ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಸುದ್ದಿಗಳು News

Posted by vidyamaana on 2024-07-03 19:28:29 |

Share: | | | | |


ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು:  ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಶಾಸಕ ಅಶೋಕ್ ರೈ ಕಚೇರಿ ಮೂಲಕ ಉಚಿತ ಕಾರ್ಮಿಕ ಇ ಕಾರ್ಡು ಮಾಡಿಸಿಕೊಂಡ ಕಟ್ಟಡ ಕಾರ್ಮಿಕರಿಗೆ ಕಾರ್ಡು ವಿತರಣಾ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.

ಒಟ್ಟು ೩೪ ಮಂದಿ ಕಾರ್ಮಿಕರಿಗೆ ಕಾರ್ಡು ವಿತರಿಸಲಾಯಿತು. ಕಟ್ಟಡ ಕಾರ್ಮಿಕರು ಶಾಸಕರ ಕಚೇರಿ ಮೂಲಕ ನೋಂದಾವಣೆ ಮಾಡಿಕೊಂಡಿದ್ದರು. ಇ ಕಾರ್ಡು ವಿತರಿಸಿ ಮಾತನಾಡಿದ ಶಾಸಕರು ರಾಜ್ಯ ಸರಕಾರದಿಂದ ಕಾರ್ಮಿಕರಿಗ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ.ಆಕಸ್ಮಿಕಮರಣಾವಾದರೆ ರೂ ೧ ಲಕ್ಷ ಮತ್ತು ಅಪಘಾತದಲ್ಲಿ ಮರಣಹೊಂದಿದರೆ ೫ ಲಕ್ಷ ಸರಕಾರದಿಂದ ಪರಿಹಾರ ಸಿಗುತ್ತದೆ. ಕಾರ್ಮಿಕರು ತನ್ನ ಕಚೇರಿ ಮೂಲಕವೇ ನೋಂದಣಿ ಮಾಡಿಕೊಳ್ಳಬಹುದು. ಒಟ್ಟು ೩೦೦೦ ಮಂದಿಗೆ ಕಾರ್ಡು ವಿತರಣೆ ಮಾಡಲಾಗಿದೆ.

ಕಟ್ಟಡ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಸರಕಾರ ನೀಡುತ್ತಿದೆ. ಕಳೆದ ಸಾಲಿನಲ್ಲಿ ಉತ್ತಮ ಅಂಕಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್ ಕೂಡಾ ವಿತರಣೆ ಮಾಡಲಾಗಿದೆ. ಕಟ್ಟಡ ಕಾರ್ಮಿಕರು ಈ ಸೌಲಭ್ಯವನ್ನು ಪಡೆದುಕೊಳ್ಳುವುದರ ಜೊತೆ ಇದುವರೆಗೂ ಕಾರ್ಡು ಮಾಡಿಸದವರು ಶಾಸಕರ ಕಚೇರಿಗೆ ಬಂದು ಉಚಿತವಾಗಿ ಕಾರ್ಡು ಮಾಡಿಸಿಕೊಳ್ಳಬಹುದಾಗಿದೆ ಎಂದು ಶಾಸಕರು ತಿಳಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಮಾಧ್ಯಮ ಸಂಚಾಲಕ ಕೃಷ್ಣಪ್ರಸಾದ್ ಭಟ್ ಬೊಳ್ಳಾಯಿ ಉಪಸ್ಥಿತರಿದ್ದರು. ಸಿಬಂದಿ ರಚನಾ ಸ್ವಾಗತಿಸಿ ವಂದಿಸಿದರು.

 Share: | | | | |


ಸಿಎಂ ಸಿದ್ದರಾಮಯ್ಯ ಕುಟುಂಬದ ಕುರಿತು ಪೋಸ್ಟ್: ಬಿಜೆಪಿ ಕಾರ್ಯಕರ್ತೆ ಶಕುಂತಲಾ ವಶಕ್ಕೆ

Posted by Vidyamaana on 2023-07-28 13:20:35 |

Share: | | | | |


ಸಿಎಂ ಸಿದ್ದರಾಮಯ್ಯ ಕುಟುಂಬದ ಕುರಿತು ಪೋಸ್ಟ್: ಬಿಜೆಪಿ ಕಾರ್ಯಕರ್ತೆ ಶಕುಂತಲಾ ವಶಕ್ಕೆ

ಬೆಂಗಳೂರು: ಉಡುಪಿ ಖಾಸಗಿ ಕಾಲೇಜಿ ನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಸದಸ್ಯರನ್ನು ಉಲ್ಲೇಖಿಸಿ ಸಾಮಾಜಿಕ ತಾಣಗಳಲ್ಲಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಎನ್ನುವವರನ್ನು ಪೊಲೀಸರು ಶುಕ್ರವಾರ (ಜುಲೈ 28) ವಶಕ್ಕೆ ಪಡೆದಿದ್ದಾರೆ.


ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶಕುಂತಲಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿದ್ದಾರೆ.


ಕಾಂಗ್ರೆಸ್ ಮಾಡಿದ್ದ ”ವಿದ್ಯಾರ್ಥಿಗಳ ಮಕ್ಕಳಾಟವನ್ನು ರಾಜಕೀಯದ ಕಳ್ಳಾಟಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ” ಎಂಬ ಟ್ವೀಟ್ ಗೆ ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕೆಮರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್ ನವರ ಪ್ರಕಾರ ಮಕ್ಕಳಾಟವಂತೆ.. ಸಿದ್ದರಾಮಯ್ಯನವರ ಸೊಸೆ ಅಥವಾ ಹೆಂಡತಿಯ ವಿಡಿಯೋವನ್ನು ಇದೆ ತರ ಮಾಡಿದರೆ ಅದನ್ನು ಮಕ್ಕಳಾಟ ಅಂತ ಒಪ್ಕೋತೀರಾ?” ಎಂದು ಟ್ವೀಟ್ ಮಾಡಿದ್ದರು.


ಶಕುಂತಲಾ ಅವರನ್ನು ವಶಕ್ಕೆ ಪಡೆದಿರುವ ಕುರಿತು ಬಿಜೆಪಿ ಆಕ್ರೋಶ ಹೊರ ಹಾಕಿದೆ. ಶಕುಂತಲಾ ತುಮಕೂರಿನ ಬಿಜೆಪಿ ಸಾಮಾಜಿಕ ತಾಣದಲ್ಲಿ ಕೆಲಸ ಮಾಡುತ್ತಿದ್ದಾರೆ

ಬೆಳ್ತಂಗಡಿ : ಸರಕಾರಿ ಬಸ್ ನಲ್ಲಿ ಯುವತಿಗೆ ಕಿರುಕುಳ

Posted by Vidyamaana on 2023-07-30 04:28:23 |

Share: | | | | |


ಬೆಳ್ತಂಗಡಿ  : ಸರಕಾರಿ ಬಸ್ ನಲ್ಲಿ ಯುವತಿಗೆ ಕಿರುಕುಳ

ಬೆಳ್ತಂಗಡಿ : ಸರಕಾರಿ ಬಸ್ ನಲ್ಲಿ ಸಂಪಾದಿಸುತ್ತಿದ್ದಾಗ ಯುವತಿಗೆ ಕಿರುಕುಳ ನೀಡಿದ್ದ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ ಘಟನೆ ಉಜಿರೆಯಲ್ಲಿ ನಡೆದಿದೆ.


ಮಂಗಳೂರಿನಿಂದ ಚಿಕ್ಕಮಗಳೂರಿಗೆ ಸಂಚಾರಿಸುತ್ತಿದ್ದ ಸರಕಾರಿ ಬಸ್ ನಲ್ಲಿ ಜುಲೈ 29 ರಂದು ಮಧ್ಯಾಹ್ನ 2:15 ರ ಸುಮಾರಿಗೆ‌ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ‌ ಕೊಟ್ಟಿಗೆಹಾರ ನಿವಾಸಿ 19 ವರ್ಷದ ಯುವತಿ ತನ್ನ ಬ್ಯಾಗ್ ಹಿಡಿದುಕೊಂಡು ನಿದ್ರೆ ಮಾಡಿಕೊಂಡು ಸಂಚಾರಿಸುತ್ತಿದ್ದಾಗ ಬಸ್ ಮಡಂತ್ಯಾರ್ ತಲುಪಿದಾಗ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು  ಕಬೀರ್(35) ಎಂಬಾತ ಹಿಂಬದಿಯಲ್ಲಿ ಕುಳಿತಿದ್ದವd ಯುವತಿ ಇದ್ದ ಸೀಟಿಗೆ ಬಂದು ಕಿರುಕುಳ ನೀಡಿದ್ದು ಇದನ್ನು ವಿರೋಧಿಸಿದರೂ ಮತ್ತೆ ಮತ್ತೆ ತನ್ನ ಕೃತ್ಯ ಮುಂದುವರಿಸಿದ್ದು ಈ ವೇಳೆ ನೊಂದ ಯುವತಿ ತನ್ನ ತಂದೆಗೆ ಹಾಗೂ ಉಜಿರೆಯ ಗೆಳೆಯನಿಗೆ ಮಾಹಿತಿ ನೀಡಿದ್ದು ಬಸ್ ಉಜಿರೆ ತಲುಪುತ್ತಿದ್ದಂತೆ ಆರೋಪಿ ಕಬೀರ್ ನನ್ನು ಹಿಡಿದು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು ತಕ್ಷಣ ಪೊಲೀಸರಿಗೆ ಸ್ಥಳಕ್ಕೆ ಬಂದು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


ನೊಂದ ಯುವತಿ ನೀಡಿದ ದೂರಿನ ಮೇರೆಗೆ ಕಾಮುಕ ಕಬೀರ್ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಪುತ್ರನ ಟೆಸ್ಟ್ ಪದಾರ್ಪಣೆ ಕಂಡು ಭಾವುಕರಾದ ನೌಶಾದ್ ಖಾನ್ Video

Posted by Vidyamaana on 2024-02-15 13:35:25 |

Share: | | | | |


ಪುತ್ರನ ಟೆಸ್ಟ್ ಪದಾರ್ಪಣೆ ಕಂಡು ಭಾವುಕರಾದ ನೌಶಾದ್ ಖಾನ್ Video

ರಾಜ್ ಕೋಟ್: ಹಲವು ವರ್ಷಗಳ ಕಾಯುವಿಕೆಯ ಬಳಿಕ ಕೊನೆಗೂ ಮುಂಬೈನ ಆಟಗಾರ ಸರ್ಫರಾಜ್ ಖಾನ್ ಅವರಿಗೆ ಟೆಸ್ಟ್ ಕ್ಯಾಪ್ ಸಿಕ್ಕಿದೆ. ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಸರ್ಪರಾಜ್ ಖಾನ್ ಪದಾರ್ಪಣೆ ಮಾಡಿದ್ದಾರೆ.


ರಾಜ್ ಕೋಟ್ ನಲ್ಲಿ ಪಂದ್ಯಕ್ಕೂ ಮುನ್ನ ಮಾಜಿ ನಾಯಕ ಅನಿಲ್ ಕುಂಬ್ಳೆ ಅವರು ಸರ್ಫರಾಜ್ ಖಾನ್ ಅವರಿಗೆ ಟೆಸ್ಟ್ ಕ್ಯಾಪ್ ನೀಡಿದರು.

ಸರ್ಫರಾಜ್ ತಂದೆ ನೌಶಾದ್ ಖಾನ್ ಅವರು ರಾಜ್ ಕೋಟ್ ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ಉಪಸ್ಥಿತರಿದ್ದು, ಮಗನ ಈ ಐತಿಹಾಸಿಕ ಸನ್ನಿವೇಶವನ್ನು ಕಣ್ತುಂಬಿಕೊಂಡರು. ಇದೇ ವೇಳೆ ಭಾವುಕರಾದ ನೌಶಾದ್ ಖಾನ್ ಮಗನಿಗಾಗಿ ಸಂತಸ ವ್ಯಕ್ತಪಡಿಸಿದರು. ಕಣ್ಣೀರು ಹರಿಸುತ್ತಲೇ ಮಗನನ್ನು ಅಪ್ಪಿಕೊಂಡರು.

ಇದೇ ವೇಳೆ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೆಲ್ ಕೂಡಾ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದರು. ಜುರೆಲ್ ಗೆ ದಿನೇಶ್ ಕಾರ್ತಿಕ್ ಅವರು ಟೆಸ್ಟ್ ಕ್ಯಾಪ್ ನೀಡಿ ಹಾರೈಸಿದರು

ಉಪ್ಪಿನಂಗಡಿ: ಪೃಥ್ವಿ ಮಹಲ್‌ನಲ್ಲಿರುವ ಅಂಗಡಿಯಲ್ಲಿ ಬೆಂಕಿ ಅವಘಡ

Posted by Vidyamaana on 2024-06-21 22:57:59 |

Share: | | | | |


ಉಪ್ಪಿನಂಗಡಿ: ಪೃಥ್ವಿ ಮಹಲ್‌ನಲ್ಲಿರುವ ಅಂಗಡಿಯಲ್ಲಿ ಬೆಂಕಿ ಅವಘಡ

ಪುತ್ತೂರು: ಉಪ್ಪಿನಂಗಡಿ ಪೇಟೆಯಲ್ಲಿರುವ ಪೃಥ್ವಿ ಮಹಲ್ ನ ಫ್ಯಾನ್ಸಿ ಅಂಗಡಿಯೊಂದರಲ್ಲಿ ಶುಕ್ರವಾರ ರಾತ್ರಿ ಬೆಂಕಿ ಕಾಣಿಸಿಕೊಂಡು ಅಂಗಡಿಯನ್ನು ಸಂಪೂರ್ಣವಾಗಿ ಆವರಿಸಿ ಪಕ್ಕದಲ್ಲಿನ ಕೆಲವು ಅಂಗಡಿಗಳಿಗೆ ವ್ಯಾಪಿಸಿ ಹಾನಿಯುಂಟಾಗಿದೆ.

ಪೃಥ್ವಿ ಮಹಲ್ ನಲ್ಲಿನ ಅಂಗಡಿ ಮಾಲಕರು ರಾತ್ರಿ ತಮ್ಮ ಅಂಗಡಿಗಳನ್ನು ಮುಚ್ಚಿ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.

ಪುತ್ತೂರು : ಶಾಲಾ ಪರಿಸರದ ಸೇತುವೆಯ ಕೆಳಗೆ ಕೊಳೆತ ಕುರಿಗಳ ಶವ ಪತ್ತೆ

Posted by Vidyamaana on 2024-05-17 12:15:08 |

Share: | | | | |


ಪುತ್ತೂರು : ಶಾಲಾ ಪರಿಸರದ ಸೇತುವೆಯ ಕೆಳಗೆ ಕೊಳೆತ ಕುರಿಗಳ ಶವ ಪತ್ತೆ

ಪುತ್ತೂರು:ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪುತ್ತೂರು ತೆಂಕಿಲ ವಿವೇಕಾನಂದ ಶಾಲಾ ಪರಿಸರದ ಸಮೀಪದ ಸೇತುವೆಯ ಕೆಳಗೆ ಕೊಳೆತ ಸ್ಥಿತಿಯಲ್ಲಿ ಕುರಿಗಳ ಶವಪತ್ತೆಯಾಗಿದೆ.

CM ಸಿದ್ದರಾಮಯ್ಯರಿಗೆ ಕಂಬಳ ಆಮಂತ್ರಣ ನೀಡಿದ ಶಾಸಕ ಅಶೋಕ್ ರೈ

Posted by Vidyamaana on 2023-11-22 20:33:55 |

Share: | | | | |


CM ಸಿದ್ದರಾಮಯ್ಯರಿಗೆ ಕಂಬಳ ಆಮಂತ್ರಣ ನೀಡಿದ ಶಾಸಕ ಅಶೋಕ್ ರೈ

ಪುತ್ತೂರು: ನವೆಂಬರ್ 25ಮತ್ತು 26 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಐತಿಹಾಸಿಕ ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಕಂಬಳ ಸಮಿತಿ ಅಧ್ಯಕ್ಷರೂ ,ಪುತ್ತೂರು ಶಾಸಕರೂ ಆದ ಅಶೋಕ್ ರೈ ಯವರು ಆಮಂತ್ರಣ ಪತ್ರ ನೀಡಿ ಕಂಬಳಕ್ಕೆ ಆಹ್ವಾನ ನೀಡಿದರು. 25 ರಂದು ಸಂಜೆ ನಡೆಯುವ ಮುಖ್ಯ ಸಭಾ ಕಾರ್ಯಕ್ರಮವನ್ನು ಸಿದ್ದರಾಮಯ್ಯರವರು ಉದ್ಘಾಟನೆ ಮಾಡಲಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಐತಿಹಾಸಿಕ ಕಂಬಳದ ಬಗ್ಗೆ ಅಶೋಕ್ ರೈ ಯವರು ಮುಖ್ಯಮಂತ್ರಿಗಳಿಗೆ ವಿವರಿಸಿದರು. ಕಂಬಳಕ್ಕೆ ಬರುವ ಅತಿಥಿಗಳು ,ಭಾಗವಹಿಸುವ ಲಕ್ಷಾಂತರ  ಕಂಬಳಾಭಿಮಾನಿಗಳ ಬಗ್ಗೆಯೂ ಸಿಎಂ ಅವರಿಗೆ ವಿವರಣೆ ನೀಡಿದರು.

ಕರ್ನಾಟಕದ ಇತಿಹಾಸದಲ್ಲೇ ರಾಜ್ಯದ ರಾಜಧಾನಿಯಲ್ಲಿ ತುಳುನಾಡಿನ ಕಂಬಳ ಕ್ರೀಡೆಯನ್ನು ಆಯೋಜನೆ ಮಾಡಿರುವ ಬಗ್ಗೆ ಶಾಸಕರಾದ ಅಶೋಕ್ ರೈ ಯವರನ್ನು ಇದೇ ಸಂದರ್ಭದಲ್ಲಿ ಸಿಎಂ ರವರು ಅಭಿನಂದಿಸಿದರು. ಕಂಬಳಕ್ಕೆ ಬರಲು ನಾನು ರೆಡಿಯಾಗಿದ್ದೇನೆ, ನನಗೆ ಕಂಬಳವನ್ನು ವೀಕ್ಷಿಸಬೇಕು, ಕರಾವಳಿ ಭಾಗದ ಸುಪ್ರಸಿದ್ದ ಜನಪದ ಕ್ರೀಡೆಯನ್ನು ಬೆಂಗಳೂರಿನಲ್ಲಿ ಆಯೋಜನೆ ಮಾಡುವ ಮೂಲಕ ರಾಜ್ಯದ ಎಲ್ಲಾ ಜನರಿಗೂ, ರಾಜಧಾನಿಯಲ್ಲಿರುವ ದೇಶದ ನಾನಾ ರಾಜ್ಯದ ಜನತೆಗೂ, ವಿದೇಶಿ ಪ್ರವಾಸಿಗರಿಗೂ ಕಂಬಳದ ಸವಿಯನ್ನು ಅನುಭವಿಸುವ ಯೋಗ ದೊರಕಿದೆ ಇದಕ್ಕಾಗಿ ಅಭಿನಂದಿಸುವುದಾಗಿ ಸಿಎಂ ರವರು ಶಾಸಕರಿಗೆ ತಿಳಿಸಿದರು. ಕಂಬಳಕ್ಕೆ ಸರಕಾರದ ಪೂರ್ಣಪ್ರಮಾಣದ ಬೆಂಬಲವನ್ನು ಇದೇ ಸಂದರ್ಭದಲ್ಲಿ ಸಿಎಂ ರವರು ಘೋಷಿಸಿದರು. 

ಕಂಬಳಕ್ಕೆ ಪೆಟಾ ದವರ ಆಕ್ಷೇಪ ಇದ್ದ ಸಂದರ್ಭದಲ್ಲಿ ಅಂದು ಸಿಎಂ ಆಗಿದ್ದ ನೀವು ನಮ್ಮ ಹೋರಾಟಕ್ಕೆ ಸಹಾಯ ಮಾಡಿದ್ದನ್ನು ಶಾಸಕ ಅಶೋಕ್ ರೈ ಸಿಎಂ ಸಿದ್ದರಾಮಯ್ಯರವರ ಬಳಿ ನೆನಪಿಸಿಕೊಂಡರು.

ಈ ಸಂದರ್ಭದಲ್ಲಿ ವಿಧಾನಪರಿಷತ್

ಸದಸ್ಯರಾದ ಶ್ರೀ ಮಂಜುನಾಥ್ ಭಂಡಾರಿ ಮತ್ತು ಕಂಬಳ

ಸಮಿತಿ ಕಾರ್ಯಧ್ಯಕ್ಷರಾದ ಗುರುಕಿರಣ್ ಹಾಗೂ

ಪದಾಧಿಕಾರಿಗಳು ಉಪಸ್ಥಿತರಿದ್ದರು.




Leave a Comment: