ಹಾಸ್ಟೆಲ್‌ನಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ನರ್ಸಿಂಗ್ ವಿದ್ಯಾರ್ಥಿನಿ ದಿಯಾ

ಸುದ್ದಿಗಳು News

Posted by vidyamaana on 2024-07-08 14:36:42 |

Share: | | | | |


ಹಾಸ್ಟೆಲ್‌ನಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ನರ್ಸಿಂಗ್ ವಿದ್ಯಾರ್ಥಿನಿ ದಿಯಾ

ಬೆಂಗಳೂರು : ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ದಿಯಾ ಮಂಡೋಲ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.ದಿಯಾ ಮಂಡೋಲ್ ಪಶ್ಚಿಮ ಬಂಗಾಳ‌ ಮೂಲದವಳಾಗಿದ್ದು, ಮದರ್ ಥೆರೆಸಾ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದಳು.

ಮೂರು ದಿನಗಳ ಹಿಂದೆ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ದಿಯಾ ಕೌಟುಂಬಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹಾಸ್ಟೆಲ್​​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಹಪಾಠಿಗಳು ರೂಮಿಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಾಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

 Share: | | | | |


ವಿಟ್ಲ: ಚಾಲಕನ ನಿಯಂತ್ರಣ ಕಳೆದು ಟಿ.ಟಿ ವಾಹನ ಪಲ್ಟಿ

Posted by Vidyamaana on 2024-01-16 16:20:50 |

Share: | | | | |


ವಿಟ್ಲ: ಚಾಲಕನ ನಿಯಂತ್ರಣ ಕಳೆದು ಟಿ.ಟಿ ವಾಹನ ಪಲ್ಟಿ

ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡ ಟಿ.ಟಿ ವಾಹನ ರಸ್ತೆಗೆ ಪಲ್ಟಿ ಹೊಡೆದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದಿದೆ. ಶಬರಿಮಲೆಯಿಂದ ವಿಟ್ಲ ರಸ್ತೆ ಮೂಲಕ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಚಂದಳಿಕೆ ಅಪಾಯಕಾರಿ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ.


ಟಿ.ಟಿ ವಾಹನದಲ್ಲಿದ್ದ ಆರು ಮಂದಿ ಮಾಲಾಧಾರಿಗಳು ಗಾಯಗೊಂಡಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಇವರೆಲ್ಲ ಉಜಿರೆ ಮೂಲದವರಾಗಿದ್ದು, ಶಬರಿಮಲೆ ತೆರಳಿ ಹಿಂತಿರುಗುತ್ತಿದ್ದರು.

ಕೈರೋ:ಮಸೀದಿಗೆ ಭೇಟಿ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

Posted by Vidyamaana on 2023-06-27 07:44:29 |

Share: | | | | |


ಕೈರೋ:ಮಸೀದಿಗೆ ಭೇಟಿ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

ಕೈರೋ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಬೊಹ್ರಾ ಸಮುದಾಯದಿಂದ ಪುನಃಸ್ಥಾಪಿಸಲಾದ ಕೈರೋದಲ್ಲಿರುವ ಈಜಿಪ್ಟ್​ನ 11ನೇ ಶತಮಾನದ ಐತಿಹಾಸಿಕ ಅಲ್​-ಹಕೀಮ್​​ ಮಸೀದಿಗೆ ಭೇಟಿ ನೀಡಿದ್ದಾರೆ.ಅಮೆರಿಕದಿಂದ ನೇರವಾಗಿ ಈಜಿಪ್ಟ್‌ಗೆ 2 ದಿನ ಪ್ರವಾಸಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಸಾವಿರ ವರ್ಷ ಹಳೆಯದಾದ ಅಲ್‌-ಹಕೀಮ್‌ ಮಸೀದಿಗೆ ಭೇಟಿ ನೀಡಿದರು. ಈ ಕುರಿತಾದ ಕೆಲವು ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್​​ ಮೀಡಿಯಾದಲ್ಲಿ ಹರಿದಾಡುತ್ತಿವೆಸಾವಿರಾರು ವರ್ಷಗಳಷ್ಟು ಹಳೆಯದಾದ ಅಲ್​​-ಹಕೀಮ್​​​ ಕೈರೋದಲ್ಲಿನ ನಾಲ್ಕನೇ ಅತ್ಯಂತ ಹಳೆಯ ಮಸೀದಿಯಾಗಿದೆ. ಮಸೀದಿಯು 13,560 ಚದರ ಮೀಟರ್‌ಗಳಷ್ಟು ವಿಸ್ತೀರ್ಣವನ್ನು ಹೊಂದಿದೆ, ಸಾಂಪ್ರದಾಯಿಕ ಕೇಂದ್ರ ಪ್ರಾಂಗಣವು 5,000 ಚದರ ಮೀಟರ್‌ಗಳನ್ನು ಆಕ್ರಮಿಸಿಕೊಂಡಿದೆಈಜಿಪ್ಟ್‌ಗೆ ಅವರ ರಾಜ್ಯ ಭೇಟಿಯ ಎರಡನೇ ದಿನದಂದು, ಮೋದಿಯವರಿಗೆ ಮಸೀದಿಯ ಸುತ್ತಲೂ ತೋರಿಸಲಾಯಿತು. 1012 ರಲ್ಲಿ ನಿರ್ಮಿಸಲಾದ ಮಸೀದಿಯ ಗೋಡೆಗಳು ಮತ್ತು ದ್ವಾರಗಳ ಮೇಲಿನ ಕೆತ್ತನೆ ನೋಡಿ ಪ್ರಧಾನಿ ಶ್ಲಾಘನೆ ವ್ಯಕ್ತಪಡಿಸಿದರುಭಾರತದಲ್ಲಿ ನೆಲೆಸಿರುವ ಬೋಹ್ರಾ ಸಮುದಾಯವು ಫಾತಿಮಿಡ್‌ಗಳಿಂದ ಹುಟ್ಟಿಕೊಂಡಿದೆ. ಅವರು 1970ರಿಂದ ಮಸೀದಿಯನ್ನು ನವೀಕರಿಸಿದರು ಮತ್ತು ಅಂದಿನಿಂದ ಅದನ್ನು ನಿರ್ವಹಿಸುತ್ತಿದ್ದಾರೆ. ಹಲವು ವರ್ಷಗಳಿಂದ ಗುಜರಾತ್‌ನಲ್ಲಿರುವ ಬೊಹ್ರಾ ಸಮುದಾಯದೊಂದಿಗೆ ಪ್ರಧಾನಿಯವರು ನಿಕಟ ಬಾಂಧವ್ಯವನ್ನು ಹೊಂದಿದ್ದಾರೆ. ಬೊಹ್ರಾ ಸಮುದಾಯದ ಪ್ರಮುಖ ಧಾರ್ಮಿಕ ಕ್ಷೇತ್ರಕ್ಕೆ ಮತ್ತೊಮ್ಮೆ ಭೇಟಿ ನೀಡುವ ಸಂದರ್ಭವಾಗಿದೆ ಎಂದು ಈಜಿಪ್ಟ್‌ನಲ್ಲಿರುವ ಭಾರತದ ರಾಯಭಾರಿ ಅಜಿತ್ ಗುಪ್ತೆ ಹೇಳಿದ್ದಾರೆ.  ಐತಿಹಾಸಿಕ ಮಸೀದಿಗೆ 16 ನೇ ಫಾತಿಮಿದ್ ಖಲೀಫ್ ಅಲ್-ಹಕೀಮ್ ಬೈ-ಅಮ್ರ್ ಅಲ್ಲಾ ಅವರ ಹೆಸರನ್ನು ಇಡಲಾಗಿದೆ ಮತ್ತು ದಾವೂದಿ ಬೊಹ್ರಾ ಸಮುದಾಯಕ್ಕೆ ಪ್ರಮುಖ ಧಾರ್ಮಿಕ ಮತ್ತು ಸಾಂಸ್ಕೃತಿಕ ತಾಣವಾಗಿದೆ.

BREAKING : ಬಿಟ್ ಕಾಯಿನ್ ಹಗರಣ ಕೇಸ್ : ಪ್ರಮುಖ ಆರೋಪಿ ಶ್ರೀಕಿ ಬಂಧನ

Posted by Vidyamaana on 2024-05-07 20:39:29 |

Share: | | | | |


BREAKING : ಬಿಟ್ ಕಾಯಿನ್ ಹಗರಣ ಕೇಸ್ : ಪ್ರಮುಖ ಆರೋಪಿ ಶ್ರೀಕಿ ಬಂಧನ

ಬೆಂಗಳೂರು : ಕರ್ನಾಟಕದಲ್ಲಿ ಸಂಚಲನ ಸೃಷ್ಟಿ ಮಾಡಿದ್ದ ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿ ಅಲಿಯಾಸ್​ ಶ್ರೀಕೃಷ್ಣನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಬೆಂಗಳೂರು ಬಳ್ಳಾರಿ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಅಲ್ಲಿ ಶ್ರೀಕಿಯನ್ನ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

2017ರಲ್ಲಿ ತುಮಕೂರು ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಯುನೋ ಕಾಯಿನ್​ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 1.14 ಲಕ್ಷ ಮೌಲ್ಯದ 60.6 ಬಿಟ್ ಕಾಯಿನ ಕಳುವು ಆಗಿರುವ ಕುರಿತು ಆರೋಪ ಕೇಳಿಬಂದಿತ್ತು. ಪ್ರೀತಿ ಲ್ಯಾಪ್ಟಾಪ್ ಪರಿಶೀಲನೆ ವೇಳೆ ಬಿಟ್ ಕಾಯಿನ್ ಕಳುವಾಗಿರುವುದು ದೃಢವಾಗಿದೆ.

ಪುತ್ತೂರು ಸರಕಾರಿ ಆಸ್ಪತ್ರೆಗೆ ರೇಡಿಯಾಲಜಿಸ್ಟ್ ಮತ್ತು ಪ್ರಸೂತಿ ತಜ್ಞರ ನೇಮಕ

Posted by Vidyamaana on 2023-07-07 06:01:53 |

Share: | | | | |


ಪುತ್ತೂರು ಸರಕಾರಿ ಆಸ್ಪತ್ರೆಗೆ ರೇಡಿಯಾಲಜಿಸ್ಟ್ ಮತ್ತು ಪ್ರಸೂತಿ ತಜ್ಞರ ನೇಮಕ

ಪುತ್ತೂರು; ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ರೇಡಿಯಾಲಜಿಸ್ಟ್ ಮತ್ತು ಪ್ರಸೂತಿ ವೈದರನ್ನು ನೇಮಕ ಮಾಡುವಂತೆ ಆಗ್ರಹಿಸಿ ವಿಧಾನಸಭಾ ಅಧಿವೇಶನದಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈ ಯವರು ವಿಷಯ ಪ್ರಸ್ತಾಪಿಸಿದ್ದು ಸರಕಾರಿ ಆಸ್ಪತ್ರೆಯ ಸಮಸ್ಯೆಯಗಳ ಬಗ್ಗೆ ಸರಕಾರದ ಗಮನ ಸೆಳೆದಿದ್ದಾರೆ.

ಆಸ್ಪತ್ರೆಗೆ ರೇಡಿಯಾಲಜಿಸ್ಟ್ ಅಗತ್ಯವಾಗಿ ಬೇಕಾಗಿದ್ದು , ಆಸ್ಪತ್ರೆಯಲ್ಲಿ ಒಬ್ಬರು ಪ್ರಸೂತಿ ತಜ್ಞರಿದ್ದು ಅವರು ಹೆಸರಿಗೆ ರಜೆ ಮೆಲೆ ತೆರಳಿದ ಕಾರಣ ಹೆರಿಗೆ ಮಾಡಿಸಲುವೈದ್ಯರು ಇಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗಿರುತ್ತದೆ. ಪುತ್ತೂರು ತಾಲೂಕು ವ್ಯಾಪ್ತಿಯಲ್ಲಿರುವ ಏಕೈಕ ದೊಡ್ಡ ಸರಕಾರಿ ಆಸ್ಪತ್ರೆಯಗಿರುವ ಕಾರಣ ಸರಕಾರಿ ಆಸ್ಪತ್ರೆಗೆ ಹೆರಿಗೆಗೆ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿದ್ದು ವೈದ್ಯರಿಲ್ಲದ ಕಾರಣ ಸಮಸ್ಯೆ ಉಂಟಾಗಿದೆ. ಸರಕಾರ ತಕ್ಷಣವೇ ನೇಮಕ ವೈದ್ಯರನ್ನು ನೇಮಕ ಮಾಡುವ ಮೂಲಕ ಬೇಡಿಕೆಯನ್ನು ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ. ಅದಿವೇಶನ ಶೂನ್ಯ ವೇಳೆಯಲ್ಲಿ ಶಾಸಕರು ಈ ಪ್ರಸ್ತಾಪವನ್ನು ಮಾಡಿದ್ದರು.

ಉಳ್ಳಾಲ - ಗಾಯಾಳು ಬೈಕ್ ಸವಾರ ತೇಜಸ್ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Posted by Vidyamaana on 2023-06-12 13:02:19 |

Share: | | | | |


ಉಳ್ಳಾಲ - ಗಾಯಾಳು ಬೈಕ್ ಸವಾರ ತೇಜಸ್ ಚಿಕಿತ್ಸೆ ಫಲಕಾರಿಯಾಗದೆ  ಮೃತ್ಯು

ಉಳ್ಳಾಲ : ಬೈಕ್‍ಗೆ ಇನೋವಾ ಕಾರು ಢಿಕ್ಕಿ ಹೊಡೆದು ಪರಾರಿಯಾಗಿದ್ದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಕೋಟೆಕಾರು ಪಟ್ಟಣ ವ್ಯಾಪ್ತಿಯ ಮಾಡೂರು ವೈದ್ಯನಾಥ ದೈವಸ್ಥಾನ ರಸ್ತೆ ನಿವಾಸಿ ತೇಜಸ್ ಕುಲಾಲ್ (28) ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.ಕಳೆದ ಜೂ.4 ರ ಭಾನುವಾರ ತಡರಾತ್ರಿ ತೇಜಸ್ ಸಂಕೋಳಿಗೆಯ ಪೆಟ್ರೋಲ್ ಬಂಕಿಗೆ ಪೆಟ್ರೋಲ್ ತುಂಬಿಸಲು ಬೈಕಲ್ಲಿ ತೆರಳುತ್ತಿದ್ದ ವೇಳೆ ಕೇರಳ ನೋಂದಾವಣಿಯ ಇನ್ನೋವಾ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾಗಿತ್ತು.ಹಿಟ್ ಆಂಡ್ ರನ್ ಪ್ರಕರಣ ದಾಖಲಿಸಿದ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ತಲಪಾಡಿ ಟೋಲ್ ಗೇಟ್ ನ ಸಿಸಿಟಿವಿ ದೃಶ್ಯಾವಳಿ ಆಧಾರದಲ್ಲಿ ಮರುದಿನವೇ ಘಟನೆಗೆ ಕಾರಣವಾದ ಕಾರನ್ನು ವಶಕ್ಕೆ ಪಡೆದುಕೊಂಡಿದ್ದರು.ಗಂಭೀರ ಗಾಯಗೊಂಡಿದ್ದ ತೇಜಸ್ ನನ್ನು ತಕ್ಷಣಕ್ಕೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದು,ನಂತರ ಮಂಗಳೂರಿನ ಕೆಎಮ್ ಸಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ತಲೆಗೆ ಗಂಭೀರ ಗಾಯವಾಗಿದ್ದ ತೇಜಸ್ ಕೋಮಾ ಸ್ಥಿತಿಯಲ್ಲಿದ್ದು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತ ತೇಜಸ್ ಅವಿವಾಹಿತರಾಗಿದ್ದು ಸುಝಕಿ ಕಂಪನಿಯಲ್ಲಿ ಮೆಕ್ಯಾನಿಕ್ ಆಗಿದ್ದರು.ತೇಜಸ್ ಬಜರಂಗದಳ ಮಾಡೂರು ಶಾಖೆಯ ಸಕ್ರಿಯ ಕಾರ್ಯಕರ್ತರಾಗಿದ್ದರು.ಮೃತರು ತಂದೆ ರಾಮ ಕುಲಾಲ್,ತಾಯಿ ರೇವತಿ ಮತ್ತು ಸಹೋದರ ರವೀಂದ್ರ ಅವರನ್ನು ಅಗಲಿದ್ದಾರೆ.

ರಾಜ್ಯದ ಜನತೆ ಗಮನಕ್ಕೆ: ಇಂದು ಗೃಹಜ್ಯೋತಿ ನೋಂದಣಿ ಗೆ ಕೊನೇ ದಿನ

Posted by Vidyamaana on 2023-07-25 06:36:06 |

Share: | | | | |


ರಾಜ್ಯದ ಜನತೆ ಗಮನಕ್ಕೆ: ಇಂದು ಗೃಹಜ್ಯೋತಿ ನೋಂದಣಿ ಗೆ ಕೊನೇ ದಿನ

ಬೆಂಗಳೂರು :ರಾಜ್ಯ ಸರ್ಕಾರದ ( Karnataka Government ) ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದು ಗೃಹಜ್ಯೋತಿ ಯೋಜನೆಯ ( Gruha Jyoti Scheme ) ಕೂಡ. ಈ ಯೋಜನೆಯ ಅಡಿಯಲ್ಲಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ( Free Electricity ) ಪ್ರಯೋಜನ ಪಡೆಯಲು ನೋಂದಾಯಿಸಿಕೊಳ್ಳಲು ಇಂದು ಕೊನೆಯ ದಿನವಾಗಿದೆ.ಇಂದು ನೋಂದಾಯಿಸಿಕೊಂಡವರಿಗೆ ಮಾತ್ರವೇ ಆಗಸ್ಟ್ ತಿಂಗಳ ಬಿಲ್ ಮೊತ್ತ 00 ಬರಲಿದೆ.


ಗೃಹಜ್ಯೋತಿ ಯೋಜನೆಗೆ ನೋಂದಣಿ ( Gruha Jyoti Registration ) ಆರಂಭಗೊಂಡ ನಂತ್ರ, ರಾಜ್ಯದಲ್ಲಿ ಈವರೆಗೆ ಇರುವಂತ ಫಲಾನುಭವಿಗಳಲ್ಲಿ ಶೇ.60ರಷ್ಟು ಗ್ರಾಹಕರು ಮಾತ್ರವೇ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಇನ್ನೂ ಶೇ.40ರಷ್ಟು ವಿದ್ಯುತ್ ಗ್ರಾಹಕರು ನೋಂದಣಿ ಮಾಡುವುದು ಬಾಕಿ ಉಳಿದಿದೆ ಎನ್ನಲಾಗುತ್ತಿದೆ.


ವಿದ್ಯುತ್ ಸರಬರಾಜು ಕಂಪನಿ ನೀಡಿರುವ ಮಾಹಿತಿ ಪ್ರಕಾರ 1.92 ಕೋಟಿ ಗೃಹ ಬಳಕೆದಾರರಿದ್ದು, ಇವರಲ್ಲಿ ಶೇ.90ಕ್ಕೂ ಅಧಿಕ ಜನರು ಮಾಸಿಕ 200 ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುತ್ತಿದ್ದಾರಂತೆ. ಇವರಲ್ಲಿ 1.18 ರಿಂದ 1.20 ಕೋಟಿ ಮಂದಿ ಮಾತ್ರವೇ ನೋಂದಣಿ ಮಾಡಿಕೊಂಡಿದ್ದು, ಉಳಿದವರು ಇನ್ನೂ ನೋಂದಣಿ ಮಾಡಿಕೊಳ್ಳಬೇಕಿದೆ.ಇಂದೇ ನೋಂದಣಿಗೆ ಕೊನೆಯ ದಿನ


ಅಂದಹಾಗೇ ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ ಮೊದಲ ತಿಂಗಳಲ್ಲಿ 200 ಯೂನಿಟ್ ಉಚಿತ ವಿದ್ಯುತ್ ಪ್ರಯೋಜನ ಪಡೆಯಲು ಜುಲೈ.25ರ ಇಂದೇ ನೋಂದಣಿಗೆ ಕೊನೆಯ ದಿನವಾಗಿದೆ.


ಇಂದು ಯಾರೆಲ್ಲಾ ಗೃಹ ಜ್ಯೋತಿಗೆ ನೋಂದಣಿ ಮಾಡಿಕೊಳ್ಳಲಿದ್ದಾರೋ ಅವರಿಗೆಲ್ಲ ಆಗಸ್ಟ್ ತಿಂಗಳಿನಲ್ಲಿ ಶೂನ್ಯ ವಿದ್ಯುತ್ ಬಿಲ್ ಬರಲಿದೆ. ಒಂದು ವೇಳೆ ನೋಂದಾಯಿಸಿಕೊಳ್ಳದಿದ್ದರೇ ಆಗಸ್ಟ್ ನಂತ್ರದ ತಿಂಗಳಿನ ಬಿಲ್ ಶೂನ್ಯ ಬರಲಿದೆ.


ಗೃಹಜ್ಯೋತಿ ಯೋಜನೆಗೆ ಅಂತಿಮ ಗಡುವು ನಿಗದಿ ಪಡಿಸಿಲ್ಲ. ಸೆಪ್ಟೆಂಬರ್ ನಲ್ಲಿ ಇದರ ಲಾಭ ಪಡಿಯಲು ಅವಕಾಶ ಇದೆ. ಆದ್ರೇ ಆಗಸ್ಟ್ ತಿಂಗಳಿನಲ್ಲಿ ಉಚಿತ 200 ಯೂನಿಟ್ ವಿದ್ಯುತ್ ಪ್ರಯೋಜನ ಪಡೆಯಲು ಇಂದು ನೋಂದಣಿ ಮಾಡಿಸಬೇಕಿದೆ



Leave a Comment: