ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಉಳ್ಳಾಲ : ಕಂಪೌಂಡ್ ಕುಸಿದು ಮನೆ ಮೇಲೆ ಬಿದ್ದು ಮಕ್ಕಳು ಸಹಿತ ನಾಲ್ವರು ಸಾವು

Posted by Vidyamaana on 2024-06-26 10:30:16 |

Share: | | | | |


ಉಳ್ಳಾಲ : ಕಂಪೌಂಡ್ ಕುಸಿದು ಮನೆ ಮೇಲೆ ಬಿದ್ದು ಮಕ್ಕಳು ಸಹಿತ ನಾಲ್ವರು ಸಾವು

ಉಳ್ಳಾಲ : ತಾಲೂಕಿನ ಮುನ್ನೂರು ಗ್ರಾಮದ ಮದನಿ ನಗರ ಎಂಬಲ್ಲಿ ಬುಧವಾರ ಬೆಳಗ್ಗೆ ಮನೆಯ ಹಿಂಬದಿಯಲ್ಲಿದ್ದ ಕಂಪೌಂಡ್ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.ಮನೆಯೊಳಗೆ ವಾಸ್ತವ್ಯವಿದ್ದ ಯಾಸಿರ್(45), ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಮೃತರು.

ಕಡಬ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್

Posted by Vidyamaana on 2024-03-30 19:42:56 |

Share: | | | | |


ಕಡಬ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್

ಕಡಬ: ಅಡಿಕೆ ಆಮದಿನ ವಿರುದ್ಧ ಸಂಸತ್ತಿನಲ್ಲಿ ಧ್ವನಿ ಎತ್ತುವ ಕೆಲಸ ಆಗಬೇಕು. ಅಡಿಕೆಗೆ ಎದುರಾಗಿರುವ ರೋಗಬಾಧೆಗಳ ನಿವಾರಣೆಗೆ ಸಂಶೋಧನಾ ಕೇಂದ್ರ ತೆರೆಯುವ ಅಗತ್ಯವಿದೆ. ಇದರ ಜೊತೆಗೆ ಕೃಷಿ ಹಾಗೂ ಕೃಷಿ ಮಾರುಕಟ್ಟೆಗೆ ಪೂರಕವಾದ ವಾತಾವರಣ ಕಲ್ಪಿಸುವ ಅಗತ್ಯ ಇದೆ. ಈ ನಿಟ್ಟಿನಲ್ಲಿ ಶ್ರಮ ಪಡುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಹೇಳಿದರು.

ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಈ ಬಾರಿ ಖಂಡಿತವಾಗಿಯೂ ಕಾಂಗ್ರೆಸ್ ಜಯ ಸಾಧಿಸಲಿದೆ. ನಾನು ಹಿಂದೂ ಧರ್ಮದಲ್ಲಿ ಹುಟ್ಟಿದವ. ಹಿಂದೂ ದರ್ಮದ ಬಗ್ಗೆ ಅಪಾರ ಪ್ರೀತಿ ಇಟ್ಟುಕೊಂಡವನು ನಾನು. ಜೊತೆಗೆ ಹಿಂದೂ ಧರ್ಮದ ಆಚಾರ ವಿಚಾರಗಳನ್ನು ಪಾಲಿಸಿಕೊಂಡು ಬರುತ್ತಿದ್ದೇನೆ. ಆದರೆ ಎಲ್ಲಿಯೂ ಕೂಡ ಅಪಪ್ರಚಾರ, ಅಪನಂಬಿಕೆ ಬರುವ ಕೆಲಸ ಮಾಡಿಲ್ಲ. ಆದ್ದರಿಂದ ನಾವು ಯಾರನ್ನು ದ್ವೇಷಿಸುವ, ವಿರೋಧಿಸುವ ಕೆಲಸ ಮಾಡುವುದು ಬೇಡ. ಕಾಂಗ್ರೆಸ್ ಸರಕಾರದ ಅಭಿವೃದ್ಧಿಯನ್ನೇ ಮುಂದಿಟ್ಟುಕೊಂಡು ಜನರ ಬಳಿಗೆ ತೆರಳಿ ಮತ ಕೇಳಿ ಎಂದರು.


ಬೆಳ್ತಂಗಡಿ : ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಶೇಖರ್ ಬಂಗೇರ ಮೃತ್ಯು

Posted by Vidyamaana on 2024-03-29 05:51:45 |

Share: | | | | |


ಬೆಳ್ತಂಗಡಿ : ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಶೇಖರ್ ಬಂಗೇರ ಮೃತ್ಯು

ಬೆಳ್ತಂಗಡಿ : ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ  ಸಾವನ್ನಪ್ಪಿದ ಘಟನೆ ನಡೆದಿದೆ.

ಬೆಳ್ತಂಗಡಿ ನಗರದ ಸಂತೆಕಟ್ಟೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಮಾ.29 ರಂದು ರಾತ್ರಿ ಶೇಖರ್ ಬಂಗೇರ ಹೇರಾಜೆ(65) ಎಂಬವರು ಹೋಟೆಲ್ ನಿಂದ ಪಾರ್ಸಲ್ ತೆಗೆದುಕೊಂಡು ರಸ್ತೆ ದಾಟುತ್ತಿದ್ದ ವೇಳೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಬಂಟ್ವಾಳದಲ್ಲಿ ಸಾವನ್ನಪ್ಪಿದ್ದಾರೆ.



ಫೆ.18ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

Posted by Vidyamaana on 2023-02-17 04:39:36 |

Share: | | | | |


ಫೆ.18ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಮಹೋತ್ಸವ ಪೂರ್ವಶಿಷ್ಟ ಪದ್ಧತಿಯಂತೆ ಫೆ.18 ರಂದು ನಡೆಯಲಿದೆ.

ಮಧ್ಯಾಹ್ನ ಹವನ ಅಭಿಷೇಕ ಪೂಜಾದಿಗಳು, ರಾತ್ರಿ ಶ್ರೀ ದೇವರ ಬಲಿ ಹೊರಟು, ತಂತ್ರ ಸುತ್ತು ಜರಗಿ ಬಳಿಕ ಹೊರಾಂಗಣದಲ್ಲಿ ಉಡಕೆ, ಚಂಡೆ, ವಾದ್ಯ, ಸರ್ವವಾದ್ಯ ಸುತ್ತುಗಳು ನಡೆಯಲಿದೆ.

ಬಳಿಕ ಕಟ್ಟೆಪೂಜೆ, ಪಲ್ಲಕಿ ಉತ್ಸವ, ಚಂದ್ರಮಂಡಲ ರಥೋತ್ಸವ, ಕೆರೆ ಉತ್ಸವ, ತೆಪ್ಪೋತ್ಸವದೊಂದಿಗೆ ಉತ್ಸವ ಮುಗಿದು, ತಡರಾತ್ರಿ ಏಕಾದಶ ರುದ್ರಾಭಿಷೇಕ, ಮಹಾಪೂಜೆ, ಬಲಿ ಉತ್ಸವ ನೆರವೇರಲಿದೆ. ಜತೆಗೆ ಪಲ್ಲಕಿ ಉತ್ಸವ, ಅಷ್ಟಾವಧಾನ ಸೇವೆ ನಡೆಯಲಿದೆ ಎಂದು ಶ್ರೀ ದೇವಸ್ಥಾನ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯಸಭೆ ಚುನಾವಣೆ: ಮತದಾನಕ್ಕೆ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಗೈರು!

Posted by Vidyamaana on 2024-02-27 17:06:51 |

Share: | | | | |


ರಾಜ್ಯಸಭೆ ಚುನಾವಣೆ: ಮತದಾನಕ್ಕೆ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಗೈರು!

ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಯಲ್ಲಾಪುರ ಬಿಜೆಪಿ ಶಾಸಕ ಅರಬೈಲ್ ಶಿವರಾಂ ಹೆಬ್ಬಾರ್ ಮತದಾನಕ್ಕೆ ಗೈರಾದರು. ಉಳಿದ 222 ಶಾಸಕರು ಮತ ಚಲಾಯಿಸಿದ್ದಾರೆ.ಮಂಗಳವಾರ ಬೆಳಿಗ್ಗೆ 9 ಗಂಟೆಗೆ ಆರಂಭವಾದ ಮತದಾನ ಸಂಜೆ 4 ಗಂಟೆಯವರೆಗೂ ನಡೆಯಿತು. ಕಾಂಗ್ರೆಸ್ನ 134, ಬಿಜೆಪಿಯ 65, ಜೆಡಿಎಸ್ ನ 19, ಇಬ್ಬರು ಪಕ್ಷೇತರರು, ಸರ್ವೋದಯ ಕರ್ನಾಟಕ ಪಕ್ಷ ಹಾಗೂ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ತಲಾ ಒಬ್ಬರು ಮತ ಚಲಾಯಿಸಿದರು.

ಗಮನಿಸಿ : ಜುಲೈ 1 ರಿಂದ ಕ್ರೆಡಿಟ್ ಕಾರ್ಡ್ ಬಿಲ್ ಪಾವತಿಗೆ ಹೊಸ ನಿಯಮ ಜಾರಿ

Posted by Vidyamaana on 2024-06-22 08:29:59 |

Share: | | | | |


ಗಮನಿಸಿ : ಜುಲೈ 1 ರಿಂದ ಕ್ರೆಡಿಟ್ ಕಾರ್ಡ್ ಬಿಲ್ ಪಾವತಿಗೆ ಹೊಸ ನಿಯಮ ಜಾರಿ

ನವದೆಹಲಿ : ಜೂನ್ 30 ರ ನಂತರ, ಕೆಲವು ಪ್ಲಾಟ್ಫಾರ್ಮ್ಗಳ ಮೂಲಕ ಕ್ರೆಡಿಟ್ ಕಾರ್ಡ್ ಬಿಲ್ಗಳನ್ನು ಪಾವತಿಸುವುದು ಕಷ್ಟವಾಗಬಹುದು. ಫೋನ್ಪೇ, ಕ್ರೆಡ್, ಬಿಲ್ಡೆಸ್ಕ್ ಮತ್ತು ಇನ್ಫಿಬೀಮ್ ಅವೆನ್ಯೂ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಹೊಸ ನಿಯಮಗಳಿಂದ ಪ್ರಭಾವಿತವಾಗಬಹುದಾದ ಕೆಲವು ಪ್ರಮುಖ ಫಿನ್ಟೆಕ್ ಗಳಾಗಿವೆ.ಫೋನ್ ಪೇ, ಕ್ರೆಡ್, ಬಿಲ್ ಡೆಸ್ಕ್ ಪ್ಲಾಟ್ ಫಾರ್ಮ್ ಗಳ ಮೂಲಕ ಕ್ರೆಡಿಟ್ ಕಾರ್ಡ್ ಬಿಲ್ ಪಾವತಿಗಳ ಮೇಲೆ ಪರಿಣಾಮ ಬೀರುತ್ತದೆ. ಜೂನ್ 30 ರ ನಂತರದ ಎಲ್ಲಾ ಕ್ರೆಡಿಟ್ ಕಾರ್ಡ್ ಪಾವತಿಗಳನ್ನು ಭಾರತ್ ಬಿಲ್ ಪಾವತಿ ವ್ಯವಸ್ಥೆ (ಬಿಬಿಪಿಎಸ್) ಮೂಲಕ ಪ್ರಕ್ರಿಯೆಗೊಳಿಸಬೇಕು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಈ ಹಿಂದೆ ನಿರ್ದೇಶನ ನೀಡಿತ್ತು.



Leave a Comment: