ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ದ.ಕ. ತೆಂಗು ರೈತ ಉತ್ಪಾದಕರ ಸಂಸ್ಥೆಯಲ್ಲಿ ಪ್ರಗತಿ ಪರಿಶೀಲನಾ ಸಭೆ

Posted by Vidyamaana on 2023-08-18 10:36:47 |

Share: | | | | |


ದ.ಕ. ತೆಂಗು ರೈತ ಉತ್ಪಾದಕರ ಸಂಸ್ಥೆಯಲ್ಲಿ ಪ್ರಗತಿ ಪರಿಶೀಲನಾ ಸಭೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯು ತೆಂಗಿನ ಮೌಲ್ಯವರ್ಧನೆಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದು,  ಅವುಗಳಲ್ಲೂಂದು ತೆಂಗಿನಕಾಯಿಯ ಗೆರಟೆಯಿಂದ ಉತ್ಪನ್ನಗಳ ತಯಾರಿಸುವುದು. ಈ ಕುರಿತು ತರಬೇತಿಗಳನ್ನು ಸಂಸ್ಥೆಯು ನೀಡುತ್ತಿದ್ದು ತರಬೇತಿಯ ಪ್ರಗತಿ ಪರಿಶೀಲನಾ ಸಭೆ ದಕ್ಷಿಣ ಕನ್ನಡ ಜಿಲ್ಲೆಯ ತೆಂಗು ರೈತ ಉತ್ಪಾದಕರ ಸಂಸ್ಥೆಯ ಕಾರ್ಪೊರೇಟ್ ಕಚೇರಿಯಲ್ಲಿ ಆ. 16ರಂದು ನಡೆದಿದೆ.

ಈ ಸಂದರ್ಭ ನಬಾರ್ಡ್ ಮಂಗಳೂರು, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ್ ಮತ್ತು ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪನಿ ನಿಯಮಿತದ ಅಧಿಕಾರಿಗಳು ಉಪಸ್ಥಿತರಿದ್ದರು. 

ಸಭೆಯಲ್ಲಿ ನಬಾರ್ಡ್ ನ ಎಜಿಎಂ ಸಂಗೀತ ಕರ್ತ, ಭಾರತೀಯ ವಿಕಾಸ್ ಟ್ರಸ್ಟ್ ಮಣಿಪಾಲ್ ಸಂಸ್ಥೆಯ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್, ದಕ್ಷಿಣ ಕನ್ನಡ ಜಿಲ್ಲಾ ತೆಂಗು ರೈತ ಉತ್ಪಾದಕರ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾದ ಕುಸುಮಾಧರ್ ಎಸ್.ಕೆ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೇತನ್ ಎ., NRLM ಯೋಜನೆಯ ತಾಲೂಕು ಮೇಲ್ವಿಚಾರಕರಾದ ನಳಿನಿ ಉಪಸ್ಥಿತರಿದ್ದರು.

ಕೋಡಿಂಬಾಡಿ ಹಾಗೂ ವಿಟ್ಲ ಪಡ್ನೂರು ಗ್ರಾಮದ ತೆಂಗಿನ ಗೆರಟೆ ಕಲಾಕೃತಿ ತಯಾರಿಕೆ ತರಬೇತಿಯಲ್ಲಿ ಭಾಗವಹಿಸಿದ ಸಂಜೀವಿನಿ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು. ತೆಂಗಿನ ಗೆರಟೆ ಕಲಾಕೃತಿ ತರಬೇತಿಯ ನಂತರ ಆದ ಬೆಳವಣಿಗೆ, ಮುಂದಿನ ಯೋಜನೆಗಳು, ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಬಗ್ಗೆ ಚರ್ಚಿಸಲಾಯಿತು.

ಸಾಲಗಾರರ ಕಾಟಕ್ಕೆ ಹೆದರಿ ಇಡೀ ಕುಟುಂಬವೇ ನಾಪತ್ತೆ; ಎಲ್ಲಿದ್ದಾರೆ ಐವರು?

Posted by Vidyamaana on 2024-01-29 12:34:40 |

Share: | | | | |


ಸಾಲಗಾರರ ಕಾಟಕ್ಕೆ ಹೆದರಿ ಇಡೀ ಕುಟುಂಬವೇ ನಾಪತ್ತೆ; ಎಲ್ಲಿದ್ದಾರೆ ಐವರು?

ಮೈಸೂರು : ಮೈಸೂರಿನಲ್ಲಿ ಸಾಲಗಾರರ ಕಾಟಕ್ಕೆ ಹೆದರಿ ಕುಟುಂಬವೊಂದು ನಾಪತ್ತೆಯಾಗಿರುವ ಘಟನೆ ಮೈಸೂರಿನ ಕೆಜಿ ಕೊಪ್ಪಲಿನ ಗ್ರಾಮದ ಒಂದೇ ಕುಟುಂಬದ 5 ಜನರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.ನಾಪತ್ತೆಯಾಗೋಕು ಮುನ್ನ ಕುಟುಂಬದವರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸ್ನೇಹಿತರೊಬ್ಬರ ಮೊಬೈಲ್ ಗೆ ಮೆಸೇಜ್ ಕೂಡ ಕಳುಹಿಸಿದ್ದಾರೆ ಎಂದು ಹೇಳಲಾಗುತ್ತಿದ್ದು, ವಾಟ್ಸಾಪ್ನಲ್ಲಿ ಸ್ನೇಹಿತರಿಗೆ ಸಂದೇಶ ಕಳಿಸಿ ಕುಟುಂಬ ನಾಪತ್ತೆಯಾಗಿದೆ.


ಎಂಟು ದಿನಗಳಿಂದ ಕುಟುಂಬದ 5 ಸದಸ್ಯರು ಸಂಪರ್ಕಕ್ಕೆ ಸಿಗದೇ ನಾಪತ್ತಿಯಾಗಿದ್ದಾರೆ.


ಕೆಜಿ ಕೊಪ್ಪಲಿನ ಮಹೇಶ್ (35) ಪತ್ನಿ ಭವಾನಿ (28) ಪುತ್ರಿ ಪ್ರೇಕ್ಷ (3) ಮಹೇಶ್ ತಂದೆ ಮಹದೇವಪ್ಪ (65) ತಾಯಿ ಸುಮಿತ್ರ (55) ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.ಕುಟುಂಬಸ್ಥರ ನಾಪತ್ತೆ ಬಗ್ಗೆ ಭವಾನಿ ಸಹೋದರ ಜಗದೀಶ್ ಈ ಕುರಿತಂತೆ ದೂರು ನೀಡಿದ್ದು, ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಗೆ ಜಗದೀಶ್ ಅವರು ದೂರು ನೀಡಿದ್ದರೆ.


ಮಾರ್ಕೆಟಿಂಗ್ ಬಿಸಿನೆಸ್ ನಡೆಸುತ್ತಿದ್ದ ಮಹೇಶ್​ಗೆ, ವೀರೇಶ್ ಎಂಬುವರು ವ್ಯವಹಾರಕ್ಕೆ ಸಾಥ್ ನೀಡಿದ್ದರು. ಮಹೇಶ್ ಪರಿಚಯ ಹೇಳಿಕೊಂಡು ವೀರೇಶ್ 30 ರಿಂದ 35 ಲಕ್ಷ ಸಾಲ ಪಡೆದು ಪರಾರಿಯಾಗಿದ್ದರು. ವೀರೇಶ್ ಗೆ ಸಾಲ ನೀಡಿದವರಿಂದ ಮಹೇಶ್ ಮೇಲೆ ಒತ್ತಡ ಹೆಚ್ಚಾಗಿದೆ. ಸಾಲಗಾರರ ನಿರಂತರ ಒತ್ತಡಕ್ಕೆ ಹೆದರಿದ ಮಹೇಶ್ ಕುಟುಂಬ ಸಮೇತ ನಾಪತ್ತೆಯಾಗಿದ್ದಾರೆ.


ಮಧ್ಯಸ್ಥಿಕೆ ವಹಿಸಿ ಸಾಲ ಕೊಡಿಸಿದ್ದೆ. ಸಾಲಗಾರರು ನನಗೆ ತೊಂದರೆ ಕೊಡುತ್ತಿದ್ದಾರೆ. ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ. ಸಾಲಗಾರರು ರಾಕ್ಷಸರಂತೆ ವರ್ತಿಸುತ್ತಿದ್ದಾರೆ. ನಾವು ಕೆರೆ ಅಥವಾ ಬಾವಿಗೆ ಬೀಳುತ್ತೇವೆ. ಒಂದು ವೇಳೆ ಮೃತದೇಹ ದೊರೆತರೆ ಅಂತ್ಯಕ್ರಿಯೆ ಮಾಡಿ ಎಂದು ಸಂದೇಶ ಕಳುಹಿಸಿದ್ದಾರೆ.ಅವರನ್ನಂತೂ ಬಿಡಬೇಡಿ ಎಂದು ಮಹೇಶ್ ಮಸೇಜ್ ಕಳುಹಿಸಿ ನಾಪತ್ತೆಯಾಗಿದ್ದಾರೆ. ರಂಜಿತಾ, ದಿನೇಶ್, ಚಂದ್ರು ಹಾಗೂ ನೇತ್ರ ಎಂಬುವವರ ಹೆಸರು ವಾಯ್ಸ್ ಮೆಸೇಜ್ ನಲ್ಲಿ ಉಲ್ಲೇಖಿಸಿದ್ದಾರೆ. ಸದ್ಯ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದ್ದು ಪೊಲೀಸರು ಹುಡುಕಾಡುತ್ತಿದ್ದಾರೆ.

ಪ್ರೇಮ ಸಂಬಂಧದಲ್ಲಿ ಲೈಂಗಿಕ ಕ್ರಿಯೆ ನಡೆಸುವುದು ಅತ್ಯಾಚಾರವಲ್ಲ : ಕೋರ್ಟ್ ನಿಂದ ಮಹತ್ವದ ತೀರ್ಪು

Posted by Vidyamaana on 2023-10-14 06:38:07 |

Share: | | | | |


ಪ್ರೇಮ ಸಂಬಂಧದಲ್ಲಿ ಲೈಂಗಿಕ ಕ್ರಿಯೆ ನಡೆಸುವುದು ಅತ್ಯಾಚಾರವಲ್ಲ : ಕೋರ್ಟ್ ನಿಂದ ಮಹತ್ವದ ತೀರ್ಪು

ಟ್ನಾ : ಅತ್ಯಾಚಾರ ಪ್ರಕರಣದ ತೀರ್ಪು ಪ್ರಕಟಿಸಿದ ಪಾಟ್ನಾ ಸಿವಿಲ್ ನ್ಯಾಯಾಲಯದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸಂಗಮ್ ಸಿಂಗ್, ಪ್ರೇಮ ಸಂಬಂಧದಲ್ಲಿ ದೈಹಿಕ ಸಂಬಂಧ ಹೊಂದುವುದು ಅತ್ಯಾಚಾರವಲ್ಲ ಎಂದು ಹೇಳಿದ್ದಾರೆ.ಸಂತ್ರಸ್ತೆ ವಯಸ್ಕ ಮಹಿಳೆ ಎಂದು ನ್ಯಾಯಾಲಯ ಹೇಳಿದೆ.ಆರೋಪಿಯು ಅವಳೊಂದಿಗೆ ಪ್ರೇಮ ಸಂಬಂಧ ಹೊಂದಿದ್ದನು ಮತ್ತು ಅವರ ನಡುವೆ ದೈಹಿಕ ಸಂಬಂಧವೂ ಇತ್ತು.


ಈ ಕ್ರಿಮಿನಲ್ ಪ್ರಕರಣವನ್ನು 2015 ರಲ್ಲಿ ಪಾಟ್ನಾ ಜಿಲ್ಲೆಯ ಅಥಮಲ್ಗೊಲಾ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಅತ್ಯಾಚಾರದ ಆರೋಪವನ್ನು ನಿಜವೆಂದು ಪರಿಗಣಿಸಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದರು. ಇದನ್ನು ಗಮನಿಸಿದ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ದಾಖಲೆಗಳನ್ನು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಿಗೆ ವಿಚಾರಣೆಗಾಗಿ ಕಳುಹಿಸಿದ್ದಾರೆ. ಯಾವುದೇ ಪುರಾವೆಗಳು ಸಿಗದ ಕಾರಣ ನ್ಯಾಯಾಲಯವು ಆರೋಪಿಗಳನ್ನು ಖುಲಾಸೆಗೊಳಿಸಿತು.ಮತ್ತೊಂದೆಡೆ, ಈ ಕ್ರಿಮಿನಲ್ ಪ್ರಕರಣದ ದಾಖಲೆಯಲ್ಲಿ, ಇಬ್ಬರ ನಡುವೆ ಹಣದ ವ್ಯವಹಾರದ ಪ್ರಕರಣವಿದೆ ಎಂದು ತೋರುತ್ತದೆ. ಈ ಪ್ರಕರಣವನ್ನು ಅತ್ಯಾಚಾರ ಪ್ರಕರಣವನ್ನಾಗಿ ಮಾಡಲಾಗಿದೆ. ಸಂತ್ರಸ್ತೆಯ ಮೇಲೆ ಅತ್ಯಾಚಾರ ನಡೆದಿರುವುದಕ್ಕೆ ಯಾವುದೇ ಪುರಾವೆಗಳು ಲಭ್ಯವಿಲ್ಲ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ನ್ಯಾಯಾಲಯವು ಆರೋಪಿ ವಿಪಿನ್ ಕುಮಾರ್ ಅಲಿಯಾಸ್ ವಿಪಿನ್ ಲಾಲ್ ಅವರನ್ನು ಖುಲಾಸೆಗೊಳಿಸಿತು.

ಉತ್ತರಕರ್ನಾಟಕ ಭಾಗದ SSLC ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು : MLC ಅಭ್ಯರ್ಥಿ ಭೋಜೇಗೌಡ ಆರೋಪ

Posted by Vidyamaana on 2024-05-19 17:56:29 |

Share: | | | | |


ಉತ್ತರಕರ್ನಾಟಕ ಭಾಗದ SSLC ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು : MLC ಅಭ್ಯರ್ಥಿ ಭೋಜೇಗೌಡ ಆರೋಪ

ಮಂಗಳೂರು : ಪ್ರತಿವರ್ಷ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕದ ಭಾಗದ ಎಲ್ಲಾ ವಿದ್ಯಾರ್ಥಿಗಳು ಮಾಸ್ ಕಾಪಿ ಮಾಡುತ್ತಿದ್ದರು ಎಂದು ಎಂಎಲ್ಸಿ ಬೋಜೆ ಗೌಡ ಗಂಭೀರವಾದಂತ ಆರೋಪವನ್ನು ಮಾಡಿದ್ದಾರೆ.ಮಂಗಳೂರಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಇದು ವಿದ್ಯಾರ್ಥಿಗಳ ಭವಿಷ್ಯದ ವಿದ್ಯಾಭ್ಯಾಸಕ್ಕೆ ಮಾರಕವಾಗುತ್ತಿತ್ತು.ಈ ಹಿನ್ನಲೆ ನೈರುತ್ಯ ಕ್ಷೇತ್ರಗಳಿಗೆ ಪರೀಕ್ಷೆ ಸಮಯ ಅನ್ಯಾಯ ಆಗುತ್ತಿರುವ ಬಗ್ಗೆ ವಿಧಾನ ಪರಿಷತ್‌ನಲ್ಲಿ ಹೇಳಿದ್ದೆ. ಜೊತೆಗೆ ಪರೀಕ್ಷೆ ವೇಳೆ ಸಿಸಿಟಿವಿ ಅಳವಡಿಕೆ ಕುರಿತು ಪರಿಷತ್​​ನಲ್ಲಿ ಆಗ್ರಹಿಸಿದ್ದೆ ಎಂದರು.

ವಿಟ್ಲ:ಸಹೋದರಿಬ್ಬರು ವಿಷ ಸೇವನೆ -ಗಂಭೀರ

Posted by Vidyamaana on 2023-09-13 16:21:22 |

Share: | | | | |


ವಿಟ್ಲ:ಸಹೋದರಿಬ್ಬರು ವಿಷ ಸೇವನೆ -ಗಂಭೀರ

ವಿಟ್ಲ: ಕುದ್ದುಪದವು ನಿವಾಸಿ ಸಹೋದರರಿಬ್ಬರು

ವಿಷ ಸೇವನೆ ಮಾಡಿ ಗಂಭೀರವಾಗಿ ಅಸ್ವಸ್ಥಗೊಂಡು ವಿಟ್ಲ ಆಸ್ಪತ್ರೆಗೆ ದಾಖಲಾಗಿದ್ದಾರೆ.ಮೈರ ಮೂಲದ ಕುದ್ದುಪದವು ನಿವಾಸಿ ಪವನ್ ಹಾಗೂ ಪೃಥ್ವಿ ರಾಜ್ ವಿಷ ಸೇವನೆ ಮಾಡಿದವರು ಎಂದು ತಿಳಿದು ಬಂದಿದೆ. ಎರಡು ಪ್ರತ್ಯೇಕ ತುರ್ತುವಾಹನಗಳ ಮೂಲಕ ಅಸ್ವಸ್ಥರನ್ನು ವಿಟ್ಲ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಬಳಿಕ ಅಲ್ಲಿಂದ ಹೆಚ್ಚುವರಿ ಚಿಕಿತ್ಸೆಗಾಗಿ ವರ್ಗಾವಣೆ ಮಾಡಲಾಗಿದೆ.

ಬೆಳ್ತಂಗಡಿ : ಹಾವು ರಕ್ಷಣೆ ವೇಳೆ ಸ್ನೇಕ್ ಅಶೋಕ್ ಗೆ ಹಾವು ಕಡಿತ, ಸ್ಥಿತಿ ಗಂಭೀರ

Posted by Vidyamaana on 2023-03-26 03:07:34 |

Share: | | | | |


ಬೆಳ್ತಂಗಡಿ : ಹಾವು ರಕ್ಷಣೆ ವೇಳೆ ಸ್ನೇಕ್ ಅಶೋಕ್ ಗೆ ಹಾವು ಕಡಿತ,  ಸ್ಥಿತಿ ಗಂಭೀರ

ಬೆಳ್ತಂಗಡಿ : ಮನೆಗೆ ಬಂದಿದ್ದ ಹಾವು ರಕ್ಷಣೆ ಮಾಡುವ ವೇಳೆ ನಾಗರ ಹಾವು ಕಚ್ಚಿ ಬೆಳ್ತಂಗಡಿಯ ಸ್ನೇಕ್ ಅಶೋಕ್ ಲಾಯಿಲ ಗಂಭೀರ ಸ್ಥಿತಿಯಲ್ಲಿದ್ದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿತ್ತಿದ್ದಾರೆ.


ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಬಳಿಯಲ್ಲಿ ಮಾ.25 ರಂದು ರಾತ್ರಿ ಸುಮಾರು 10 ಗಂಟೆ ವೇಳೆ ಮನೆಯಲ್ಲಿ ನಾಗರ ಹಾವು ಇರುವ ಬಗ್ಗೆ ಮಾಹಿತಿ ನೀಡಿದ್ದು ಅದರಂತೆ ರಕ್ಷಣೆ ಮಾಡಲು ಸ್ನೇಕ್ ಅಶೋಕ್ ಲಾಯಿಲ ಹಿಡಿಯುವಾಗ ಬಲ ಕಾಲಿಗೆ ನಾಗರ ಹಾವು ಕಚ್ಚಿದೆ.ಘಟನೆ ಬಳಿಕ ನೇರ ಉಜಿರೆ ಬೆನಕ ಆಸ್ಪತ್ರೆಗೆ ಬಂದಿದ್ದು ಪರೀಕ್ಷಿಸಿದ ವೈದ್ಯರು ಮಂಗಳೂರು ಆಸ್ಪತ್ರೆಗೆ ರವಾನಿಸಲು ಸೂಚಿಸಿದ್ದಾರೆ. ಬಳಿಕ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಬಂದು ಪ್ರಥಮ ಚಿಕಿತ್ಸೆ ನೀಡಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬಾಬಾ ಅಂಬುಲೆನ್ಸ್ ಚಾಲಕ ಜಲೀಲ್ ಮತ್ತು ಪತ್ರಕರ್ತ ಪ್ರತೀಕ್ ಕೋಟ್ಯಾನ್ ತಕ್ಷಣ ಮಂಗಳೂರು ಕಂಕನಾಡಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆಗೆ ದಾಖಲಿಸಿದ್ದಾರೆ.ಸ್ನೇಕ್ ಅಶೋಕ್ ಲಾಯಿಲ ಗಂಭೀರ ಸ್ಥಿತಿಯಲ್ಲಿದ್ದು ಸದ್ಯ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ನೇಕ್ ಅಶೋಕ್ ಅವರಿಗೆ ಈ ಮೊದಲು ನಾಗರ ಹಾವು ಕಚ್ಚಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಪ್ರಸಿದ್ಧ ಹಾವು ರಕ್ಷಕರಲ್ಲಿ ಸ್ನೇಕ್ ಅಶೋಕ್ ಲಾಯಿಲ ಒಬ್ಬರಾಗಿದ್ದಾರೆ.

Recent News


Leave a Comment: