ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಸುದ್ದಿಗಳು News

Posted by vidyamaana on 2024-07-25 12:27:06 |

Share: | | | | |


ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಪಣಂಬೂರು: ಇಲ್ಲಿನ ಜೋಕಟ್ಟೆ ಗ್ರಾಮ ಪಂಚಾಯತ್ ಗುಡ್ಡೆ ಎಂಬಲ್ಲಿ ಮನೆಯ ಮೇಲೆ� ತಡೆಗೋಡೆ ಕುಸಿದು ಬಿದ್ದು ಯುವಕ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ‌.ಮುಲ್ಕಿ ಕೊಲ್ನಾಡು ನಿವಾಸಿ ಶಂಕರ ಎಂಬವರ ಪುತ್ರ ಶೈಲೇಶ್ (17) ಮೃತ ಯುವಕ. ಜೋಕಟ್ಟೆಯಲ್ಲಿರುವ ತನ್ನ ದೊಡಮ್ಮನ ಮಗಳ ಮನೆಗೆ ಬಂದಿದ್ದ ಶೈಲೇಶ್, ಇಲ್ಲಿಯೇ ಉಳಿದುಕೊಂಡಿದ್ದ.

ಮನೆಯಲ್ಲಿ ಶೈಲೇಶ್ ರವರ ದೊಡ್ಡಮನ ಮಗಳು ಸವಿತಾ, ಆಕೆಯ ಗಂಡ ಸುರೇಶ್ ಮತ್ತು ಮಗು ಸಾಕ್ಷಿ ಮನೆಯ ಒಂದು ಕೋಣೆಯಲ್ಲಿ ಮಲಗಿದ್ದು, ಶೈಲೇಶ್ ಇನ್ನೊಂದು ಕಡೆ ಮಲಗಿದ್ದ. ತಡೆಗೋಡೆ ಕುಸಿದು ಹಂಚಿನ ಮನೆಯ ಮೇಲೆ ಬಿದ್ದಿದ್ದರಿಂದ ಅಲ್ಲಿ ಮಲಗಿದ್ದ ಶೈಲೇಶ್ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ. ಇನ್ನೊಂದು ಕೋಣೆಯಲ್ಲಿ ಮಲಗಿದ್ದ ಇತರ ಮೂರು ಜನರಲ್ಲಿ ಸವಿತಾ ಅವರಿಗೆ ಸಣ್ಣ ಗಾಯವಾಗಿದ್ದು‌, ಚಿಕಿತ್ಸೆ ಪಡೆದಿದ್ದಾರೆ‌ ಎಂದು ತಿಳಿದು ಬಂದಿದೆ.

ಶೈಲೇಶ್ ಅವರ ಮೃತದೇಹವನ್ನು ನಗರದ ಎ.ಜೆ.ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು, ಸ್ಥಳಕ್ಕೆ ಪಣಂಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

 Share: | | | | |


BREAKING : ಗುಂಡು ಹಾರಿಸಿಕೊಂಡು ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್ ಪ್ರಕಾಶ್ ಕಪಾಡೆ ಆತ್ಮಹತ್ಯೆ

Posted by Vidyamaana on 2024-05-15 21:00:12 |

Share: | | | | |


BREAKING : ಗುಂಡು ಹಾರಿಸಿಕೊಂಡು ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್ ಪ್ರಕಾಶ್ ಕಪಾಡೆ ಆತ್ಮಹತ್ಯೆ

ಜಾಮ್ನರ್ : ರಜೆ ಕಳೆಯಲು ಮನೆಗೆ ಬಂದಿದ್ದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್ `ಪ್ರಕಾಶ್ ಕಪಾಡೆ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ರಾತ್ರಿ ಜಾಮ್ನರ್ ನಲ್ಲಿ ಈ ಘಟನೆ ನಡೆದಿದೆ.ಜಾಮ್ನರ್ ಗಣಪತಿ ನಗರ ನಿವಾಸಿ ಪ್ರಕಾಶ್ ಗೋವಿಂದ ಕಪ್ಡೆ (37).

ಕಾಪು : ಕಾಲೇಜು ವಿದ್ಯಾರ್ಥಿನಿ ಶೈನಾಜ್ ನಾಪತ್ತೆ

Posted by Vidyamaana on 2024-02-28 04:26:48 |

Share: | | | | |


ಕಾಪು : ಕಾಲೇಜು ವಿದ್ಯಾರ್ಥಿನಿ ಶೈನಾಜ್ ನಾಪತ್ತೆ

ಕಾಪು: ರಾತ್ರಿ ಮನೆಯಲ್ಲಿ ಮಲಗಿದ್ದ ಕಾಲೇಜು ವಿದ್ಯಾರ್ಥಿನಿ, ಕಟಪಾಡಿ ಏಣಗುಡ್ಡೆ ಗ್ರಾಮದ ಜೆ. ಎನ್‌. ನಗರ ನಿವಾಸಿ ಶೈನಾಜ್‌ (20) ಫೆ. 26 ರಿಂದ ನಾಪತ್ತೆಯಾಗಿದ್ದಾರೆ.ಉಡುಪಿ ಅಜ್ಜರಕಾಡು ಸರಕಾರಿ ಕಾಲೇಜಿನಲ್ಲಿ 2ನೇ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿರುವ ಶೈನಾಜ್‌ ಫೆ.25 ರಂದು ರಾತ್ರಿ ತನ್ನ ಅಜ್ಜಿಯೊಂದಿಗೆ ಮಲಗಿದ್ದು ಮರುದಿನ ಬೆಳಿಗ್ಗೆ ಎದ್ದು ನೋಡಿದಾಗ ನಾಪತ್ತೆಯಾಗಿದ್ದರು.

ಈ ಬಗ್ಗೆ ಸಂಬಂಧಿಕರಲ್ಲಿ, ಸ್ನೇಹಿತರಲ್ಲಿ ವಿಚಾರಿಸಿ, ಉಡುಪಿ ಬಸ್‌ ನಿಲ್ದಾಣ, ಅಜ್ಜರಕಾಡು ಮಹಿಳಾ ಕಾಲೇಜು ಕಡೆಗಳಲ್ಲಿ ಹುಡುಕಾಡಿದರೂ ಪತ್ತೆಯಾಗಿರುವುದಿಲ್ಲ. ಕಾಣೆಯಾದ ತನ್ನ ಮಗಳನ್ನು ಪತ್ತೆ ಮಾಡಿಕೊಡುವಂತೆ ಆಕೆಯ ತಾಯಿ ನೂರ್‌ ಜಹಾನ್‌ ಕಾಪು ಪೊಲೀಸ್‌ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಕಾಣೆಯಾದ ಶೈನಾಜ್‌ 20 ವರ್ಷ ಪ್ರಾಯದವರಾಗಿದ್ದು 5 ಅಡಿ ಎತ್ತರ, ಗೋಧಿ ಮೈ ಬಣ್ಣ ಹೊಂದಿದ್ದು ಮನೆಯಿಂದ ತೆರಳುವಾಗ ನೇವಿ ಬ್ಲೂ ಬಣ್ಣದ ಬುರ್ಕಾ ಧರಿಸಿದ್ದಳು. ಕನ್ನಡ, ತುಳು, ಹಿಂದಿ, ಉರ್ದು ಭಾಷೆ ಬಲ್ಲವಳಾಗಿದ್ದು ಈಕೆಯನ್ನು ಗುರುತಿಸಿದವರು ಕಾಪು ಪೊಲೀಸ್‌ ಠಾಣೆ 0820-2551033 ಗೆ ಮಾಹಿತಿ ನೀಡುವಂತೆ ಪೊಲೀಸರು ತಿಳಿಸಿದ್ದಾರೆ.

ಫೀಲ್ಡಿಗಿಳಿದ ಅಶೋಕ್ ರೈ ಪತ್ನಿ

Posted by Vidyamaana on 2023-04-27 16:59:09 |

Share: | | | | |


ಫೀಲ್ಡಿಗಿಳಿದ ಅಶೋಕ್ ರೈ ಪತ್ನಿ

ಪುತ್ತೂರು: ತಳಮಟ್ಟದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಪ್ರಚಾರ ಕಾರ್ಯ ನಡೆಸುತ್ತಿರುವ ನಡುವೆ, ಅವರ ಪತ್ನಿ ಸುಮಾ ಅಶೋಕ್ ಕುಮಾರ್ ರೈ ಅವರೂ ಫೀಲ್ಡಿಗೆ ಇಳಿದಿದ್ದಾರೆ.

ಮಾ:17 ರಿಂದ 19 ಪಡುಮಲೆ ಪಮ್ಮಲ ಜುಮ್ಮಾ ಮಸ್ಜಿದ್ ನಲ್ಲಿ ಆಂಡ್ ನೇರ್ಚೆ ಧಾರ್ಮಿಕ ಉಪನ್ಯಾಸ

Posted by Vidyamaana on 2023-03-15 14:45:51 |

Share: | | | | |


ಮಾ:17 ರಿಂದ 19 ಪಡುಮಲೆ ಪಮ್ಮಲ ಜುಮ್ಮಾ ಮಸ್ಜಿದ್ ನಲ್ಲಿ ಆಂಡ್ ನೇರ್ಚೆ ಧಾರ್ಮಿಕ ಉಪನ್ಯಾಸ

ಪುತ್ತೂರು: ಪಡುಮಲೆ (ಪಮ್ಮಲ) ಜುಮ್ಮಾ ಮಸ್ಜಿದ್ ವಠಾರದಲ್ಲಿ ಅಂತ್ಯ ವಿಶ್ರಮ ಹೊಂದಿರುವ ಮಹಾನುಭಾವದ ಹೆಸರಲ್ಲಿ ನಡೆದುಕೊಂಡು ಬರುತ್ತಿರುವ ಆಂಡ್ ನೇರ್ಚೆ ಮೂರು ದಿನಗಳ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಮಾ.17, 18 ಹಾಗೂ 19 ರಂದು ಮೂರು ದಿನಗಳ ಕಾಲ ನಡೆಯಲಿದೆ ಎಂದು ಜಮಾಅತ್ ಕಮಿಟಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ತಿಳಿಸಿದ್ದಾರೆ.

ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಡುಮಲೆ ಪ್ರದೇಶ ಮಸೀದಿ, ದೇವಸ್ಥಾನ, ದೈವಸ್ಥಾನಗಗಳನ್ನೊಳಗೊಂಡು ಸೌಹಾರ್ದತೆಯಿಂದ ಕಳೆದ ಹಲವಾರು ವರ್ಷಗಳಿಂದ ನಡೆದುಕೊಂಡು ಬರುತ್ತಿದೆ ಎಂದರು.

ಮಾ.17 ರಂದು ಧ್ವಜಾರೋಹಣದೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಪುತ್ತೂರು ಕೇಂದ್ರ ಜುಮಾ ಮಸೀದಿ ಮುದರ್ರಿಸ್ ಅಸ್ಸಯ್ಯದ್ ಅಹ್ಮದ್ ಪೊಕೋಯ ತಂಙಳ್ ಉದ್ಘಾಟಿಸಿ ಆಶೀರ್ವಚನ ನೀಡುವರು. ಬಹು | ಸಿರಾಜುದ್ದೀನ್ ದಾರಿಮಿ ಕಕ್ಕಾಡ್ ಮುಖ್ಯ ಪ್ರಭಾಷಣ ಮಾಡುವರು. ಮಾ.18 ರಂದು ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಮ್ಮಲ ಜಮಾಅತ್ ಕಮಿಟಿ ಅಧ್ಯಕ್ಷ ಹಾಜಿ ಮಹಮ್ಮದ್ ಬಡಗನ್ನೂರು ವಹಿಸಲಿದ್ದು, ಲುಕ್ಮಾನುಲ್ ಹಕೀಂ ಸಖಾಫಿ ಪುಲ್ಲಾರ ಮುಖ್ಯ ಪ್ರಭಾಷಣ ಮಾಡುವರು. ಮಾ.19 ರಂದು ಸಂಜೆ 5 ಗಂಟೆಗೆ ಸೌಹಾರ್ದ ಸಂಗಮ ನಡೆಯಲಿದ್ದು, ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಉಪನಾಯಕ ಯು.ಟಿ.ಖಾದರ್, ಸದಸ್ಯರಾದ ಕೆ.ಹರೀಶ್ ಕುಮಾರ್, ಮಂಜುನಾಥ ಭಂಡಾರಿ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಮತ್ತಿತರ ಧಾರ್ಮಿಕ, ರಾಜಕೀಯ ನಾಯಕರು ಪಾಲ್ಗೊಳ್ಳಲಿದ್ದಾರೆ. 

ರಾತ್ರಿ 8.30 ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸಯ್ಯದ್ ರಶೀದ್ ಅಲಿ ಶಿಹಾಬ್ ತಂಙಳ್ ಪಾಣಕ್ಕಾಡ್ ಮಹಾಶೀರ್ವಚನ ನೀಡಲಿದ್ದು, ಪಮ್ಮಲ ಮಸೀದಿ ಖತೀಬ ಶಂಸುದ್ದೀನ್ ದಾರಿಮಿ ಉದ್ಘಾಟಿಸುವರು. ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಅಧ್ಯಕ್ಷತೆ ವಹಿಸುವರು. ಇ.ಪಿ.ಅಬೂಬಕ್ಕರ್ ಅಲ್ ಖಾಸಿಮಿ ಪತ್ತನಾಪುರಂ ಮುಖ್ಯ ಪ್ರಭಾಷಣ ಮಾಡುವರು. ಸಮಾರೋಪದ ಬಳಿಕ ಅನ್ನದಾನ ಸೇವೆ ನಡೆಯಲಿದೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಮಾಅತ್ ಕಮಿಟಿ ಉಪಾಧ್ಯಕ್ಷ ಪಕ್ರುದ್ದೀನ್ ಹಾಜಿ, ಖತೀಬ ಶಂದುದ್ದೀನ್ ದಾರಿಮಿ, ಕಾರ್ಯದರ್ಶಿ ಅಲಿಕುಂಞಿ ಹಾಜಿ, ಮಾಜಿ ಖಜಾಂಚಿ ಆದಂ ಹಾಜಿ ಉಪಸ್ಥಿತರಿದ್ದರು.

ಇಂದು (ಏ.20) ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ನಾಮಪತ್ರ ಸಲ್ಲಿಕೆ

Posted by Vidyamaana on 2023-04-19 19:26:30 |

Share: | | | | |


ಇಂದು (ಏ.20) ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ನಾಮಪತ್ರ ಸಲ್ಲಿಕೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಏ.20 ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಮಾಧ್ಯಮ ಪ್ರಮುಖ್ ಚಂದ್ರಶೇಖರ ರಾವ್ ಬಪ್ಪಳಿಗೆ ತಿಳಿಸಿದ್ದಾರೆ.

ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ಒಂದು ಅಭೂತಪೂರ್ವ ಕಾರ್ಯಕ್ರಮವಾಗಲಿದ್ದು, ಗ್ರಾಮ ಮಟ್ಟದಿಂದ ಸುಮಾರು 10 ರಿಂದ 15 ಸಾವಿರ ಕಾರ್ಯಕರ್ತರು ಪಾಲ್ಗೊಳ್ಳಲಿದ್ದು, ನಾಮಪತ್ರ ಪ್ರಕ್ರಿಯೆಗೆ ಸಾಕ್ಷಿಯಾಗಲಿದ್ದಾರೆ ಎಂದು ತಿಳಿಸಿದರು.

ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ ಅಲ್ಲಿ ಪ್ರಾರ್ಥನೆ ಸಲ್ಲಿಸಲಾಗುವುದು. ಬಳಿಕ ಅಂಚ ಕಚೇರಿ ಬಳಿಯಿಂದ  ಬಸ್ ನಿಲ್ದಾಣದ ತನಕ  ಸಾಗಿ ಕೋರ್ಟ್‍ ರಸ್ತೆಯಾಗಿ ಕಿಲ್ಲೇ ಮೈದಾನದ ತನಕ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಕಿಲ್ಲೆ ಮೈದಾನದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು,  ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಹಾಗೂ ಚಲನಚಿತ್ರ ನಟಿ ಶೃತಿ ಪಾಲ್ಗೊಳ್ಳಲಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ   ಚುನಾವಣಾ ಕಾರ್ಯಾಲಯ ವಿಭಾಗದ ರಾಮದಾಸ್ ಹಾರಾಡಿ, ಚುನಾವಣಾ ನಿರ್ವಹಣಾ ಸಮಿತಿಯ ರಾಧಾಕೃಷ್ಣ ಬೋರ್ಕರ್, ಪ್ರಚಾರ ವಿಭಾಗದ ಪ್ರಮುಖರಾದ ಶಿವಕುಮಾರ್, ಪುನಿತ್ ಮಾಡತ್ತಾರು ಉಪಸ್ಥಿತರಿದ್ದರು.

ಮೈಸೂರು ಚಲೋ ಪಾದಯಾತ್ರೆಯಲ್ಲಿ ಅರುಣ್ ಕುಮಾ‌ರ್ ಪುತ್ತಿಲ ಸಹಿತ ಪುತ್ತೂರಿನಿಂದ ಹಲವಾರು ಭಾಗಿ

Posted by Vidyamaana on 2024-08-04 11:23:58 |

Share: | | | | |


ಮೈಸೂರು ಚಲೋ ಪಾದಯಾತ್ರೆಯಲ್ಲಿ ಅರುಣ್ ಕುಮಾ‌ರ್ ಪುತ್ತಿಲ ಸಹಿತ ಪುತ್ತೂರಿನಿಂದ ಹಲವಾರು ಭಾಗಿ

ಪುತ್ತೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ದೋಸ್ತಿಗಳು ಮೈಸೂರಿಗೆ ನಡೆದ ಪಾದಯಾತ್ರೆಯಲ್ಲಿ ಪುತ್ತೂರು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಸಹಿತ ಹಲವಾರು ಮಂದಿ ಪ್ರಮುಖರು ಭಾಗವಹಿಸಿದ್ದರು.

Recent News


Leave a Comment: