ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಸುದ್ದಿಗಳು News

Posted by vidyamaana on 2024-07-25 16:43:22 |

Share: | | | | |


ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

 ಮುಂಬೈ: ಇಂಜಿನಿಯರ್ ಒಬ್ಬರು ತಮ್ಮ ಕಾರನ್ನು ಅಟಲ್ ಸೇತುವಿನಲ್ಲಿ ನಿಲ್ಲಿಸಿ ಸೇತುವೆಯಿಂದ ಕೆಳಗೆ ಹಾರಿದ್ದಾರೆ. ಈ ದೃಶ್ಯ ಅಲ್ಲಿ ಇದ್ದ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ.

ಸೇತುವೆಯಿಂದ ಕೆಳಗೆ ಹಾರಿದವರನ್ನು ಡೊಂಬಿವಿಲಿಯ ಪಲ್ಲವ ನಗರದ ನಿವಾಸಿ ಕರ್ತುರಿ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಇವರು ತಮ್ಮ ಪತ್ನಿ ಹಾಗೂ ಮಗಳೊಂದಿಗೆ ವಾಸ ಮಾಡುತ್ತಿದ್ದರು.

ಮಧ್ಯಾಹ್ನ 12.35ರ ಸುಮಾರಿಗೆ ಇವರು ತಮ್ಮ ಕಾರಿನಲ್ಲಿ ಆಟಲ್ ಸೇತು ಬ್ರಿಡ್ಜ್ ಮೇಲೆ ಬಂದಿದ್ದು, ಸೇತುವೆ ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ್ದಾರೆ. ಇದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಟೋಲ್ ಕಂಟ್ರೋಲ್‌ ರೂಮ್‌ನವರ ಗಮನಕ್ಕೆ ಬಂದಿದೆ. ಕೂಡಲೇ ಅವರು ನವಶೇವ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ.

ಕೂಡಲೇ ಎಂಟಿಹೆಚ್‌ಎಲ್‌ನಿಂದ ರಕ್ಷಣಾ ತಂಡ ಹಾಗೂ ಕರಾವಳಿ ಭದ್ರತಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಹಣಕಾಸಿನ ತೊಂದರೆಯಿಂದಲೇ ಶ್ರೀನಿವಾಸ್ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಾರಿನಲ್ಲಿ ಕೇವಲ ತನ್ನ ಪರ್ಸ್ ಮಾತ್ರ ಬಿಟ್ಟು ಶ್ರೀನಿವಾಸ್ ಸಮುದ್ರಕ್ಕೆ ಹಾರಿದ್ದಾರೆ. ಈ ಪರ್ಸ್‌ನಲ್ಲಿ ಆಧಾರ್ ಕಾರ್ಡ್‌, ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಯ ಐಡಿ ಕಾರ್ಡ್ ಇತ್ತು. ಡೆತ್‌ನೋಟ್ ಆಗಲಿ, ಫೋನ್ ಆಗಲಿ ಕಾರಿನಲ್ಲಿ ಪತ್ತೆಯಾಗಿಲ್ಲ ಎಂದ ಪೊಲೀಸ್ ಇನ್ಸ್‌ಪೆಕ್ಟರ್ ಅಂಜುಮನ್ ಬಾಗ್ವಾನ್ ಹೇಳಿದ್ದಾರೆ.

ಬಿಟೆಕ್ ಮಾಡಿದ್ದ ಶ್ರೀನಿವಾಸ್ ಮುಂಬೈನ ಲೋಧಾದಲ್ಲಿ 2023ರಲ್ಲಿ ಕೆಲ ಕಾಲ ಕೆಲಸ ಮಾಡಿದ್ದರು. ಇದಕ್ಕೂ ಮೊದಲು ಅರಬ್ ರಾಷ್ಟ್ರ ಕುವೈತ್‌ನಲ್ಲಿ ಕೆಲಸ ಮಾಡಿದ್ದರು. 2023ರಲ್ಲಿ ಮುಂಬೈಗೆ ವಾಪಸಾದ ಅವರು ಲೋಧಾ ಗ್ರೂಪ್‌ಗೆ ಕೆಲಸಕ್ಕೆ ಸೇರಿದ್ದರು. ಇದಾದ ನಂತರ ಇವರು ತಮ್ಮ ಪಾಲುದಾರರ ಜೊತೆಗೂಡಿ ಇಲೆಕ್ಟ್ರಿಕ್ ಕಂಟ್ರಾಕ್ಟ್ ಕೆಲಸ ಶುರು ಮಾಡಿದ್ದರು. ಶ್ರೀನಿವಾಸ್ ಪತ್ನಿಯಿಂದಲೂ ಪೊಲೀಸರು ಹೇಳಿಕೆ ಪಡೆದುಕೊಂಡಿದ್ದು, ಶ್ರೀನಿವಾಸ್ ಈ ಹಿಂದೆಯೂ ಕುವೈತ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಜೀವ ಕಳೆದುಕೊಳ್ಳಲು ಮುಂದಾಗಿದ್ದರು. ಈ ವೇಳೆ ಸಮಯಕ್ಕೆ ಸರಿಯಾಗಿ ಯಾರೋ ಪಾರು ಮಾಡಿದ್ದರಿಂದ ಅವರ ಜೀವ ಉಳಿದಿತ್ತು ಎಂದು ಪತ್ನಿ ಹೇಳಿದ್ದಾರೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಶ್ರೀನಿವಾಸ್ ಕಡೆಯದಾಗಿ ಸಂಬಂಧಿಕರೊಬ್ಬರ ಜೊತೆ ಮಾತನಾಡಿದ್ದು, ಈ ವೇಳೆ ಅವರು ಸಹಜವಾಗಿ ಮಾತನಾಡಿದ್ದರು ಎಂದು ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಇದುವರೆಗೂ ನೀರಿಗೆ ಹಾರಿದ ಶ್ರೀನಿವಾಸ್ ಅವರನ್ನು ಪತ್ತೆ ಮಾಡಲು ಸಾಧ್ಯವಾಗಿಲ್ಲ. ಇದು ಮೊದಲ ಪ್ರಕರಣ ಅಲ್ಲ ಈ ಹಿಂದೆ ಮಹಿಳಾ ವೈದ್ಯರೊಬ್ಬರು ಅಟಲ್ ಸೇತುವಿನಿಂದ ಕೆಳಗೆ ಹಾರಿ ತಮ್ಮ ಜೀವನವನ್ನು ಅಂತ್ಯಗೊಳಿಸಿದ್ದರು.

 Share: | | | | |


ಮಿನ್ಹಾ ಫ್ಯಾಬ್ರಿಕ್ ಸ್ಪಾಟ್ ನಲ್ಲಿ ಸ್ಟಾಕ್ ಕ್ಲಿಯರೆನ್ಸ್ ಸೇಲ್ ಡ್ರೆಸ್ ಮಳಿಗೆಯಲ್ಲಿ ಅತೀ ಕಡಿಮೆ ಬೆಲೆಗೆ ಮಾರಾಟ

Posted by Vidyamaana on 2023-06-16 06:46:10 |

Share: | | | | |


ಮಿನ್ಹಾ ಫ್ಯಾಬ್ರಿಕ್ ಸ್ಪಾಟ್ ನಲ್ಲಿ ಸ್ಟಾಕ್ ಕ್ಲಿಯರೆನ್ಸ್ ಸೇಲ್ ಡ್ರೆಸ್ ಮಳಿಗೆಯಲ್ಲಿ ಅತೀ ಕಡಿಮೆ ಬೆಲೆಗೆ ಮಾರಾಟ

ಪುತ್ತೂರು: ಪುತ್ತೂರಿನ ಡ್ರೆಸ್ ಮಳಿಗೆಗಳ ಪೈಕಿ ಪ್ರಸಿದ್ಧಿಯನ್ನು ಪಡೆದುಕೊಂಡಿರುವ ಮಿನ್ಹಾ ಫ್ಯಾಬ್ರಿಕ್ ಸ್ಪಾಟ್ ನಲ್ಲಿ ಸ್ಟಾಕ್ ಕ್ಲಿಯರೆನ್ಸ್ ಸೇಲ್ ಜೂನ್ 16ರಿಂದ ನಡೆಯಲಿದೆ.

ಅತೀ ಕಡಿಮೆ ಬೆಲೆಗೆ ಡ್ರೆಸ್ ಗಳ ಮಾರಾಟ ಇಲ್ಲಿ ನಡೆಯಲಿದ್ದು, ಗ್ರಾಹಕರ ನಿರೀಕ್ಷೆಯಂತೆಯೇ ಶುಕ್ರವಾರದಿಂದ ಈ ಸೇಲ್ ಗೆ ಚಾಲನೆ ನೀಡಲಾಗಿದೆ.

ಪುತ್ತೂರು ಕೋಟಿ – ಚೆನ್ನಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಮುಂಭಾಗದ ಶಾಲಿಮಾರ್ ಬಿಲ್ಡಿಂಗ್ ನ ಎದುರುಗಡೆ ಮಿನ್ಹಾ ಫ್ಯಾಬ್ರಿಕ್ ಸ್ಪಾಟ್ ಕಾರ್ಯಾಚರಿಸುತ್ತಿದೆ. ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಮಂಗಳೂರಿನ ಖ್ಯಾತ ಯೂರಾಲಜಿಸ್ಟ್ ಡಾ.ಜಿ.ಜಿ ಲಕ್ಷ್ಮಣ ಪ್ರಭು ಹೃದಯಾಘಾತಕ್ಕೆ ಬಲಿ

Posted by Vidyamaana on 2023-11-17 12:33:12 |

Share: | | | | |


ಮಂಗಳೂರಿನ ಖ್ಯಾತ ಯೂರಾಲಜಿಸ್ಟ್ ಡಾ.ಜಿ.ಜಿ ಲಕ್ಷ್ಮಣ ಪ್ರಭು ಹೃದಯಾಘಾತಕ್ಕೆ ಬಲಿ

ಮಂಗಳೂರು, ನ.17: ಮಂಗಳೂರಿನ ಖ್ಯಾತ ಯೂರಾಲಜಿಸ್ಟ್ (ಮೂತ್ರಶಾಸ್ತ್ರ ವಿಭಾಗ) ತಜ್ಞರಾಗಿದ್ದ ಕೆಎಂಸಿ ಆಸ್ಪತ್ರೆಯ ವೈದ್ಯ ಡಾ.ಜಿ.ಜಿ. ಲಕ್ಷ್ಮಣ ಪ್ರಭು ಹೃದಯಾಘಾತದಿಂದ ನಿಧನರಾಗಿದ್ದಾರೆ.


61 ವರ್ಷದ ಲಕ್ಷ್ಮಣ ಪ್ರಭು ಅವರು ವಾರದ ಹಿಂದೆ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿರುವಾಗಲೇ ಹೃದಯಾಘಾತಕ್ಕೆ ಒಳಗಾಗಿದ್ದರು. ಕೂಡಲೇ ಅವರನ್ನು ತೀವ್ರ ನಿಗಾ ವಿಭಾಗಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಶುಕ್ರವಾರ ಬೆಳಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ. 


ಮೂರು ದಶಕಕ್ಕೂ ಹೆಚ್ಚು ಅನುಭವ ಹೊಂದಿದ್ದ ಡಾ. ಜಿ ಜಿ ಲಕ್ಷ್ಮಣ ಪ್ರಭು ಹಲವು ವರ್ಷಗಳ ಕಾಲ ಕೆಎಂಸಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ್ದರು. ಹಲವಾರು ಸಂಕೀರ್ಣ ವೈದ್ಯಕೀಯ ಪ್ರಕರಣಗಳನ್ನು ನಿರ್ವಹಿಸಿದ್ದ ಅವರು, ಯುರೊಲಿಥಿಯಾಸಿಸ್, ಆಂಡ್ರಾಲಜಿ, ಯುರೊಡೈನಾಮಿಕ್ಸ್, ರೆಕಾನ್-ಯೂರಾಲಜಿ, ಯುರೊಜಿನೆಕಾಲಜಿ ಮತ್ತು ಎಂಡೋರಾಲಜಿಯಲ್ಲಿ ಪರಿಣತಿಯನ್ನು ಹೊಂದಿದ್ದರು. ಡಾ.ಜಿ.ಜಿ. ಲಕ್ಷ್ಮಣ ಪ್ರಭು ಅವರ ಅಕಾಲಿಕ ನಿಧನಕ್ಕೆ ಅನೇಕ ಗಣ್ಯರು, ಹಿರಿಯ , ಕಿರಿಯ ವೈದ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

ಉಪ್ಪಿನಂಗಡಿ:ಹೆರಿಗೆ ವೇಳೆ ತಾಯಿ ಮೃತಪಟ್ಟ ಬೆನ್ನಲ್ಲೇ ಹಸುಗೂಸು ಮೃತ್ಯು

Posted by Vidyamaana on 2023-06-23 01:40:56 |

Share: | | | | |


ಉಪ್ಪಿನಂಗಡಿ:ಹೆರಿಗೆ ವೇಳೆ ತಾಯಿ ಮೃತಪಟ್ಟ ಬೆನ್ನಲ್ಲೇ ಹಸುಗೂಸು ಮೃತ್ಯು

ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ (28) ಜೂ. 20ರಂದು ರಾತ್ರಿ ಹೆರಿಗೆ ಸಂದರ್ಭ ರಕ್ತಸ್ರಾವದಿಂದ ಸಾವನ್ನಪ್ಪಿದ ಬೆನ್ನಿಗೆ ಅವರ ಹಸುಕೂಸು ಗುರುವಾರ ಮುಂಜಾನೆ ಮೃತಪಟ್ಟಿದೆ.


ಭವ್ಯರವರು ತನ್ನ 3ನೇ ಹೆರಿಗೆಗಾಗಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಮಂಗಳವಾರ ರಾತ್ರಿ ಅವರು ಗಂಡು ಜನ್ಮ ನೀಡಿದ್ದು, ಹೆರಿಗೆಯಾಗುತ್ತಲೇ ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ್ದರು. ಜನಿಸಿದ ಮಗುವನ್ನು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮುಂಜಾನೆ ಮಗುವೂ ಮೃತಪಟ್ಟಿದೆ ಎನ್ನಲಾಗಿದೆ.

ಆಸ್ತಿ ವಿವಾದದಿಂದ ಕಲಬುರಗಿ ವಕೀಲ ಈರಣ್ಣಗೌಡ ಕೊಲೆ : ಆರೋಪಿ ದಂಪತಿ ಅರೆಸ್ಟ್​

Posted by Vidyamaana on 2023-12-11 07:47:50 |

Share: | | | | |


ಆಸ್ತಿ ವಿವಾದದಿಂದ ಕಲಬುರಗಿ ವಕೀಲ ಈರಣ್ಣಗೌಡ ಕೊಲೆ : ಆರೋಪಿ ದಂಪತಿ ಅರೆಸ್ಟ್​

ಕಲಬುರಗಿ: ನ್ಯಾಯವಾದಿ ಈರಣ್ಣಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ನೀಲಕಂಠರಾವ್ ಪಾಟೀಲ್ ಹಾಗೂ ಇವರ ಪತ್ನಿ ಸಿದ್ದಮ್ಮ ಪಾಟೀಲ್ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.ಡಿಸೆಂಬರ್​​ 7 ರಂದು ಕಲಬುರಗಿ ನಗರದ ಗಂಗಾವಿಹಾರ ಅಪಾರ್ಟ್​ಮೆಂಟ್​ನಲ್ಲಿ ನ್ಯಾಯವಾದಿ ಈರಣ್ಣಗೌಡ ಪಾಟೀಲ್ ಅವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಇದೀಗ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.


ಹತ್ಯೆಯ ನಾಲ್ಕೈದು ದಿನದ ಹಿಂದೆ ಕೊಲೆಗೆ ಪ್ಲಾನ್ ಮಾಡಿ ಎಲ್ಲಾ ವ್ಯವಸ್ಥೆ ಮಾಡಿದ್ರು ಎಂಬ ಆರೋಪ ಗಂಡ-ಹೆಂಡತಿ ಮೇಲಿದೆ. ಅಲ್ಲದೆ ಈರಣ್ಣಗೌಡ ಹತ್ಯೆಯಾದ ಬಳಿಕ ಆರೋಪಿ ಮಲ್ಲಿನಾಥ್ ನಾಯ್ಕೋಡಿಗೆ, ಸಿದ್ದಮ್ಮ 50 ಸಾವಿರ ಹಣ ಕೊಟ್ಟಿದ್ರು. ಕೊಲೆಯ ನಂತರ ಆರೋಪಿ ಮಲ್ಲಿನಾಥ್ ನಾಯ್ಕೋಡಿ ರಕ್ತದ ಕಲೆಯಲ್ಲಿಯೇ ಸಿದ್ದಮ್ಮ ಮನೆಗೆ ಬಂದು ಹಣ ತೆಗೆದುಕೊಂಡು ಹೋಗಿದ್ದನೆಂದು ತನಿಖೆಯಲ್ಲಿ ಬಯಲಾಗಿದೆ.ಬಂಧಿತ ನೀಲಕಂಠ ಪಾಟೀಲ್ ಹಾಗೂ ಕೊಲೆಯಾದ ನ್ಯಾಯವಾದಿ ಈರಣ್ಣಗೌಡ ಪಾಟೀಲ್ ಸಹೋದರ ಸಂಬಂಧಿಯಾಗಿದ್ದಾರೆ. ಕಲಬುರಗಿ ನಗರಕ್ಕೆ ಹೊಂದಿಕೊಂಡಂತೆ ಎಕರೆಗೆ 3ಕೋಟಿ ರೂ. ಬೆಲೆ ಬಾಳುವ 12 ಎಕರೆ ಜಮೀನು ಈರಣ್ಣಗೌಡ ಪಾಟೀಲ್​ ಅವರ ಹೆಸರಿನಲ್ಲಿ ಇತ್ತು. ಈ ಜಮೀನನ್ನು ಆರೋಪಿ ಮಲ್ಲಿನಾಥ ನಾಯ್ಕೋಡಿ ಕುಟುಂಬದವರು ನೋಡಿಕೊಳ್ಳುತ್ತಿದ್ದರು. ಈ ನಡುವೆ ಸೈಟ್ ಹಾಕಿ ಮಾರಾಟ ಮಾಡಿದ್ರೆ ಒಂದೊಂದು 30x40 ಸೈಜ್ ಸೈಟ್‌ಗೆ ಕನಿಷ್ಠ ಅಂದ್ರೂ 20 ರಿಂದ 30 ಲಕ್ಷ ರೂ. ಬೆಲೆ ಬಾಳುತ್ತದೆ. ಹೀಗಾಗಿ ತಮ್ಮ ಜಮೀನಿಗೆ ನಾನ್ ಅಗ್ರಿಕಲ್ಚರ್ (ಎನ್‌ಎ), ಜಿಡಿಎ ಮಾಡಿಸಿ ಸೈಟ್ ಆಗಿ ಪರಿವರ್ತನೆ ಮಾಡಲು ಈರಣ್ಣಗೌಡ ಪಾಟೀಲ್​ ಯೋಜಿಸಿದ್ದರು. ಆದ್ರೆ ಜಮೀನಿನಲ್ಲಿ ಪಾಲು ಬೇಕು ಎಂದು ನೀಲಕಂಠ ಪಾಟೀಲ್ ಹಾಗೂ ನಾಯ್ಕೋಡಿ ಕುಟುಂಬದವರು ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.ಕೋಟಿ ಕೋಟಿ ಮೌಲ್ಯದ ಆಸ್ತಿ‌ ಆಗಿರೋದ್ರಿಂದ ಈ ಮುಂಚೆ‌ ಕೂಡಾ ಇದೆ ವಿಚಾರವಾಗಿ ಗಲಾಟೆ, ರಾಜಿ-ಪಂಚಾಯಿತಿಗಳು ನಡೆದಿದ್ದವು. 12 ಎಕೆರೆಯಲ್ಲಿ 2 ರಿಂದ 3 ಎಕರೆನಾದರೂ ನೀಡುವಂತೆ ಆರೋಪಿಗಳು ದುಂಬಾಲು ಬಿದ್ದಿದ್ದರು. ಆದರೆ ಇದಕ್ಕೆ ಈರಣ್ಣಗೌಡ ಪಾಟೀಲ್​ ಸುತಾರಾಂ ಒಪ್ಪಿರಲಿಲ್ಲ. ಈರಣ್ಣಗೌಡ ಒಬ್ಬನೇ ಮಗ, ಹೀಗಾಗಿ ಅವನನ್ನು ಮುಗಿಸಿದರೆ ಕೋಟಿ ಕೋಟಿ ಬೆಲೆಬಾಳುವ ಜಮೀನು ತಮ್ಮದಾಗುತ್ತೆಂದು ಹಂತಕರು ಕೊಲೆಗೆ ಯೋಜನೆ ರೂಪಿಸಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.


ಡಿಸೆಂಬರ್​ 7 ರಂದು ಜಮೀನು ವ್ಯಾಜ್ಯ ಸಂಬಂಧ ಅಂತಿಮ ತೀರ್ಪು ಇತ್ತು. ಆ ದಿನ ಈರಣ್ಣಗೌಡ ಪಾಟೀಲ್ ಕೋರ್ಟ್​ಗೆ ಹೋಗುತ್ತಿದ್ದರು. ಇತ್ತ ನೀಲಕಂಠ ಪಾಟೀಲ್​ ಮತ್ತು ಅವರ ಪತ್ನಿ ಸಿದ್ದಮ್ಮ ಪಾಟೀಲ್​ ತಮ್ಮ ಹೊಸ ಕಾರ್ ಪೂಜೆಗೆಂದು ಗಾಣಗಾಪುರಕ್ಕೆ ತೆರಳಿದ್ದರು. ಪ್ರೀ ಪ್ಲಾನ್​ನಂತೆ ಮಲ್ಲಿನಾಥ, ಅವಣ್ಣ, ಭಾಗೇಶ ನಾಯ್ಕೋಡಿ ದಾರಿಯಲ್ಲಿ ಈರಣ್ಣಗೌಡ ಪಾಟೀಲ್​ ಅವರನ್ನು ಅಡ್ಡಹಾಕಿ, ಕೈಯಲ್ಲಿ ಮಚ್ಚು ಹಿಡಿದುಕೊಂಡು ಅಟ್ಟಾಡಿಸಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದರು.


ಘಟನೆ ಸಂಭವಿಸಿದ 24 ಗಂಟೆಯಲ್ಲೇ ಮೂವರು ಆರೋಪಿಗಳನ್ನು ಬಂಧನ ಮಾಡಲಾಗಿದೆ. ನಿನ್ನೆ ದಿನ ಮತ್ತಿಬ್ಬರು ಆರೋಪಿಗಳನ್ನು ಬಂಧನ ಮಾಡಲಾಗಿದೆ. ಸದ್ಯ ಎಲ್ಲಾ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಪಡೆಯಲಾಗಿದೆ. ಬಂಧಿತರನ್ನು ಸಂಪೂರ್ಣವಾಗಿ ವಿಚಾರಣೆ ಮಾಡಿದ ಬಳಿಕ ನ್ಯಾಯಾಲಯಕ್ಕೆ ಅಂತಿಮ ವರದಿ ನೀಡಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಚೇತನ್ ಆರ್​ ತಿಳಿಸಿದ್ದಾರೆ.

ಆ. 19ರಂದು ಕೊಣಾಜೆ ಪಿಎ ಕಾಲೇಜಿನಲ್ಲಿ ಗ್ಯಾಜ್ಯುವೇಷನ್ ಡೇ

Posted by Vidyamaana on 2023-08-18 15:27:26 |

Share: | | | | |


ಆ. 19ರಂದು ಕೊಣಾಜೆ ಪಿಎ ಕಾಲೇಜಿನಲ್ಲಿ ಗ್ಯಾಜ್ಯುವೇಷನ್ ಡೇ

ಮಂಗಳೂರು: ಕೊಣಾಜೆ ಪಿಎ ಕಾಲೇಜ್ ಆಫ್ ಇಂಜಿನಿಯರಿಂಗ್’ನಲ್ಲಿ ಆ. 19ರಂದು ಬೆಳಿಗ್ಗೆ 9.30ಕ್ಕೆ ಪೇಸ್ ಅಡಿಟೋರಿಯಂನಲ್ಲಿ 2019-2023ರ ಬ್ಯಾಚ್ ಸ್ಟೂಡೆಂಟ್’ಗಳ ಗ್ರಾಜ್ಯುವೇಷನ್ ಡೇ ನಡೆಯಲಿದೆ.

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಮುಖ್ಯ ಅತಿಥಿಯಾಗಿರುವರು. ಸುರತ್ಕಲ್ ಎನ್.ಐ.ಟಿ.ಕೆ. ಇದರ ಸಿ.ಎಸ್.ಇ. ವಿಭಾಗದ ಡಾ. ಮೋಹಿತ್ ಪಿ. ತಹಿಲಿಯಾನಿ ಗೌರವ ಅತಿಥಿಯಾಗಿರುವರು. ಸಂಸ್ಥೆಯ ಟ್ರಸ್ಟಿಗಳಾದ ಅಬ್ದುಲ್ ಲತೀಫ್, ಮೊಹಮ್ಮದ್ ಶಾಫಿ, ಮುಹಮ್ಮದ್ ಅಮೀನ್ ಇಬ್ರಾಹಿಂ, ಮುಹಮ್ಮದ್ ಸಲ್ಮಾನ್ ಇಬ್ರಾಹಿಂ, ಜುಬೈರ್ ಇಬ್ರಾಹಿಂ, ಬಿಲಾಲ್ ಇಬ್ರಾಹಿಂ, ಆದಿಲ್ ಇಬ್ರಾಹಿಂ, ಸಂಸ್ಥೆಯ ನಿರ್ದೇಶಕ ಅಹ್ಮದ್ ಕುಟ್ಟಿ, ಬೆಂಗಳೂರು ಪ್ರೆಸಿಡೆನ್ಸಿ ಯೂನಿವರ್ಸಿಟಿಯ ಡೀನ್ ಡಾ. ಅಬ್ದುಲ್ ಶರೀಫ್ ಉಪಸ್ಥಿತರಿರುವರು.

ಮಧ್ಯಾಹ್ನ 2 ಗಂಟೆಗೆ ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಅಬ್ದುಲ್ಲ ಇಬ್ರಾಹಿಂ ಅಧ್ಯಕ್ಷತೆ ವಹಿಸಲಿದ್ದು, ಮಂಗಳೂರು ವಿಶ್ವವಿದ್ಯಾಲಯದ (ಈವ್ಯಾಲ್ಯುವೇಷನ್) ರಿಜಿಸ್ಟ್ರಾರ್ ಡಾ. ರಾಜು ಕೃಷ್ಣ ಚಲನ್ನವರ್ ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಆ. 31ರಂದು 14ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ, ಶೋಭಾಯಾತ್ರೆ

Posted by Vidyamaana on 2024-08-23 10:56:55 |

Share: | | | | |


ಆ. 31ರಂದು 14ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ, ಶೋಭಾಯಾತ್ರೆ

ಪುತ್ತೂರು: ವಿಶ್ವ ಹಿಂದೂ ಪರಿಷದ್, ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆ ಅಂಗವಾಗಿ 14ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ ಆ. 31ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಉತ್ಸವ ಸಮಿತಿ ಅಧ್ಯಕ್ಷೆ ಕೃಷ್ಣವೇಣಿ ಮುಳಿಯ ಹೇಳಿದರು.



Leave a Comment: