ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ಸುದ್ದಿಗಳು News

Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10

Share: | | | | |


ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

 Share: | | | | |


ಬೆಳ್ತಂಗಡಿ ಸೌಜನ್ಯ ಕೊಲೆ ಪ್ರಕರಣ:ಇಂದು ಜೂನ್ 16 ರಂದು ಸಿಬಿಐ ವಿಶೇಷ ಕೋರ್ಟಿನಿಂದ ತೀರ್ಪು

Posted by Vidyamaana on 2023-06-16 03:18:18 |

Share: | | | | |


ಬೆಳ್ತಂಗಡಿ ಸೌಜನ್ಯ ಕೊಲೆ ಪ್ರಕರಣ:ಇಂದು  ಜೂನ್ 16 ರಂದು ಸಿಬಿಐ ವಿಶೇಷ ಕೋರ್ಟಿನಿಂದ ತೀರ್ಪು

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿ ಪುತ್ರಿ ಸೌಜನ್ಯ ಕೊಲೆ ಪ್ರಕರಣದ ತೀರ್ಪು ಅನ್ನು ಸಿಬಿಐ ವಿಶೇಷ ನ್ಯಾಯಾಲಯ ಜೂನ್ 16ರಂದು ಪ್ರಕಟಿಸಲಿದೆ.


ಉಜಿರೆಯ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿಯಾಗಿದ್ದ ಸೌಜನ್ಯ ಅವರು 2012ರ ಅಕ್ಟೋಬರ್ 9ರಂದು ಸಂಜೆ ಕಾಲೇಜಿನಿಂದ ಮನೆಗೆ ಹೋಗುವಾಗ ನಾಪತ್ತೆಯಾಗಿದ್ದರು. ಮರು ದಿನ ರಾತ್ರಿ ಧರ್ಮಸ್ಥಳದ ಮಣ್ಣಸಂಕ ಬಳಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಬಳಿಕ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಾಗಿತ್ತು.


ಶಂಕಿತ ಆರೋಪಿ, ಕಾರ್ಕಳ ತಾಲ್ಲೂಕಿನ ಕುಕ್ಕುಂದೂರು ಗ್ರಾಮದ ನಿವಾಸಿ ಸಂತೋಷ್ ರಾವ್‌ ಧರ್ಮಸ್ಥಳದ ಬಾಹುಬಲಿ ಬೆಟ್ಟದ ಬಳಿ ಸಾರ್ವಜನಿಕರ ಕೈಗೆ ಸಿಕ್ಕಿದ್ದು, ಬಳಿಕ ಆತನನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿತ್ತು. ಪೊಲೀಸರು ಆತನನ್ನು ಬಂಧಿಸಿದ್ದರು. ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ಸಂತೋಷ್ ರಾವ್ ಸುಮಾರು ಆರು ಬಾರಿ ಸಿಬಿಐ ನ್ಯಾಯಾಲಯಕ್ಕೆ ಹಾಜರಾಗದೆ, ತಲೆ ಮರೆಸಿಕೊಂಡಿದ್ದ.

ICC ODI World Cup: ಟೀಂ ಇಂಡಿಯಾ ಪ್ರಕಟ - ಯಾರಿಗೆಲ್ಲಾ ಸಿಕ್ತು ಚಾನ್ಸ್??

Posted by Vidyamaana on 2023-09-05 15:31:58 |

Share: | | | | |


ICC ODI World Cup: ಟೀಂ ಇಂಡಿಯಾ ಪ್ರಕಟ - ಯಾರಿಗೆಲ್ಲಾ ಸಿಕ್ತು ಚಾನ್ಸ್??

ಮುಂಬೈ: ಅಕ್ಟೋಬರ್ 5ರಿಂದ ತವರಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಕೂಟಕ್ಕೆ ಭಾರತ ತಂಡವನ್ನು ಅಂತಿಮಗೊಳಿಸಲಾಗಿದೆ. 15 ಜನರ ತಂಡವನ್ನು ಆಯ್ಕೆ ಮಾಡಿದ್ದು, ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.

ಪುರುಷರ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರು ತಂಡದ ಆಯ್ಕೆ ಬಗ್ಗೆ ಪ್ರಕಟಿಸಿದರು.


ಏಷ್ಯಾ ಕಪ್ ನಲ್ಲಿ ಆಡುತ್ತಿರುವ ತಂಡವೇ ಬಹುತೇಕ ಅಂತಿಮವಾಗಿದೆ. ವಿಶ್ವಕಪ್ ಗೆ 15 ಜನರ ತಂಡ ಪ್ರಕಟಿಸಬೇಕಾದ ಕಾರಣ 17 ಜನರ ಏಷ್ಯಾ ಕಪ್ ತಂಡದಲ್ಲಿದ್ದ ಯುವ ಆಟಗಾರರಾದ ತಿಲಕ್ ವರ್ಮಾ ಮತ್ತು ಕನ್ನಡಿಗ ಪ್ರಸಿಧ್ ಕೃಷ್ಣ ವಿಶ್ವಕಪ್ ಕೂಟಕ್ಕೆ ಸ್ಥಾನ ಪಡೆದಿಲ್ಲ.


ಕನ್ನಡಿಗ ಕೆ.ಎಲ್ ರಾಹುಲ್ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ಯಶಸ್ವಿಯಾಗಿದ್ದಾರೆ. ಕಳೆದ ಐಪಿಎಲ್ ವೇಳೆ ಗಾಯಗೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕೆಎಲ್ ರಾಹುಲ್ ಹಲವು ತಿಂಗಳ ಚೇತರಿಕೆಯ ಬಳಿಕ ಏಷ್ಯಾ ಕಪ್ ಗೆ ಆಯ್ಕೆಯಾಗಿದ್ದರು. ಆದರೆ ಸರಿಯಾಗಿ ಫಿಟ್ ಆಗದ ಕಾರಣ ಮೊದಲೆರಡು ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.ವಿಕೆಟ್ ಕೀಪರ್ ಕೋಟಾದಲ್ಲಿ ಕೆಎಲ್ ರಾಹುಲ್ ಮತ್ತು ಎಡಗೈ ಆಟಗಾರ ಇಶಾನ್ ಕಿಶನ್ ಆಯ್ಕೆಯಾಗಿದ್ದಾರೆ. ಏಷ್ಯಾ ಕಪ್ ಗೆ ಬ್ಯಾಕಪ್ ಆಟಗಾರನಾಗಿದ್ದ ಸಂಜು ಸ್ಯಾಮ್ಸನ್ ರನ್ನು ವಿಶ್ವಕಪ್ ನಿಂದ ಕೈಬಿಡಲಾಗಿದೆ.



ಬ್ಯಾಟಿಂಗ್ ವಿಭಾಗದಲ್ಲಿ ನಾಯಕ ರೋಹಿತ್ ಶರ್ಮಾ, ಅನುಭವಿ ವಿರಾಟ್ ಕೊಹ್ಲಿ ಜೊತೆಗೆ ಶುಭಮನ್ ಗಿಲ್, ಶ್ರೇಯಸ್ ಅಯ್ಯರ್ ಮತ್ತು ಸೂರ್ಯಕುಮಾರ್ ಯಾದವ್ ಆಯ್ಕೆಯಾಗಿದ್ದಾರೆ. ಏಕದಿನ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡದ ಹೊರತಾಗಿಯೂ ಸೂರ್ಯ ವಿಶ್ವಕಪ್ ಸ್ಕ್ಯಾಡ್ ನಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.



ಆಲ್ ರೌಂಡರ್ ಗಳಾಗಿ ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್ ಮತ್ತು ಅಕ್ಷರ್ ಪಟೇಲ್ ಆಯ್ಕೆಯಾಗಿದ್ದಾರೆ.


ತಂಡದಲ್ಲಿ ಸ್ಪಿನ್ನರ್ ಗಳಾಗಿ ಕುಲದೀಪ್ ಯಾದವ್ ಸ್ಥಾನ ಪಡೆದಿದ್ದಾರೆ. ಉಳಿದಂತೆ ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಅವರು ಸ್ಪಿನ್ನರ್ ಗಳಾಗಿದ್ದಾರೆ. ಏಷ್ಯಾಕಪ್ ನಲ್ಲಿ ಸ್ಥಾನ ಪಡೆಯದ ಅನುಭವಿ ಸ್ಪಿನ್ನರ್ ಗಳಾದ ಯುಜುವೇಂದ್ರ ಚಾಹಲ್ ಮತ್ತು ರವಿಚಂದ್ರನ್ ಅಶ್ವಿನ್ ಅವರಿಗೆ ವಿಶ್ವಕಪ್ ಗೂ ಅವಕಾಶ ಸಿಕ್ಕಿಲ್ಲ.


ವೇಗದ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ಇದ್ದಾರೆ.


ವಿಶ್ವಕಪ್ ಗೆ ಭಾರತ ತಂಡ


ರೋಹಿತ್ ಶರ್ಮಾ (ನಾ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ  ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮತ್ತು ಮೊಹಮ್ಮದ್ ಸಿರಾಜ್.

ಸೀತಾ ಪರಿವಾರ- ಪುತ್ತಿಲರ ಹಿಂದುತ್ವದ ದಿಗ್ವಿಜಯಕ್ಕೆ ನಾರಿ ಶಕ್ತಿಯ ಬಲ

Posted by Vidyamaana on 2023-04-28 13:03:17 |

Share: | | | | |


ಸೀತಾ ಪರಿವಾರ- ಪುತ್ತಿಲರ ಹಿಂದುತ್ವದ ದಿಗ್ವಿಜಯಕ್ಕೆ ನಾರಿ ಶಕ್ತಿಯ ಬಲ

ಪುತ್ತೂರು : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರ ಪರವಾಗಿ ಮಹಿಳಾ ಸಮಾವೇಶ ‘ಸೀತಾ ಪರಿವಾರ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.

ರೈಲು ಹತ್ತುವಾಗ ಹಳಿ ಮೇಲೆ ಬಿದ್ದ ತಾಯಿ-ಮಕ್ಕಳು, ಪವಾಡ ಸದೃಶ ರೀತಿಯಲ್ಲಿ ಪಾರು

Posted by Vidyamaana on 2023-12-24 12:30:39 |

Share: | | | | |


ರೈಲು ಹತ್ತುವಾಗ ಹಳಿ ಮೇಲೆ ಬಿದ್ದ ತಾಯಿ-ಮಕ್ಕಳು, ಪವಾಡ ಸದೃಶ ರೀತಿಯಲ್ಲಿ ಪಾರು

ಪಾಟ್ನಾ: ಶನಿವಾರ ಬಿಹಾರ ರೈಲು ನಿಲ್ದಾಣದಲ್ಲಿ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳ ಮೇಲೆ ರೈಲು ಹರಿದರೂ ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿದ್ದಾರೆ.ಪ್ಲಾಟ್‌ಫಾರ್ಮ್‌ನಲ್ಲಿರುವ ಜನರು ರೆಕಾರ್ಡ್ ಮಾಡಿದ ವಿಡಿಯೋದಲ್ಲಿ, ರೈಲು ನಿಲ್ದಾಣದ ಮೂಲಕ ವೇಗವಾಗಿ ಸಾಗುತ್ತಿರುವಾಗ ಹಳಿಯ ಪಕ್ಕದಲ್ಲಿ ತಾಯಿ ಹಾಗೂ ಮಕ್ಕಳು ಒಂದು ಬದಿಯಲ್ಲಿ ಸಿಲುಕಿರುವುದನ್ನು ತೋರಿಸುತ್ತದೆ.ಆದ್ರೆ, ಮೂವರೂ ಯಾವುದೇ ಅಪಾಯವಿಲ್ಲದೆ ಬದುಕುಳಿದಿದ್ದಾರೆ.


ಶನಿವಾರ ಮಹಿಳೆ ಮತ್ತು ಅವರ ಮಕ್ಕಳು ತಮ್ಮ ಕುಟುಂಬದೊಂದಿಗೆ ದೆಹಲಿಗೆ ವಿಕ್ರಮಶಿಲಾ ಎಕ್ಸ್‌ಪ್ರೆಸ್ ಹತ್ತಲು ಬಿಹಾರದ ಬರ್ಹ್ ರೈಲು ನಿಲ್ದಾಣವನ್ನು ತಲುಪಿದರು. ಒಂದು ದೊಡ್ಡ ಗುಂಪು ರೈಲನ್ನು ಹತ್ತಲು ಪ್ರಾರಂಭಿಸಿತು. ರೈಲು ಹತ್ತುವ ಧಾವಂತದಲ್ಲಿ ಮೂವರೂ ಪ್ಲಾಟ್‌ಫಾರ್ಮ್‌ನಿಂದ ತಳ್ಳಲ್ಪಟ್ಟು ಹಳಿಗಳ ಮೇಲೆ ಬಿದ್ದರು.


ರೈಲು ನಿಲ್ದಾಣದಿಂದ ಹೊರಡಲು ಪ್ರಾರಂಭಿಸಿದ ನಂತರ ಉದ್ರಿಕ್ತ ಪ್ರಯಾಣಿಕರು ಕುಟುಂಬವನ್ನು ಉಳಿಸಲು ಕಿರುಚಿದ್ದರಿಂದ ಗೊಂದಲವುಂಟಾಯಿತು. ಭಯಭೀತರಾಗಿ, ತಾಯಿ ತನ್ನ ಮಕ್ಕಳನ್ನು ತನ್ನ ಸಮೇತ ರಕ್ಷಿಸಿಕೊಂಡಿದ್ದಾಳೆ.ವೇಗದ ರೈಲು ಕುಟುಂಬದ ಮೇಲೆ ಹಾದು ಹೋಗುವುದನ್ನು ವಿಸ್ಮಯದಿಂದ ನೋಡುತ್ತಿದ್ದ ಪ್ರಯಾಣಿಕರನ್ನು ಬೆಚ್ಚಿಬೀಳಿಸಿತು. ಇದರ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದೆ.

BREAKING: ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆ

Posted by Vidyamaana on 2024-06-06 16:46:38 |

Share: | | | | |


BREAKING: ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆ

ಬೆಂಗಳೂರು : ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಸದಸ್ಯರ ಆಯ್ಕೆಗಾಗಿ ಚುನಾವಣೆ ಘೋಷಣೆಯಾಗಿತ್ತು. ಈ ಚುನಾವಣೆಯಲ್ಲಿ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಂದು ಪ್ರಕಟವಾದಂತ ಚುನಾವಣಾ ಫಲಿತಾಂಶದಲ್ಲಿ ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ದೇಶದ ಐಸ್‌ಕ್ರೀಂ ಮ್ಯಾನ್ ಎಂದೇ ಖ್ಯಾತಿ ಪಡೆದಿದ್ದ ರಘುನಂದನ್ ಕಾಮತ್ ನಿಧನ

Posted by Vidyamaana on 2024-05-18 08:41:54 |

Share: | | | | |


ದೇಶದ ಐಸ್‌ಕ್ರೀಂ ಮ್ಯಾನ್ ಎಂದೇ ಖ್ಯಾತಿ ಪಡೆದಿದ್ದ ರಘುನಂದನ್ ಕಾಮತ್ ನಿಧನ

ಮಂಗಳೂರು , ಮೇ 17: ಮೂಲತಃ ಮಂಗಳೂರು ನಿವಾಸಿ, ಮುಂಬೈಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (70) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ಮುಂಬೈಯಲ್ಲಿ ನಿಧನರಾದರು.ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.



Leave a Comment: