ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಉಡುಪಿ ಜಲಪಾತ ವೀಕ್ಷಣೆಗೆ ತೆರಳಿದ ಯುವಕ ಕಾಲು ಜಾರಿ ಬಿದ್ದು ನೀರುಪಾಲು

Posted by Vidyamaana on 2023-07-24 07:23:21 |

Share: | | | | |


ಉಡುಪಿ ಜಲಪಾತ ವೀಕ್ಷಣೆಗೆ ತೆರಳಿದ ಯುವಕ ಕಾಲು ಜಾರಿ  ಬಿದ್ದು ನೀರುಪಾಲು

ಉಡುಪಿ:ಜಲಪಾತ ವೀಕ್ಷಣೆಗೆ ತೆರಳಿದ ಯುವಕ ಕಾಲು ಜಾರಿ ಬಿದ್ದು ನೀರುಪಾಲಾದ ಘಟನೆ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಅರಶಿನಗುಂಡಿ ಜಲಪಾತದಲ್ಲಿ ಸಂಭವಿಸಿದೆ. ಯುವಕ ನೀರಿಗೆ ಬೀಳುತ್ತಿರುವ ಭಯಾನಕ ದೃಶ್ಯ ಸ್ನೇಹಿತನ ಮೊಬೈಲ್ ನಲ್ಲಿ ಸೆರೆಯಾಗಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ನೀರುಪಾಲಾದ ಯುವಕ.


ನಿನ್ನೆ ಭಾನುವಾರವಾದ್ದರಿಂದ ಶರತ್‌ ಮಧ್ಯಾಹ್ನ ಕೊಲ್ಲೂರಿಗೆ ತನ್ನ ಸ್ನೇಹಿತ ಗುರುರಾಜ್ ನೊಂದಿಗೆ ಕಾರಿನಲ್ಲಿ ಬಂದಿದ್ದರು. ಬಳಿಕ ಅಲ್ಲಿಂದ ಶರತ್ ಅರಶಿನಗುಂಡಿ ಜಲಪಾತಕ್ಕೆ ತೆರಳಿದ್ದರು. ಈ ವೇಳೆ ಬಂಡೆಕಲ್ಲಿನ ಮೇಲೆ ನಿಂತು ಜಲಪಾತದಿಂದ ನೀರು ಧುಮ್ಮಿಕ್ಕುವ ದೃಶ್ಯ ನೋಡುತ್ತಿದ್ದ ವೇಳೆ ಅನಾಹುತ ನಡೆದು ಹೋಗಿದೆ.


ಕೂಡಲೇ ಶರತ್ ಸ್ನೇಹಿತ ಗುರುರಾಜ್ ಸಮೀಪದಲ್ಲಿರುವ ಅರಣ್ಯ ಇಲಾಖೆ ಸಿಬ್ಬಂದಿಗೆ ಸುದ್ದಿ ಮುಟ್ಟಿಸಿದ್ದಾರೆ. ತಕ್ಷಣ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿ ಸ್ಥಳೀಯರ ಸಹಕಾರದಿಂದ ಕಾರ್ಯಾಚರಣೆ ನಡೆಸಿದ್ದಾರೆ .ಆದರೆ ಶರತ್ ಪತ್ತೆಯಾಗಲಿಲ್ಲ. ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಸಿಬ್ಬಂದಿಗಳು, ಕೊಲ್ಲೂರು ಪೊಲೀಸರು ಸೋಮವಾರ ಬೆಳಿಗ್ಗೆನಿಂದಲೂ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು, ಈಜುಪಟು ಈಶ್ವರ್ ಮಲ್ಪೆ ಮತ್ತವರ ತಂಡವೂ ಆಗಮಿಸಿದೆ.ಶರತ್ ಸ್ವ ಉದ್ಯೋಗಿಯಾಗಿದ್ದು, ಅವರ ಸ್ನೇಹಿತ ಗುರುರಾಜ್ ಐಟಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು, ಕಳೆದ ಕೆಲ ದಿನಗಳಿಂದ ಮಳೆ ಜೋರಾಗಿ ಸುರಿಯುತ್ತಿದ್ದರಿಂದ ಅರಶಿನಗುಂಡಿ ಜಲಪಾತದಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಲಾಗಿತ್ತು. ಅರಣ್ಯ ಇಲಾಖೆಯ ಸಿಬ್ಬಂದಿ ಪ್ರವೇಶ ದ್ವಾರದಲ್ಲಿರುವುದನ್ನು ಗಮನಿಸಿದ ಶರತ್ ಹಾಗೂ ಆತನ ಸ್ನೇಹಿತ ಬೇರೊಂದು ದಾರಿಯಲ್ಲಿ ಜಲಪಾತಕ್ಕೆ ತೆರಳಿದ್ದರು ಎನ್ನಲಾಗಿದೆ.


ಇನ್ನು ಶರತ್ ಸ್ನೇಹಿತ ಗುರುರಾಜ್ ಜಲಪಾತದ ದೃಶ್ಯಗಳನ್ನು ತನ್ನ ಮೊಬೈಲ್‌ನಲ್ಲಿಸೆರೆ ಹಿಡಿಯುತ್ತಿರುವ ವೇಳೆಯಲ್ಲೇ ಶರತ್ ಕಾಲು ಜಾರಿ ಬಿದ್ದಿದ್ದು, ಆ ದೃಶ್ಯವೂ ಮೊಬೈಲ್ ನಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಭಾರತೀಯರಿಗೆ ಗುಡ್ ನ್ಯೂಸ್ : ವೀಸಾ ಮುಕ್ತ ಪ್ರವೇಶ ಘೋಷಿಸಿದ ಈ 6 ದೇಶಗಳು!

Posted by Vidyamaana on 2024-08-17 05:26:21 |

Share: | | | | |


ಭಾರತೀಯರಿಗೆ ಗುಡ್ ನ್ಯೂಸ್ : ವೀಸಾ ಮುಕ್ತ ಪ್ರವೇಶ ಘೋಷಿಸಿದ ಈ 6 ದೇಶಗಳು!

ನವದೆಹಲಿ : ಭಾರತೀಯ ಪ್ರವಾಸಿಗರಿಗೆ ಸಿಹಿಸುದ್ದಿ,ಆರು ದೇಶಗಳು ಭಾರತೀಯ ಪ್ರವಾಸಿಗರಿಗೆ ವೀಸಾ ಮುಕ್ತ ಪ್ರವೇಶವನ್ನು ಘೋಷಿಸಿವೆ. ಅದರಂತೆ, ಈ ಆರು ದೇಶಗಳು ವೀಸಾ ಇಲ್ಲದೆ ಹೋಗಬಹುದು.ಆದಾಗ್ಯೂ, ಆ ದೇಶಕ್ಕೆ ಆಗಮಿಸಿದ ನಂತರ ವೀಸಾ-ಆನ್-ಅರೈವಲ್ ತೆಗೆದುಕೊಳ್ಳಬೇಕು.ವೀಸಾ-ಆನ್-ಅರೈವಲ್ ಎಂದರೆ ಆಯಾ ದೇಶಗಳಿಗೆ ಹೋಗುವಾಗ ಮುಂಚಿತವಾಗಿ ವೀಸಾ ಅಗತ್ಯವಿಲ್ಲ. ಆ ದೇಶದಲ್ಲಿ ಇಳಿದ ನಂತರ, ನಿಮ್ಮ ದಾಖಲೆಗಳನ್ನು ವಿಮಾನ ನಿಲ್ದಾಣದಲ್ಲಿ ಪರಿಶೀಲಿಸಲಾಗುತ್ತದೆ ಮತ್ತು ವೀಸಾ ನೀಡಲಾಗುತ್ತದೆ.ಜೋರ್ಡಾನ್ ನ ಆರು ದೇಶಗಳಲ್ಲಿ ಒಂದಾಗಿದೆ, ಇದು ಮೃತ ಸಮುದ್ರದ ದಡದಲ್ಲಿದೆ. ಬಹಳ ಸುಂದರವಾದ ದೇಶ. ಸುಣ್ಣದ ಕಲ್ಲು ಮತ್ತು ಗ್ರಾನೈಟ್ ನಿಂದ ನಿರ್ಮಿಸಲಾದ ವಾಡಿ ರಮ್ ಕಣಿವೆ ಬಹಳ ಪ್ರಸಿದ್ಧವಾಗಿದೆ. ಐತಿಹಾಸಿಕ ನಗರವಾದ ಪೆಟ್ರಾ ಪ್ರವಾಸಿಗರಾಗಿಯೂ ಜನಪ್ರಿಯವಾಗಿದೆ. ವೀಸಾ ಆನ್ ಆಗಮನದೊಂದಿಗೆ ಒಂದು ತಿಂಗಳು ಇರಬಹುದು.

ನನ್ನ ಬೂತ್ ನಾನೇ ಅಭ್ಯರ್ಥಿ ಕಾಂಗ್ರೆಸ್ಸಿನಿಂದ ವಿಶೇಷ ಅಭಿಯಾನ

Posted by Vidyamaana on 2023-05-07 06:52:22 |

Share: | | | | |


ನನ್ನ ಬೂತ್ ನಾನೇ ಅಭ್ಯರ್ಥಿ ಕಾಂಗ್ರೆಸ್ಸಿನಿಂದ ವಿಶೇಷ ಅಭಿಯಾನ

ಪುತ್ತೂರು: ಮೇ 10ರ೦ದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಇನ್ನೇನು ನಾಲ್ಕು ದಿನಗಳು ಮಾತ್ರ ಬಾಕಿ ಉಳಿದಿದ್ದು ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಪರವಾಗಿ ಮೇ 6ರಂದು ನನ್ನ ಬೂತ್ ನಾನೇ ಅಭ್ಯರ್ಥಿ ವಿಶೇಷ ಅಭಿಯಾನ ನಡೆಯಿತು.


ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 220 ಬೂತ್‌ಗಳಿಗೂ ಒಂದೇ ದಿನ ತೆರಳಿ ಅಭ್ಯರ್ಥಿ ಪರ ಮತಯಾಚಿಸಿದರು. ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ನೀಡಲಾಗಿರುವ ಗ್ಯಾರೆಂಟಿಗಳ ಭರವಸೆ, ಪಕ್ಷ ಮಾಡಿರುವ ಸಾಧನೆ ಮತ್ತು ಅಭ್ಯರ್ಥಿ ಅಶೋಕ್ ಕುಮಾರ್ ರೈಯವರು ಮಾಡಿರುವ ಜನ ಸೇವೆ ಇತ್ಯಾದಿಗಳ ಕುರಿತು ಮತದಾರರಿಗೆ ಮಾಹಿತಿ ನೀಡಿದ ಪಕ್ಷದ ಕಾರ್ಯಕರ್ತರು ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ ಪುತ್ತೂರಿನ ಸರ್ವಾಂಗೀಣ ಅಭಿವೃದ್ಧಿಗೆ ಆಶೀರ್ವದಿಸುವಂತೆ ಕೋರಿದರು.

ಉದ್ಯಮಿ ಪರ್ಲಡ್ಕ ಮೊಹಮ್ಮದ್ ಹಾರೀಸ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

Posted by Vidyamaana on 2023-05-28 01:51:41 |

Share: | | | | |


ಉದ್ಯಮಿ ಪರ್ಲಡ್ಕ  ಮೊಹಮ್ಮದ್  ಹಾರೀಸ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

ಪುತ್ತೂರು:ಪರ್ಲಡ್ಕ ನಿವಾಸಿಯಾಗಿದ್ದು ಸೌದಿ ಅರೇಬಿಯಾದಲ್ಲಿ ಉದ್ಯಮಿಯಾಗಿದ್ದ ಮೊಹಮ್ಮದ್ ಹಾರೀಸ್ (43ವ)ರವರು ಮೇ 27ರಂದು ರಾತ್ರಿ ಸೌದಿ ಅರೇಬಿಯಾ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು.


ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ, ದರ್ಬೆ ನಿವಾಸಿಯಾಗಿದ್ದ ದಿ.ಮೊಹಮ್ಮದ್ ಹಟ್ಟಾ ಅವರ ಸಹೋದರ, ಸಿಂಡಿಕೇಟ್ ಬ್ಯಾಂಕ್‌ನ ನಿವೃತ್ತ ಉದ್ಯೋಗಿ ಪರ್ಲಡ್ಕದ ಪಿ. ಅಬ್ದುಲ್ಲಾ ಹಾಜಿ ದರ್ಬೆ ಎಂಬವರ ಪುತ್ರ ಮೊಹಮ್ಮದ್ ಹಾರೀಸ್ ಅವರು ಹಲವು ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಸ್ವಂತ ಉದ್ಯಮ ಮಾಡಿಕೊಂಡು ಪತ್ನಿ ಮಕ್ಕಳು ಸಮೇತರಾಗಿ ಸೌದಿ ಅರೇಬಿಯಾದ ಜುಬೈಲ್‌ನಲ್ಲಿ ವಾಸ್ತವ್ಯ ಹೊಂದಿದ್ದರು. ಮೇ 27ರಂದು ರಾತ್ರಿ ಅವರ ಆರೋಗ್ಯದಲ್ಲಿ ಏರುಪೇರಾಗಿ ಹೃದಯಾಘಾತದಿಂದ ನಿಧನರಾದರು.ಮೃತರು ತಂದೆ , ತಾಯಿ, ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಮತ್ತು ಓರ್ವ ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

ಭಾರತ ಸೇರಿ ಜಗತ್ತಿನಾದ್ಯಂತ X ಸರ್ವರ್ ಡೌನ್ ಬಳಕೆದಾರರ ಪರದಾಟ

Posted by Vidyamaana on 2024-04-23 21:50:13 |

Share: | | | | |


ಭಾರತ ಸೇರಿ ಜಗತ್ತಿನಾದ್ಯಂತ X ಸರ್ವರ್ ಡೌನ್ ಬಳಕೆದಾರರ ಪರದಾಟ

ನವದೆಹಲಿ: ಟ್ವಿಟರ್ ಸ್ಥಗಿತದ ಕೆಲವೇ ವಾರಗಳ ನಂತರ, ಎಲೋನ್ ಮಸ್ಕ್ ಒಡೆತನದ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ (ಹಿಂದೆ ಟ್ವಿಟರ್) ಮಂಗಳವಾರ ಮತ್ತೆ ಸರ್ವರ್‌ ಡೌನ್ ಆಗಿರುವ ಬಗ್ಗೆ ವರದಿ ಬರುತ್ತಿದ್ದಾವೆ.ಎಕ್ಸ್‌ ಸ್ಥಗಿತ ಟ್ರ್ಯಾಕಿಂಗ್ ವೆಬ್ಸೈಟ್ Downdetector.com ಪ್ರಕಾರ, ಭಾರತದಲ್ಲಿ ನೂರಾರು ಬಳಕೆದಾರರು ಎಕ್ಸ್ ಅನ್ನು ಪ್ರವೇಶಿಸುವಲ್ಲಿ, ಬಳಕೆ ಮಾಡುವಲ್ಲಿ ಸಮಸ್ಯೆಗಳನ್ನು ಎದುರಿಸಿದ್ದಾರೆ.

ಪುತ್ತೂರು : ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ !

Posted by Vidyamaana on 2023-04-03 06:46:07 |

Share: | | | | |


ಪುತ್ತೂರು : ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ  ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ !

ಪುತ್ತೂರು : ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ತೆರಳಿ ನಾಪತ್ತೆಯಾಗಿದ್ದ ಚಿಕ್ಕಮುಡ್ನೂರು ಗ್ರಾಮದ ಪುಳುವಾರು ನಿವಾಸಿಯ ಮೃತದೇಹವು ಚಿಕ್ಕಮುಡ್ನೂರು ಗ್ರಾಮದ ಗುತ್ತಿಕಲ್ಲ್ ಎಂಬಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಚಿಕ್ಕಮುಡ್ನೂರು ಗ್ರಾಮದ ಪುಳುವಾರು ನಿವಾಸಿ ಶಿವಪ್ಪ ಗೌಡ (45) ಮೃತರು.ಶಿವಪ್ಪ ಗೌಡ ರವರು ಮಾ.17ಕ್ಕೆ ಕೆಲಸಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿ ಮನೆಯಿಂದ ಹೋಗಿದ್ದು,  ನಂತರ ವಾಪಸ್ಸು ಬಾರದೆ ನಾಪತ್ತೆಯಾಗಿದ್ದರು. ಇದೀಗ ಅವರ ಮೃತದೇಹವು ನೇಣುಬಿಗಿದ ಸ್ಥಿತಿಯಲ್ಲಿ ಚಿಕ್ಕಮುಡ್ನೂರು ಗ್ರಾಮದ ಗುತ್ತಿಕಲ್ಲ್ ಎಂಬಲ್ಲಿನ ಗುಡ್ಡದಲ್ಲಿ ಪತ್ತೆಯಾಗಿದೆ.

Recent News


Leave a Comment: