ಇಂದು (ಜು.O6) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ರಜೆ

ಸುದ್ದಿಗಳು News

Posted by vidyamaana on 2024-07-06 04:30:03 |

Share: | | | | |


ಇಂದು (ಜು.O6) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಶನಿವಾರ (ನಾಳೆ, ಜು.6) ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ

ಪದವಿ ಪೂರ್ವ ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿ ಆದೇಶಿಸಿದ್ದಾರೆ.

 Share: | | | | |


ಪುತ್ತೂರಿನಲ್ಲಿ ಇಂದು ವಿದ್ಯುತ್ ವ್ಯತ್ಯಯ, ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ ಇಲ್ವಾ? ಚೆಕ್ ಮಾಡಿ

Posted by Vidyamaana on 2024-03-21 04:51:39 |

Share: | | | | |


ಪುತ್ತೂರಿನಲ್ಲಿ ಇಂದು ವಿದ್ಯುತ್ ವ್ಯತ್ಯಯ, ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ ಇಲ್ವಾ? ಚೆಕ್ ಮಾಡಿ

ಪುತ್ತೂರು : ಉಪ್ಪಿನಂಗಡಿ ಪುತ್ತೂರು ಚತುಷ್ಪಥ ಮಾರ್ಗ ಕಾಮಗಾರಿ ನಿಮಿತ್ತ 110/33/11ಕವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಎಕ್ಸ್‌ ಪ್ರೆಸ್, ಕಾಂಚನ & ವಾಟರ್ ಸಪ್ಪೆ ಫೀಡರ್ ಮತ್ತು ಮತ್ತು 110/33/11ಕೆವಿ ಕಲ್ಲೇರಿ ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ & ಕೆಮ್ಮಾರ ಫೀಡರ್‌ನಲ್ಲಿ ಮಾ.21 (ಗುರುವಾರ) ರಂದು ಪೂರ್ವಾಹ್ನ ಗಂಟೆ 10:00 ರಿಂದ ಅಪರಾಹ್ನ 5:30 ರ ವರೆಗೆ ವಿದ್ಯುತ್ ನಿಲುಗಡೆಯಾಗಲಿದೆ.ಆದುದರಿಂದ, 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ & 110/11ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಬಜತ್ತೂರು, ನೆಕ್ಕಿಲಾಡಿ & ಉಪ್ಪಿನಂಗಡಿ ಗ್ರಾಮದ

ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Posted by Vidyamaana on 2023-06-19 02:09:24 |

Share: | | | | |


ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಪುತ್ತೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು ( 6 ರಿಂದ 10 ನೇ ತರಗತಿ) ಗಳಿಗೆ ವಾರ್ಷಿಕ ರೂ.*ಹತ್ತು ಸಾವಿರದಂತೆ* ದಂತೆ ಪ್ರೊತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು.

ಅರ್ಜಿದಾರರು 2022-23 ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು 6 ನೇ ರಿಂದ 10 ನೇ ತರಗತಿಯಲ್ಲಿ ಓದುತ್ತಿರಬೇಕು.ರಾಜ್ಯ ಕ್ರೀಡಾ ಪ್ರಾಧಿಕಾರದಿಂದ ನೊಂದಯಿತವಾದ ಕ್ರೀಡಾ ಸಂಸ್ಥೆಗಳು ದಿನಾಂಕ  1-04-2022 ರಿಂದ 31-03-2023 ರವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಅಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸರಬೇಕು.ಅಂದರೆ ದಿನಾಂಕ 1-04-2022 ರಿಂದ 31-03-2023 ರ ಅವಧಿಯಲ್ಲಿ ನಡೆದ ಕ್ರೀಡಾಕೂಟಗಳಲ್ಲಿನ ಸಾಧನೆಗಳನ್ನು ಮಾತ್ರ ಪರಿಗಣಿಸಲಾಗುವುದು.ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ.ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದಲ್ಲಿ  ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ.ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ವಿದ್ಯಾರ್ಥಿ ವೇತನ ಮೊತ್ತಕ್ಕೆ ಮಾತ್ರ ಅರ್ಹರಾಗಿರುತ್ತಾರೆ.ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಹರು ಇರುವ ಕ್ರೀಡಾಪಟುಗಳು http://sevasindhuservices.karnataka.gov in ಮೂಲಕ ಆನ್ ಲೈನ್ ನಲ್ಲಿ ದಿನಾಂಕ  31-07-2023 ಅರ್ಜಿಗಳನ್ನು ಸಲ್ಲಿಸುವಂತೆ ಪುತ್ತೂರು ತಾಲ್ಲೂಕು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮೇಲ್ವಿಚಾರಕರಾದ ಶ್ರೀಕಾಂತ್ ಪೂಜಾರಿ ಬಿರಾವು ಪ್ರಕಟಣೆ ನೀಡಿದ್ದಾರೆ ಹೆಚ್ಚಿನ ಮಾಹಿತಿಗಾಗಿ 9164502107 ನಂಬರನ್ನು ಸಂಪರ್ಕಿಸಬಹುದಾಗಿದೆ.

ಹುಬ್ಬಳ್ಳಿಯಲ್ಲಿ ಅಯೋಧ್ಯಾ ಕರಸೇವಕರ ವಿರುದ್ಧ ಪ್ರಕರಣ: ಕಾಂಗ್ರೆಸ್ ಸರಕಾರದ ವಿರುದ್ಧ ಹಿಂದೂ ಜಾಗರಣಾ ವೇದಿಕೆ ಸಂಘ ಪರಿವಾರದಿಂದ ಪ್ರತಿಭಟನೆ

Posted by Vidyamaana on 2024-01-03 21:52:57 |

Share: | | | | |


ಹುಬ್ಬಳ್ಳಿಯಲ್ಲಿ ಅಯೋಧ್ಯಾ ಕರಸೇವಕರ ವಿರುದ್ಧ ಪ್ರಕರಣ: ಕಾಂಗ್ರೆಸ್ ಸರಕಾರದ ವಿರುದ್ಧ ಹಿಂದೂ ಜಾಗರಣಾ ವೇದಿಕೆ  ಸಂಘ ಪರಿವಾರದಿಂದ  ಪ್ರತಿಭಟನೆ

ಪುತ್ತೂರು: ಹುಬ್ಬಳ್ಳಿಯಲ್ಲಿ ರಾಮಭಕ್ತರನ್ನು ಬಂಧಿಸಿರುವ ಪೊಲೀಸ್‌ ಇಲಾಖೆಯ ವಿರುದ್ಧ ಹಾಗೂ ಕಾಂಗ್ರೆಸ್ ಸರಕಾರ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ಬುಧವಾರ ಇಲ್ಲಿನ ದರ್ಬೆ ವೃತ್ತದಲ್ಲಿ ಹಿಂದೂ ಜಾಗರಣಾ ವೇದಿಕೆ ಪುತ್ತೂರು ಜಿಲ್ಲೆ ವತಿಯಿಂದ ಜ.3ರಂದು  ಬೃಹತ್ ಪ್ರತಿಭಟನೆ ನಡೆಯಿತು.

ಬೃಹತ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಜರಂಗದಳ ಪ್ರಾಂತ ಸಂಯೋಜಕ ಮುರಳೀಕೃಷ್ಣ ಹಸಂತಡ್ಕ, ರಾಮನ ಕೆಲಸ ಮಾಡುವವರನ್ನು ಹತ್ತಿಕ್ಕುವ


ಪ್ರಯತ್ನ ಸಿದ್ಧರಾಮಯ್ಯ ಸರಕಾರ ಮಾಡಿದರೆ ಲಂಕೆಯ ಉದಾಹರಣೆಯ ಮೂಲಕ ಸರಕಾರಕ್ಕೆ ಪ್ರತಿ ಉತ್ತರ ನೀಡಬೇಕಾಗಬಹುದು ಎಂದು  ಎಚ್ಚರಿಕೆ ನೀಡಿದರು.

ಕಾಂಗ್ರೆಸ್‌ ಏಜೆಂಟರ ಮೂಲಕ ಅಧಿಕಾರಿಗಳನ್ನು ನೇಮಿಸುವ ಕಾರ್ಯ ಒಂದೆಡೆಯಾದರೆ, ಇನ್ನೊಂದೆಡೆ ಅಲ್ಪಸಂಖ್ಯಾತರ ಓಟಿಗೋಸ್ಕರ ಹಿಂದೂಗಳನ್ನು, ರಾಮಭಕ್ತರನ್ನು ಧಮನಿಸುವ ಕಾರ್ಯ ನಡೆಸುತ್ತಿದೆ. ದೇಶದಲ್ಲಿ ರಾಮನ ನಾಡು ನಿರ್ಮಾಣವಾಗುತ್ತಿದೆಯೇ ಹೊರತು ರಾವಣನ ನಾಡು ನಿರ್ಮಾಣ ಆಗುತ್ತಿಲ್ಲ ಎಂಬುದನ್ನು ಸಿದ್ಧರಾಮಯ್ಯನವರು ಅರ್ಥ ಮಾಡಿಕೊಳ್ಳಬೇಕು. ರಾಷ್ಟ್ರ ಮಂದಿರ ನಿರ್ಮಾಣವಾಗುತ್ತಿರುವ ಈ ಕಾಲಘಟ್ಟದಲ್ಲಿ ಸಂಭ್ರಮದಿಂದ ಇರಬೇಕಾದ ಅಸಂಖ್ಯಾತ ಹಿಂದೂಗಳ ಮಾನಸಿಕ ಸ್ಥೆರ್ಯವನ್ನು ಕುಗ್ಗಿಸುವ ಕೆಲಸ ನಡೆಯುತ್ತಿದೆ. ಸಿದ್ಧರಾಮಯ್ಯನವರಿಗೆ ತಾಕತ್ತಿದ್ದರೆ ರಾಮರಾಜ್ಯ ನಿರ್ಮಾಣದ ಕನಸು ತಡೆಯಲಿ ಎಂದು ಸವಾಲು ಎಸೆದರು.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಕನಸು ನನಸಾಗುತ್ತಿರುವ ಸಂದರ್ಭದಲ್ಲಿ 32 ವರ್ಷಗಳ ಹಿಂದೆ ರಾಮ ಮಂದಿರಕ್ಕಾಗಿ ಹೋರಾಟ ಮಾಡಿದವರನ್ನು ಬಂಧಿಸುವ ಕೆಲಸ ಸಿದ್ದರಾಮಯ್ಯ ಸರಕಾರದಿಂದ ಆಗುತ್ತಿದೆ. ಈ ಮೂಲಕ ಹಿಂದೂಗಳ ಮಾನಸಿಕ ಧೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿರುವುದನ್ನು ನಾವು ಖಂಡಿಸುತ್ತೇವೆ. ಸೀತೆ ರಾಮನ ಜತೆಗೂಡಿ ರಾವಣನನ್ನು ಹೇಗೆ ಧ್ವಂಸ ಮಾಡಿದ್ದಾರೆ ಅದೇ ರೀತಿಯ ಉತ್ತರ ನೀಡಲು ಮಾತೆಯರು ಸೀತೆಯರಾಗಿ ಸರಕಾರವನ್ನು ಧ್ವಂಸ ಮಾಡಬೇಕಾಗಬಹುದು ಎಂದು ಎಚ್ಚರಿಕೆ ನೀಡಿದರು.


ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಚಂದ್ರಶೇಖರ ರಾವ್‌ ಬಪ್ಪಳಿಗೆ ಮಾತನಾಡಿ, 30 ವರ್ಷಗಳ ಹಿಂದೆ ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಹೋರಾಟವನ್ನು ನಡೆಸಿದ ರಾಮಭಕ್ತರ ಮೇಲೆ ಸಿದ್ದರಾಮಯ್ಯ ಸರಕಾರ ಪುನಃ ಕೇಸು ಹಾಕಿ ಬಂಧಿಸಲು ಮುಂದಾಗುತ್ತಿದ್ದು, ಇನ್ನಷ್ಟು ರಾಮಭಕ್ತರನ್ನು ಬಂಧನ ಮಾಡಲಿ. ಪರಿಣಾಮ ಹಿಂದೂ ಸಮಾಜಕ್ಕೆ ಮತ್ತಷ್ಟು ಶಕ್ತಿ ಬರಲಿದೆ ಎಂಬುದನ್ನು ಸಿದ್ಧರಾಮಯ್ಯ ಅರ್ಥ ಮಾಡಿಕೊಳ್ಳಲಿ ಎಂದು ಹೇಳಿದ ಅವರು, 30 ವರ್ಷ ಅಯೋಧ್ಯೆಯ ಕರಸೇವೆಯಲ್ಲಿ ಪಾಲ್ಗೊಂಡ ವಿಚಾರವನ್ನು ಎಳೆ ಎಳೆಯಾಗಿ ತೆರೆದಿಟ್ಟರು.


ಪ್ರತಿಭಟನೆಯನ್ನುದ್ದೇಶಿಸಿ ಡಾ.ಸುರೇಶ್ ಪುತ್ತೂರಾಯ ಮಾತನಾಡಿದರು. ವಿಶ್ವ ಹಿಂದೂ ಪರಿಷತ್ ಮುಖಂಡ ಮೋಹನದಾಸ್‌ ಕಾಣಿಯೂರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರತಿಭಟನಾ ಸಭೆಯಲ್ಲಿ ನಗರಸಭೆ ನಿಕಟಪೂರ್ವ ಅಧ್ಯಕ್ಷ ಜೀವಂಧ‌ರ್ ಜೈನ್, ಬಿಜೆಪಿ ಹಿರಿಯ ಮುಖಂಡರಾದ ಗೋಪಾಲಕೃಷ್ಣ ಹೇರಳೆ, ಅಪ್ಪಯ್ಯ ಮಣಿಯಾಣಿ, ರಾಜೇಶ್‌ ಬನ್ನೂರು, ರಾಧಾಕೃಷ್ಣ ಬೋರ್ಕರ್, ನಗರಸಭೆ ಸದಸ್ಯ ಜಗನ್ನಿವಾಸ ರಾವ್, ಆರ್.ಸಿ ನಾರಾಯಣ, ಶಶಿಕುಮಾ‌ರ್ ಬಾಲ್ಯೂಟ್ಟು, ಸತೀಶ್ ನಾಯ್ಕ, ವಿಹಿಂಪದ ಡಾ. ಪ್ರಸನ್ನ ಭಟ್, ಶ್ರೀಧರ್ ತೆಂಕಿಲ, ಸೀತಾರಾಮ ರೈ ಕೆದಂಬಾಡಿಗುತ್ತು,, ಮಹಿಳಾ ಬಿಜೆಪಿಯ ಗೌರಿ ಬನ್ನೂರು, ಜಯಶ್ರೀ ಶೆಟ್ಟಿ, ನಿಶಾಂತ್, ಮೀನಾಕ್ಷಿ ಶಾಂತಿಗೋಡು, ದೀಕ್ಷಾ ಪೈ, ಹರಿಣಿ ಪುತ್ತೂರಾಯ, ಸತೀಶ್ ಮತ್ತಿತರರು ಉಪಸ್ಥಿತರಿದ್ದರು. ಅಜಿತ್ ರೈ ಹೊಸಮನೆ ಸ್ವಾಗತಿಸಿದರು. ದಿನೇಶ್ ಪಂಜಿಗ ಕಾರ್ಯಕ್ರಮ ನಿರೂಪಿಸಿದರು.

ಉಜಿರೆ: ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾಲೇಜು ವಿದ್ಯಾರ್ಥಿ

Posted by Vidyamaana on 2023-11-24 04:38:20 |

Share: | | | | |


ಉಜಿರೆ: ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾಲೇಜು ವಿದ್ಯಾರ್ಥಿ

ಬೆಳ್ತಂಗಡಿ : ವಿದ್ಯಾರ್ಥಿಯ  ನಿಯಂತ್ರಣ ತಪ್ಪಿ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಉಜಿರೆಯ ಕಾಲೇಜು ರಸ್ತೆಯ ಬಳಿ ನ.23 ರಂದು(ಇಂದು) ನಡೆದಿದ್ದು ಚಿಕಿತ್ಸೆ ಫಲಿಸದೆ ವಿದ್ಯಾರ್ಥಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸಂಜೆ ಸಾವನ್ನಪ್ಪಿದ್ದಾನೆ.


ಕಾಲೇಜಿನಲ್ಲಿ ಕಾರ್ಯಕ್ರಮ ಇದ್ದ ಕಾರಣ ಮಧ್ಯಾಹ್ನ ಊಟ ಮಾಡಿ ವಾಪಸ್ ಬರುವಾಗ ಬೈಕ್ ಸ್ಟ್ಯಾಂಡ್ ತೆಗೆಯದೆ ಚಲಾಯಿಸಿಕೊಂಡು ಬರುವಾಗ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ತಲೆಗೆ ಗಂಭೀರ ಗಾಯಗೊಂಡಿದ್ದ ಉಜಿರೆಯ ಎಸ್.ಡಿ.ಎಮ್ ಖಾಸಗಿ ಕಾಲೇಜಿನ ಮ್ಯಾಕಾನಿಕಲ್ ಕೋರ್ಸ್ ಡಿಪ್ಲೋಮಾ ವಿದ್ಯಾರ್ಥಿ ಧರ್ಮಸ್ಥಳ ಗ್ರಾಮದ ನೇತ್ರಾವತಿ ನಿವಾಸಿ ದಿಕ್ಷೀತ್(20) ಚಿಕಿತ್ಸೆ ಫಲಿಸದೆ ಸಂಜೆ ಮಂಗಳೂರು ಕೆ.ಎಮ್.ಸಿ ಅತ್ತಾವರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸುಳಿವು ಕೊಟ್ಟ ಸುಮಲತಾ, ಏ 3ಕ್ಕೆ ಅಂತಿಮ ತೀರ್ಮಾನ

Posted by Vidyamaana on 2024-03-30 19:21:34 |

Share: | | | | |


ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸುಳಿವು ಕೊಟ್ಟ ಸುಮಲತಾ, ಏ 3ಕ್ಕೆ ಅಂತಿಮ ತೀರ್ಮಾನ

ಬೆಂಗಳೂರು, ಮಾ.30: ಕಳೆದ ಸಲದ ಚುನಾವಣೆ ವೇಳೆ ಸೃಷ್ಟಿಯಾಗಿದ್ದ ಸನ್ನಿವೇಶವೇ ಈ ಸಲವೂ ಸೃಷ್ಟಿಯಾಗಿದೆ. ನಾನು ಪಕ್ಷಕ್ಕಿಂತ ಅಂಬರೀಶ್‌ ಅವರ ಅಭಿಮಾನಿಗಳನ್ನು ಗಮನದಲ್ಲಿಟ್ಟುಕೊಂಡು ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ. ಏಪ್ರಿಲ್‌ 3 ರಂದು ಮಂಡ್ಯದಲ್ಲಿಯೇ ಅಂತಿಮ ನಿರ್ಧಾರವನ್ನು ಪ್ರಕಟಿಸುತ್ತೇನೆ ಎಂದು ಮಂಡ್ಯದ ಪಕ್ಷೇತರೆ ಸಂಸದೆ ಸುಮಲತಾ ಅಂಬರೀಶ್‌ ಹೇಳಿದ್ದಾರೆ


ಬೆಂಗಳೂರಿನ ಜೆಪಿ ನಗರದ ನಿವಾಸದ ಬಳಿ ತಮ್ಮ ಬೆಂಬಲಿಗರ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ನಮ್ಮ ಬೆಂಬಲಿಗರು, ಅಂಬರೀಶ್‌ ಅವರ ಅಭಿಮಾನಿಗಳು ಇಲ್ಲಿಗೆ ಬಂದು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಮೊದಲಿನಿಂದಲೂ ಸಹ ನಾನು ಜನಾಭಿಪ್ರಾಯ ಸಂಗ್ರಹಿಸಿಯೇ ಮುಂದಿನ ಹೆಜ್ಜೆ ಇಟ್ಟಿದ್ದೇನೆ. ಜನರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾನು ಕೂಡ ನಮ್ಮ ಆಪ್ತ ವಲಯದಲ್ಲಿ ಚರ್ಚೆ ಮಾಡಿ ನನ್ನ ನಿರ್ಧಾರವನ್ನು ಮಂಡ್ಯದಲ್ಲಿಯೇ ಘೋಷಣೆ ಮಾಡುತ್ತೇನೆ ಎಂದರು.ನಿಮ್ಮ ಅಭಿಮಾನಿಗಳು ಚುನಾವಣೆಗೆ ನಿಲ್ಲಲೇಬೇಕು ಎಂದು ಆಗ್ರಹಿಸುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಬಾರಿಯೂ ಇದೇ ರೀತಿಯ ಸವಾಲು ಎದುರಾಗಿತ್ತು. ಆಗ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಂಡಿತ್ತು. ಆಗ ನಿಮಗೆ ಟಿಕೆಟ್‌ ಕೊಡುವುದಿಕ್ಕೆ ಆಗಲ್ಲ ಎಂದು ಕಾಂಗ್ರೆಸ್‌ನವರು ಹೇಳಿದ್ದರು. ಈಗ ಅದೇ ಸವಾಲು ಬದಲಾದ ರೀತಿಯಲ್ಲಿ ನಮ್ಮ ಮುಂದೆ ಬಂದಿದೆ. ಇದನ್ನು ಯಾವ ರೀತಿ ನಾವು ಎದುರಿಸಬೇಕು ಎಂಬ ಪ್ರಶ್ನೆ ನನ್ನ ಮುಂದಿದೆ. ಮುಂದಿನ ನಡೆ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಸುಲಭವಾಗಿಲ್ಲ ಎಂದರು.

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿ ಅಭಿವೃದ್ಧಿಗೆ ಶಿಲಾನ್ಯಾಸ | 35 ಲಕ್ಷ ರೂ. ಯೋಜನೆಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಮಠಂದೂರು

Posted by Vidyamaana on 2023-03-11 09:04:59 |

Share: | | | | |


ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿ ಅಭಿವೃದ್ಧಿಗೆ ಶಿಲಾನ್ಯಾಸ | 35 ಲಕ್ಷ ರೂ. ಯೋಜನೆಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಮಠಂದೂರು

ಪುತ್ತೂರು: ಅತ್ಯಂತ ಪಾವಿತ್ರ್ಯತೆ ಹೊಂದಿರುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿ ಅಭಿವೃದ್ಧಿ ಬಹುದಿನಗಳ ಬೇಡಿಕೆಯಾಗಿದ್ದು, ಇದೀಗ 35 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಗೆ ಶಿಲಾನ್ಯಾಸ ನೆರವೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚುವರಿ ಅನುದಾನ ತರಿಸಿಕೊಂಡು, ಇನ್ನಷ್ಟು ಅಭಿವೃದ್ಧಿಗೆ ಪ್ರಯತ್ನಿಸಲಾಗುವುದು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಿಣಿ ಅಭಿವೃದ್ಧಿಗಾಗಿ ಪುಡಾದ 35 ಲಕ್ಷ ರೂ. ಅನುದಾನದ ಕಾಮಗಾರಿಗೆ ಶನಿವಾರ ತೆಂಗಿನಕಾಯಿ ಒಡೆಯುವ ಮೂಲಕ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರುಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ಪುಷ್ಕರಿಣಿ ಧಾರ್ಮಿಕ ಮಹತ್ವವನ್ನು ಹೊಂದಿದೆ. ಆದ್ದರಿಂದ ಈ ಕೆರೆಯನ್ನು ಅಭಿವೃದ್ಧಿ ಮಾಡುವ ದೃಷ್ಟಿಯಿಂದ ಹಲವು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಹಂತಹಂತವಾಗಿ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದರು

.ಬನ್ನೂರು ಕೆರೆಗೆ 1.75 ಕೋಟಿ ಅಂದಾಜು ಪಟ್ಟಿ ತಯಾರಿ : ಭಾಮಿ ಅಶೋಕ್ ಶೆಣೈ

ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್‍ ಶೆಣೈ ಮಾತನಾಡಿ, ನಗರ ಸೇರಿದಂತೆ ಹೊರವಲಯದ ಹಲವು ಕೆರೆಗಳ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು. ಈಗಾಗಲೇ ಬನ್ನೂರು ಕೆರೆ ಅಭಿವೃದ್ಧೀಗೆ 1.75 ಕೋಟಿ ರೂ. ಅಂದಾಜು ಪಟ್ಟಿ ತಯಾರಿಸಲಾಗಿದೆ. ಈ ಪ್ರಕ್ರಿಯೆ ಕೇವಲ ನಾಲ್ಕು ದಿನಗಳಲ್ಲಿ ನಿರ್ಐಯ ತೆಗೆದುಕೊಂಡು ಮಾಡಲಾಗಿದೆ ಎಂದ ಅವರು, ದೇವಸ್ಥಾನದ ಕೆರೆ ಅಭಿವೃದ್ಧಿಗೆ 35 ಲಕ್ಷ ರೂ. ಅನುದಾನ ಪುಡಾ ವತಿಯಿಂದ ನೀಡಲಾಗಿದ್ದು, ಅನುದಾನ ನೀಡುವಲ್ಲಿ ಶಾಸಕ ಸಂಜೀವ ಮಠಂದೂರು ಅವರು ಪಾತ್ರ ಮಹತ್ವದ್ದಾಗಿದೆ. ಇನ್ನಷ್ಟು ಅನುದಾನ ಒದಗಿಸುವ ಭರವಸೆ ನೀಡಿದರು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಒಂದು ಚಕ್ರದಿಂದ ಕೆಲಸ ಕಾರ್ಯಗಳು ನಡೆಯುವುದಿಲ್ಲ. ಪುಷ್ಕರಣಿ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡುವಲ್ಲಿ ಪುತ್ತೂರು ಶಾಸಕರು ಸೇರಿದಂತೆ ಎಲ್ಲರೂ ಕೈಜೋಡಿಸುವಿಕೆಯಿಂದ ಆಗಿದೆ. ಒಟ್ಟಾರೆಯಾಗಿ ದೇವಸ್ಥಾನದ ಅಭಿವೃದ್ಧಿ ಕೆಲಸಗಳು ಸರಿಯಾದ ರೀತಿಯಲ್ಲಿ ಸಾಗುತ್ತಿದೆ ಎಂದರು.

ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್‍ ಮಾತನಾಡಿದರು. ವೇದಿಕೆಯಲ್ಲಿ ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ, ನಗರಸಭೆ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, , ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಮುರಳೀಕೃಷ್ಣ ಹಸಂತಡ್ಕ, ನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅಭಿಲಾಷ್ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಯೋಜನಾ ಪ್ರಾಧಿಕಾರದ ಸದಸ್ಯರಾದ ರಮೇಶ್‍ ಭಟ್, ಜಯಶ್ರೀ ಶೆಟ್ಟಿ, ನ್ಯಾಯವಾದಿ ಚಿದಾನಂದ ಬೈಲಾಡಿ ಮತ್ತಿತರರು ಉಪಸ್ಥಿತರಿದ್ದರು.

ಅಪೂರ್ವ ಪ್ರಾರ್ಥನೆ ಹಾಡಿದರು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಸ್ವಾಗತಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ರವೀಂದ್ರನಾಥ ರೈ ಬಳ್ಳಮಜಲು ವಂದಿಸಿದರು. ಮಾಜಿ ಪುರಸಭಾ ಅಧ್ಯಕ್ಷ ರಾಜೇಶ್ ಬನ್ನೂರು ಕಾರ್ಯಕ್ರಮ ನಿರೂಪಿಸಿದರು. ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಬಿ.ಐತ್ತಪ್ಪ ನಾಯ್ಕ, ರಾಮದಾಸ್ ಗೌಡ, ವೀಣಾ ಬಿ.ಕೆ.ಶೇಖರ್ ನಾರಾವಿ, ಮ್ಯಾನೇಜರ್ ಹರೀಶ್‍ ಶೆಟ್ಟಿ ಅತಿಥಿಗಳನ್ನು ಗೌರವಿಸಿದರು

Recent News


Leave a Comment: