ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು

ಸುದ್ದಿಗಳು News

Posted by vidyamaana on 2024-07-25 16:34:52 |

Share: | | | | |


ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು

ಶಿವಮೊಗ್ಗ: ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸಲಾಗುತ್ತದೆ. ಹೀಗಾಗಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಕರ್ನಾಟಕ ವಿದ್ಯುತ್ ನಿಗಮದ ಕಾರ್ಯ ನಿರ್ವಾಹಕ ಎಂಜಿನಿಯರ್ ಬುಧವಾರ ಮುನ್ನೆಚ್ಚರಿಕೆ ನೀಡಿದ್ದಾರೆ

ಕಾರ್ಗಲ್ ನ ಲಿಂಗನಮಕ್ಕಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಜಲಾಶಯಕ್ಕೆ ಸದ್ಯ 60 ಸಾವಿರ ಕ್ಯುಸೆಕ್ ಒಳಹರಿವು ಇದೆ.

Additional Image


ಜಲಾಶಯದ ಗರಿಷ್ಠ ಮಟ್ಟ 1819 ಅಡಿಗಳು ಇದ್ದು, ಜಲಾಶಯದಲ್ಲಿ ಈಗ 1801. 20 ಅಡಿ ನೀರಿನ ಸಂಗ್ರಹ ಇದೆ. ಮಳೆ ಹೆಚ್ಚಿರುವುದರಿಂದ ಜಲಾಶಯದ ಮಟ್ಟ ಶೀಘ್ರವೇ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇದೆ.


ಅಣೆಕಟ್ಟೆಯ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸಬಹುದು ಎಂದು ಕೆಪಿಸಿಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ.

 Share: | | | | |


ವಿಟ್ಲ: ಚಾಲಕನ ನಿಯಂತ್ರಣ ಕಳೆದು ಟಿ.ಟಿ ವಾಹನ ಪಲ್ಟಿ

Posted by Vidyamaana on 2024-01-16 16:20:50 |

Share: | | | | |


ವಿಟ್ಲ: ಚಾಲಕನ ನಿಯಂತ್ರಣ ಕಳೆದು ಟಿ.ಟಿ ವಾಹನ ಪಲ್ಟಿ

ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡ ಟಿ.ಟಿ ವಾಹನ ರಸ್ತೆಗೆ ಪಲ್ಟಿ ಹೊಡೆದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದಿದೆ. ಶಬರಿಮಲೆಯಿಂದ ವಿಟ್ಲ ರಸ್ತೆ ಮೂಲಕ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಚಂದಳಿಕೆ ಅಪಾಯಕಾರಿ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ.


ಟಿ.ಟಿ ವಾಹನದಲ್ಲಿದ್ದ ಆರು ಮಂದಿ ಮಾಲಾಧಾರಿಗಳು ಗಾಯಗೊಂಡಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಇವರೆಲ್ಲ ಉಜಿರೆ ಮೂಲದವರಾಗಿದ್ದು, ಶಬರಿಮಲೆ ತೆರಳಿ ಹಿಂತಿರುಗುತ್ತಿದ್ದರು.

ಪುಟ್ಟರಾಜುಗೆ ನೋಡಿದ ಹುಡ್ಗೀನಾ ಎಚ್‌ಡಿಕೆ ಮದುವೆಯಾಗೋದು ಸರಿನಾ?: ಸಚಿವ ಎನ್.ಚಲುವರಾಯಸ್ವಾಮಿ

Posted by Vidyamaana on 2024-03-27 08:22:35 |

Share: | | | | |


ಪುಟ್ಟರಾಜುಗೆ ನೋಡಿದ ಹುಡ್ಗೀನಾ ಎಚ್‌ಡಿಕೆ ಮದುವೆಯಾಗೋದು ಸರಿನಾ?: ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ (ಮಾ.27): ನಮ್ಮ ಮಂಡ್ಯ ಜಿಲ್ಲೆಗೆ ಕೆಟ್ಟ ದೃಷ್ಟಿ ಬೀಳುವುದು ಬೇಡ. ನಾವು ನಮ್ಮ ಜಿಲ್ಲೆಯನ್ನು ಹೇಗೋ ಅಭಿವೃದ್ಧಿ ಮಾಡಿಕೊಳ್ಳುತ್ತೇವೆ. ಆದರೆ, ನೀವು ಮಾತ್ರ ನಮ್ಮ ಜಿಲ್ಲೆಗೆ ಬರಬೇಡಿ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಮಂಡ್ಯದಿಂದ ಕಣಕ್ಕಿಳಿಯುವ ಮಾಜಿ ಸಿಎಂ ಕುಮಾರಸ್ವಾಮಿ ಕುರಿತು ಮನವಿ ಮಾಡಿದರು.ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್‌ನಲ್ಲಿ ನಡೆದ ಮಂಡ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ನೀವು ಇನ್ನೊಮ್ಮೆ ಮುಖ್ಯಮಂತ್ರಿಯಾಗಿ, ಪ್ರಧಾನಮಂತ್ರಿಯಾದರೂ ನಮಗೆ ಸಂತೋಷ. ನಿಮ್ಮ ಬಗ್ಗೆ ನಾವು ಕೆಟ್ಟದಾಗಿ ಮಾತನಾಡುವುದಿಲ್ಲ. ಜಿಲ್ಲೆಯ ಕಡೆ ಮಾತ್ರ ನಿಮ್ಮ ದೃಷ್ಟಿ ಬೀಳದಿರಲಿ ಎಂದರು.


ಕುಮಾರಸ್ವಾಮಿ ನನಗೆ ಯಾವತ್ತೂ ವೈರಿಯಲ್ಲ. ಅವರು ನನ್ನನ್ನು ವೈರಿ ಅಂತ ಕರೆದಿದ್ದಾರೆ. ಅವರು ನನಗೆ ಸ್ನೇಹಿತರು. ಬುಟ್ಟಿಯೊಳಗೆ ಕರಿ ನಾಗರಹಾವು ಇದೆ, ಬಿಳಿ ನಾಗರಹಾವಿದೆ. ನಾಳೆ ಬಿಡ್ತೀವಿ, ನಾಡಿದ್ದು ಬಿಡ್ತೀವಿ ಎಂದು ಹೇಳುತ್ತಲೇ ಇದ್ದಾರೆ. ಇವರನ್ನು ನಂಬಿಕೊಂಡು ಪುಟ್ಟರಾಜು ಸಭೆ ಮಾಡಿದರು. ಧರ್ಮಸ್ಥಳ, ಚುಂಚನಗಿರಿ, ಅಯೋಧ್ಯೆಗೆಲ್ಲಾ ಹೋಗಿ ಬಂದರು. ಎಸ್.ಎಂ.ಕೃಷ್ಣ ಅವರ ಮನೆಗೂ ಹೋಗಿ ಬಂದರು. ಈಗ ಯಾಕೋ ಆಗ್ತಾ ಇಲ್ಲ ಕಣಯ್ಯ. ನೀನು ನೋಡಿದ ಹುಡುಗಿ ಸ್ವಲ್ಪ ಚೆನ್ನಾಗಿದ್ದಾಳೆ. ಹಾಗಾಗಿ ನಾನೇ ಮದುವೆಯಾಗಬೇಕು ಅಂತ ಬಯಸಿದ್ದೇನೆ.ನಿನಗೆ ಮುಂದೆ ಒಳ್ಳೆಯ ಹುಡುಗಿ ನೋಡೋಣ ಅಂದಿದ್ದಾರಂತೆ. ಮಗನ ಮದುವೆ ಮಾಡೋಕೆ ಹೋಗೆ ಅಪ್ಪನೇ ಮದುವೆಯಾದ ಎಂಬಂತಾಗಿದೆ ಎಂದು ಕುಹಕವಾಡಿದರು. ಈಗ ಪುಟ್ಟರಾಜು ಕತೆ ಏನಾಗಬೇಕು. ನಾನು ಹೇಗೋ ಕಾಂಗ್ರೆಸ್ ಸೇರಿ ಬಚಾವಾದೆ. ಆದರೆ, ಪುಟ್ಟರಾಜು ಕತೆ ಮುಗಿತು. ಅವರೂ ನಮ್ಮ ಸ್ನೇಹಿತರೇ. ಅವರೂ ಕೂಡ ಜೆಡಿಎಸ್‌ನೊಳಗೆ ಸಂತೋಷದಿಂದ ಏನೂ ಇಲ್ಲ ಎಂದರು. ಕಳೆದ ಚುನಾವಣಾ ಸಮಯದಲ್ಲಿ ಸುಮಲತಾ ಅವರನ್ನು ಸಾಕಷ್ಟು ಹೀಯಾಳಿಸಿದರು. ಇವತ್ತು ನಮ್ಮ ಅಕ್ಕ ಅಂತಾರೆ. ಅವತ್ತೇ ಅಕ್ಕ ಅಂದಿದ್ದರೆ ಅಂಬರೀಶ್ ಅಣ್ಣನವರ ಆತ್ಮಕ್ಕೆ ಶಾಂತಿ ಸಿಗುತ್ತಿತ್ತು.ನಮ್ಮ ಅಕ್ಕ ಚುನಾವಣೆಗೆ ನಿಂತಿದ್ದಾರೆ. ಅವರು ಗೆದ್ದರೂ ಒಂದೇ, ನಮ್ಮ ಅಣ್ಣ ಗೆದ್ದರೂ ಒಂದೇ ಎಂದಿದ್ದರೂ ಆಗುತ್ತಿತ್ತು. ಈಗ ಅವರ ಓಲೈಕೆ ಮಾಡಿಕೊಳ್ಳೋಕೆ ಅಕ್ಕ ಅಂತಿದ್ದಾರೆ ಎಂದು ದೂಷಿಸಿದರು. ಸಭೆಯಲ್ಲಿ ಅಭ್ಯರ್ಥಿ ಸ್ಟಾರ್‌ ಚಂದ್ರು, ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ನರೇಂದ್ರಸ್ವಾಮಿ, ದಿನೇಶ್ ಗೂಳಿಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಮರಿತಿಬ್ಬೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಡಿ.ಗಂಗಾಧರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಚಿದಂಬರಂ, ಸೇರಿದಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಆ.11 : ಪುತ್ತೂರಿನಲ್ಲಿ ಪಿಡಿಒ - ವಿಎಒ - ಎಸ್ ಡಿ ಸಿ ಸಿ ಬ್ಯಾಂಕ್ -ರೈಲ್ವೆ -ಪೊಲೀಸ್ ನೇಮಕಾತಿಗಳ ಪ್ರಯತ್ನದಲ್ಲಿರುವವರಿಗೆ ಉಚಿತ ತರಬೇತಿ

Posted by Vidyamaana on 2024-08-10 16:03:25 |

Share: | | | | |


ಆ.11 : ಪುತ್ತೂರಿನಲ್ಲಿ ಪಿಡಿಒ - ವಿಎಒ - ಎಸ್ ಡಿ ಸಿ ಸಿ ಬ್ಯಾಂಕ್ -ರೈಲ್ವೆ -ಪೊಲೀಸ್ ನೇಮಕಾತಿಗಳ ಪ್ರಯತ್ನದಲ್ಲಿರುವವರಿಗೆ ಉಚಿತ ತರಬೇತಿ

ಪುತ್ತೂರು :ದಕ್ಷಿಣ ಕನ್ನಡ ಜಿಲ್ಲೆಯ ಸ್ಪರ್ಧಾತ್ಮಕ ಯುಗದ ಇತಿಹಾಸದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿ ವಿವಿಧ ಆಯಾಮಗಳಲ್ಲಿ ಯುವ ಜನತೆಯಲ್ಲಿ ಅರಿವನ್ನು ಮೂಡಿಸಿ ಕಳೆದ ಹಲವು ವರ್ಷಗಳಿಂದ ಈಚೆಗೆ 150ಕ್ಕೂ ಅಧಿಕ ಯುವ ಸ್ಪರ್ಧಾರ್ಥಿಗಳು ಬ್ಯಾಂಕಿಂಗ್, ಪೊಲೀಸ್, ಅಗ್ನಿಪಥ್, ಕ್ಯಾಂಪ್ಕೋ, ಕೆಎಂಎಫ್ ಸೇರಿದಂತೆ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ಉತ್ತೀರ್ಣಗೊಂಡು ಸರಕಾರಿ ಉದ್ಯೋಗ ಗಿಟ್ಟಿಸಿ ಕೊಳ್ಳುವಲ್ಲಿ ಮಹತ್ತರ ಪಾತ್ರ ನಿಭಾಯಿಸಿರುವ ವಿದ್ಯಾಮಾತಾ ಅಕಾಡೆಮಿಯು ಇದೀಗ ಸದ್ಯ ಓದುತ್ತಿರುವ ಮತ್ತು ಓದು ಮುಗಿಸಿರುವ ಹಾಗೂ ಸರಕಾರಿ ಉದ್ಯೋಗವನ್ನು ಅರಸುತ್ತಿರುವವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿವಿಧ ಸರಕಾರಿ ನೇಮಕಾತಿ ಪರೀಕ್ಷೆಗಳ ಪೂರ್ವ ತಯಾರಿಗೆ ಸಂಬಂದಿಸಿದಂತೆ ಆ 11 ಆದಿತ್ಯವಾರದಂದು ಬೆಳಿಗ್ಗೆ 10ರಿಂದ ಮದ್ಯಾಹ್ನ 03ರ ವರೆಗೆ ತರಬೇತಿಯನ್ನು ಆಯೋಜಿಸಿದ್ದು ಈ ತರಬೇತಿಗೆ ಸದ್ಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಓದುತ್ತಿರುವ ಹಾಗೂ ಓದು ಮುಗಿಸಿರುವ ವಿದ್ಯಾರ್ಥಿಗಳು ಹಾಗೂ ಸರಕಾರಿ ಉದ್ಯೋಗವನ್ನು ಅರಸುತ್ತಿರುವವರಿಗೆ ಪುತ್ತೂರು ನಗರ ಠಾಣಾ ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ಹಾಗೂ ಚಿಕ್ಕಬಳ್ಳಾಪುರದ ಖ್ಯಾತ ತರಬೇತುದಾರರಾದ ರಘುನಾಥ್ ರವರ ನೇತೃತ್ವದಲ್ಲಿ ನಡೆಯಲಿರುವ ತರಬೇತಿಯನ್ನು ಸದುಪಯೋಗಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಸುಳ್ಯ: ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Posted by Vidyamaana on 2023-08-08 11:59:58 |

Share: | | | | |


ಸುಳ್ಯ: ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಸುಳ್ಯ: ಸೌಜನ್ಯ ಕೊಲೆ ಹಾಗೂ ಅತ್ಯಾಚಾರ ಪ್ರಕರಣವನ್ನು ಮರು ತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ದಿ.ಸೌಜನ್ಯಳ ತಾಯಿ ಕುಸುಮಾವತಿ ನೇತೃತ್ವದಲ್ಲಿ ಮುರುಳ್ಯ ಗ್ರಾಮದ ನಿಂತಿಕಲ್ಲಿನಿಂದ ವಾಹನ ಜಾಥಾದ ಮೂಲಕ ಪ್ರತಿಭಟನೆ ನಡೆಯಿತು.ನಿಂತಿಕಲ್ಲಿನಿಂದ ಸುಳ್ಯದವರೆಗೆ ಸುಮಾರು 22 ಕಿ.ಮೀವರೆಗೆ ಕಾಲ್ನಡಿಗೆ ಸಾಗಿ ಸುಳ್ಯದಲ್ಲಿ ಬೃಹತ್ ಸಭೆ ನಡೆಯಿತು.



ಸೌಜನ್ಯ ತಾಯಿ ಕುಸುಮಾವತಿ, ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗಿಯಾಗಿದ್ದರು.



ಬೃಹತ್ ಜಾಥಾದಲ್ಲಿ ಪಕ್ಷ, ಜಾತಿ, ಧರ್ಮ ಮರೆತು ಹೋರಾಟ ನಡೆಸಲಾಗುತ್ತಿದೆ. ಸುಳ್ಯದ ಗೌಡರ ಸಂಘ ಸೇರಿ ಹಲವಾರು ಸಂಘ ಸಂಸ್ಥೆಗಳು ಬೆಂಬಲ ನೀಡಿದ್ದಾರೆ.


ಇತ್ತೀಚೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಪರ ನಡೆದಿದ್ದ ಬೃಹತ್ ಸಮಾವೇಶ ನಡೆಸಲಾಗಿತ್ತು. ಸಮಾವೇಶದಲ್ಲಿ ಸೌಜನ್ಯಳ ತಾಯಿ ಕುಸುಮಾವತಿ ಮೇಲೆ ಹಲ್ಲೆಗೆ ಮುಂದಾದ ಘಟನೆ ನಡೆದಿತ್ತು. ಈ ಘಟನೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು.

ಮಗನ ಕೊಲೆಯ ಬಗ್ಗೆ ಟಿಶೂ ಪೇಪರ್ ನಲ್ಲಿ ಸುಚನಾ ಸೇರ್ ಟಿಪ್ಪಣಿ : ವಿಧಿವಿಜ್ಞಾನ ವರದಿ ದೃಢ

Posted by Vidyamaana on 2024-06-24 10:47:02 |

Share: | | | | |


ಮಗನ ಕೊಲೆಯ ಬಗ್ಗೆ ಟಿಶೂ ಪೇಪರ್ ನಲ್ಲಿ ಸುಚನಾ ಸೇರ್ ಟಿಪ್ಪಣಿ : ವಿಧಿವಿಜ್ಞಾನ ವರದಿ ದೃಢ

ಬೆಂಗಳೂರು : ತನ್ನ ನಾಲ್ಕು ವರ್ಷದ ಮಗನ ಕೊಲೆಗೆ ಸಂಬಂಧಿಸಿದಂತೆ ಬೆಂಗಳೂರು ಟೆಕ್ ಸಂಸ್ಥೆಯ ಸಿಇಒ ಸುಚನಾ ಸೇಠ್ ವಿರುದ್ಧ ಗೋವಾ ಪೊಲೀಸರು ಚಾರ್ಜ್ಶೀಟ್ ಸಲ್ಲಿಸಿದ ಎರಡು ತಿಂಗಳ ನಂತರ, ವಿಧಿವಿಜ್ಞಾನ ತಜ್ಞರು ತಮ್ಮ ಮಗನ ಶವವನ್ನು ಹೊಂದಿರುವ ಟ್ರಾಲಿ ಚೀಲದಿಂದ ವಶಪಡಿಸಿಕೊಂಡ ಕೈಬರಹದ ಟಿಪ್ಪಣಿಯನ್ನು ಅವರು ಬರೆದಿದ್ದಾರೆ ಎಂದು ದೃಢಪಡಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ಇತ್ತೀಚಿನ ವರದಿಯು ಸುಚನಾ ಅವರ ಕೈಬರಹದ ಮಾದರಿ ಟಿಪ್ಪಣಿಯಲ್ಲಿನ ಕೈಬರಹಕ್ಕೆ ಹೋಲಿಕೆಯಾಗುತ್ತದೆ ಎಂದು ತೋರಿಸುತ್ತದೆ. ಈ ಪ್ರಕರಣದಲ್ಲಿ ಪೊಲೀಸ್ ಚಾರ್ಜ್ಶೀಟ್ಗೆ ಲಗತ್ತಿಸಲಾದ ಟಿಪ್ಪಣಿಯನ್ನು ತಿರುಚಿದ ಮತ್ತು ಹರಿದ ಟಿಶ್ಯೂ ಪೇಪರ್ ತುಂಡುಗಳ ಮೇಲೆ ಕಪ್ಪು ಶಾಯಿಯಲ್ಲಿ ಬರೆಯಲಾಗಿದೆ ಮತ್ತು ಸುಚನಾ ಮತ್ತು ಅವರ ವಿಚ್ಛೇದಿತ ಪತಿ ವೆಂಕಟರಾಮನ್ ಪಿಆರ್ ನಡುವಿನ ಜಗಳ ಉಲ್ಲೇಖಿಸಲಾಗಿದೆ ಎಂದು ಆರೋಪಿಸಲಾಗಿದೆ.

ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್

Posted by Vidyamaana on 2023-04-17 04:18:37 |

Share: | | | | |


ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್

ಬೆಂಗಳೂರು: ಬಿಜೆಪಿ ಟಿಕೆಟ್‌ ನಿರಾಕರಣೆಯಿಂದ ತೀವ್ರ ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು.ಖರ್ಗೆ ಅವರು ಶೆಟ್ಟರ್‌ ಅವರಿಗೆ ಕಾಂಗ್ರೆಸ್‌ ಪಕ್ಷದ ಶಾಲು ಹೊದಿಸಿ, ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್‌, ಶೆಟ್ಟರ್‌ ಒಬ್ಬರ ಶ್ರೇಷ್ಠ, ಹಾಗೂ ಸರಳ, ಸಜ್ಜನಿಕೆಯ ರಾಜಕಾರಣಿ, ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೆ ಕೆಲಸ ಮಾಡಿಕೊಂಡು ಬಂದಿದ್ದಾರೆ. ರಾಜ್ಯದ ಸಿಎಂ ಆಗಿ, ಸ್ಪೀಕರ್‌ ಆಗಿ ಕೆಲಸ ಮಾಡಿದ್ದಾರೆ ಎಂದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರು ಮಾತನಾಡಿ, ಜಗದೀಶ್‌ ಶೆಟ್ಟರ್‌ ಯೊಬ್ಬ ಉತ್ತಮ ನಾಯಕ. ಅವರು ನಮ್ಮ ಪಕ್ಷದ ತತ್ವ ಸಿದ್ದಾಂತ ಒಪ್ಪಿ ಶೆಟ್ಟರ್‌ ಕಾಂಗ್ರೆಸ್‌ ಸೇರುತ್ತಿದ್ದಾರೆ. ಶೆಟ್ಟರ್‌ ಪಕ್ಷ ಸೆರ್ಪಡೆಯಿಂದ ಉತ್ತರ ಕರ್ನಾಟಕದ ಭಾಗಕ್ಕೆ ಶಕ್ತಿ. ಶೆಟ್ಟರ್‌ ಅಭಯ್‌ ಸಿಂಗ್‌ ಪಾಟೀಲ್‌ ಸೇರಿ, ಹಲವು ನಾಯಕರು ಕಾಂಗ್ರೆಸ್‌ ಸೆರ್ಪಡೆಯಾಗುತ್ತಿದ್ದಾರೆ. ಶೆಟ್ಟರ್‌ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಅದೇ ರೀತಿ ನಮ್ಮ ಪಕ್ಷದಲ್ಲೂ ಕೆಲಸ ಮಾಡುತ್ತಾರೆ ಎನ್ನುವ ವಿಶ್ವಾಸವಿದೆ.  ಕರ್ನಾಟಕದಲ್ಲಿ ನಾವು 150 ಸ್ಥಾನವನ್ನು ಗೆದ್ದೇ ಗೆಲ್ಲುತ್ತೇವೆ. ಕಾಂಗ್ರೆಸ್‌ ಪಕ್ಷಕ್ಕೆ ಜಗದೀಶ್‌ ಶೆಟ್ಟರ್‌ ಅವರನ್ನು ಸ್ವಾಗತಿಸುತ್ತೇನೆ ಎಂದರು.ಪಕ್ಷ ಸೇರ್ಪಡೆಯಾದ ಬಳಿಕ ಮಾತನಾಡಿದ ಜಗದೀಶ್‌ ಶೆಟ್ಟರ್‌,  ನಾನು ಬಿಜೆಪಿ ಬಿಟ್ಟು, ಕಾಂಗ್ರೆಸ್‌ ಸೇರಿರುವುದು ಬಹಳ ಜನಕ್ಕೆ ಅಚ್ಚರಿಯಾಗಿದೆ. ನಾನು ಬಿಜೆಪಿಯನ್ನು ಕಟ್ಟಿ ಬೆಳೆಸಿದ ವ್ಯಕ್ತಿ.  ಬಿಜೆಪಿ ನನಗೆ ಎಲ್ಲ ರೀತಿಯ ಗೌರವವನ್ನು ಕೊಟ್ಟಿದೆ. ಅದಕ್ಕೆ ಪ್ರತಿಯಾಗಿ ಪಕ್ಷ ಕೊಟ್ಟ ಜವಾಬ್ದಾರಿಯನ್ನು ನಾನು ನಿಭಾಯಿಸಿದ್ದೇನೆ. ಹಿರಿಯ ನಾಯಕನನ್ನು ಪಕ್ಷ ನಡೆಸಿಕೊಂಡ ರೀತಿಯಿಂದ ನೋವಾಗಿದೆ. ಜನರ ಆರ್ಶೀವಾದದಿಂದ ನಿರಂತರವಾಗಿ ಗೆಲ್ಲುತ್ತಾ ಬಂದಿದ್ದೇನೆ. ಈ ಬಾರಿ ಟಿಕೆಟ್‌ ಸಿಗುವ ವಿಶ್ವಾಸವಿತ್ತು. ಆದರೆ ಟಿಕೆಟ್‌ ಇಲ್ಲ ಎಂದಾಗ ತುಂಬಾ ಬೇಸರವಾಯಿತು. ಮೊದಲೇ ಟಿಕೆಟ್‌ ಇಲ್ಲ ಎಂದಿದ್ದರೆ, ಬೇಜಾರ್‌ ಆಗುತ್ತಿರಲಿಲ್ಲ. ಹಿರಿಯ ನಾಯಕನನ್ನು ಪಕ್ಷ ನಡೆಸಿಕೊಂಡ ರೀತಿಯಿಂದ ಬೇಸರವಾಗಿದೆ. ಬಿಜೆಪಿ ಪಕ್ಷ ಕಟ್ಟಿದ ನಾಯಕನಿಗೆ ಬೆಲೆ ಸಿಗಲಿಲ್ಲ. ಕಳೆದ 6 ತಿಂಗಳಿನಿಂದ ಪಕ್ಷ ನನ್ನನು ಕಡೆಗಣನೆ ಮಾಡಿದೆ. ಪಕ್ಷ ನನ್ನನು ಒತ್ತಾಯಪೂರ್ವಕವಾಗಿ ಹೊರ ಹಾಕಿದೆ. ಹಾಗಾಗಿ ನಾನು ಕಾಂಗ್ರೆಸ್‌ ನ ತತ್ವ ಸಿದ್ದಾಂತವನ್ನು ಒಪ್ಪಿ, ಕಾಂಗ್ರೆಸ್‌ ಸೇರ್ಪಡೆಯಾಗಿದ್ದೇನೆ ಎಂದರು.

Recent News


Leave a Comment: