ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಸುದ್ದಿಗಳು News

Posted by vidyamaana on 2023-06-29 12:19:28 |

Share: | | | | |


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.


ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,  ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು. 

ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು.  ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು. 

ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು. 

ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ  ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ  ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ  ಮುಸ್ಲಿಂ ಮಗುವೊಂದು ಮೃತಪಟ್ಟಿದೆ. 

ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.

 Share: | | | | |


SSLC ಫಲಿತಾಂಶದಲ್ಲಿ ಪ್ರದೀಪ್ ಈಶ್ವರ್ ದತ್ತು ಪಡೆದ ವಿದ್ಯಾರ್ಥಿಗಳ ಮೇಲುಗೈ; ಸನ್ಮಾನ ಮಾಡಿ ಶುಭ ಹಾರೈಕೆ

Posted by Vidyamaana on 2024-05-10 07:54:53 |

Share: | | | | |


SSLC ಫಲಿತಾಂಶದಲ್ಲಿ ಪ್ರದೀಪ್ ಈಶ್ವರ್ ದತ್ತು ಪಡೆದ ವಿದ್ಯಾರ್ಥಿಗಳ ಮೇಲುಗೈ; ಸನ್ಮಾನ ಮಾಡಿ ಶುಭ ಹಾರೈಕೆ

ಚಿಕ್ಕಬಳ್ಳಾಪುರ, ಮೇ.09: ಇಂದು ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ(SSLC Result) ಹಿನ್ನಲೆ ಚಿಕ್ಕಬಳ್ಳಾಪುರ (Chikkaballapur) ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್(Pr

non

eep Eshwar) ರವರು ದತ್ತು ಪಡೆದಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಉನ್ನತ ಮಟ್ಟದಲ್ಲಿ ತೇರ್ಗಡೆಯಾಗಿದ್ದು, ಖುದ್ದು ಶಾಸಕ ಪ್ರದೀಪ್ ಈಶ್ವರ್ ಅವರು ಆಗಮಿಸಿದ್ದಾರೆ. ಈ ವೇಳೆ ಅವರ ಮೇಲೆ ಪುಷ್ಪ ಹಾಕಿ ಅದ್ದೂರಿ ಸ್ವಾಗತ ಮಾಡಿದರು. ಇನ್ನು ಚಿಕ್ಕಬಳ್ಳಾಪುರ ನಗರದ ಡಿಡಿಪಿಐ ಕಚೇರಿ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ ಶುಭ ಹಾರೈಸಿದರು.

ಡಿ.31ರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಸಾವು

Posted by Vidyamaana on 2024-01-07 19:51:34 |

Share: | | | | |


ಡಿ.31ರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಸಾವು

ಪುತ್ತೂರು : ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿಯಲ್ಲಿ ಡಿ.31ರಂದು ನಡೆದ ಹೋಂಡಾ ಆಕ್ಟೀವಾ ಹಾಗೂ ಕಾರು ಅಪಘಾತದಲ್ಲಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಕ್ಟೀವಾ ಸಹ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ.ಇರ್ದೆ ಗ್ರಾಮದ ಉಪ್ಪಳಿಗೆ ನಾರಾಯಣ ನಾಯ್ಕ ಮತ್ತು ಕಲ್ಯಾಣ ದಂಪತಿ ಪುತ್ರ ಪ್ರವೀಣ (18) ಮೃತ ಯುವಕ.ಡಿ.31 ರಂದು ರಾತ್ರಿ ತನ್ನ ಪರಿಚಿತರೊಂದಿಗೆ ಪುತ್ತೂರಿಗೆ ಬಂದಿದ್ದ ಪ್ರವೀಣ್ ಮನೆಗೆ ಹಿಂತಿರುಗುವ ವೇಳೆ ಮುಕ್ರಂಪಾಡಿ ಸಮೀಪಿಸುತ್ತಿದ್ದಂತೆ ಎದುರುಗಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.


ಘಟನೆಯಿಂದ ರಸ್ತೆಗೆ ಎಸೆಯಲ್ಪಟ್ಟು ತೀವ್ರ ಗಾಯಗೊಂಡಿದ್ದ ಪ್ರವೀಣ್ ನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಜ್ಯೋತಿಯಲ್ಲಿರುವ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರವೀಣ್ ಜ.7 ರಂದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.


ಮೃತ ಪ್ರವೀಣ ನ ಕಣ್ಣು, ಲಿವರ್ ಹಾಗೂ ಕಿಡ್ನಿ ದಾನ ಮಾಡಲು ಮನೆಯವರು ಒಪ್ಪಿಗೆ ನೀಡಿರುವುದಾಗಿ ವರದಿಯಾಗಿದೆ.

ಕಾರ್ಕಳದಲ್ಲೊಂದು ಹೃದಯ ವಿದ್ರಾವಕ ಘಟನೆ

Posted by Vidyamaana on 2023-06-26 06:54:34 |

Share: | | | | |


ಕಾರ್ಕಳದಲ್ಲೊಂದು ಹೃದಯ ವಿದ್ರಾವಕ ಘಟನೆ

ಕಾರ್ಕಳ : ಕ್ಷುಲ್ಲಕ ವಿಚಾರಕ್ಕಾಗಿ ದಂಪತಿಗಳ ಮಧ್ಯೆ ಜಗಳವಾಗಿದ್ದು ಸಾವಿನೊಂದಿಗೆ ಅಂತ್ಯ ಕಂಡಿರುವ ಘಟನೆ ಜೂ. 25ರಂದು ಕಾರ್ಕಳ ತಾಲೂಕು ನಲ್ಲೂರಿನಲ್ಲಿ ನಡೆದಿದೆ. ಯಲ್ಲಾಪುರ ಮೂಲದ ಇಮ್ಯಾನುಲ್ ಸಿದ್ದಿ (40) ಹಾಗೂ ಯಶೋಧಾ (32) ಎಂಬವರೇ ಸಾವಿಗೀಡಾದ ದಂಪತಿ


ಭಾನುವಾರ ಬೆಳಿಗ್ಗೆ ಟಿವಿ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿಗಳ ಮಧ್ಯೆ ಜಗಳವಾಗಿದ್ದು, ಈ ವೇಳೆ ಯಶೋಧಾ ತೋಟದಲ್ಲಿದ್ದ ಬಾವಿಗೆ ಹಾರಿದರು. ಯಶೋಧಾರನ್ನು ರಕ್ಷಿಸಲು ತೆರಳಿದ್ದ ಪತಿ ಇಮ್ಯಾನುಲ್ ಕೂಡ ನೀರುಪಾಲಾದವರು ಎಂದು ತಿಳಿದುಬಂದಿದೆ. ಕಳೆದ ಎರಡು ವರ್ಷಗಳಿಂದ ಇಮ್ಯಾನುಲ್, ಯಶೋಧಾ ದಂಪತಿ ನಲ್ಲೂರಿನ ತೋಟವೊಂದರಲ್ಲಿ ಕೆಲಸಕ್ಕಿದ್ದರು. ದಂಪತಿ ಸಾವಿನಿಂದ ಇದೀಗ 10 ವರ್ಷದ ಬಾಲಕ ಹಾಗೂ 9 ವರ್ಷದ ಬಾಲಕಿ ಅನಾಥರಾಗಿದ್ದಾರೆ.


ಡಿವೈಎಸ್‌ಪಿ ಅರವಿಂದ್ ಕಲಗುಜ್ಜಿ, ಗ್ರಾಮಾಂತರ ಪೊಲೀಸ್ ಠಾಣೆ ಎಸ್‌ಐ ತೇಜಸ್ವಿ, ಪೊಲೀಸರಾದ ಪ್ರಕಾಶ್, ಸುಭಾಶ್ ಕಾಮತ್, ಸುಂದರ ಗೌಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.ಶವ ಸ್ಥಳೀಯರು ಗ್ರಾಮ ಪಂಚಾಯತ್ ಸದಸ್ಯರಾದ ಸುಮಿತ್ ನಲ್ಲೂರು ಲೋಕೇಶ್ ಶೆಟ್ಟಿ, ಸ್ಥಳೀಯರಾದ ಹರಿಪ್ರಸಾದ್ ಬಜಗೋಳಿ, ಶಿವಣ್ಣ ನಲ್ಲೂರು, ನಾರಾಯಣ ಗೌಡ ಅವರು ಮೃತದೇಹವನ್ನು ಕೆರೆಯಿಂದ ಮೇಲಕ್ಕೆತ್ತುವಲ್ಲಿ ಸಹಕರಿಸಿದರು.

ರಾಜ್ಯಸಭೆ ಚುನಾವಣೆಗೆ BJP ಅಭ್ಯರ್ಥಿಗಳ ಪಟ್ಟಿ ಪ್ರಕಟ

Posted by Vidyamaana on 2024-02-11 21:30:15 |

Share: | | | | |


ರಾಜ್ಯಸಭೆ ಚುನಾವಣೆಗೆ BJP ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು, ಫೆ.11: ಬಿಜೆಪಿ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.  ಕರ್ನಾಟಕದಿಂದ ಬಾಗಲಕೋಟೆ ಮೂಲದ ನಾರಾಯಣ ಬಾಂಡಗೆ ಅವರಿಗೆ ಟಿಕೆಟ್ ನೀಡಲಾಗಿದೆ. ರಾಜ್ಯಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ವಿ.ಸೋಮಣ್ಣ ನಿರಾಸೆಗೊಂಡಿದ್ದಾರೆ.


ಜೊತೆಗೆ ಬಿಹಾರದಲ್ಲಿ ಡಾ.ಧರ್ಮಶೀಲಾ ಗುಪ್ತಾ ಹಾಗೂ ಡಾ.ಭೀಮಸಿಂಗ್​ ಸೇರಿ ಇಬ್ಬರಿಗೆ ರಾಜ್ಯಸಭೆ ಟಿಕೆಟ್ ನೀಡಲಾಗಿದೆ.ಇನ್ನುಳಿದಂತೆ ಛತ್ತೀಸ್​ಗಢದಲ್ಲಿ ರಾಜಾ ದೇವೇಂದ್ರಪ್ರತಾಪ್​ ಸಿಂಗ್​, ಹರಿಯಾಣದಲ್ಲಿ ಸುಭಾಷ್​ ಬಾರ್ಲಾಗೆ ಹಾಗೂ ಉತ್ತರ ಪ್ರದೇಶದಲ್ಲಿ ಆರ್​.ಪಿ.ಎನ್​ ಸಿಂಗ್​ಗೆ ಟಿಕೆಟ್ ನೀಡಲಾಗಿದೆ.


1.ಧರ್ಮಶೀಲಾ ಗುಪ್ತಾ: ಬಿಹಾರ

2.ಡಾ.ಭೀಮ್ ಸಿಂಗ್: ಬಿಹಾರ

3.ರಾಜಾ ದೇವೇಂದ್ರ ಪ್ರತಾಪ್ ಸಿಂಗ್: ಛತ್ತೀಸಗಢ್

4.ಸುಭಾಷ್ ಬರಲಾ: ಹರಿಯಾಣ

5.ನಾರಾಯಾಣ ಭಾಂಡಗೆ: ಕರ್ನಾಟಕ

6.ಆರ್​​ಪಿಎನ್​​​ ಸಿಂಗ್: ಉತ್ತರ ಪ್ರದೇಶ

7.ಸುಭಾಂಶು ತ್ರಿವೇದಿ: ಉತ್ತರ ಪ್ರದೇಶ

8.ಚೌಧರಿ ತೇಜ್​ವೀರ್ ಸಿಂಗ್: ಉತ್ತರ ಪ್ರದೇಶ

9.ಸಾಧನಾ ಸಿಂಗ್: ಉತ್ತರ ಪ್ರದೇಶ

10.ಅಮರಪಾಲ್ ಮೌರ್ಯ: ಉತ್ತರ ಪ್ರದೇಶ

11.ಸಂಗೀತಾ ಬಲ್ವಂತ್: ಉತ್ತರ ಪ್ರದೇಶ

12.ನವೀನ್ ಜೈನ್: ಉತ್ತರ ಪ್ರದೇಶ

13.ಮಹೇಂದ್ರ ಭಟ್: ಉತ್ತರಾಖಂಡ್

14.ಸಮಿಕಾ ಭಟ್ಟಾಚಾರ್ಯ: ಪಶ್ಚಿಮ ಬಂಗಾಳ

ಬಡವರ ಮನೆಗೆ ಅಕ್ಕಿ ಮುಟ್ಟಿಸುವ ಯೋಜನೆಗೆ ನನ್ನ ಅಭಿನಂದನೆ

Posted by Vidyamaana on 2023-07-17 14:52:01 |

Share: | | | | |


ಬಡವರ ಮನೆಗೆ ಅಕ್ಕಿ ಮುಟ್ಟಿಸುವ ಯೋಜನೆಗೆ ನನ್ನ ಅಭಿನಂದನೆ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರದ ಅನ್ನ ಭಾಗ್ಯ ಯೋಜನೆ ಕುರಿತು ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಗುರುರಾಜ್ ಗಂಟಿಹೊಳೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.ವಿಧಾನಸಭೆಯಲ್ಲಿ ಸೋಮವಾರ ಬಜೆಟ್ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ನಾನು ಬಿಜೆಪಿ ಸದಸ್ಯನಾಗಿದ್ದರೂ ಬಡವರ ಮನೆಗೆ ಅಕ್ಕಿಯನ್ನು ಮುಟ್ಟಿಸುವ ಯೋಜನೆಯನ್ನು ಅಭಿನಂದಿಸುತ್ತೇನೆ.ಅನ್ನಭಾಗ್ಯ ಯೋಚನೆ ಮತ್ತು ಯೋಜನೆ ರೂಪಿಸಿದವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇದನ್ನು ಯಾವುದೇ ಸರಕಾರ ಜಾರಿ ಮಾಡಿರಲಿ, ಕೊನೆಗೆ ಬಡವನ ಮನೆಗೆ ಅದು ಮುಟ್ಟಿದೆ. ಬಡತನವನ್ನು ಅನುಭವಿಸಿದವನಿಗಷ್ಟೇ ಅದರ ಮೌಲ್ಯ ಗೊತ್ತಾಗುತ್ತೆ ಎಂದು ಹೇಳಿದರು.ಆದರೆ ಬಡತನ ಎನ್ನುವುದು ಅಣಕದ ವಿಚಾರವಾಗ ಕೂಡದು. ದುಡಿಯುವ ಕೈಗಳಿಗೆ ಕೆಲಸ ಒದಗಿಸಿದರೆ ಬಡತನ ಎನ್ನುವುದಕ್ಕೆ ತಿಲಾಂಜಲಿ ಹಾಡಬಹುದು. ಸರಕಾರ ಈ ನಿಟ್ಟಿನಲ್ಲಿ ಗಂಭೀರವಾಗಿ ಯೋಚಿಸಬೇಕು ಎಂದು ಗುರುರಾಜ್ ಅವರು ತಿಳಿಸಿದರು.

ಪ್ರಧಾನಿ ಮೋದಿಯವರಿಂದ ಪಿಎಂ ಕಿಸಾನ್ 16ನೇ ಕಂತು ಬಿಡುಗಡೆ : 9 ಕೋಟಿ ರೈತರ ಖಾತೆಗೆ 21 ಸಾವಿರ ಕೋಟಿ ಜಮಾ

Posted by Vidyamaana on 2024-02-28 21:56:14 |

Share: | | | | |


ಪ್ರಧಾನಿ ಮೋದಿಯವರಿಂದ  ಪಿಎಂ ಕಿಸಾನ್ 16ನೇ ಕಂತು ಬಿಡುಗಡೆ : 9 ಕೋಟಿ ರೈತರ ಖಾತೆಗೆ 21 ಸಾವಿರ ಕೋಟಿ ಜಮಾ

ನವದೆಹಲಿ :ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಂದರೆ ಫೆಬ್ರವರಿ 28 ರಂದು ಮಹಾರಾಷ್ಟ್ರದ ಯವತ್ಮಾಲ್ನಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 16ನೇ ಕಂತನ್ನ ಬಿಡುಗಡೆ ಮಾಡಿದ್ದಾರೆ. 16ನೇ ಕಂತಿನಡಿ 21 ಸಾವಿರ ಕೋಟಿಗೂ ಹೆಚ್ಚು ಸಮ್ಮಾನ್ ಮೊತ್ತವನ್ನ 9 ಕೋಟಿಗೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗಿದೆ.ಮೊತ್ತವನ್ನ ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಲಾಗಿದೆ.


ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ರೈತರಿಗೆ ವಾರ್ಷಿಕ 6,000 ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ. ಈ ಮೊತ್ತವನ್ನ ಪ್ರತಿ 4 ತಿಂಗಳ ಅಂತರದಲ್ಲಿ ತಲಾ 2,000 ರೂ.ಗಳಂತೆ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಕಳುಹಿಸಲಾಗುತ್ತದೆ.ಅಂತಹ ರೈತರಿಗೆ ಈ ಯೋಜನೆಯ ಲಾಭ ಸಿಗುವುದಿಲ್ಲ.!

ಕುಟುಂಬದಲ್ಲಿ ಯಾರಾದರೂ ತೆರಿಗೆ ಪಾವತಿಸಿದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಿಲ್ಲ. ಅಂದರೆ ಕಳೆದ ವರ್ಷ ಗಂಡ ಅಥವಾ ಹೆಂಡತಿ ಆದಾಯ ತೆರಿಗೆ ಪಾವತಿಸಿದ್ದರೆ ಅವರಿಗೆ ಸಿಗುವುದಿಲ್ಲ. ಈ ಯೋಜನೆಯ ಲಾಭ, ಕೃಷಿ ಭೂಮಿಯನ್ನ ಕೃಷಿ ಕೆಲಸಗಳ ಬದಲಿಗೆ ಇತರ ಉದ್ದೇಶಗಳಿಗೆ ಬಳಸುತ್ತಿರುವವರು ಅಥವಾ ಇತರರ ಹೊಲಗಳಲ್ಲಿ ಕೃಷಿ ಕೆಲಸ ಮಾಡುವಂತಹ ರೈತರು ಸಹ ಈ ಯೋಜನೆಯ ಲಾಭವನ್ನ ಪಡೆಯಲು ಸಾಧ್ಯವಿಲ್ಲ.


ಒಬ್ಬ ರೈತ ವ್ಯವಸಾಯ ಮಾಡುತ್ತಿದ್ದು, ಅವನ ಹೆಸರಿನಲ್ಲಿ ಜಮೀನು ಇಲ್ಲದಿದ್ದಲ್ಲಿ ಆತನಿಗೆ ಈ ಯೋಜನೆಯ ಲಾಭ ಸಿಗುವುದಿಲ್ಲ. ಜಮೀನು ತನ್ನ ತಂದೆ ಅಥವಾ ತಾತನ ಹೆಸರಲ್ಲಿದ್ದರೂ ಸಹ ಈ ಯೋಜನೆಯ ಲಾಭವನ್ನ ಪಡೆಯಲು ಸಾಧ್ಯವಿಲ್ಲ. ಯಾರಾದರೂ ಕೃಷಿ ಜಮೀನು ಹೊಂದಿರುವವರು ಸರ್ಕಾರಿ ನೌಕರನಾಗಿದ್ದರೆ ಅಥವಾ ನಿವೃತ್ತಿ ಹೊಂದಿದವರಾಗಿದ್ದರೆ ಅವರೂ ಈ ಯೋಜನೆಯಿಂದ ವಂಚಿತರಾಗುತ್ತಾರೆ.ಇದೇ ಸಮಯದಲ್ಲಿ ಹಾಲಿ ಅಥವಾ ಮಾಜಿ ಸಂಸದರು, ಶಾಸಕರು, ಸಚಿವರು ಕೂಡ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಪ್ರಯೋಜನ ಪಡೆಯುವುದಿಲ್ಲ.ಅನರ್ಹ ವೃತ್ತಿಪರ ನೋಂದಾಯಿತ ವೈದ್ಯರು, ಇಂಜಿನಿಯರ್‌ಗಳು, ವಕೀಲರು, ಚಾರ್ಟರ್ಡ್ ಅಕೌಂಟೆಂಟ್‌ಗಳು ಅಥವಾ ಅವರ ಕುಟುಂಬದ ಸದಸ್ಯರು ಕೂಡ ಪಟ್ಟಿಯಲ್ಲಿ ಬರುತ್ತಾರೆ. ರೈತರಾಗಿದ್ದರೂ, ಯಾರಾದರೂ ತಿಂಗಳಿಗೆ 10,000 ರೂ.ಗಿಂತ ಹೆಚ್ಚು ಪಿಂಚಣಿ ಪಡೆದರೆ, ಅವರು ಈ ಯೋಜನೆಯ ಫಲಾನುಭವಿಯಾಗಲು ಸಾಧ್ಯವಿಲ್ಲ.


ರೈತರು ಇಲ್ಲಿ ಸಂಪರ್ಕಿಸಬೇಕು : ಎಲ್ಲವೂ ಸರಿಯಾಗಿದ್ದ ನಂತರವೂ ಪಿಎಂ ಕಿಸಾನ್ ಯೋಜನೆಯ ಮೊತ್ತವು ನಿಮ್ಮ ಖಾತೆಗೆ ತಲುಪಿಲ್ಲವಾದರೆ, ಮೊದಲು ನೀವು ಅಧಿಕೃತ ಇಮೇಲ್ ಐಡಿ pmkisan-ict@gov.in ನಲ್ಲಿ ಸಂಪರ್ಕಿಸಬಹುದು. ನೀವು ಪಿಎಂ ಕಿಸಾನ್ ಯೋಜನೆಯ ಸಹಾಯವಾಣಿ ಸಂಖ್ಯೆ - 155261 ಅಥವಾ 1800115526 (ಟೋಲ್ ಫ್ರೀ) ಅಥವಾ 011-23381092 ಅನ್ನು ಸಂಪರ್ಕಿಸಬಹುದು. ಇಲ್ಲಿಯೂ ನಿಮ್ಮ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ.



Leave a Comment: