ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ವಕೀಲರೊಬ್ಬರ ಮೇಲೆ ಪೊಲೀಸರ ಹಲ್ಲೆ ಆರೋಪ

Posted by Vidyamaana on 2023-12-02 08:20:47 |

Share: | | | | |


ವಕೀಲರೊಬ್ಬರ ಮೇಲೆ ಪೊಲೀಸರ ಹಲ್ಲೆ ಆರೋಪ

ಚಿಕ್ಕಮಗಳೂರು: ಬೈಕ್ ಓಡಿಸುವಾಗ ಹೆಲ್ಮೆಟ್ ಹಾಕಿಲ್ಲದ ಕಾರಣಕ್ಕಾಗಿ ಪೊಲೀಸರು ವಕೀಲನನ್ನು ಠಾಣೆಗೆ ಕರೆದುಕೊಂಡು ಹೋಗಿ ಮನಸ್ಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಗುರುವಾರ ರಾತ್ರಿ ಟೌನ್ ಪೊಲೀಸ್ ಠಾಣೆಯಲ್ಲಿ ನಡೆದಿತ್ತು. ಈ ಘಟನೆಯಲ್ಲಿ ಯುವ ವಕೀಲ ಎನ್.ಟಿ ಪ್ರೀತಂ ತೀವ್ರವಾಗಿ ಗಾಯಗೊಂಡಿದ್ದರು.ಈ ಘಟನೆ ಸಂಬಂಧ 6 ಪೊಲೀಸರನ್ನು ಅಮಾನುತುಗೊಳಿಸಲಾಗಿದೆ.


ಹೆಲ್ಮೆಟ್ ಹಾಕಿರದ ಕಾರಣಕ್ಕೆ ವಕೀಲನನ್ನೇ ಥಳಿಸಿದ ಘಟನೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಟೌನ್ ಪೊಲೀಸ್ ಠಾಣೆಯ ಪಿಎಸ್‌ಐ ಮಹೇಶ್ ಪೂಜಾರಿ, ಎಎಸ್‌ಐ ರಾಮಪ್ಪ, ಮುಖ್ಯ ಪೇದೆ ಶಶಿಧರ, ಪೇದೆಗಳಾದ ಗುರುಪ್ರಸಾದ್, ಬಿ.ಕೆ ನಿಖಿಲ್ ಹಾಗೂ ವಿ.ಟಿ ಯುವರಾಜ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಂ ಅಮಟೆ ಅಮಾನತುಗೊಳಿಸಿ ಶುಕ್ರವಾರ ಆದೇಶಿಸಿದ್ದಾರೆ.ಗುರುವಾರ ರಾತ್ರಿ ಯುವ ವಕೀಲ ಪ್ರೀತಂ ಮಾರ್ಕೆಟ್ ರಸ್ತೆಯಲ್ಲಿ ಬೈಕಿನಲ್ಲಿ ಹೋಗುತ್ತಿದ್ದಾಗ ಟೌನ್ ಠಾಣೆಯ ಮಫ್ತಿಯಲ್ಲಿದ್ದ ಪೊಲೀಸರು ಬೈಕ್ ನಿಲ್ಲಿಸಿ ಹೆಲ್ಮೆಟ್ ಎಲ್ಲಿ ಎಂದು ಕೇಳುತ್ತಲೇ ಬೈಕಿನ ಕೀಯನ್ನು ತೆಗೆದುಕೊಂಡು, ಪೊಲೀಸ್ ಠಾಣೆ ಒಳಗೆ ಹೋಗಿದ್ದಾರೆ. ಠಾಣೆಯೊಳಗೆ ಹೋಗುತ್ತಿದ್ದಂತೆ ಪೊಲೀಸರು ಲಾಠಿ, ಪೈಪ್ ಗಳಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎನ್ನಲಾಗಿದೆ. ಈ ಘಟನೆ ಸಂಬಂಧ ಡಿ.5ರೊಳಗೆ ವರದಿ ನೀಡುವಂತೆ ಹೈಕೋರ್ಟ್ ಸೂಚಿಸಿದೆ.

1 ತಿಂಗಳಿನಿಂದ ನಾಪತ್ತೆಯಾಗಿದ್ದ ಡಾ.ಬ್ರೋ ಎಲ್ಲಿದ್ದಾರೆ ಗೊತ್ತಾ? ಇಲ್ಲಿದೆ ಉತ್ತರ

Posted by Vidyamaana on 2023-12-16 15:08:12 |

Share: | | | | |


1 ತಿಂಗಳಿನಿಂದ ನಾಪತ್ತೆಯಾಗಿದ್ದ ಡಾ.ಬ್ರೋ ಎಲ್ಲಿದ್ದಾರೆ ಗೊತ್ತಾ? ಇಲ್ಲಿದೆ ಉತ್ತರ

DrBro, ನಮಸ್ಕಾರ ದೇವ್ರು ಅಂತಲೇ ವಿಡಿಯೋ ಶುರು ಮಾಡುವ ಗಗನ್ ಶ್ರೀನಿವಾಸನ್ ಯೂಟ್ಯೂಬ್ ನೋಡೋ ಜನರು ಮಾತ್ರವಲ್ಲ ಸೋಷಿಯಲ್ ಮೀಡಿಯಾ ಬಳಸೋ ಎಲ್ಲರಿಗೂ ಅತ್ಯಂತ ಅಚ್ಚು ಮೆಚ್ಚು ಅಂತಲೇ ಹೇಳಬಹುದುಕಳೆದೊಂದು ತಿಂಗಳಿಂದ ಒಂದೇ ಒಂದು ವಿಡಿಯೋ ಸಹ ಹಾಕದೆ ಎಲ್ಲಿದ್ದಾರೆ ಎಂಬ ಮಾಹಿತಿಯೂ ಇಲ್ಲದೆ ಅವರ ಅಭಿಮಾನಿಗಳು, ನೆಟ್ಟಿಗರು ಆತಂಕಕ್ಕೂ ಒಳಗಾಗಿದ್ದಾರೆ.ಕಳೆದ ಚೀನಾ ಪ್ರವಾಸ ಕೈಗೊಂಡಿದ್ದ ಅವರು ಇದಾದ ಬಳಿಕ ಒಂದೂ ವಿಡಿಯೋ ಹಂಚಿಕೊಂಡಿಲ್ಲ.


ಇನ್ನು ಇದೀಗ ಡಾ ಬ್ರೋ(Dr Bro) ಕಳೆದ ಒಂದು ತಿಂಗಳಿನಿಂದ ವಿಡಿಯೋ ಮಾಡಿಲ್ಲ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಇದನ್ನ ನೋಡೊದ ಗಗನ್ ಅವ್ರು ಅಭಿಮಾನಿಗಳು ಹಾಗೂ ನೆಟ್ಟಿಗರು ನಾಪತ್ತೆಯಾಗಿದ್ದಾರೆ ಗಗನ್ ಅಂತ ಸುದ್ದಿ ಹಬ್ಬಿಸಿದ್ರು. ಮಾಧ್ಯಮದವರು ಕೂಡ ಚೀನಾ ದೇಶದ ವಿಡಿಯೋ ಮಾಡಿ ಡಾ. ಬ್ರೋ ತೊಂದ್ರೇಗೆ ಸಿಲುಕಿದ್ದಾರೆ ಅಂತ ಹೇಳಿದ್ರು ಆದ್ರೆ ಇದೀಗ ಡಾ. ಬ್ರೋ ಬಗ್ಗೆ ಹೊಸ ಸುದ್ದಿಯೊಂದು ಸ್ಯಾಂಡಲ್ವುಡ್ ನಲ್ಲಿ ಹರಿದಾಡುತ್ತಿದ್ದೂ, ನಟ ಶೈನ್ ಶೆಟ್ಟಿ ಈ ಕುರಿತ ವಿಚಾರವೊಂದನ್ನ ಹಂಚಿಕೊಂಡಿದ್ದಾರೆ. ಹಾಗಾದ್ರೆ ಗಗನ್ ಎಲ್ಲಿದ್ದಾರೆ ಏನ್ ಮಾಡ್ತಿದ್ದಾರೆ? ಗಗನ್ ಬಗ್ಗೆ ಶೈನ್ ಶೆಟ್ಟಿ ಹೇಳಿದ್ದೇನು ನೋಡೋಣ ಬನ್ನಿ.ಡಾಕ್ಟರ್​​ ಬ್ರೋ(Dr Bro) ಅವ್ರ ನಿಜವಾದ ಹೆಸರು ಗಗನ್ ಶ್ರೀನಿವಾಸ್. ಇವ್ರು ಮೂಲತಃ ಬೆಂಗಳೂರಿನ ಹೊರವಲಯದವರು. ಹುಟ್ಟಿ ಬೆಳದದ್ದು ಮದ್ಯಮ‌ ವರ್ಗದ ಕುಟುಂಬದಲ್ಲಿ.ಇವ್ರ ತಂದೆ ಶ್ರೀನಿವಾಸ್​ ದೇವಸ್ಥಾನದಲ್ಲಿ ಅರ್ಚಕರಾಗಿ ಕೆಲಸ ಮಾಡುತ್ತಾರೆ. ತಾಯಿಯ ಹೆಸರು ಪದ್ಮಾ ಅವರು ಮನೆಯಲ್ಲಿಯೆ ಇರುತ್ತಾರೆ. ಇನ್ನು ಗಗನ್ ಎರಡನೆ ತರಗತಿಯಲ್ಲಿ ಓದುತ್ತಿರುವಾಗಲೇ ಪೌರೋಹಿತ್ಯ ಕಲಿತು, ತಂದೆ ಇಲ್ಲದ ಸಮಯದಲ್ಲಿ ತಾವೇ ದೇವಸ್ಥಾನದ ಪೂಜೆ ಮಾಡುತ್ತಿದ್ದರು. ಡಾ ಬ್ರೋಗೆ ಓದಿನಲ್ಲಿ ಆಸಕ್ತಿ ಇರಲಿಲ್ಲ. ಹೀಗಾಗಿ ಯಾವಾಗಲೂ ಹಾಡು, ಡ್ಯಾನ್ಸ್​​ ನಿರೂಪಣೆಯಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದರಿಂದ ಓದಿನ ಬಗ್ಗೆ ಹೆಚ್ಚಿನ ಗಮನ ಕೊಡುತ್ತಿರಲಿಲ್ಲ. ಹೀಗಾಗಿ ಭರತನಾಟ್ಯ ಕಲಿತು ಭರತನಾಟ್ಯ ಕ್ಲಾಸ್‌ ಕೂಡ ನಡೆಸುತ್ತಿದ್ದರು. ಇನ್ನು ನಂತರದಲ್ಲಿ ಫೋಟೋಗ್ರಾಫಿ ವಿಡಿಯೋ ಗ್ರಾಫಿ ಕಲಿಯುತ್ತಾರೆ.ಇದಾದ ನಂತರ 2016 ರಲ್ಲಿ ತನ್ನದೇ ಆದ ಡಾಕ್ಟರ್​​ ಬ್ರೋ ಯೂಟ್ಯೂಬ್‌ ಚಾನೆಲ್ ಶುರು ಮಾಡಿದ್ರು. ಪ್ರಾರಂಭದಲ್ಲಿ ಕಾಮಿಡಿ ವಿಡಿಯೋವನ್ನು ಮಾಡಿ ಅಪ್ಲೋಡ್ ಮಾಡಿ ಸ್ವಲ್ಪ ಮಟ್ಟಿನ ಜನಪ್ರಿಯತೆ ಪಡೆದುಕೊಂಡ್ರು. ನಂತರ ಸಿನಿಮಾ ನಟ ನಟಿಯರ ಇಂಟರ್ವ್ಯೂ ಮಾಡಿ ಹಾಕುತ್ತಿದ್ರು. ಇದೆಲ್ಲಾ ಆದ ನಂತರ ಇದೀಗ ಡಾ. ಬ್ರೋ ವಿಡಿಯೋಗಳು ಸಿಕ್ಕಾಪಟ್ಟೆ ಟ್ರೆಂಡ್ ಆಗ್ತಿದೆ ಕಾರಣ ರಾಜ್ಯದ ಬೇರೆ ಬೇರೆ ಕಡೆ ಸುತ್ತಾಡಿ ಅಲ್ಲಿನ‌ ವಿವರ ಕೊಡಲು ಶುರುಮಾಡಿ, ಅಂತರಾಜ್ಯ, ದೇಶ, ವಿದೇಶ ಸುತ್ತಿ ಅಲ್ಲಿನ ಆಚಾರ ವಿಚಾರ ಅವ್ರ ಜೀವನ ಶೈಲಿ ಆಹಾರ ಪದ್ಧತಿ ಸೇರಿದಂತೆ ಎಲ್ಲವನು ಕೂಡ ನೋಡುಗರು ಮುಂದೆ ತಂದಿಡುತ್ತಿದ್ರು. ಇಂತ ವಿಷಯಗಳಿಂದಲೇ ಡಾ. ಬ್ರೋ ಗೆ ಅಭಿಮಾನಿ ವರ್ಗ ಹೆಚ್ಚಾಗಿದೆ. ದೇಶ ಮಾತ್ರ ಅಲ್ಲಾ ಪ್ರಪಂಚದಾದ್ಯಂತ ಇದೀಗ ಡಾ. ಬ್ರೋ ಸಕತ್ ಫೇಮಸ್ ಆಗಿದ್ದರು ಆದ್ರೆ ಕಳೆದ ಒಂದು ತಿಂಗಳಿನಿಂದ ಡಾ. ಬ್ರೋ ಎಲ್ಲಿಯೂ ಕಾಣಿಸಿಲ್ಲ, ವಿಡಿಯೋನು ಮಾಡಿಲ್ಲ ಎಲ್ಲಿ ಹೋಗಿಬಿಟ್ರು ಅಂತ ಎಲ್ರು ಕೇಳ್ತಿದ್ರು ಇದೀಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದ್ದು ಡಾ ಬ್ರೋ ಎಲ್ಲಿಯೂ ಹೋಗಿಲ್ಲ ಇಲ್ಲೆ ಇದ್ದಾರೆ ನೋಡಿ ಅಂತ ಶೈನ್ ಶೆಟ್ಟಿಬರೆದುಕೊಂಡಿದ್ದಾರೆ

ಕೊಪ್ಪಳದಲ್ಲಿ ವಿದ್ಯುತ್ ಬಿಲ್ ವಸೂಲಿಗೆ ಹೋದ ಲೈನ್​ಮ್ಯಾನ್​ಗೆ ಚಪ್ಪಲಿಯಿಂದ ಹಲ್ಲೆ

Posted by Vidyamaana on 2023-05-24 07:18:31 |

Share: | | | | |


ಕೊಪ್ಪಳದಲ್ಲಿ ವಿದ್ಯುತ್ ಬಿಲ್ ವಸೂಲಿಗೆ ಹೋದ ಲೈನ್​ಮ್ಯಾನ್​ಗೆ ಚಪ್ಪಲಿಯಿಂದ ಹಲ್ಲೆ

 ಕೊಪ್ಪಳ: ರಾಜ್ಯದಲ್ಲಿ ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ವಿದ್ಯುತ್​ ಬಿಲ್​ ವಿಚಾರದಲ್ಲಿ ಲೈನ್​ಮ್ಯಾನ್​ ಮತ್ತು ಜನಸಾಮಾನ್ಯರ ನಡುವೆ ಜಟಾಪಟಿಗಳು ನಡೆಯುತ್ತಿದೆ. ಅಧಿಕಾರಕ್ಕೆ ಬಂದರೆ 200 ಯೂನಿಟ್​ ಉಚಿತ ಎಂದು ಕಾಂಗ್ರೆಸ್​ ಹೇಳಿತ್ತು.ಇದೀಗ ಕಾಂಗ್ರೆಸ್​ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಕೆಲ ಜನರು ವಿದ್ಯುತ್​ ಬಿಲ್​ ಕಟ್ಟುವುದಿಲ್ಲ ಎಂದು ಲೈನ್​ಮ್ಯಾನ್​ಗಳ ಜತೆ ಜಗಳಕ್ಕೆ ಇಳಿದಿದ್ದಾರೆ.

ಇಷ್ಟು ದಿನ ಬರೀ ಮಾತಿನಲ್ಲಿ ನಡೆಯುತ್ತಿದ್ದ ಜಗಳ ಇಂದು ಹಲ್ಲೆ ಮಾಡುವ ಮಟ್ಟಿಗೆ ಬೆಳೆದಿರುವುದು ನಿಜಕ್ಕೂ ಆತಂಕಕಾರಿ ಸಂಗತಿಯಾಗಿದೆ. ಕೊಪ್ಪಳದ ಕುಕನಪಲ್ಲಿ ಗ್ರಾಮದಲ್ಲಿ ವಿದ್ಯುತ್​ ಬಿಲ್​ ವಸೂಲಿಗೆ ಬಂದ ಲೈನ್​ಮ್ಯಾನ್​ ಮೇಲೆ ವ್ಯಕ್ತಿಯೊಬ್ಬ ಅವಾಚ್ಯ ಶಬ್ದದಿಂದ ನಿಂದಿಸಿದ್ದಲ್ಲದೆ, ಚಪ್ಪಲಿಯಿಂದ ಹೊಡೆದು ಹಲ್ಲೆ ಮಾಡಿದ್ದಾನೆ.ವಿದ್ಯುತ್​ ಉಚಿತ ಅಂತ ಹೇಳಿದ್ದಾರೆ 

ಕಳೆದ ಆರು ತಿಂಗಳಿನಿಂದ ಚಂದ್ರಶೇಖರಯ್ಯ ಎಂಬುವವರು ವಿದ್ಯುತ್​ ಬಿಲ್ ಬಾಕಿ ಉಳಿಸಿಕೊಂಡಿದ್ದರು. ಬಿಲ್​ ಪಾವತಿ ಮಾಡದ ಹಿನ್ನೆಲೆಯಲ್ಲಿ ಬಿಲ್​ ವಸೂಲಾತಿಗೆಂದು ಅವರ ಮನೆಗೆ ಲೈನ್​ಮ್ಯಾನ್​ ಮಂಜುನಾಥ್​ ಎಂಬುವರು ತೆರಳಿದ್ದರು. ಬಿಲ್​ ಪಾವತಿಸುವಂತೆ ಚಂದ್ರಶೇಖರಯ್ಯ ಅವರನ್ನು ಕೇಳಿದರೆ, ಆತ ನಾನು ಯಾವುದೇ ಕಾರಣಕ್ಕೂ ವಿದ್ಯುತ್ ಬಿಲ್​ ಕಟ್ಟುವುದಿಲ್ಲ. ವಿದ್ಯುತ್​ ಉಚಿತ ಅಂತ ಹೇಳಿದ್ದಾರೆ ಎಂದು ವಾಗ್ವಾದಕ್ಕೆ ಇಳಿದನು.

ಚಪ್ಪಲಿಯಿಂದ ಹಲ್ಲೆ ಸರ್ಕಾರ ಇನ್ನು ಅಧಿಕೃತವಾಗಿ ಜಾರಿ ಮಾಡಿಲ್ಲ. ಜಾರಿ ಮಾಡಿದ ಬಳಿಕ ನೋಡೋಣ, ಸದ್ಯಕ್ಕೆ ಹಳೆಯ ಬಿಲ್​ ಅನ್ನು ಪಾವತಿಸಿ ಎಂದು ಮಂಜುನಾಥ್​ ಕೇಳಿದ್ದಾರೆ. ಆದರೆ, ಬಿಲ್​ ಕಟ್ಟಲು ಒಪ್ಪದ ಚಂದ್ರಶೇಖರಯ್ಯ,ಅವಾಚ್ಯ ಶಬ್ದಗಳಿಂದ ಮಂಜುನಾಥ್​ರನ್ನು ನಿಂದಿಸಿದ್ದಾರೆ. ಬಳಿಕ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಮಂಜುನಾಥ್​ ಮೇಲೆ ಚಂದ್ರಶೇಖರಯ್ಯ ಚಪ್ಪಲಿಯಿಂದ ಹಲ್ಲೆ ಮಾಡಿ, ದುರ್ವರ್ತನೆ ತೋರಿದ್ದಾರೆ.ಹಲ್ಲೆ ನಡೆಸಿದ ಚಂದ್ರಶೇಖರಯ್ಯ ವಿರುದ್ಧ ಮಂಜುನಾಥ್​ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ

ಅಂಕೋಲಾ : ರಿಕ್ಷಾ ಢಿಕ್ಕಿಯಾಗಿ ಗರ್ಭಿಣಿ ಶೋಭಾ ಮೃತ್ಯು

Posted by Vidyamaana on 2023-04-13 06:15:49 |

Share: | | | | |


ಅಂಕೋಲಾ : ರಿಕ್ಷಾ ಢಿಕ್ಕಿಯಾಗಿ ಗರ್ಭಿಣಿ ಶೋಭಾ ಮೃತ್ಯು

ಅಂಕೋಲಾ : ಗರ್ಭಿಣಿ ಮಹಿಳೆಯೋರ್ವಳಿಗೆ ರಿಕ್ಷಾ ಬಡಿದು ಸ್ಥಳದಲ್ಲೇ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಭಾವಿಕೇರಿಯಲ್ಲಿ ಸಂಭವಿಸಿದೆ. ಶೋಭಾ ಗೋಪಾಲ ನಾಯಕ (28) ಮೃತ ದುರ್ದೈವಿ ಮಹಿಳೆಯಾಗಿದ್ದಾಳೆ.


ಸುಮಾರು 3-4 ತಿಂಗಳ ಗರ್ಭಿಣಿಯಾಗಿದ್ದ ಈಕೆ ತನ್ನ ಮನೆ ಮುಂದಿನ ಟಾರ ರಸ್ತೆ ಪಕ್ಕದ ಕಚ್ಚಾ ಮಣ್ಣಿನ ರಸ್ತೆಯಲ್ಲಿ ತನ್ನ ಗಂಡ ವೈಭವ ನಾಯಕ ಈತನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಜವರಾಯನಂತೆ ಬಂದ ರಿಕ್ಷಾ ಚಾಲಕ ಅತಿ ವೇಗ ಹಾಗೂ ನಿರ್ಲಕ್ಷದಿಂದ ತನ್ನ ವಾಹನವನ್ನು ಚಲಾಯಿಸಿ, ಮಹಿಳೆಗೆ ಜೋರಾಗಿ ಡಿಕ್ಕಿಪಡಿಸಿದ ಪರಿಣಾಮ, ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಅಪಘಾತದ ರಭಸಕ್ಕೆ ಗರ್ಭಿಣಿ ಮಹಿಳೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾಳೆ. ಪಟ್ಟಣದ ಲಕ್ಷೇಶ್ವರ – ಕುಂಬಾರಕೇರಿ ವ್ಯಾಪ್ತಿಯ ಚಾಲಕ ಗರ್ಭಿಣಿ ಮಹಿಳೆಗೆ ಅಪಘಾತಪಡಿಸಿ ತಾನು ಚಲಾಯಿಸುತ್ತಿದ್ದ ರಿಕ್ಷಾ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ..ಅಪಘಾತ ಪಡಿಸಿದ ರಿಕ್ಷಾಕ್ಕೆ ಆತನೇ ಮಾಲಕನೇ ಅಥವಾ ತನ್ನ ಸಂಬಂಧಿಗಳ ರಿಕ್ಷಾವನ್ನು ಈತ ಚಾಲನೆ ಮಾಡುತ್ತಿದ್ದನೇ ಎಂಬ ಅನುಮಾನದ ಮಾತುಗಳು ಕೇಳಿ ಬರುತ್ತಿದ್ದು ಈ ಕುರಿತು ಪೊಲೀಸ್ ತನಿಖೆ ಮುಂದುವರೆದಿದೆ

ಮಂಗಳೂರು ಮೀನುಗಾರಿಕಾ ಬೋಟ್ ಗೆ ಆಕಸ್ಮಿಕ ಬೆಂಕಿ ತಪ್ಪಿದ ಭಾರೀ ಅನಾಹುತ

Posted by Vidyamaana on 2023-10-10 15:32:41 |

Share: | | | | |


ಮಂಗಳೂರು ಮೀನುಗಾರಿಕಾ ಬೋಟ್ ಗೆ ಆಕಸ್ಮಿಕ ಬೆಂಕಿ ತಪ್ಪಿದ ಭಾರೀ ಅನಾಹುತ

ಮಂಗಳೂರು: ಮೀನುಗಾರಿಕಾ ಬೋಟ್ ಗೆ ಆಕಸ್ಮಿಕವಾಗಿ ಬೆಂಕಿ ತಗಲಿದ ಘಟನೆ ದಕ್ಕೆ ಬಂದರ್ ಬಳಿ ಇಂದು ಬೆಳಿಗ್ಗೆ 5 ಗಂಟೆಗೆ ನಡೆದಿದೆ.

ಲಂಗರು ಹಾಕಿದ್ದ ದೋಣಿಯಲ್ಲಿದ್ದ ಡೀಸೆಲ್ ಗೆ ಬೆಂಕಿ ಹೊತ್ತಿಕೊಂಡಿತ್ತು. ಆದರೆ ಹಗ್ಗ ಬಿಚ್ಚಿ ಬಿಟ್ಟಿದ್ದರಿಂದ ದೋಣಿ ಕೆಲವು ದೂರ ನೀರಿನಲ್ಲಿ ಸಾಗಿತ್ತು. ಹಾಗಾಗಿ ಇತರ ದೋಣಿಗಳಿಗೆ ಬೆಂಕಿ ತಗುಲುವುದು ತಪ್ಪಿದೆ’ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಾಂಡೇಶ್ವರ ಅಗ್ನಿಶಾಮಕ ದಳ ಹಾಗೂ ಕದ್ರಿ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿದ್ದಾರೆ.

ಇಂದು ಕರ್ನಾಟಕ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ -ಮಾಹಿತಿ ಕಾರ್ಯಾಗಾರ

Posted by Vidyamaana on 2023-07-12 03:12:42 |

Share: | | | | |


ಇಂದು ಕರ್ನಾಟಕ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ -ಮಾಹಿತಿ ಕಾರ್ಯಾಗಾರ

ಪುತ್ತೂರು: ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಇದರ ಆಶ್ರಯದಲ್ಲಿ ದರ್ಬೆ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ - ಮಾಹಿತಿ ಕಾರ್ಯಾಗಾರವು ಜು.12ರಂದು ಸಂತ ಫಿಲೋಮಿನಾ ಪ. ಪೂ. ಕಾಲೇಜಿನ ಸಿಲ್ವರ್ ಜುಬಿಲಿ ಸಭಾಂಗಣದಲ್ಲಿ ನಡೆಯಲಿದೆ. ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್‌ ರಾಯನ್ ಕ್ರಾಸ್ತಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಅಧ್ಯಕ್ಷ ತಿಲಕ್ ರೈ, ಕುತ್ಯಾಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ಪ್ರೆಸ್‌ ಕ್ಲಬ್‌ ಅಧ್ಯಕ್ಷ ಪಿ.ಬಿ ಹರೀಶ್ ರೈ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ. ಸಂತ ಫಿಲೋಮಿನ ಕಾಲೇಜಿನ ಕ್ಯಾಂಪಸ್ ಡೈರೆಕ್ಟರ್ ರೆ, ಫಾ. ಸ್ಟಾನಿ ಪಿಂಟೋ, ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸುದೇಶ್‌ ಕುಮಾರ್ ಮತ್ತು ಜಿಲ್ಲಾ ಉಪಾಧ್ಯಕ್ಷ ಡಾ|ಶಿವಶರಣ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Recent News


Leave a Comment: