ಮಂಗಳೂರು ಪೊಲೀಸರು ಮಿಂಚಿನ ಕಾರ್ಯಾಚರಣೆ: ಸಕಲೇಶಪುರದಲ್ಲಿ ಚಡ್ಡಿ ಗ್ಯಾಂಗ್ ಪೊಲೀಸ್ ಬಲೆಗೆ

ಸುದ್ದಿಗಳು News

Posted by vidyamaana on 2024-07-10 06:18:20 |

Share: | | | | |


ಮಂಗಳೂರು ಪೊಲೀಸರು ಮಿಂಚಿನ ಕಾರ್ಯಾಚರಣೆ: ಸಕಲೇಶಪುರದಲ್ಲಿ ಚಡ್ಡಿ ಗ್ಯಾಂಗ್ ಪೊಲೀಸ್ ಬಲೆಗೆ

ಮಂಗಳೂರು: ಉರ್ವಾದಲ್ಲಿ ವೃದ್ಧ ದಂಪತಿಯ ಮೇಲೆ ಹಲ್ಲೆಗೈದು ಚಿನ್ನಾಭರಣ ದರೋಡೆ ಮಾಡಿದ್ದ ಮಧ್ಯಪ್ರದೇಶ ಮೂಲದ ಚಡ್ಡಿ ಬನಿಯಾನ್ ಗ್ಯಾಂಗ್ ಸದಸ್ಯರನ್ನು ಮಂಗಳೂರು ಪೊಲೀಸರು ಮಿಂಚಿನ ಕಾರ್ಯಾಚರಣೆಯಲ್ಲಿ ಸಕಲೇಶಪುರದಲ್ಲಿ ಬಂಧಿಸಿದ್ದಾರೆ. 


ಮಧ್ಯಪ್ರದೇಶ ಗುಣಾ ಜಿಲ್ಲೆಯ ರಗೋಗರ್ ತಾಲೂಕಿನ ವಿಶ್ವನಗರ ನಿವಾಸಿ ರಾಜು ಸಿಂಗ್ವಾನಿಯ (24), ಭೋಪಾಲ್ ಜಿಲ್ಲೆಯ ಗುಲಾಬ್ಗಂಜ್ ನಿವಾಸಿ ಮಯೂರ್ (30), ಮಾಧವ್ಗಡ್ ಅಶೋಕನಗರ ನಿವಾಸಿ ಬಾಲಿ (22), ಗುಣಾ ಜಿಲ್ಲೆಯ ಕೋತ್ವಾಲಿ ನಿವಾಸಿ ವಿಕ್ಕಿ (21) ಬಂಧಿತರು.‌ 


ಇಂದು ನಸುಕಿನ ಜಾವ ಸುಮಾರು 4 ಗಂಟೆಗೆ ಬರ್ಮುಡಾ ಚಡ್ಡಿ ಮತ್ತು ಬನಿಯನ್ ಧರಿಸಿದ ಸುಮಾರು 30 ರಿಂದ 40 ವರ್ಷ ಪ್ರಾಯದ 4 ಜನ ಯುವಕರು (ಚೆಡ್ಡಿ ಗ್ಯಾಂಗ್) ಉರ್ವಾ ಬಳಿಯ ದೇರೆಬೈಲು ಗ್ರಾಮದ ಕೋಟೆಕಣಿ ರಸ್ತೆಯ ವಿಕ್ಟರ್ ಮೆಂಡೋನ್ಸಾ ಎನ್ನುವವರ ಮನೆಯ ಕಿಟಕಿಯ ಗ್ರಿಲ್ಸ್ ತುಂಡರಿಸಿ ಒಳನುಗ್ಗಿದ್ದು ವೃದ್ಧ ದಂಪತಿಗೆ ಹಲ್ಲೆಗೈದು ಬೆದರಿಸಿ, ಮನೆಯಲ್ಲಿದ್ದ 3 ಮೊಬೈಲ್ ಫೋನ್ ಗಳನ್ನು ನೆಲಕ್ಕೆ ಬಡಿದು ಕಪಾಟಿನ ಲಾಕರ್ ಒಳಗೆ ಇರಿಸಿದ್ದ 12 ಲಕ್ಷ ರೂ ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣ, ಸ್ಯಾಮ್ ಸಂಗ್ ಮೊಬೈಲ್ ಫೋನ್ ಮತ್ತು ರೂ 1 ಲಕ್ಷ ಮೌಲ್ಯದ 10 ಬ್ರಾಂಡೆಡ್ ವಾಚ್ ಗಳು, ರೂ. 3000 ನಗದು ಹಣವನ್ನು ಸುಲಿಗೆ ಮಾಡಿ, ಸದ್ರಿ ಮನೆಯ ವೆರಾಂಡದಲ್ಲಿದ್ದ ಕಾರಿನ ಸಮೇತ ಪರಾರಿಯಾಗಿದ್ದರು. ಈ ಬಗ್ಗೆ ವಿಕ್ಟರ್ ಅವರ ಪತ್ನಿ ಪ್ಯಾಟ್ರಿಸಿಯಾ ಮೆಂಡೊನ್ಸಾ ನೀಡಿದ ದೂರಿನಂತೆ ಉರ್ವಾ ಠಾಣೆಯಲ್ಲಿ ಅ.ಕ್ರ 69/2024 ಕಲಂ 309(6), 331(7), 311, 305, 3(5) ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿತ್ತು‌.

ಪ್ರಕರಣ ನಡೆದ ಬೆನ್ನಲ್ಲೇ ಪೊಲೀಸರು ನಗರ ನಿಸ್ತಂತು ಕೊಠಡಿಗೆ ನೀಡಿದ್ದು, ಎಲ್ಲ ಠಾಣೆಯ ಪೊಲೀಸರಿಗೆ ಅಲರ್ಟ್ ಸೂಚನೆ ಹೋಗಿತ್ತು. ಮುಲ್ಕಿ ಬಸ್ಸು ನಿಲ್ದಾಣದ ಸಮೀಪ ನಿಲ್ಲಿಸಿದ್ದ ಕಳವು ಮಾಡಲ್ಪಟ್ಟ ಕಾರನ್ನು ಪತ್ತೆ ಮಾಡಿ ಆಸುಪಾಸಿನಲ್ಲಿದ್ದ  ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಕೆ.ಎಸ್.ಅರ್.ಟಿ.ಸಿ ಬಸ್ಸಿನಲ್ಲಿ ಶಂಕಿತ ವ್ಯಕ್ತಿಗಳು ಮಂಗಳೂರು ಕಡೆಗೆ ಪ್ರಯಾಣಿಸಿದ್ದು ಕಂಡುಬಂದಿತ್ತು.   

ಕೂಡಲೇ ಕೆ.ಎಸ್.ಅರ್.ಟಿ.ಸಿ ಅಧಿಕಾರಿಗಳನ್ನು ಸಂಪರ್ಕಿಸಿ, ಮುಲ್ಕಿ ಕಡೆಯಿಂದ ಮಂಗಳೂರಿಗೆ ಬಂದ ಕೆ.ಎಸ್.ಆರ್.ಟಿ.ಸಿ ಬಸ್ಸಿನ ಮಾಹಿತಿ ಪಡೆದಿದ್ದು ಬಾಗಲಕೋಟೆ ಕಡೆಯಿಂದ ಮಂಗಳೂರಿಗೆ ಬಂದಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿನ ನಿರ್ವಾಹಕರು ಅವರ ಬಸ್ಸಿನಲ್ಲಿ ಮುಲ್ಕಿಯಿಂದ 4 ಜನರು  ಒಟ್ಟಿಗೆ ಪ್ರಯಾಣಿಸಿದ ಮಾಹಿತಿ ತಿಳಿಸಿದ್ದರು. ಸದರಿ ವ್ಯಕ್ತಿಗಳು ಅವರಲ್ಲಿ ಬೆಂಗಳೂರಿಗೆ ಹೋಗುವ ಬಸ್ಸಿನ ಬಗ್ಗೆ ಮಾಹಿತಿ ಕೇಳಿದ ಬಗ್ಗೆ ತಿಳಿಸಿದ್ದರು. ಮಂಗಳೂರಿನಿಂದ ಬೆಂಗಳೂರಿಗೆ ಹೋದ ಬಸ್ಸಿನ ನಿರ್ವಾಹಕರನ್ನು ಸಂಪರ್ಕಿಸಿ ಅವರ ಮಾಹಿತಿಯಂತೆ ವಿಷಯವನ್ನು ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ತಿಳಿಸಲಾಗಿತ್ತು. ಸಕಲೇಶಪುರ ಡಿವೈಎಸ್ಪಿ, ಸಿಪಿಸಿ ಹಾಗೂ ಸಿಬ್ಬಂದಿಗಳ ತಂಡ ಸಕಲೇಶಪುರ ಸಮೀಪ ಸದರಿ ಬಸ್ಸನ್ನು ತಡೆದು ನಿಲ್ಲಿಸಿ ಅದರಲ್ಲಿ ಪ್ರಯಾಣಿಸುತ್ತಿದ್ದ 4 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ದರೋಡೆ ಕೃತ್ಯದ ಬಗ್ಗೆ ಒಪ್ಪಿಕೊಂಡಿದ್ದಾರೆ. ಅವರ ಬಳಿಯಲ್ಲಿದ್ದ ಮಂಗಳೂರಿನಲ್ಲಿ ಸುಲಿಗೆ ಮಾಡಿದ್ದ ಎಲ್ಲಾ ಚಿನ್ನ ಹಾಗೂ ವಜ್ರದ ಆಭರಣಗಳು, ವಾಚ್ ಹಾಗೂ ಹಣವನ್ನು ವಶಪಡಿಸಿ ಉರ್ವಾ ಪೊಲೀಸರಿಗೆ ನೀಡಿರುತ್ತಾರೆ. 

ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಸುಳಿವೇ ಇಲ್ಲದ ಕೃತ್ಯದ ಬೆನ್ನತ್ತಿದ ಪೊಲೀಸರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮಾರ್ಗದರ್ಶನದಲ್ಲಿ ಡಿಸಿಪಿಗಳಾದ ಸಿದ್ದಾರ್ಥ್ ಗೋಯಲ್, ದಿನೇಶ್ ಕುಮಾರ್, ಮಂಗಳೂರು ಕೇಂದ್ರ ವಿಭಾಗದ ಎಸಿಪಿ ಪ್ರತಾಪ್ ಸಿಂಗ್ ತೋರಟ್,  ಉರ್ವಾ ಠಾಣೆಯ ನಿರೀಕ್ಷಕರಾದ ಭಾರತೀ ಜಿ. ನೇತೃತ್ವದಲ್ಲಿ ಉರ್ವಾ ಪೊಲೀಸ್ ಠಾಣೆಯ ಎಸ್.ಐ ಹರೀಶ ಹೆಚ್.ವಿ , ಅನಿತಾ ಹೆಚ್.ಬಿ, ಎ.ಎಸ್.ಐ ವಿನಯ್ ಕುಮಾರ್, ವೇಣುಗೋಪಾಲ್ ಸಿಬ್ಬಂದಿಗಳಾದ ಪುಷ್ಪರಾಜ್, ಪ್ರಮೋದ್, ನಾರಾಯಣ, ಸತೀಶ್, ಪೀಟರ್, ರಾಮಚಂದ್ರ ವೆಂಕಟೇಶ್, ಅಭಿಷೇಕ್, ಪ್ರಜ್ವಲ್ ಕಾರ್ಯಾಚರಣೆ ನಡೆಸಿದ್ದಾರೆ. ಶೀಘ್ರ ಪತ್ತೆ ಕಾರ್ಯಕ್ಕೆ  ಹಾಸನ ಜಿಲ್ಲೆಯ ಎಸ್ಪಿ ಮಹಮ್ಮದ್ ಸುಜೀತಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ತಮ್ಮಯ್ಯ ಎಂ.ಕೆ , ಸಕಲೇಶಪುರ ಉಪ ವಿಭಾಗದ ಡಿವೈಎಸ್ಪಿ ಪ್ರಮೋದ್ ಬಿ., ಸಕಲೇಶಪುರ ನಗರ ಪಿ.ಎಸ್.ಐ ಪ್ರಮೋದ್ ಕೆ.ಎಸ್ ಮತ್ತು ಗ್ರಾಮಾಂತರ ಠಾಣೆಯ ಪಿ.ಎಸ್.ಐ ಸದಾಶಿವ ತಿಪ್ಪರೆಡ್ಡಿ,  ಸಿಬ್ಬಂದಿಗಳಾದ ಖಾದರ್ ಆಲಿ, ಸುನಿಲ್, ಜಗದೀಶ್, ಯೋಗಿಶ್, ಮೂಲ್ಕಿ ಪೊಲೀಸ್ ಠಾಣೆಯ ಪಿ.ಎಸ್.ಐ ವಿನಾಯಕ್ ಬಾವಿಕಟ್ಟೆ, ಸಿಬ್ಬಂದಿಗಳಾದ ಹರೀಶೇಖರ್ ಎ.ಎಸ್.ಐ ಕಿಶೋರ್ ಕೋಟ್ಯಾನ್ , ಚಂದ್ರಶೇಖರ್ ಹಾಗೂ ಶಶಿಧರ್ ಸಹಕರಿಸಿರುತ್ತಾರೆ.

 Share: | | | | |


ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ

Posted by Vidyamaana on 2024-07-03 08:24:56 |

Share: | | | | |


ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ನಾಲ್ವರು ಕೆಎಎಸ್ ಅಧಿಕಾರಿ ಹಾಗೂ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.

USA vs Pak: ರೋಚಕ ಸೂಪರ್ ಓವರ್​ನಲ್ಲಿ ಪಾಕಿಸ್ತಾನವನ್ನು ಮಣಿಸಿದ ಯುಎಸ್‌ಎ

Posted by Vidyamaana on 2024-06-07 05:15:47 |

Share: | | | | |


USA vs Pak: ರೋಚಕ ಸೂಪರ್ ಓವರ್​ನಲ್ಲಿ ಪಾಕಿಸ್ತಾನವನ್ನು ಮಣಿಸಿದ ಯುಎಸ್‌ಎ

ಡಲ್ಲಾಸ್: ಡಲ್ಲಾಸ್ ನಲ್ಲಿ ನಡೆದ ಅಮೇರಿಕಾ-ಪಾಕ್ ನಡುವಿನ ಟಿ20 ವಿಶ್ವಕಪ್ ಪಂದ್ಯ ಆರಂಭದಲ್ಲಿ ಸಮಬಲ ಕಂಡು ಸೂಪರ್ ಓವರ್ ನಲ್ಲಿ ಕೊನೆಗೊಂಡಿತು.


ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಅಮೇರಿಕಾ ತಂಡ, ಪಾಕಿಸ್ತಾನ ತಂಡವನ್ನು ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 159 ರನ್ ಗಳಿಗೆ ಕಟ್ಟಿಹಾಕಿತು.

ಅಮೇರಿಕಾ ಪರ ನೋಸ್ತೂಶ್ ಕೆಂಜಿಗೆ 30 ರನ್ ನೀಡಿ 3 ವಿಕೆಟ್ ಪಡೆದರೆ, ಸೌರಭ್ ನೇತ್ರವಲ್ಕರ್ 18 ರನ್ ನೀಡಿ 2 ವಿಕೆಟ್ ಪಡೆದರು, ಅಲಿಖಾನ್ 30 ರನ್, ಜಸ್ದೀಪ್ ಸಿಂಗ್ 37 ರನ್ ನೀಡಿ ತಲಾ 1 ವಿಕೆಟ್ ಪಡೆದರು.

ಹತ್ತೂರ ಒಡೆಯನ ಜಾತ್ರೋತ್ಸವ ಸಂದರ್ಭದಲ್ಲಿ ಯುವಶಕ್ತಿ ಸೇವಾಪಥ ಸ್ವಚ್ಛತಾ ಶಪಥ

Posted by Vidyamaana on 2024-04-12 07:03:49 |

Share: | | | | |


ಹತ್ತೂರ ಒಡೆಯನ ಜಾತ್ರೋತ್ಸವ ಸಂದರ್ಭದಲ್ಲಿ ಯುವಶಕ್ತಿ ಸೇವಾಪಥ ಸ್ವಚ್ಛತಾ ಶಪಥ

ಪುತ್ತೂರು :ಯುವಶಕ್ತಿ ಸೇವಾಪಥ ದ.ಕ ವತಿಯಿಂದ ಹತ್ತೂರ ಒಡೆಯ ಪುತ್ತೂರು‌ ಮಹಾಲಿಂಗೇಶ್ವರನ ಸನ್ನಿಧಾನದಲ್ಲಿ ಸ್ವಚ್ಚ ದೇಗುಲ ಅಭಿಯಾನ ಇದೇ ಬರುವ ರವಿವಾರ ಎಪ್ರಿಲ್ 14 ರಂದು ಬೆಳಗ್ಗೆ 7.30 ರಿಂದ ಮದ್ಯಾಹ್ನ 12 ರವರೆಗೆ ಶ್ರೀ ಕ್ಷೇತ್ರದಲ್ಲಿ ಶ್ರಮದಾನ ಸೇವೆ ನೆರವೇರಲಿದೆ.

ಸಮಾಜದಲ್ಲಿ ಅಶಕ್ತರಿಗೆ ನೆರವಾಗುವ ಮೂಲಕ ಸುಮಾರು 70 ಲಕ್ಷ ಸೇವಾನಿಧಿ ಸಮರ್ಪಿಸುವ ಮೂಲಕ ಚಿರಪರಿಚಿತ ಸಂಸ್ಥೆ ಧಾರ್ಮಿಕ ಕ್ಷೇತ್ರಗಳಲ್ಲಿ ಸೇವಾಚಟುವಟಿಕೆಗಳನ್ನು ನಡೆಸುವ ಮೂಲಕ ಸೇವಾಭಿಯಾನ ಮುಂದುವರೆಸುತ್ತಿದೆ.

ಉಪ್ಪಿನಂಗಡಿ : ಶಂಸುಲ್ ಉಲಮಾ ವುಮೆನ್ಸ್ ಶರೀಅತ್ ಕಾಲೇಜ್ ನಲ್ಲಿ ಟೈಲರಿಂಗ್ ತರಗತಿ ಉದ್ಘಾಟನೆ

Posted by Vidyamaana on 2023-07-19 16:03:08 |

Share: | | | | |


ಉಪ್ಪಿನಂಗಡಿ : ಶಂಸುಲ್ ಉಲಮಾ ವುಮೆನ್ಸ್ ಶರೀಅತ್ ಕಾಲೇಜ್ ನಲ್ಲಿ ಟೈಲರಿಂಗ್ ತರಗತಿ ಉದ್ಘಾಟನೆ

ಉಪ್ಪಿನಂಗಡಿ : ವಿದ್ಯೆ ಯಾವುದೇ ಇರಲಿ ಕಲಿತ ವಿದ್ಯೆಯನ್ನು ಬದುಕಿನಲ್ಲಿ ಉಪಯೋಗಕ್ಕೆ ತಂದರೆ ಮಾತ್ರ ಕಲಿಕೆಗೆ ಮಹತ್ವ ಬರುವುದು. ಕಲಿತಂತೆ  ಸರಳತೆಯಿಂದ ಬದುಕಿದರೆ ನೆಮ್ಮದಿಯ ಬದುಕು ಸಿಗುವುದು,ಕೆಲ ಮಹಿಳೆಯರು ಇಂದು ಆಡಂಬರದ ಬದುಕಿಗೆ ಜೋತು ಬಿದ್ದು ಕಡೆಗೆ ಕುಟುಂಬ ಕಲಹಕ್ಕೂ ಕಾರಣವಾಗುತ್ತಿರುವುದು ಕಾಣುತ್ತಿದ್ದೇವೆ. ಆದ್ದರಿಂದ ಶಿಸ್ತು ಹಾಗೂ ಸರಳತೆಯಿಂದ ಬದುಕುವ ಕಲೆಯನ್ನು ಪ್ರತಿಯೊಬ್ಬರೂ ಕಲಿತು ಕೊಳ್ಳಬೇಕು ಎಂದು ಕೆಮ್ಮಾರ ಶಂಸುಲ್ ಉಲಮಾ ವುಮೆನ್ಸ್ ಕಾಲೇಜ್ ಅಧ್ಯಕ್ಷ ಎಸ್.ಬಿ.ಮುಹಮ್ಮದ್ ದಾರಿಮಿ ಅವರು ಹೇಳಿದರು.

     ಅವರು ಕೆಮ್ಮಾರ ಶಕ್ತಿನಗರ ಶಂಸುಲ್ ಉಲಮಾ ವುಮೆನ್ಸ್ ಶರೀಅತ್ ಕಾಲೇಜ್ ನಲ್ಲಿ ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿಯನ್ನು ಉದ್ಗಾಟಿಸಿ ಮಾತನಾಡುತ್ತಿದ್ದರು.

      ಮಹಿಳೆಯರು ವಿದ್ಯಾರ್ಥಿ ಜೀವನದಲ್ಲೇ ಟೈಲರಿಂಗ್ ನಂತಹ ಕೌಶಲ್ಯ ಆಧಾರಿತ ಶಿಕ್ಷಣವನ್ನು ಕಲಿತು ಕೊಂಡರೆ ಮುಂದೆ ಮನೆಯಲ್ಲಿದ್ದು ಕೊಂಡೇ ಕೈ ತುಂಬಾ ಸಂಪಾದಿಸಲು ಸಾಧ್ಯವಾಗುವುದು. ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು. 

    ಸಂಸ್ಥೆಯ ಉಸ್ತಾದರಾದ ಹನೀಫ್ ದಾರಿಮಿ ಪಡೀಲ್ ಮತ್ತು ಶೌಕತ್ತ್ ಫೈಝಿ ಗಂಡಿಬಾಗಿಲು ಸಮಾರಂಭದಲ್ಲಿ ಮಾತನಾಡಿದರು.ಶಿಕ್ಷಕಿಯರಾದ ಶಾಹಿರಾ ಮಾಹಿರ ಮತ್ತು ಸುಹೈಲಾ ಫಾಳಿಲಾ ಅವರು ವಿದ್ಯಾರ್ಥಿನಿಯರಿಗೆ ಟೈಲರಿಂಗ್ ತರಬೇತಿ ಯ ಬಗ್ಗೆ ಮಾಹಿತಿ ನೀಡಿದರು.

ಕಾವಿನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ ಬಿಜೆಪಿಗರಿಗೂ ಗ್ಯಾರಂಟಿ ಕಾರ್ಡು ಕೊಡಿ; ಅಶೋಕ್ ರೈ

Posted by Vidyamaana on 2023-04-27 07:03:32 |

Share: | | | | |


ಕಾವಿನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ ಬಿಜೆಪಿಗರಿಗೂ ಗ್ಯಾರಂಟಿ ಕಾರ್ಡು ಕೊಡಿ; ಅಶೋಕ್ ರೈ

ಪುತ್ತೂರು: ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ, ಯಾರಿಗೂ ಸಂಶಯ ಬೇಡ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ರಾಜ್ಯದ ಜನತೆಗೆ ನೀಡಿದ ನಾಲ್ಕು ಗ್ಯಾರಂಟಿ ಯಓಜನೆಯು ಸರಕಾರ ಅಧಿಕಾರಕ್ಕೆ ಬಂದ ತಕ್ಷಣ ಜಾರಿಯಾಗುತ್ತದೆ. ಈಗಾಗಲೇ ಕಾರ್ಯಕರ್ತರು ಎಲ್ಲಾ ಮನೆಗಳಿಗೂ ಕಾಂಗ್ರೆಸ್‌ನ ಗ್ಯಾರಂಟಿ ಕಾರ್ಡು ವಿತರಣೆ ಮಾಡುತ್ತಿದ್ದು ಬಿಜೆಪಿಗರ ಮನೆಗಳಿಗೂ ಕಾರ್ಡು ವಿತರಿಸಿ ಯಾವುದೇ ತಾರತಮ್ಯ ಮಾಡಬೇಡಿ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು.

ಸಕಲೇಶಪುರ: ಪೊಲೀಸ್​ ಕಾನ್ಸ್​ಟೇಬಲ್​ ಆತ್ಮಹತ್ಯೆ

Posted by Vidyamaana on 2024-01-19 14:39:12 |

Share: | | | | |


ಸಕಲೇಶಪುರ: ಪೊಲೀಸ್​ ಕಾನ್ಸ್​ಟೇಬಲ್​ ಆತ್ಮಹತ್ಯೆ

ಹಾಸನ: ಸಕಲೇಶಪುರದ ಪೊಲೀಸ್​ ಕ್ವಾರ್ಟರ್ಸ್​ ನಲ್ಲಿ ಕಾನ್ಸ್​ ಟೇಬಲ್​ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಸೋಮಶೇಖರ್ (39) ಮೃತರು ಎಂದು ತಿಳಿದು ಬಂದಿದೆ.ಸಕಲೇಶಪುರದಲ್ಲಿ 112 ಪೊಲೀಸ್ ವಾಹನದ ಚಾಲಕನಾಗಿ ಸೋಮಶೇಖರ್ ಕರ್ತವ್ಯ ನಿರ್ವಹಿಸುತ್ತಿದ್ದರು. ಪತಿ ಸೋಮಶೇಖರ್ ವಿರುದ್ಧ ಕಿರುಕುಳ ಆರೋಪ ಮಾಡಿ ಪತ್ನಿ DySPಗೆ ದೂರು ನೀಡಿದ್ದರು. ಇದರಿಂದ ಮನನೊಂದು ಸೋಮಶೇಖರ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ



Leave a Comment: