ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

ಸುದ್ದಿಗಳು News

Posted by vidyamaana on 2024-07-24 22:11:50 |

Share: | | | | |


ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

‌ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು.ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ 8 ದಿನಗಳ ಬಳಿಕ ಮಂಗಳವಾರ ಸಿಕ್ಕಿದ್ದು ಪೋಸ್ಟ್ ಮಾರ್ಟಂ ಬಳಿಕ ಮೃತದೇಹವನ್ನು ಮನೆಯಿದ್ದ ಜಾಗಕ್ಕೆ ಸಾಗಿಸಿ ಅಂತಿಮ ಸಂಸ್ಕಾರ ನಡೆಸಲು ಪತ್ರಕರ್ತರಾದ ಶಶಿ ಬೆಳ್ಳಾಯರು, ಮೋಹನ್ ಕುತ್ತಾರ್, ಆರಿಫ್ ಯು.ಆರ್. ಗಿರೀಶ್ ಮಳಲಿ ಹಾಗೂ ಶಿವಶಂಕರ್ ನೆರವಾಗಿದ್ದರು

ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದನ್ನು ಗಮನಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಂದ ಪತ್ರಕರ್ತರ ಮಾಹಿತಿ ಪಡೆದು ಕಚೇರಿಯಲ್ಲಿ ಸನ್ಮಾನಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಅವರು ಜಿಲ್ಲಾಧಿಕಾರಿಯವರಿಗೆ ಪತ್ರಕರ್ತರ ಪರಿಚಯ ಮಾಡಿಕೊಟ್ಟರು.


ಬಳಿಕ ಮಾತಾಡಿದ ಜಿಲ್ಲಾಧಿಕಾರಿ ಅವರು, ನಿಮ್ಮ ಈ ಕಾರ್ಯ ಶ್ಲಾಘನೀಯವಾಗಿದೆ. ಇದೊಂದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆ ತರುವಂತಹ ಕಾರ್ಯ. ಮುಂದೆಯೂ ಇಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಿ, ಏನಾದರೂ ಅಗತ್ಯ ನೆರವು ಬೇಕಾದಲ್ಲಿ ಜಿಲ್ಲಾಡಳಿತ ನಿಮ್ಮ ಜೊತೆಗಿದೆ. ನಿಮ್ಮಂತಹ ಉತ್ಸಾಹಿ ತರುಣರ ಅವಶ್ಯಕತೆ ಸಮಾಜಕ್ಕೆ ಇದೆ ಎಂದು ಬೆನ್ನುತಟ್ಟಿದರು. ಅಲ್ಲದೇ ಶಿರೂರು ಮತ್ತು ಉಳುವರೆ ಗ್ರಾಮದ ಸದ್ಯದ ಸ್ಥಿತಿಗತಿಯ ಬಗ್ಗೆ ಪತ್ರಕರ್ತರಿಂದ ಮಾಹಿತಿ ಪಡೆದರು

 Share: | | | | |


ಶೋಭಕ್ಕನ ಕಾರಿನ ಡೋರಿಗೆ ಗುದ್ದಿ ರಸ್ತೆಗೆ ಬಿದ್ದ ಯುವಕನ ಮೇಲೆ ಹರಿದ ಲಾರಿ

Posted by Vidyamaana on 2024-04-08 19:48:49 |

Share: | | | | |


ಶೋಭಕ್ಕನ ಕಾರಿನ ಡೋರಿಗೆ ಗುದ್ದಿ ರಸ್ತೆಗೆ ಬಿದ್ದ ಯುವಕನ ಮೇಲೆ ಹರಿದ ಲಾರಿ

ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಕಾರಿಗೆ ಸವಾರನೊಬ್ಬ ಬಲಿಯಾಗಿದ್ದಾನೆ. ಟಿಸಿ ಪಾಳ್ಯ ನಿವಾಸಿ ಪ್ರಕಾಶ್ (35) ಮೃತ ದುರ್ದೈವಿ. ಬೆಂಗಳೂರಿನ ಕೆ.ಆರ್ ಪುರಂ ಸಮೀಪದ‌ ದೇವಸಂದ್ರ ವಿನಾಯಕ‌ ದೇವಸ್ಥಾನ ಬಳಿ ಅಪಘಾತ (Ro

non

Accident) ಸಂಭವಿಸಿದೆ.

ಶೋಭಾ ಕರಂದ್ಲಾಜೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ಈ ವೇಳೆ ರಸ್ತೆ ಬದಿ ನಿಂತಿದ್ದ ಕಾರಿನ ಡೋರ್ ತೆರೆಯುವಾಗ ಹಿಂಬದಿಯಿಂದ ಬೈಕ್‌ನಲ್ಲಿ ಬಂದ ಪ್ರಕಾಶ್‌ ಗುದ್ದಿ ಕೆಳೆಗೆ ಬಿದ್ದಿದ್ದಾರೆ. ರಸ್ತೆಗೆ ಬಿದ್ದ ಪ್ರಕಾಶ್‌ ಮೇಲೆ ಖಾಸಗಿ ಬಸ್‌ ಹರಿದಿದೆ. ಗಂಭೀರ ಗಾಯಗೊಂಡ ಪ್ರಕಾಶ್‌ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಪ್ರಕಾಶ್‌ ಮೃತಪಟ್ಟಿದ್ದಾರೆ.

ಮಾವುತನನ್ನು ಸೊಂಡಲಿನಿಂದ ಬೀಳಿಸಿ, ಎರಡು ಕಾಲು ಆತನ ಮೇಲಿಟ್ಟು ನಿಂತ ಆನೆ - ಭಯಾನಕ ವಿಡಿಯೋ ವೈರಲ್

Posted by Vidyamaana on 2024-06-22 15:43:58 |

Share: | | | | |


ಮಾವುತನನ್ನು ಸೊಂಡಲಿನಿಂದ ಬೀಳಿಸಿ, ಎರಡು ಕಾಲು ಆತನ ಮೇಲಿಟ್ಟು ನಿಂತ ಆನೆ - ಭಯಾನಕ ವಿಡಿಯೋ ವೈರಲ್

ತಿರುವನಂತಪುರ: ಸಾಕಾನೆಯೊಂದು (Elephant) ಮಾವುತನನ್ನು ತುಳಿದು ಸಾವನ್ನಪಿರುವ ಭಯಾನಕ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ (CCTV Footage) ಸೆರೆಯಾಗಿದೆ. ಜೂನ್ 20 ಗುರುವಾರ ಈ ಘಟನೆ ನಡೆದಿದ್ದು, ಬೆಚ್ಚಿಬೀಳಿಸುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.ಈ ಘಟನೆ ಕೇರಳದ ಇಡುಕ್ಕಿಯಲ್ಲಿ ನಡೆದಿದೆ. ಮಾವುತನ್ನು ಸೊಂಡಿಲಿನಿಂದ ಬೀಳಿಸಿ, ಎರಡು ಕಾಲುಗಳನ್ನು ಆತನ ಮೇಲಿಟ್ಟು ನಿರ್ದಯದವಾಗಿ ಮಾವುತನನ್ನು ಕೊಂದಿರುವ ಎಲ್ಲಾ ದೃಶ್ಯಗಳು ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದೆ.

ಡೊನ್ ಬೊಸ್ಕೊ ಕ್ಲಬ್‌ನಿಂದ ಪುತ್ತೂರು, ಮರೀಲ್, ಬನ್ನೂರು ಚರ್ಚ್ ವ್ಯಾಪ್ತಿಯ ಕ್ರಿಕೆಟ್ ಆಟಗಾರರ `ಸಿಪಿಎಲ್ ಸೀಸನ್-2′ ಸಂಭ್ರಮದ ತೆರೆ

Posted by Vidyamaana on 2023-01-12 09:31:18 |

Share: | | | | |


ಡೊನ್ ಬೊಸ್ಕೊ ಕ್ಲಬ್‌ನಿಂದ ಪುತ್ತೂರು, ಮರೀಲ್, ಬನ್ನೂರು ಚರ್ಚ್ ವ್ಯಾಪ್ತಿಯ ಕ್ರಿಕೆಟ್ ಆಟಗಾರರ `ಸಿಪಿಎಲ್ ಸೀಸನ್-2′ ಸಂಭ್ರಮದ ತೆರೆ

ಪುತ್ತೂರು: ಮಾಯಿದೆ ದೇವುಸ್ ಚರ್ಚ್ ಡೊನ್ ಬೊಸ್ಕೊ ಕ್ಲಬ್ ಸಂಘಟನೆಯ ವತಿಯಿಂದ ಪುತ್ತೂರು ಮಾಯಿದೆ ದೇವುಸ್ ಚರ್ಚ್, ಮರೀಲ್ ಸೆಕ್ರೇಡ್ ಹಾರ್ಟ್ ಚರ್ಚ್ ಹಾಗೂ ಬನ್ನೂರು ಸಂತ ಅಂತೋನಿ ಚರ್ಚ್ ವ್ಯಾಪ್ತಿಯ ಕ್ರಿಶ್ಚಿಯನ್ ಸಮುದಾಯದ ಕ್ರಿಕೆಟ್ ಆಟಗಾರರನ್ನೊಳಗೊಂಡ `ಕ್ರಿಶ್ಚಿಯನ್ ಪ್ರೀಮಿಯರ್ ಲೀಗ್(ಸಿಪಿಎಲ್) 2023-ಸೀಸನ್ 2 ‘ .8  ರಂದು ದರ್ಬೆ ಸಂತ ಫಿಲೋಮಿನಾ ಕಾಲೇಜಿನ ಐತಿಹಾಸಿಕ ಕ್ರೀಡಾಂಗಣದಲ್ಲಿ ಜರಗಿದ್ದು, ಕ್ರಿಕೆಟ್ ಪಂದ್ಯಾಟವು ಇದೀಗ ಸಂಭ್ರಮದ ತೆರೆ ಕಂಡಿದೆ.

 

 

ಮರ ಬಿದ್ದು ಮನೆ ಸಂಪೂರ್ಣ ಜಖಂ

Posted by Vidyamaana on 2023-07-06 08:04:52 |

Share: | | | | |


ಮರ ಬಿದ್ದು ಮನೆ ಸಂಪೂರ್ಣ ಜಖಂ

ಪುತ್ತೂರು: ಭಾರೀ ಮಳೆಗೆ ಮರ ಬಿದ್ದು ಸಂಪೂರ್ಣ ಹಾನಿಗೊಳಗಾಗಿದ್ದ ಮನೆಯನ್ನು ಶಾಸಕ ಅಶೋಕ್ ರೈ ಅಬಿಮಾನಿ ಬಳಗದವರು 24 ಗಂಟೆಯೊಳಗೆ ದುರಸ್ಥಿ ಮಾಡಿಸಿದ್ದಾರೆ.

ಮುಂಡೂರು ಗ್ರಾಮದ ಸಿಂಹವನ ನಿವಾಸಿ ಮಲ್ಲು ಎಂಬವರ ಮನೆಯ ಅಂಗಳದಲ್ಲಿದ್ದ ಭಾರೀ ಗಾತ್ರದ ಮರವೊಂದು ಮುರಿದು ಬಿದ್ದು ಮಲ್ಲು ಅವರ ಸಿಮೆಂಟ್ ಶೀಟ್ ಆಳವಡಿಸಲಾಗಿದ್ದ ಮನೆ ಸಂಪೂರ್ಣ ಜಂಖಂಗೊಂಡಿತ್ತು. ಮನೆ ವಾಸ್ತವ್ಯಕ್ಕೆ ಅಯೋಗ್ಯವಾಗಿತ್ತು. ರಾತ್ರೋ ರಾತ್ರಿ ಮರವನ್ನು ಅಬಿಮಾನಿ ಬಳಗದವರು ತೆರವು ಮಡಿದ ಬಳಿಕ ಮನೆಯನ್ನು ದುರಸ್ಥಿಮಾಡಿಸಿದ್ದಾರೆ. ಘಟನ ಸ್ಥಳಕ್ಕೆ ಪುತ್ತೂರು ತಹಶಿಲ್ದಾರ್ ಶಿವಶಂಕರ್ ಸೇರಿದಂತೆ ಅದಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಮಳೆಗೆ ಮನೆ ಹಾನಿಯಾದರೆ ತಕ್ಷಣ ಮನೆಯನ್ನು ದುರಸ್ಥಿ ಮಾಡುವಂತೆ ಈಗಾಗಲೇ ಅಧಿಕಾರಿಗಳಿಗೆ ಶಾಸಕರು ಸೂಚನೆಯನ್ನು ನೀಡಿದ್ದು ಅದರಂತೆ ಅಬಿಮಾನಿ ಬಳಗದವರು ಮನೆಯನ್ನು ದುರಸ್ಥಿ ಮಾಡಿದ್ದಾರೆ. ತಂಡದಲ್ಲಿ ಸಿಂಹವನ ಕಾಂಗ್ರೆಸ್ ಬೂತ್ ಅಧ್ಯಕ್ಷರಾದ ದೇವರಾಜ, ಆನಂದ ಸಿಂಹವನ, ಶಿವು ಸಿಂಹವನ, ರವಿ, ಪುಟ್ಟಪ್ಪ ನಾಯ್ಕ ಸುಂದರ ನಾಯ್ಕ ಮತ್ತಿತರರು ಮನೆ ದುರಸ್ಥಿ ಮಾಡುವಲ್ಲಿ ನೆರವಾದರು.

ನಗರಸಭೆ ಉಪಚುನಾವಣೆ : ಪುತ್ತಿಲ ಪರಿವಾರದ ಅಭ್ಯರ್ಥಿಗಳಿಗೆ ಎರಡು ಕಡೆಯೂ ಮತ್ತೊಮ್ಮೆ ಬ್ಯಾಟ್ ಚಿಹ್ನೆ

Posted by Vidyamaana on 2023-12-18 20:14:00 |

Share: | | | | |


ನಗರಸಭೆ ಉಪಚುನಾವಣೆ : ಪುತ್ತಿಲ ಪರಿವಾರದ ಅಭ್ಯರ್ಥಿಗಳಿಗೆ ಎರಡು ಕಡೆಯೂ ಮತ್ತೊಮ್ಮೆ ಬ್ಯಾಟ್ ಚಿಹ್ನೆ

ಪುತ್ತೂರು: ನಗರಸಭೆಯ ಉಪಚುನಾವಣೆಗೆ ಪುತ್ತಿಲ ಪರಿವಾರದಿಂದ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಎರಡೂ ಕಡೆಯೂ ಚುನಾವಣ ಆಯೋಗ ಬ್ಯಾಟ್ ಚಿಹ್ನೆಯನ್ನು ನೀಡಿದೆ. 



ರಕ್ತೇಶ್ವರಿ ಘಟಕ ಕಬಕ ವಾರ್ಡ್ -1 ರಲ್ಲಿ ಅನ್ನಪೂರ್ಣ ರಾವ್  ಮತ್ತು ಚಿಕ್ಕಪುತ್ತೂರು ನೆಲ್ಲಿಕಟ್ಟೆ ವಾರ್ಡ್ ನಂ. 11 ರಲ್ಲಿ  ಚಿಂತನ್.ಪಿ ಪುತ್ತಿಲ ಪರಿವಾರದ ವತಿಯಿಂದ ಪಕ್ಷೇತರ ಸ್ಪರ್ಧಿಸುತ್ತಿದ್ದು ಇಬ್ಬರಿಗೂ ಚುನಾವಣೆ ಆಯೋಗ ಬ್ಯಾಟ್ ಚಿಹ್ನೆ ನೀಡಿದೆ.


ಪುತ್ತೂರಿನ ವಿಧಾನಸೌಧ ಚುನಾವಣ ಸಂದರ್ಭ ಅರುಣ್ ಕುಮಾರ್ ಪುತ್ತಿಲರಿಗೂ ಇದೇ ಚಿಹ್ನೆ ಲಭಿಸಿತ್ತು.  ಪುತ್ತೂರು ನಗರಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಸಂದರ್ಭ ಚಿಹ್ನೆ ಆಯ್ಕೆ ಸಂದರ್ಭ ಎರಡು ಕಡೆಯೂ ಅರ್ಜಿಯಲ್ಲಿ ಬ್ಯಾಟ್ ಗೆ ಮೊದಲ ಪ್ರಾಶಸ್ತ್ಯ ನೀಡಲಾಗಿತ್ತು. ಚುನಾವಣ ಆಯೋಗ ನಾಮಪತ್ರ  ಪರಿಶೀಲಿಸಿ ಬ್ಯಾಟ್ ಚಿಹ್ನೆಯನ್ನೇ ಅಧಿಕೃತಗೊಳಿಸಿದೆ.


ಡಿ.27ರಂದು ಎರಡು ತೆರವಾಗಿರುವ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ.

ಪುತ್ತೂರಿನಲ್ಲಿ ಯುವತಿಯ ಕೊಲೆ ಪ್ರಕರಣ

Posted by Vidyamaana on 2023-08-24 13:18:04 |

Share: | | | | |


ಪುತ್ತೂರಿನಲ್ಲಿ ಯುವತಿಯ ಕೊಲೆ ಪ್ರಕರಣ

ಪುತ್ತೂರು: ಪುತ್ತೂರಿನಲ್ಲಿ ಯುವತಿಯೋರ್ವಳನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಕೃತ್ಯ ನಡೆದ ಒಂದೂವರೆಗಂಟೆಯೊಳಗೆ ಬಂಧಿಸಿರುವುದು ಶ್ಲಾಘನೀಯವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಪ್ರತಿಕ್ರಿಯಿಸಿದ್ದಾರೆ.

ಪುತ್ತೂರು ನಗರದಲ್ಲಿ ಹಾಡುಹಗಲೇ ನಡೆಯಬಾರದ ಘಟನೆ ನಡೆದಿರುವುದು ಅತ್ಯಂತ ದುಖದ ವಿಚಾರವಾಗಿದೆ. ಇಂಥಹ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಎಚ್ಚರದಿಂದ ಇರಬೇಕಾಗುತ್ತದೆ. ತಮ್ಮ ಮಗಳನ್ನು ಕಳೆದುಕೊಂಡ ಕುಟುಂಬಕ್ಕೆ ನಾನು ಸಾಂತ್ವನವನ್ನು ಹೇಳುತ್ತಿದ್ದೇನೆ. ಪುತ್ತೂರು ಸೇರಿದಂತೆ ಜಿಲ್ಲೆಯ ಯಾವುದೇ ಭಾಗದಲ್ಲಿ ಅಪರಾಧ ಚಟವಟಿಕೆ ನಡೆಯದಂತೆ ಪೊಲೀಸ್ ಇಲಾಖೆ ಸದಾ ಎಚ್ಚರದಿಂದ ಇದ್ದರೂ ಈ ಕೃತ್ಯ ನಡೆದಿದೆ. ಆರೋಪಿಯನ್ನು ಬಂಧಿಸುವಲ್ಲಿ ಮುತುವರ್ಜಿವಹಿಸಿದ ಜಿಲ್ಲಾ ಎಸ್ ಪಿ ಸಿ ಬಿ ರಿಷ್ಯಂತ್ ಹಾಗೂ ಡಿವೈಎಸ್‌ಪಿ ಗಾಣಾ ಪಿ ಕುಮಾರ್ ಹಾಗೂ ಪೊಲೀಸ್ ಇಲಾಖೆಗೆ ನಾನು ಅಭಿನಂದನೆಯನ್ನು ಸಲ್ಲಿಸುತ್ತಿದ್ದೇನೆ ಎಂದು ಶಾಸಕರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.



Leave a Comment: