ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಸುದ್ದಿಗಳು News

Posted by vidyamaana on 2024-07-25 12:27:06 |

Share: | | | | |


ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಪಣಂಬೂರು: ಇಲ್ಲಿನ ಜೋಕಟ್ಟೆ ಗ್ರಾಮ ಪಂಚಾಯತ್ ಗುಡ್ಡೆ ಎಂಬಲ್ಲಿ ಮನೆಯ ಮೇಲೆ� ತಡೆಗೋಡೆ ಕುಸಿದು ಬಿದ್ದು ಯುವಕ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ‌.ಮುಲ್ಕಿ ಕೊಲ್ನಾಡು ನಿವಾಸಿ ಶಂಕರ ಎಂಬವರ ಪುತ್ರ ಶೈಲೇಶ್ (17) ಮೃತ ಯುವಕ. ಜೋಕಟ್ಟೆಯಲ್ಲಿರುವ ತನ್ನ ದೊಡಮ್ಮನ ಮಗಳ ಮನೆಗೆ ಬಂದಿದ್ದ ಶೈಲೇಶ್, ಇಲ್ಲಿಯೇ ಉಳಿದುಕೊಂಡಿದ್ದ.

ಮನೆಯಲ್ಲಿ ಶೈಲೇಶ್ ರವರ ದೊಡ್ಡಮನ ಮಗಳು ಸವಿತಾ, ಆಕೆಯ ಗಂಡ ಸುರೇಶ್ ಮತ್ತು ಮಗು ಸಾಕ್ಷಿ ಮನೆಯ ಒಂದು ಕೋಣೆಯಲ್ಲಿ ಮಲಗಿದ್ದು, ಶೈಲೇಶ್ ಇನ್ನೊಂದು ಕಡೆ ಮಲಗಿದ್ದ. ತಡೆಗೋಡೆ ಕುಸಿದು ಹಂಚಿನ ಮನೆಯ ಮೇಲೆ ಬಿದ್ದಿದ್ದರಿಂದ ಅಲ್ಲಿ ಮಲಗಿದ್ದ ಶೈಲೇಶ್ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ. ಇನ್ನೊಂದು ಕೋಣೆಯಲ್ಲಿ ಮಲಗಿದ್ದ ಇತರ ಮೂರು ಜನರಲ್ಲಿ ಸವಿತಾ ಅವರಿಗೆ ಸಣ್ಣ ಗಾಯವಾಗಿದ್ದು‌, ಚಿಕಿತ್ಸೆ ಪಡೆದಿದ್ದಾರೆ‌ ಎಂದು ತಿಳಿದು ಬಂದಿದೆ.

ಶೈಲೇಶ್ ಅವರ ಮೃತದೇಹವನ್ನು ನಗರದ ಎ.ಜೆ.ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು, ಸ್ಥಳಕ್ಕೆ ಪಣಂಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

 Share: | | | | |


ಕರ್ನಾಟಕ ಮುಸ್ಲಿಂ ಜಮಾಹತ್ ಹಾಗೂ ಎಸ್ ವೈ ಎಸ್ ಪಡೀಲ್ ಯೂನಿಟ್ ವತಿಯಿಂದ ರಂಝಾನ್ ಕಿಟ್ ವಿತರಣಿ

Posted by Vidyamaana on 2023-04-02 10:46:05 |

Share: | | | | |


ಕರ್ನಾಟಕ ಮುಸ್ಲಿಂ ಜಮಾಹತ್ ಹಾಗೂ ಎಸ್ ವೈ ಎಸ್ ಪಡೀಲ್ ಯೂನಿಟ್ ವತಿಯಿಂದ ರಂಝಾನ್ ಕಿಟ್ ವಿತರಣಿ

ಪುತ್ತೂರು : ಕರ್ನಾಟಕ ಮುಸ್ಲಿಂ ಜಮಾತ್ ಹಾಗೂ ಎಸ್ ವೈ ಎಸ್ ಪಡೀಲ್   ಯೂನಿಟ್ ವತಿಯಿಂದ ರಂಝಾನ್ ಕಿಟ್ ವಿತರಣಿ ಕಾರ್ಯಕ್ರಮವು ಮಾ 31ರಂದು ಪಡೀಲ್ ನಲ್ಲಿ ನಡೆಯಿತ್ತು.  ಅಬ್ದುಲ್ ರಝಾಕ್ ಖಾಸಿಮಿ ಕೂರ್ನಡ್ಕ ದುವಾ ನೆರವೇರಿಸಿದರು.

ಸಕಲೇಶಪುರ-ಬಾಳ್ಳುಪೇಟೆ ನಡುವಿನ ಭೂಕುಸಿತದ ಮಣ್ಣು ತೆರವು: ನಾಳೆಯಿಂದ ಈ ರೈಲುಗಳ ಸಂಚಾರ ಪುನರಾರಂಭ

Posted by Vidyamaana on 2024-08-19 21:01:11 |

Share: | | | | |


ಸಕಲೇಶಪುರ-ಬಾಳ್ಳುಪೇಟೆ ನಡುವಿನ ಭೂಕುಸಿತದ ಮಣ್ಣು ತೆರವು: ನಾಳೆಯಿಂದ ಈ ರೈಲುಗಳ ಸಂಚಾರ ಪುನರಾರಂಭ

ಬೆಂಗಳೂರು: ಸಕಲೇಶಪುರ ಹಾಗೂ ಬಾಳ್ಳುಪೇಟೆ ನಡುವೆ ರೈಲು ಹಳಿಗಳ ಮೇಲೆಯೇ ಮಳೆಯಿಂದಾಗಿ ಭೂಕುಸಿತಗೊಂಡು ಮಣ್ಣು ಕುಸಿದಿತ್ತು. ಇಂದು ಈ ಮಣ್ಣುನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿತ್ತು, ನಾಳೆಯಿಂದ ಈ ಮಾರ್ಗದಲ್ಲಿ ಕೆಲ ರೈಲುಗಳ ಸಂಚಾರ ಪುನರಾರಂಭಿಸಲಾಗುತ್ತದೆ.

ಈ ಕುರಿತಂತೆ ನೈರುತ್ಯ ರೈಲ್ವೆಯಿಂದ ಮಾಹಿತಿ ನೀಡಲಾಗಿತ್ತು, ಮೈಸೂರು ವಿಭಾಗದ ಸಕಲೇಶಪುರ ಮತ್ತು ಬಳ್ಳುಪೇಟೆ ನಿಲ್ದಾಣಗಳ ನಡುವೆ ಭೂಕುಸಿತಕ್ಕೆ ಸಂಬಂಧಿಸಿದಂತೆ, ಪುನಃಸ್ಥಾಪನೆ ಕಾರ್ಯ ಪೂರ್ಣಗೊಂಡಿದೆ.

ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ, ಖ್ಯಾತ ಇಂಜಿನಿಯರ್ ಗೋಪಿನಾಥ ಶೆಟ್ಟಿ ಹೃದಯಾಘಾತದಿಂದ ನಿಧನ

Posted by Vidyamaana on 2024-03-13 10:09:57 |

Share: | | | | |


ವಿವೇಕಾನಂದ ಪಾಲಿಟೆಕ್ನಿಕ್ ನ  ನಿವೃತ್ತ ಪ್ರಾಂಶುಪಾಲ, ಖ್ಯಾತ ಇಂಜಿನಿಯರ್ ಗೋಪಿನಾಥ ಶೆಟ್ಟಿ ಹೃದಯಾಘಾತದಿಂದ ನಿಧನ

ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲರಾದ ಇಂಜಿನಿಯರ್ ಗೋಪಿನಾಥ್ ಶೆಟ್ಟಿ(60)ಯವರು ದಿಡೀರ್ ಅಸ್ವಸ್ಥಗೊಂಡು ಮಾ 13ರ ನಸುಕಿನ ಜಾವ 2 ಗಂಟೆ ಸುಮಾರಿಗೆ ಹೃದಯಾಘಾತದಿಂದ ನಿಧಾನರಾದರು.

  1986ರಲ್ಲಿ ವಿವೇಕಾನಂದ ಪಾಲಿಟೆಕ್ನಿಕ್ ಆರಂಭಗೊಂಡಿದ್ದು, 1987ರಲ್ಲಿ ಅದರ ಪ್ರಾಂಶುಪಾಲರಾಗಿ ಗೋಪಿನಾಥ್ ಶೆಟ್ಟಿಯವರು ನೇಮಕಗೊಂಡಿದ್ದರು . ಅದಾದ ಬಳಿಕ ಸುದೀರ್ಘ 35 ವರ್ಷಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ 2022 ರಲ್ಲಿ ನಿವೃತ್ತರಾಗಿದ್ದರು. ಈ ಮೂಲಕ ವಿವೇಕಾನಂದ ಪಾಲಿಟೆಕ್ನಿಕ್ ನ ಆಧಾರ ಸ್ಥಂಭವಾಗಿದ್ದರುರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಪ್ರಸ್ತುತ ಪುತ್ತೂರು ನಗರ ಸಹ ಸಂಘ ಚಾಲಕ್ ಆಗಿ ಜವಬ್ದಾರಿ ನಿರ್ವಹಿಸುತ್ತಿದ್ದರು. ಪ್ರಧಾನಮಂತ್ರಿ ಜನೌಷಧಿ ಕೇಂದ್ರದ ಪುತ್ತೂರು ಭಾಗದ ಮೇಲುಸ್ತುವಾರಿಯಾಗಿದ್ದ ಅವರು ಈ ಭಾಗದಲ್ಲಿ ಹತ್ತು ಹಲವು ಜನೌಷಧಿ ಕೇಂದ್ರಗಳ ಆರಂಭಕ್ಕೆ ಕಾರಣಿಭೂತರಾಗಿದ್ದರು.

ಮೂಲತ: ವಿಟ್ಲದ ಪೆರುವಾಯಿಯವರಾದ ಗೋಪಿನಾಥ ಶೆಟ್ಟಿಯವರು, ಪ್ರಸ್ತುತ ನೆಹರೂ ನಗರದ ಬಲಮುರಿ ಗಣಪತಿ ದೇವಸ್ಥಾನದ ಬಳಿ ನಂದಿಲದಲ್ಲಿ ವಾಸಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಅಪಾರ ಶಿಷ್ಯವರ್ಗ, ಬಂಧು ಮಿತ್ರರನ್ನು ಅಗಲಿದ್ದಾರೆ.

ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಗಂಡನ ಕುತ್ತಿಗೆ ಹಿಸುಕಿ ಹತ್ಯೆ

Posted by Vidyamaana on 2024-08-11 14:32:19 |

Share: | | | | |


ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಗಂಡನ ಕುತ್ತಿಗೆ ಹಿಸುಕಿ ಹತ್ಯೆ

ಬೆಂಗಳೂರು : ಈ ಅಕ್ರಮ ಸಂಬಂಧ ಒಂದು ರೀತಿಯ ರೋಗವಾಗಿದೆ. ಅದು ಯಾವ ಮಟ್ಟಕ್ಕೆ ಅಂದರೆ ಸ್ವಂತ ಗಂಡನನ್ನೆ ಕೊಲ್ಲವಷ್ಟು. ಅದಕ್ಕೆ ಊದಾರಣೆಯಾಗಿ ಬೆಂಗಳೂರಿನಲ್ಲಿ ನಡೆದಿದೆ. ಗಂಡನ ಕುತ್ತಿಗೆ ಹಿಸುಕಿ ಕೊಂದಿದ್ದ ಹೆಂಡತಿ ಹಾಗೂ ಈಕೆಯ ಪ್ರಿಯಕರನನ್ನು ವೈಟ್ ಫೀಲ್ಡ್ ಠಾಣೆ ಪೊಲೀಸರು ಬಂಧಿದ್ದಾರೆ.ಹಗದೂರು ನಿವಾಸಿ ತೇಜಸ್ವಿನಿ(28) ಮತ್ತು ಈಕೆಯ ಪ್ರಿಯಕರ ಗಜೇಂದ್ರ (36) ಬಂಧಿತರು. ಆರೋಪಿಗಳು ಆ.9ರಂದು ಮಧ್ಯಾಹ್ನ ಮಹೇಶ್ ನನ್ನು (36) ಕೊಲೆಗೈ ದಿದ್ದರು. ಈ ಸಂಬಂಧ ಇಬ್ಬರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಗ್​ಬಾಸ್​ ಸ್ಪರ್ಧಿ ಸಂತೋಷ್​ ಬಂಧಿಸಲು ನಾನೇ ಹೇಳಿದ್ದು: ಸಚಿವ ಈಶ್ವರ್ ಖಂಡ್ರೆ

Posted by Vidyamaana on 2023-10-24 07:36:47 |

Share: | | | | |


ಬಿಗ್​ಬಾಸ್​ ಸ್ಪರ್ಧಿ ಸಂತೋಷ್​ ಬಂಧಿಸಲು ನಾನೇ ಹೇಳಿದ್ದು: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ಬಿಗ್​ಬಾಸ್ ಸ್ಪರ್ಧಿ  ವರ್ತೂರು ಸಂತೋಷ್  ಅವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದು, ಇದೀಗ ನ್ಯಾಂಯಾಂಗ ಬಂಧನದಲ್ಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅರಣ್ಯ ಸವಿವ ಈಶ್ವರ್ ಖಂಡ್ರೆ, ಸಂತೋಷ್ ಹುಲಿ ಉಗುರಿನ ಪೆಂಡೆಂಟ್​ ಧರಿಸಿರುವುದರ ಬಗ್ಗೆ ನಿನ್ನೆ ನಮ್ಮ ಅಧಿಕಾರಿಗಳು ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದರು. ಯಾರೇ ಆದರೂ ಕಾನೂನು ರೀತಿಯ ಕ್ರಮ ಜರುಗಿಸಲು ನಾನು ಸೂಚನೆ ನೀಡಿದ್ದೇನೆ. ಈ ಬಗ್ಗೆ ಅಧಿಕಾರಿಗಳು ತನಿಖೆ ಮಾಡುತ್ತಾರೆ, ನಂತರ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.


ನಮ್ಮ ಅಧಿಕಾರಿಗಳು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ವನ್ಯಜೀವಿ ಸಂರಕ್ಷಣೆ ಕಾಯ್ದೆ ಅಡಿ ಕಾನೂನಿನ ಕ್ರಮ ಜರುಗಿಸಿಲಾಗಿದೆ ಎಂದು ಖಂಡ್ರೆ ತಿಳಿಸಿದ್ದಾರೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕಾನೂನಿಗೆ ಎಲ್ಲರೂ ಸಮಾನರು. ರಾಜ್ಯದಲ್ಲಿ ಈ ರೀತಿಯ ಘಟನೆಗಳಿಗೆ ಸರ್ಕಾರ ನಮ್ಮ ಇಲಾಖೆ ಆಸ್ಪದ ನೀಡುವುದಿಲ್ಲ. ಹಲವು ಕಡೆ  ಕಳ್ಳ ಬೇಟೆ ನಡೆಯುತ್ತದೆ ಅನ್ನೋ ಮಾಹಿತಿ ಇದೆ. ಮೊನ್ನೆಯಸ್ಟೇ ದಾಂಡೇಲಿಯಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಈಗ ಕಾಡು ಪ್ರಾಣಿಗಳ ಭೇಟೆ ಸಾಕಷ್ಟು ಕಡಿಮೆಯಾಗಿದೆ. ರಾಜ್ಯದಲ್ಲಿ ಹಾಗೂ ರಾಷ್ಟ್ರದಲ್ಲಿ ಅರಣ್ಯ, ವನ್ಯಜೀವಿ, ಪರಿಸರ ಸಂರಕ್ಷಣೆ ಕಾಯ್ದೆ ಇದೆ. ಇವೆಲ್ಲಾ ಕಾಯ್ದೆಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಕೆಲಸ ಹಾಗೂ ವನ್ಯಜೀವಿಗಳ ಸಂರಕ್ಷಣೆ ಮಾಡಬೇಕಿರುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಇದೇ ನಿಟ್ಟಿನಲ್ಲಿ ಸರ್ಕಾರ ಕಾನೂನು ಕ್ರಮ ಪಾಲಿಸುತ್ತದೆ ಎಂದು ಖಂಡ್ರೆ ತಿಳಿಸಿದ್ದಾರೆ. ಕಾನೂನಿನ ಅಡಿಯಲ್ಲಿ ಯಾರೇ ಆದರೂ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ

ಜನವರಿ 21ರ ಕಾಂಗ್ರೆಸ್ ರಾಜ್ಯ ಮಟ್ಟದ ಸಮಾವೇಶ ರದ್ದು ; ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಸಮಾವೇಶ ಮುಂದೂಡಿಕೆ

Posted by Vidyamaana on 2024-01-16 04:29:25 |

Share: | | | | |


ಜನವರಿ 21ರ ಕಾಂಗ್ರೆಸ್ ರಾಜ್ಯ ಮಟ್ಟದ ಸಮಾವೇಶ ರದ್ದು ; ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಸಮಾವೇಶ ಮುಂದೂಡಿಕೆ

ಮಂಗಳೂರು, ಜ.16: ಜನವರಿ 21ರಂದು ಕಾಂಗ್ರೆಸ್ ಮಂಗಳೂರು ನಗರದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ದಿಢೀರ್ ಮುಂದೂಡಲಾಗಿದೆ. 


ಲೋಕಸಭೆ ಚುನಾವಣೆಗೆ ಸಿದ್ಧತೆ ಸಲುವಾಗಿ ಮಂಗಳೂರಿನಲ್ಲಿ ಈ ಬಾರಿಯ ಮೊದಲ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ‌ಕಾರ್ಯಕ್ರಮ ಆಯೋಜಿಸಿ ಎಲ್ಲ ಸಿದ್ಧತೆ ನಡೆಸುತ್ತಿರುವಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಿಕೆ ಮಾಡಿದ್ದಾರೆ. ಸಮಾವೇಶ ನಡೆಯುವ ಮು‌ಂದಿನ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಡಿಕೆ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸಚಿವರು ಸೇರಿದಂತೆ ಪ್ರಮುಖ ನಾಯಕರು ಬಂದಿದ್ದರು. ಮಂಗಳೂರಿನ ಡಿಸಿಸಿ ಕಚೇರಿಯಲ್ಲಿ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದ್ದರು

Recent News


Leave a Comment: