ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಸುದ್ದಿಗಳು News

Posted by vidyamaana on 2023-09-23 20:22:34 | Last Updated by Vidyamaana on 2023-09-23 20:22:34

Share: | | | | |


ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ‌. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.

ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

 Share: | | | | |


ಗುಂಡು ಸೂಜಿ ನುಂಗಿದ ಬಾಲಕ: ಬ್ರಾಂಕೋಸ್ಕೋಪ್ ಮೂಲಕ ಹೊರತೆಗೆದ ರಿಮ್ಸ್ ವೈದ್ಯರು

Posted by Vidyamaana on 2023-12-03 12:26:48 |

Share: | | | | |


ಗುಂಡು ಸೂಜಿ ನುಂಗಿದ ಬಾಲಕ: ಬ್ರಾಂಕೋಸ್ಕೋಪ್ ಮೂಲಕ ಹೊರತೆಗೆದ ರಿಮ್ಸ್ ವೈದ್ಯರು

ರಾಯಚೂರು: ಆಟವಾಡುವ ಭರದಲ್ಲಿ ಬಾಲಕನೊಬ್ಬ ಗುಂಡು ಸೂಜಿ ನುಂಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.ಜಿಲ್ಲೆಯ ಸಿರವಾರ ತಾಲೂಕಿನ ಮುಚ್ಚುಳ‌ಗುಡ್ಡ ಕ್ಯಾಂಪ್​ನ 13 ವರ್ಷದ ಬಾಲಕ ಶಿವಕುಮಾರ ದೇವರಾಜ ಶಾಲೆಯಲ್ಲಿ ಆಟವಾಡುವ ವೇಳೆ ನೋಟಿಸ್​ ಬೋರ್ಡ್ ಅಂಟಿಸುವ ಗುಂಡು ಸೂಜಿಯನ್ನು ಬಾಯಿಯಲ್ಲಿ ಇಟ್ಟುಕೊಂಡಾಗ ಆಕಸ್ಮಿಕವಾಗಿ ನುಂಗಿದ್ದಾನೆ. ಪರಿಣಾಮ ಗುಂಡು ಸೂಜಿಯು ಬಲ ಶ್ವಾಸಕೋಶದೊಳಗಡೆ ಸೇರಿತ್ತು. 


ಹೀಗಾಗಿ ಚಿಕಿತ್ಸೆಗಾಗಿ ಬಾಲಕನನ್ನು ರಿಮ್ಸ್ ಬೋಧಕ ಆಸ್ಪತ್ರೆಗೆ ದಾಖಲಿಸಲಾಯಿತು. ದಾಖಲಾದ ಬಾಲಕನ ಶ್ವಾಸಕೋಶದ ಎಕ್ಸ್​ ರೇ ಮಾಡಿಸಿದಾಗ ಬಲ ಶ್ವಾಸಕೋಶದಲ್ಲಿ ಸೂಚನಾ ಫಲಕದ ಗುಂಡು ಇರುವುದು ಖಚಿತಪಡಿಸಿಕೊಂಡು, ಆಗ ರಿಮ್ಸ್ ವೈದ್ಯರ ತಂಡ ಬ್ರಾಂಕೋಸ್ಕೋಪ್ ಮೂಲಕ ಗುಂಡು ಸೂಜಿಯನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. 


ಶಸ್ತ್ರ ಚಿಕಿತ್ಸೆ ತಂಡದಲ್ಲಿ ಇಎನ್‌ಟಿ ತಜ್ಞ ವೈದ್ಯ ಡಾ. ಅರವಿಂದ್ ಸಂಗವಿ, ಅರವಳಿಕೆ ತಜ್ಞ ವೈದ್ಯ ಡಾ.ಕಿರಣ ನಾಯಕ, ಡಾ. ಮಲ್ಲಿಕಾರ್ಜುನ್ .ಕೆ ಪಾಟೀಲ್, ಡಾ.ಸಿಂಧು ಪಿಜಿ, ಡಾ.ಇಂದುಮಣಿ, ನರ್ಸಿಂಗ್ ಅಧಿಕಾರಿ ಅಮರೇಶ್ ಸಕ್ರಿ, ಓಟಿ ತಂತ್ರಜ್ಞರಾದ ಲಿಂಗರಾಜ್, ಸುಮನ್ ಕ್ಲ್ಯಾರಿ, ನಾರಾಯಣ, ಶಂಕರ ಸೇರಿದಂತೆ ಇನ್ನಿತರಿದ್ದರು.


ಸಂಸ್ಥೆಯ ನಿರ್ದೇಶಕ ಡಾ.ಬಸವರಾಜ ಪೀರಾಪುರ್, ರಿಮ್ಸ್ ಮೆಡಿಕಲ್ ಕಾಲೇಜ ಪ್ರಾಂಶುಪಾಲ ಡಾ.ಬಸವರಾಜ್ ಎಂ ಪಾಟೀಲ್, ವೈದ್ಯಕೀಯ ಅಧೀಕ್ಷಕ ಡಾ.ಭಾಸ್ಕರ್ ಕೆಂಪೇಗೌಡ, ಇಎನ್‌ಟಿ ವಿಭಾಗದ ಮುಖ್ಯಸ್ಥ ಡಾ.ವೆಂಕಟೇಶ್ ಹಾಗೂ ಅರವಳಿಕೆ ಮುಖ್ಯಸ್ಥ ಡಾಕ್ಟರ್ ನಂದನ್ ಪಡಶೆಟ್ಟಿ, ಓಟಿ ಇಂಚಾರ್ಜ್ ಶುಶ್ರುಷಕ ಮೇಲ್ವಿಚಾರಕಿ ಆಶಾ ಹುಂಬಿ ಅತ್ಯುತ್ತಮ ಉಪಕರಣಗಳನ್ನು ಆಸ್ಪತ್ರೆಗೆ ಒದಗಿಸಿ ಶಸ್ತ್ರ ಚಿಕಿತ್ಸೆ ಯಶಸ್ವಿಗೊಳಿಸಿದ್ದಕ್ಕೆ ಇವರಿಗೆಲ್ಲ ಬಾಲಕನ ಕುಟುಂಬಸ್ಥರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಸದ್ಯ ಶಿವಕುಮಾರ ಆರಾಮವಾಗಿ ಶಸ್ತ್ರಚಿಕಿತ್ಸೆ ಪಡೆದುಕೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾನೆ.ಸೇಫ್ಟಿ ಪಿನ್ ನುಂಗಿದ್ದ 5 ತಿಂಗಳ ಮಗು: ಪಶ್ಚಿಮ ಬಂಗಾಳದಲ್ಲಿ ಈ ಘಟನೆ ನಡೆದಿತ್ತು. 5 ತಿಂಗಳ ಮಗು ಅಚಾನಕ್​ ಆಗಿ ಸೇಫ್ಟಿ ಪಿನ್ ನುಂಗಿತ್ತು. ಇದು ಪೋಷಕರಿಗೆ ತಿಳಿದಿರಲಿಲ್ಲ. ಮಗುವಿಗೆ ಉಸಿರಾಟದ ತೊಂದರೆಯಾಗಲು ಆರಂಭವಾದಾಗ ಅವರು ಮಗುವನ್ನು ಕರೆದುಕೊಂಡು ಸಮೀಪ ವೈದ್ಯರ ಬಳಿ ಹೋದಾಗ ಶೀತ ಭಾದೆ ಉಂಟಾಗಿದೆ ಎಂದು ಚಿಕಿತ್ಸೆ ನೀಡಲು ಆರಂಭಿಸಿದರು. ಆದರೆ, ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಕೋಲ್ಕತ್ತಾ ವೈದ್ಯಕೀಯ ಕಾಲೇಜಿಗೆ ದಾಖಲಿಸಿದರು. ಅಲ್ಲಿ ವೈದ್ಯರು ಎಕ್ಸ್ - ರೇ ಮಾಡಿದಾಗ ಶ್ವಾಸನಾಳದಲ್ಲಿ ಉದ್ದನೆಯ ಸೇಫ್ಟಿ ಪಿನ್​ ಸಿಲುಕಿರುವುದು ಗೊತ್ತಾಗಿದೆ. ಫಿನ್​ನ ಚುಪಾದ ಒಂದು ತುದಿ ಬಾಯ್ತೆರೆದುಕೊಂಡಿರುವುದನ್ನೂ ಕಂಡುಕೊಂಡರು. ಹೀಗಾಗಿ ಮಗುವಿಗೆ 40 ನಿಮಿಷದ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ನೆರವೇರಿಸಿ ಪಿನ್ ಅ​ನ್ನು ಹೊರತೆಗೆದು ಮಗುವಿನ ಪ್ರಾಣ ಉಳಿಸಿದ್ದರು.

ಗೃಹಲಕ್ಷ್ಮಿ ಯೋಜನೆ ಎಲ್ಲರಿಗೂ ದೊರೆಯುವಂತಾಗಬೇಕು

Posted by Vidyamaana on 2023-12-24 11:43:47 |

Share: | | | | |


ಗೃಹಲಕ್ಷ್ಮಿ ಯೋಜನೆ ಎಲ್ಲರಿಗೂ ದೊರೆಯುವಂತಾಗಬೇಕು

ಪುತ್ತೂರು: ಕಾಂಗ್ರೆಸ್ ಸರಕರದ ಗ್ಯಾರಂಟಿ ಯೋಜನೆಯಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯು ಕೆಲವೊಂದು ಮಹಿಳೆಯರಿಗೆ ಇನ್ನೂ ಸಿಕ್ಕಿಲ್ಲ ಇದು ಯಾವ ಕಾರಣಕ್ಕೆ ಸಿಕ್ಕಿಲ್ಲ ಮತ್ತು ಅದಕ್ಕೆ ತಕ್ಷಣವೇ ಪರಿಹಾರ ಒದಗಿಸಿ ಅವರಿಗೆ ಸರಕಾರದಿಂದ ಗೃಹಲಕ್ಷ್ಮಿ ಯೋಜನೆ ದೊರೆಯುವಂತೆ ಮಾಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ. ಗ್ರಾಮೀಣ ಭಗದ ಜನರಿಗೆ ತಮ್ಮ ಬ್ಯಾಂಕ್ ಖಾತೆಯ ಬಗ್ಗೆ ಮತ್ತು ಅದರಲ್ಲಿ ಮಾಡಬೆಕಾದ ತಾಂತ್ರಿಕ ವಿಚಾರಗಳ ಬಗ್ಗೆ ಮಾಹಿತಿ ಕೊರತೆ ಇದೆ. ಹಲವು ಬಾರಿ ಬ್ಯಾಂಕ್‌ಗಳಿಗೆ ತೆರಳಿದರೂ ಖಾತೆ ಗೆ ಇನ್ನೂ ಹಣ ಬಂದಿಲ್ಲ ಎಂಬ ದೂರುಗಳಿವೆ. ಗ್ರಾಮೀಣ ಭಾಗದ ಬಡವರು ಬ್ಯಾಂಕ್‌ಗಳಿಗೆ ಬಂದಾಗ ಅವರಿಗೆ ಅದರ ಬಗ್ಗೆ ಸರಿಯದ ಮಾಹಿತಿಯನ್ನು ನೀಡಬೇಕು ಮತ್ತು ಅವರ ಖಾತೆಗೆ ಯಾಕೆ ಹಣ ಜಮೆಯಗುತ್ತಿಲ್ಲ ಎಂಬುದರ ಬಗ್ಗೆಯೂ ತಿಳಿಸಬೇಕು. ಡಿ.೨೭,೨೮,೨೯ ರಂದು ಮೂರು ದಿನಗಳಲ್ಲಿ ಕ್ಷೇತ್ರದ ಎಲ್ಲಾ ಗ್ರಾಪಂ ಕಚೇರಿಗಳಲ್ಲಿ ಕ್ಯಾಂಪ್ ವ್ಯವಸ್ಥೆ ಮಾಡಲಾಗಿದೆ ಜನತೆ ಇದರ ಪ್ರಯೋಜನವನ್ನು ಪಡೆದು ಸರಕಾರದಿಂದ ದೊರೆಯುವ ಸೌಲಬ್ಯವನ್ನು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಫೆ.18ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

Posted by Vidyamaana on 2023-02-17 04:39:36 |

Share: | | | | |


ಫೆ.18ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಮಹೋತ್ಸವ ಪೂರ್ವಶಿಷ್ಟ ಪದ್ಧತಿಯಂತೆ ಫೆ.18 ರಂದು ನಡೆಯಲಿದೆ.

ಮಧ್ಯಾಹ್ನ ಹವನ ಅಭಿಷೇಕ ಪೂಜಾದಿಗಳು, ರಾತ್ರಿ ಶ್ರೀ ದೇವರ ಬಲಿ ಹೊರಟು, ತಂತ್ರ ಸುತ್ತು ಜರಗಿ ಬಳಿಕ ಹೊರಾಂಗಣದಲ್ಲಿ ಉಡಕೆ, ಚಂಡೆ, ವಾದ್ಯ, ಸರ್ವವಾದ್ಯ ಸುತ್ತುಗಳು ನಡೆಯಲಿದೆ.

ಬಳಿಕ ಕಟ್ಟೆಪೂಜೆ, ಪಲ್ಲಕಿ ಉತ್ಸವ, ಚಂದ್ರಮಂಡಲ ರಥೋತ್ಸವ, ಕೆರೆ ಉತ್ಸವ, ತೆಪ್ಪೋತ್ಸವದೊಂದಿಗೆ ಉತ್ಸವ ಮುಗಿದು, ತಡರಾತ್ರಿ ಏಕಾದಶ ರುದ್ರಾಭಿಷೇಕ, ಮಹಾಪೂಜೆ, ಬಲಿ ಉತ್ಸವ ನೆರವೇರಲಿದೆ. ಜತೆಗೆ ಪಲ್ಲಕಿ ಉತ್ಸವ, ಅಷ್ಟಾವಧಾನ ಸೇವೆ ನಡೆಯಲಿದೆ ಎಂದು ಶ್ರೀ ದೇವಸ್ಥಾನ ಪ್ರಕಟಣೆಯಲ್ಲಿ ತಿಳಿಸಿದೆ.

ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿ ಮುಸ್ಲಿಂ ಅಂಧ ವೃದ್ಧನ ಮೇಲೆ ಹಲ್ಲೆ: ಪ್ರಕರಣ ದಾಖಲು

Posted by Vidyamaana on 2023-12-02 12:05:19 |

Share: | | | | |


ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿ ಮುಸ್ಲಿಂ ಅಂಧ ವೃದ್ಧನ ಮೇಲೆ ಹಲ್ಲೆ: ಪ್ರಕರಣ ದಾಖಲು

ಗಂಗಾವತಿ: ಜೈ ಶ್ರೀರಾಮ್ ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿ ಯುವಕರ ಗುಂಪೊಂದು ಮುಸ್ಲಿಂ ಅಂಧ ವೃದ್ಧನಿಗೆ ಥಳಿಸಿದ ಘಟನೆ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಮಹೆಬೂಬನಗರದ ನಿವಾಸಿ ಹುಸೇನಸಾಬ್​ (70) ಎಂಬುವರ ಮೇಲೆ ನವೆಂಬರ್​ 20ರಂದು ಹಲ್ಲೆ ನಡೆದಿದೆ. ಗಂಗಾವತಿಯ ಜಯನಗರದ ಬೈಪಾಸ್ ರಸ್ತೆಯಲ್ಲಿ ನಡೆದು ಹೋಗುತ್ತಿರುವಾಗ ಯುವಕರ ಗುಂಪೊಂದು ತಮ್ಮನ್ನು ಅಡ್ಡಗಟ್ಟಿ, ಜೈ ಶ್ರೀರಾಮ್ ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿದೆ. ಬಳಿಕ ಅವಾಚ್ಯ ಶಬ್ದಗಳಿಂದ ನಿಂದಿಸಿ ಥಳಿಸಿದ್ದಾರೆ. ಜೊತೆಗೆ ಗಡ್ಡಕ್ಕೆ ಬೆಂಕಿ ಹಚ್ಚಲು ಯತ್ನಿಸಿದ್ದು, ಬಳಿಕ ತಮ್ಮ ಬಳಿಯಿದ್ದ ಹಣವನ್ನೂ ದೋಚಿಕೊಂಡು ಹೋಗಿದ್ದಾರೆ. ಸಮಯಕ್ಕೆ ಸರಿಯಾಗಿ ಸಮೀಪದಲ್ಲಿದ್ದ ಕುರಿಗಾಹಿ ಯುವಕರು ಸ್ಥಳಕ್ಕೆ ಆಗಮಿಸಿ ತಮ್ಮನ್ನು ರಕ್ಷಣೆ ಮಾಡಿದ್ದಾರೆ ಎಂದು ವೃದ್ಧ ದೂರಿನಲ್ಲಿ ತಿಳಿಸಿದ್ದಾರೆ.


ಜೊತೆಗೆ ವೃದ್ಧನಿಗೆ ಕೀಟಲೆ ಮಾಡಿದ ಅಪರಿಚಿತ ಯುವಕರು ಗುಂಪು ಬೆದರಿಕೆ ಹಾಕಿದ್ದರು. ಹೀಗಾಗಿ ಅವರು ಘಟನೆಯ ಬಗ್ಗೆ ಯಾರಿಗೂ ಹೇಳಿರಲಿಲ್ಲ ಎನ್ನಲಾಗಿದೆ. ಬಳಿಕ ಕಾರಟಗಿ ತಾಲೂಕಿನ ಸಿಂಗನಾಳ ಗ್ರಾಮದ ಕೆಲವರು ಗಂಗಾವತಿಯ ಕೆಲ ಯುವಕರ ಗಮನಕ್ಕೆ ತಂದಿದ್ದಾರೆ. ಕೂಡಲೇ ಯುವಕರು ವೃದ್ಧನನ್ನು ಹುಡುಕಿ ಘಟನೆಯ ಬಗ್ಗೆ ವಿವರಣೆ ಪಡೆದುಕೊಂಡಿದ್ದಾರೆ. ಅಲ್ಲದೇ ಮಾನಸಿಕವಾಗಿ ಕುಗ್ಗಿದ್ದ ವೃದ್ಧನಿಗೆ ಸಮಾಧಾನ ಹೇಳಿ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ಬಂಧನಕ್ಕೆ ಒತ್ತಾಯ: ಘಟನೆ ನಡೆದು ಹತ್ತು ದಿನ ಕಳೆದಿದೆ. ಪ್ರಕರಣ ದಾಖಲಾಗಿ ಒಂದು ವಾರ ಕಳೆದಿದೆ. ಆದರೆ ಇದುವರೆಗೂ ಪೊಲೀಸರು ಆರೋಪಿಗಳ ಪತ್ತೆ ಮಾಡಿಲ್ಲ. ಕೂಡಲೇ ಆರೋಪಿಗಳನ್ನು ಪತ್ತೆ ಮಾಡಬೇಕು ಎಂದು ಸ್ಟೂಡೆಂಟ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಕೊಪ್ಪಳ ಜಿಲ್ಲಾ ಅಧ್ಯಕ್ಷ ಸಲೀಂ ಮನಿಯಾರ ಒತ್ತಾಯಿಸಿದ್ದಾರೆ. ಗಂಗಾವತಿಯಲ್ಲಿ ಎಲ್ಲರೂ ಸಹ ಪರಸ್ಪರ ಪ್ರೀತಿ, ವಿಶ್ವಾಸ ಹಾಗೂ ನೆಮ್ಮದಿಯಿಂದ ಬದುಕುತ್ತಿದ್ದಾರೆ. ಇಂತಹ ಘಟನೆಗಳಿಂದ ಸಮಾಜದ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುತ್ತಿದ್ದು, ಕೂಡಲೆ ಆರೋಪಿಗಳನ್ನು ಬಂಧಿಸಬೇಕು ಎಂದು ಸಲೀಂ ಒತ್ತಾಯಿಸಿದ್ದಾರೆ.

ಆ 31 ರವರೆಗೆ ಕಾಂಗ್ರೆಸ್ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ

Posted by Vidyamaana on 2023-08-29 04:22:46 |

Share: | | | | |


ಆ 31 ರವರೆಗೆ ಕಾಂಗ್ರೆಸ್ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಸೇವಾ ದಳ ಯಂಗ್ ಬ್ರಿಗೇಡ್ ವಿಭಾಗದ ಸದ ಸ್ಯತ್ವ ಅಭಿಯಾನವನ್ನು ರಾಜ್ಯ ವ್ಯಾಪ್ತಿ ಆರಂ ಭವಾಗಿದ್ದು, ಆಸ ಕರು ನೋಂದಣಿ ಮಾಡಿಕೊಳ್ಳಬ ಹುದು ಎಂದು ಬ್ರಿಗೇಡ್ ರಾಜ್ಯಾ ಧ್ಯಕ್ಷ ಝುನೈದ್ ಪಿ.ಕೆ.ತಿಳಿಸಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆನ್‌ಲೈನ್ ಮೂಲಕ ಸದಸ್ಯತ್ವ ನೋಂದಣಿಗೆ ಅವಕಾಶ ಕಲ್ಪಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9611140233 ಅನ್ನು ಸಂಪರ್ಕಿಸಬ ಹುದು. ಪ್ರತಿ ಗ್ರಾಮ ಪಂಚಾಯತ್, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಯೂ ಈ ಅಭಿಯಾನ ನಡೆಸಲಾ ಗುತ್ತಿ ದ್ದು, 18 ವರ್ಷ ಮೇಲ್ಪಟ್ಟ ಹಾಗೂ 38 ವರ್ಷ ದೊಳಗಿನ ಯುವಕರು ಮಾತ್ರ ಸದಸ್ಯತ್ವವನ್ನು ದಾಗಿದೆ ಎಂದರು. ಪಡೆಯಬಹು


ಇದು ಸತತ ಒಂದು ತಿಂಗಳು ಕಾಲ ನಡೆ ಯಲಿದೆ. ಕಾಂಗ್ರೆಸ್‌ ಮತ್ತು ಜಾತ್ಯತೀತ ವಿಚಾರಧಾರೆ ಹೊಂದಿರುವ ಯುವ ಕರು ಬ್ರಿಗೇಡ್ ಸದಸ್ಯತ್ವವನ್ನು ಪಡೆದು ಕೊಳ್ಳಬಹುದಾಗಿದೆ.ಅಲ್ಲದೆ, ಯುವಕರು ಸಕ್ರಿಯ ರಾಜಕಾರಣ ಮತ್ತು ಮಾನ ವೀಯ ಸಿದ್ಧಾಂತಗಳಲ್ಲಿ ತೊಡಗಬೇಕು ಎಂಬ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಶಯದಂತೆ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಸೇವಾ ಮನೋ ಭಾವದಿಂದ ಎಲ್ಲರೂ ಕೆಲಸ ಮಾಡಲು ಮುಂದಾಗಬೇಕು. ಸೇವಾದಳವು ನಿಸ್ವಾ ರ್ಥ ಸೇವಾ ಸಂಘಟನೆ ಆಗಿದೆ. ಜಾತಿ ಭಾವನೆ ತ್ಯಜಿಸಿ ರಚನಾತ್ಮಕ ಕಾರ್ಯಕ್ರ ಮಗಳ ಮೂಲಕ ರಾಷ್ಟ್ರೀಯತೆಯನ್ನು ಮೂಡಿಸುವುದೇ ನಮ್ಮ ಗುರಿ ಎಂದು ಝುನೈದ್ ತಿಳಿಸಿದರು.

ಅಡ್ಯನಡ್ಕ ಜೂನಿಯರ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಕಿತ್ ನಾಯಕ್ ನಾಪತ್ತೆ

Posted by Vidyamaana on 2023-06-26 07:58:34 |

Share: | | | | |


ಅಡ್ಯನಡ್ಕ ಜೂನಿಯರ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಕಿತ್ ನಾಯಕ್ ನಾಪತ್ತೆ

ವಿಟ್ಲ : ಪಿಯುಸಿ ವಿದ್ಯಾರ್ಥಿಯೋರ್ವ ನಾಪತ್ತೆಯಾದ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಬಳ್ಳೂರಿನಲ್ಲಿ ನಡೆದಿದೆ.


ಮಂಜೇಶ್ವರ ಠಾಣಾ ವ್ಯಾಪ್ತಿಯ ಅನಂತಗಿರಿ ನಿವಾಸಿ, ಅಡ್ಯನಡ್ಕ ಜೂನಿಯರ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಕಿತ್ ನಾಯಕ್ (17) ನಾಪತ್ತೆಯಾದ ಬಾಲಕ.ನಿನ್ನೆ ಸಂಜೆ ತನ್ನ ಮನೆಯಿಂದ ದೊಡ್ಡಪ್ಪ ನ ಮನೆಯಿಂದ ತೋಟಕ್ಕೆ ಮದ್ದು ಬಿಡುವ ಪಂಪು ತರುತ್ತೇನೆ ಎಂದು ಹೇಳಿ  ಸ್ಕೂಟರ್ ತೆಗೆದುಕೊಂಡು ಹೋದವ ಬಳ್ಳೂರು 

ಎಂಬಲ್ಲಿ ಸ್ಕೂಟರ್ ನಿಲ್ಲಿಸಿ ಬಸ್ ಹತ್ತಿ ಕುದ್ದುಪದವುನಲ್ಲಿ ಇಳಿದಿರುತ್ತಾನೆ  ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತ್ತೆಯಾದಲ್ಲಿ ಪೊಲೀಸ್ ಠಾಣೆಗೆ ತಿಳಿಸಬೇಕಾಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.



Leave a Comment: