿ ವಿಟ್ಲ ಅಧ್ಯಕ್ಷರು ಕರ್ನಾಟಕ ಜರ್ನಲಿಸ್ಟ್ ಯೂನಿಯನ್(ರಿ.) ಪುತ್ತೂರು ತಾಲೂಕು ಇವರ ಅಧ್ಯಕ್ಷತೆಯಲ್ಲಿ ಜರಗುವ ಈ ಕಾರ್ಯಕ್ರಮದಲ್ಲಿ ಡಾ. ಆಶಾಲತಾ. ಪಿ. ಸಹಾಯಕ ಪ್ರಾಧ್ಯಾಪಕರು, ರಾಜ್ಯಶಾಸ್ತ್ರ ವಿಭಾಗ, ಗೋವಿಂದದಾಸ ಕಾಲೇಜು ಸುರತ್ಕಲ್ ಇವರು ಉಪನ್ಯಾಸ ನೀಡಲಿದ್ದಾರೆ

ವೇದಿಕೆಯಲ್ಲಿ ಪ್ರೊ.ವಿ.ಬಿ.ಅರ್ತಿಕಜೆ ಗೌರವ ಸಲಹೆಗಾರರು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ.) ಪುತ್ತೂರು ತಾಲೂಕು ಮತ್ತು ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತರು ಇವರನ್ನು ಡಾ ಯು.ಪಿ. ಶಿವಾನಂದ ಆಡಳಿತ ನಿರ್ದೇಶಕರು ಸುದ್ದಿ ಸಮೂಹ ಸಂಸ್ಥೆ ಪುತ್ತೂರು ಇವರು ಸನ್ಮಾನಿಸಲಿದ್ದಾರೆ.

Additional Image

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಜುಬಿನ್ ಮೊಹಪಾತ್ರ ಸಹಾಯಕ ಆಯುಕ್ತರು, ಪುತ್ತೂರು ಉಪವಿಭಾಗ, ತಾರನಾಥ ಗಟ್ಟಿ ಕಾಪಿಕಾಡು ಅಧ್ಯಕ್ಷರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಅಧ್ಯಕ್ಷರು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ ಕ,ಮುರಳೀಕೃಷ್ಣ ಕೆ.ಎನ್ ಸಂಚಾಲಕರು, ವಿವೇಕಾನಂದ ಮಹಾವಿದ್ಯಾಲಯ ನೆಹರೂನಗರ ಪುತ್ತೂರು. ಶ್ಯಾಮ ಸುದರ್ಶನ್ ಭಟ್ ಹೊಸಮೂಲೆ ಮುಖ್ಯಸ್ಥರು, ಕಹಳೆ ನ್ಯೂಸ್ ಚಾನೆಲ್ ಪುತ್ತೂರು ಇವರುಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

 Share: | | | | |


ಸೆ.10ಕ್ಕೆ ಎಸ್‌ಎಸ್‌ಎಫ್ ಗೋಲ್ಡನ್ ಫಿಫ್ಟಿ ಮಹಾಸಮ್ಮೇಳನ: ಸಿಎಂ ಸಿದ್ದರಾಮಯ್ಯ ಭಾಗಿ

Posted by Vidyamaana on 2023-09-09 07:27:01 |

Share: | | | | |


ಸೆ.10ಕ್ಕೆ ಎಸ್‌ಎಸ್‌ಎಫ್ ಗೋಲ್ಡನ್ ಫಿಫ್ಟಿ ಮಹಾಸಮ್ಮೇಳನ: ಸಿಎಂ ಸಿದ್ದರಾಮಯ್ಯ ಭಾಗಿ

ಬೆಂಗಳೂರು: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಷನ್ (ಎಸ್‌ಎಸ್‌ಎಫ್) 50ನೇ ವರ್ಷಾಚರಣೆಯ ಅಂಗವಾಗಿ ಗೋಲ್ಡನ್ ಫಿಫ್ಟಿ ಮಹಾ ಸಮ್ಮೇಳನವನ್ನು ಇದೇ 10ರಂದು ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ ಆಯೋಜಿಸಿದೆಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌ಎಸ್‌ಎಫ್‌ ರಾಜ್ಯ ಘಟಕದ ಅಧ್ಯಕ್ಷ ಸುಫ್ಯಾನ್ ಸಖಾಫಿ, ‘ಎಸ್‌ಎಸ್‌ಎಫ್‌ ರಾಷ್ಟ್ರೀಯ ಸಮಿತಿ ಆಯೋಜಿಸಿರುವ ಸಂವಿಧಾನ ಯಾತ್ರೆ ಕಾಶ್ಮೀರದಿಂದ ಆರಂಭವಾಗಿದೆ. ಈ ಯಾತ್ರೆಯ ಸಮಾರೋಪ ಸಮಾರಂಭ ಅದೇ ದಿನ ನಡೆಯಲಿದೆ. ಅಂದು ಬೆಳಿಗ್ಗೆ 10ಕ್ಕೆ ಎಸ್‌ಎಸ್‌ಎಫ್‌ ಪ್ರತಿನಿಧಿ ಸಮಾವೇಶ ನಡೆಯಲಿದ್ದು, ರಾಜ್ಯದ 7 ಸಾವಿರ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.


ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಕರ್ನಾಟಕದ ಉಲಮಾ ಒಕ್ಕೂಟದ ಅಧ್ಯಕ್ಷ ಝೈನುಲ್ ಉಲುಮಾ ಮಾಣಿ ಉಸ್ತಾದ್ ಅಧ್ಯಕ್ಷತೆ ವಹಿಸಲಿದ್ದಾರೆ. ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಅಬೂಬಕ್ಕರ್ ಮುಸ್ಲಿಯಾರ್ ಮುಖ್ಯ ಭಾಷಣ ಮಾಡಲಿದ್ದಾರೆ.

ಆಂತರಿಕ ಭದ್ರತಾ ವಿಭಾಗಕ್ಕೆ ರವಿ ಡಿ ಚನ್ನಣ್ಣನವರ್ ವರ್ಗಾವಣೆ

Posted by Vidyamaana on 2023-06-08 15:23:05 |

Share: | | | | |


ಆಂತರಿಕ ಭದ್ರತಾ ವಿಭಾಗಕ್ಕೆ ರವಿ ಡಿ ಚನ್ನಣ್ಣನವರ್ ವರ್ಗಾವಣೆ

ಬೆಂಗಳೂರು: ಕಿಯೋನಿಕ್ಸ್ ಎಂಡಿ ಆಗಿದ್ದ ರವಿ ಡಿ ಚನ್ನಣ್ಣನವರ್ ಅವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಉಪ ಮಹಾ ನಿರೀಕ್ಷಕರಾಗಿ ರವಿ ಡಿ ಚನ್ನಣ್ಣನವರ್ ಅವರನ್ನು ನೇಮಕ ಮಾಡಲಾಗಿದೆ.ಕಾನೂನು ಮತ್ತು ಸುವ್ಯವಸ್ಥೆ ಜವಾಬ್ದಾರಿಯಿಂದ ಅಲೋಕ್ ಕುಮಾರ್​

ಅವರನ್ನು ಎಡಿಜಿಪಿ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿತ್ತು. ಉಮೇಶ್ ಕುಮಾರ್ ಅವರನ್ನು ಎಡಿಜಿಪಿ ಕ್ರೈಂ & ಟೆಕ್ನಿಕಲ್ ಸರ್ವಿಸ್​, ಆರ್ ಹಿತೇಂದ್ರ ಅವರನ್ನು ಎಡಿಜಿಪಿ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸೌಮೇಂದು ಮುಖರ್ಜಿ ಅವರನ್ನು ಎಡಿಜಿಪಿ ಪೊಲೀಸ್ ಆಡಳಿತ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿತ್ತು.

ಶನಿವಾರ ಈದುಲ್ ಫಿತ್ರ್ ಉಡುಪಿ ಉಳ್ಳಾಲ ಭಟ್ಕಳ ಖಾಝಿಗಳಿಂದ ಘೋಷಣೆ

Posted by Vidyamaana on 2023-04-20 15:56:57 |

Share: | | | | |


ಶನಿವಾರ ಈದುಲ್ ಫಿತ್ರ್ ಉಡುಪಿ ಉಳ್ಳಾಲ ಭಟ್ಕಳ ಖಾಝಿಗಳಿಂದ ಘೋಷಣೆ

ಮಂಗಳೂರು: ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಎಲ್ಲೂ ಆಗಿಲ್ಲ. ಶುಕ್ರವಾರ  ಅಸ್ತಮಿಸಿದ ಶನಿವಾರ ರಾತ್ರಿ ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಆಗಲಿರುವುದರಿಂದ ಪಶ್ಚಿಮ ಕರಾವಳಿ ತೀರದಲ್ಲಿ ಶನಿವಾರ (ಎ.22) ಈದುಲ್ ಫಿತ್‌ರ್ ಆಚರಿಸಲು ಉಡುಪಿ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಸಂಯುಕ್ತ ಖಾಝಿ ಅಲ್‌ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಹಾಗೂ ಉಳ್ಳಾಲ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಮತ್ತು ಭಟ್ಕಳ ಖಾಝಿ ಪ್ರತ್ಯೇಕ ಹೇಳಿಕೆಯಲ್ಲಿ ಕರೆ ನೀಡಿದ್ದಾರೆ.

ಯಶಶ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮುಂದುವರೆಸಿ

Posted by Vidyamaana on 2023-06-11 14:59:30 |

Share: | | | | |


ಯಶಶ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮುಂದುವರೆಸಿ

ಪುತ್ತೂರು: ಆರೋಗ್ಯ ತುರ್ತು ಸಂದರ್ಭದಲ್ಲಿ ಬಡವರಿಗೆ ವರದಾನವಾಗಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಹಿಂದಿನ ಸರಕಾರ ನಿಷ್ಕ್ರೀಯಗೊಳಿಸಿದ್ದು ಅದನ್ನು ಮುಂದುವರೆಸುವಂತೆ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಮನವಿ ಮಾಡಿದ್ದಾರೆ.


 ಗ್ರಾಮೀಣ ಪ್ರದೇಶಗಳ ಸಹಾಕಾರಿ ಸಂಘಗಳ ಸದಸ್ಯರು, ಸ್ತ್ರೀ ಶಕ್ತಿ ಗುಂಪು ಸ್ವ-ಸಹಾಯ ಸಂಘ ಸದಸ್ಯರು ಹಾಗೂ ಗ್ರಾಮೀಣ ಪ್ರದೇಶದಲ್ಲಿರುವ ಸಹಕಾರಿ ಸಂಘ ಸಹಕಾರಿ ಬ್ಯಾಂಕ್‌ಗಳಲ್ಲಿ ಹಣಕಾಸಿನ ವಹಿವಾಟು ಹೊಂದಿರುವ ಸ್ವ-ಸಹಾಯ ಗುಂಪಿನ ಸದಸ್ಯರು ಈ ಯೋಜನೆಗೆ ಒಳಪಡುತ್ತಾರೆ. ಈ ಯೋಜನೆಯಲ್ಲಿ ಹಲವಾರು ಚಿಕಿತ್ಸೆ, ಶಸ್ತ್ರ ಚಿಕಿತ್ಸೆಗಳು ಒಳಗೊಂಡಿರತ್ತದೆ, ಈ ಹಿಂದೆ ಚಿಕಿತ್ಸೆ ನೀಡಿದ್ದ ಆಸ್ಪತ್ರೆಗಳಿಗೆ ಸರ್ಕಾರದಿಂದ ಮೊತ್ತ ಪಾವತಿಯಾಗದಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ  ಯೋಜನೆಯನ್ನು ನಿಷ್ಕ್ರೀಯಗೊಳಿಸಿರುತ್ತಾರೆ, ಪುತ್ತೂರು  ತಾಲೂಕಿನ ಯಾವ ಆಸ್ಪತ್ರೆಯು ಈ ಯೋಜನೆಯಲ್ಲಿ ಒಳಗೊಂಡಿರುವುದಿಲ್ಲ. ಯಶಸ್ವಿನಿ ಆರೋಗ್ಯ ಯೋಜನೆಯು ಬಡವರ ಪಾಲಿಗೆ ಅತೀ  ಅಮೂಲ್ಯವಾದ ಉಚಿತ ಆರೋಗ್ಯ ಯೋಜನೆಯಾಗಿರುವುದರಿಂದ ದಕ್ಷಿಣಕನ್ನಡ ಜಿಲ್ಲೆ ಹಾಗೂ ಪುತ್ತೂರಿನ ಎಲ್ಲಾ ಆಸ್ಪತ್ರೆಗಳಲ್ಲಿ ಪ್ರಾರಂಭಿಸುವಂತೆ ಉಸ್ತುವಾರಿ ಸಚಿವರ ಮೂಲಕ ಸರಕಾರವನ್ನು ಆಗ್ರಹಿಸಿದ್ದಾರೆ.

ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ ಸ್ವೀಕರಿಸಿದ ಪ್ರಧಾನಿ ಮೋದಿ

Posted by Vidyamaana on 2024-03-22 22:08:17 |

Share: | | | | |


ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ ಸ್ವೀಕರಿಸಿದ ಪ್ರಧಾನಿ ಮೋದಿ

ಥಿಂಪು ಮಾರ್ಚ್ 22: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶುಕ್ರವಾರ ಭೂತಾನ್‌ನ (Bhutan) ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋವನ್ನು (Order of the Druk Gyalpo) ಸ್ವೀಕರಿಸಿದ್ದು, ಈ ಗೌರವವನ್ನು ಪಡೆದ ಮೊದಲ ಭೂತನ್ ದೇಶದ ಹೊರಗಿನ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಧಾನಿ ಮೋದಿ ಭೂತಾನ್‌ನ ಪ್ರತಿಷ್ಠಿತ ನಾಗರಿಕ ಗೌರವವನ್ನು ಪಡೆದ ಮೊದಲ ವಿದೇಶಿ ಸರ್ಕಾರದ ಮುಖ್ಯಸ್ಥರಾಗಿದ್ದಾರೆ. ಉಭಯ ನಾಯಕರು ರಾಜಧಾನಿಯಲ್ಲಿ ಭೇಟಿಯಾದ ನಂತರ ಭೂತಾನ್‌ನ ರಾಜ ಜಿಗ್ಮೆ ಅವರು ಪಿಎಂ ಮೋದಿಯವರಿಗೆ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ ಪ್ರಶಸ್ತಿಯನ್ನು ನೀಡಿದರು. ಸ್ಥಾಪಿತವಾದ ಶ್ರೇಯಾಂಕ ಮತ್ತು ಪ್ರಾಶಸ್ತ್ಯದ ಪ್ರಕಾರ, ಆರ್ಡರ್ ಆಫ್ ದ ಡ್ರುಕ್ ಗ್ಯಾಲ್ಪೋ ಅನ್ನು ಜೀವಮಾನದ ಸಾಧನೆಗಾಗಿ ನೀಡುವ ಪ್ರಶಸ್ತಿಯಾಗಿ ಸ್ಥಾಪಿಸಲಾಯಿತು. ಇದು ಭೂತಾನ್‌ನಲ್ಲಿ ಅತ್ಯುನ್ನತ ಗೌರವವಾಗಿದೆ.

ಅಡಿಕೆ ಕಳ್ಳತನ ಲಕ್ಷಾಂತರ ರೂ. ಮೌಲ್ಯದ ಆಡು ಕೋಳಿ ಶೆಡ್ ನಾಶ ಪ್ರಕರಣ

Posted by Vidyamaana on 2023-08-05 15:29:18 |

Share: | | | | |


ಅಡಿಕೆ ಕಳ್ಳತನ ಲಕ್ಷಾಂತರ ರೂ. ಮೌಲ್ಯದ ಆಡು ಕೋಳಿ ಶೆಡ್ ನಾಶ ಪ್ರಕರಣ

ಪುತ್ತೂರು: 81 ವರ್ಷ ಪ್ರಾಯದ ಹಿರಿಯ ನಾಗರಿಕರ ಜಮೀನನ್ನು ಲೀಸಿಗೆ ಕೊಡಲು ಒತ್ತಾಯಿಸಿ, ಕೊಡದೇ ಇದ್ದರೆ ಕೊಲೆ ಮಾಡುವುದಾಗಿ ಬೆದರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಬೆಳ್ಳಾರೆ ಪೊಲೀಸ್ ಠಾಣೆಗೆ ಆದೇಶಿಸಿದೆ.

ಕುರಿಯ ಗ್ರಾಮದ ದೇರ್ಕಜೆ ವೆಂಕಟ್ರಮಣ ಭಟ್, ಸವಣೂರು ಗ್ರಾಮದ ಪಣೆಮಜಲು ನಿವಾಸಿ ಜಾಫರ್, ಬಪ್ಪಳಿಗೆ ನಿವಾಸಿ ಸುಭಾಶ್ ರೈ ಆರೋಪಿಗಳು. ಇವರು ಹಿರಿಯ ನಾಗರಿಕೆ, ಕಡಬ ತಾಲೂಕಿನ ಸವಣೂರು ಗ್ರಾಮದ ಸೋಂಪಾಡಿ ನಿವಾಸಿ ನಾಗರತ್ನಮ್ಮ (81 ವರ್ಷ) ಅವರಿಗೆ ಕೊಲೆ ಬೆದರಿಕೆ ಹಾಕಿದ್ದಲ್ಲದೇ, ಅಲ್ಲಿದ್ದ 2 ಕ್ವಿಂಟಾಲ್ ಅಡಿಕೆಯನ್ನು ಕಳ್ಳತನ ಮಾಡಿದ್ದರು. ಮಾತ್ರವಲ್ಲ ಕೋಳಿ ಹಾಗೂ ಆಡು ಸಾಕಿಕೊಂಡಿದ್ದ ದೊಡ್ಡ ಶೆಡ್ಡನ್ನು ಜೆಸಿಬಿಯಲ್ಲಿ ಕೆಡವಿ ಹಾಕಿದ್ದರು ಎಂದು ಆರೋಪಿಸಲಾಗಿದೆ.

ಪ್ರಕರಣದ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿದಾಗ, ದೂರು ಸ್ವೀಕರಿಸಿಲ್ಲ ಎಂಬ ಕಾರಣಕ್ಕೆ ನಾಗರತ್ನಮ್ಮ ಅವರು ನ್ಯಾಯಾಲಯದ ಕದ ತಟ್ಟಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣ ದಾಖಲಿಸುವಂತೆ ಆದೇಶ ನೀಡಿದೆ.

ಏನಿದು ಪ್ರಕರಣ?

ನಾಗರತ್ನಮ್ಮ ಅವರು ಪುಣ್ಚಪ್ಪಾಡಿಯಲ್ಲಿ ಜಮೀನು ಹೊಂದಿದ್ದು, ಅದನ್ನು ಲೀಸಿಗೆ ಕೊಡುವಂತೆ ಆರೋಪಿಗಳು ಒತ್ತಾಯಿಸಿದ್ದರು. ಕೊಡದೇ ಇದ್ದಾಗ ಮೇ 30ರಂದು ನಾಗರತ್ನಮ್ಮ ಅವರ ಜಮೀನಿಗೆ ಅಕ್ರಮ ಪ್ರವೇಶ ಮಾಡಿದ ಆರೋಪಿಗಳು, ಹಿರಿಯ ನಾಗರಿಕೆ ನಾಗರತ್ನಮ್ಮ ಅವರಿಗೆ ಬೆದರಿಕೆ ಹಾಕಿದ್ದರು. ಜಮೀನು ಕೊಡದೇ ಇದ್ದರೆ ನಾಗರತ್ನಮ್ಮ ಅವರ ಮಗಳನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಇದನ್ನು ನಾಗರತ್ನಮ್ಮ ಅವರ ಅಳಿಯ ಆಕ್ಷೇಪಿಸಿದಾಗ, ಅವರಿಗೂ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ.

ಇದೇ ಸಂದರ್ಭ ಗೋಣಿಯಲ್ಲಿ ಕಟ್ಟಿಟ್ಟಿದ್ದ 2 ಕ್ವಿಂಟಾಲ್ ಅಡಿಕೆಯನ್ನು ಹೊತ್ತೊಯ್ದಿದ್ದು ಮಾತ್ರವಲ್ಲ, ಆಡು ಹಾಗೂ ಕೋಳಿ ಸಾಕಿಕೊಂಡಿದ್ದ ಬೃಹತ್ ಶೆಡ್ಡನ್ನು ಜೆಸಿಬಿಯಿಂದ ಮುರಿದು ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇದರ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿದಾಗ, ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ನ್ಯಾಯಾಲಯದ ಮೊರೆ ಹೋಗಲಾಗಿತ್ತು ಎಂದು ಹೇಳಲಾಗಿದೆ.

Recent News


Leave a Comment: