ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ನಿಧನ ಹಿನ್ನೆಲೆ ಶೋಕಾಚರಣೆ

Posted by Vidyamaana on 2024-06-12 08:17:46 |

Share: | | | | |


ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ನಿಧನ ಹಿನ್ನೆಲೆ ಶೋಕಾಚರಣೆ

ಪುತ್ತೂರು: ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಅವರ ನಿಧನಕ್ಕೆ ಶಾಸಕರು‌ ಸಂತಾಪ ಸೂಚಿಸಿ ತನ್ನ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಪಕ್ಷದ ಅತ್ಯಂತ ಪ್ರಾಮಾಣಿಕ ಕಾರ್ಯಕರ್ತರಾಗಿ ಪಕ್ಷಕ್ಕಾಗಿ ಹಗಲಿರುಳು ಸೇವೆ ಮಾಡುತ್ತಿದ್ದ , ಸಮಾಜ ಸೇವಾ ಕೆಲಸದಲ್ಲೂ ತನನ್ನು ತೊಡಗಿಸಿಕೊಂಡಿರುವ ಪ್ರಕಾಶ್ ಅವರ ನಿಧನದಿಂದ ಅತ್ಯಂತ ದು:ಖಿತರಾಗಿರುವ ಶಾಸಕರು ತನ್ನ ಎಲ್ಲಾ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ. ಇವತ್ತಿನ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ಇಂಡೋ-ಕಿವೀಸ್ ಆಸೀಸ್-ಆಫ್ರಿಕಾ ಸೆಮೀಸ್ ಪಂದ್ಯಗಳು ಎಲ್ಲಿ ಯಾವಾಗ ಎಷ್ಟೊತ್ತಿಗೆ? ಇಲ್ಲಿದೆ ವಿವರ

Posted by Vidyamaana on 2023-11-12 10:57:43 |

Share: | | | | |


ಇಂಡೋ-ಕಿವೀಸ್ ಆಸೀಸ್-ಆಫ್ರಿಕಾ ಸೆಮೀಸ್ ಪಂದ್ಯಗಳು ಎಲ್ಲಿ ಯಾವಾಗ ಎಷ್ಟೊತ್ತಿಗೆ? ಇಲ್ಲಿದೆ ವಿವರ

      ಐಸಿಸಿ ಏಕದಿನ ವಿಶ್ವಕಪ್​ ಟೂರ್ನಿಯಿಂದ (ICC ODI World Cup 2023) ಪಾಕಿಸ್ತಾನ ಕ್ರಿಕೆಟ್ ತಂಡವು (Pakistan Cricket Team) ಅಧಿಕೃತವಾಗಿ ಹೊರಬಿದ್ದಿದೆ. ಇಂಗ್ಲೆಂಡ್ ಎದುರಿನ ಪಂದ್ಯದ ನಡುವೆಯೇ ಬಾಬರ್ ಅಜಮ್ ಬಳಗ (England vs Pakistan) ಟೂರ್ನಿಯಿಂದ ಹೊರ ಬಿತ್ತು.ಹಾಗಾಗಿ ನ್ಯೂಜಿಲೆಂಡ್ 4ನೇ ತಂಡವಾಗಿ ವಿಶ್ವಕಪ್ ಸೆಮಿಫೈನಲ್​ಗೆ ಅರ್ಹತೆ ಪಡೆಯಿತು. ಕಿವೀಸ್​ ಸತತ 5ನೇ ಬಾರಿಗೆ ಸೆಮೀಸ್​ ಟಿಕೆಟ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಯಿತು. ಆದರೆ, ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಗಿದೆ.


6.4 ಓವರ್​​​ಗಳಲ್ಲಿ ಗುರಿ ಬೆನ್ನಟ್ಟಬೇಕಿತ್ತು!


ಪಾಕಿಸ್ತಾನ ಎದುರಿನ ಪಂದ್ಯದಲ್ಲಿ ಇಂಗ್ಲೆಂಡ್, ನಿಗದಿತ 50 ಓವರ್​​​ಗಳಲ್ಲಿ 9 ವಿಕೆಟ್​ ನಷ್ಟಕ್ಕೆ 337 ರನ್ ಗಳಿಸಿತು. ಆದರೆ ನೆಟ್​ ರನ್​ ರೇಟ್​ನಲ್ಲಿ ನ್ಯೂಜಿಲೆಂಡ್ ಹಿಂದಿಕ್ಕಲು 6.4 ಓವರ್​​ಗಳಲ್ಲಿ ಈ ಗುರಿ ಬೆನ್ನಟ್ಟಬೇಕಿತ್ತು. ಆದರೆ ಈ ಅಸಾಧ್ಯವಾದ ಗುರಿಯನ್ನು 40 ಎಸೆತಗಳಲ್ಲಿ ಬೆನ್ನಟ್ಟಲು ಬಾಬರ್ ಬಳಗಕ್ಕೆ ಸಾಧ್ಯವಾಗಿಲ್ಲ. ಹಾಗಾಗಿ ಪಾಕ್ ಸೆಮೀಸ್​ ಕನಸು ಭಗ್ನಗೊಂಡರೆ, ಕಿವೀಸ್ ಅಧಿಕೃತವಾಗಿ ಸೆಮೀಸ್​ಗೆ ಲಗ್ಗೆ ಇಟ್ಟಿತು.ಭಾರತ-ನ್ಯೂಜಿಲೆಂಡ್ ನಡುವೆ ಸೆಮೀಸ್ ಫೈಟ್


ವಿಶ್ವಕಪ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಮತ್ತು 4ನೇ ಸ್ಥಾನ ಪಡೆದಿರುವ ತಂಡಗಳು ಮೊದಲ ಸೆಮಿಫೈನಲ್​​ನಲ್ಲಿ ಸೆಣಸಾಟ ನಡೆಸಲಿವೆ. ಅದರಂತೆ ಮೊದಲ ಸೆಮಿಫೈನಲ್​​ನಲ್ಲಿ ಭಾರತ - ನ್ಯೂಜಿಲೆಂಡ್ (India vs New Zealand)​​ ಫೈನಲ್​ ಟಿಕೆಟ್​ಗಾಗಿ ಕಾದಾಟ ನಡೆಸಲಿವೆ. ನವೆಂಬರ್​ 15ರಂದು ಮುಂಬೈನ ವಾಂಖೆಡೆ ಮೈದಾನದಲ್ಲಿ ಈ ಪಂದ್ಯ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಈ ಹೈವೋಲ್ಟೇಜ್​ ಕದನ ಜರುಗಲಿದೆ.


2ನೇ ಸೆಮೀಸ್​ನಲ್ಲಿ ಆಸೀಸ್-ಆಫ್ರಿಕಾ ಹಣಾಹಣಿ


ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ 2 ಮತ್ತು 3ನೇ ಸ್ಥಾನದಲ್ಲಿರುವ ತಂಡಗಳು ಕಾದಾಟ ನಡೆಸಲಿವೆ. ಅದರಂತೆ 2ನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾ ಮತ್ತು 3ನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ತಂಡಗಳು (South Africa vs Australia) ಫೈನಲ್ ಪ್ರವೇಶಿಸಲು ಹೋರಾಟ ನಡೆಸಲಿವೆ. ಈ ಹೈವೋಲ್ಟೇಜ್ ಪಂದ್ಯ ಕೋಲ್ಕತ್ತಾದ ಈಡನ್​ ಗಾರ್ಡನ್ಸ್​ ಮೈದಾನದಲ್ಲಿ ಜರುಗಲಿದೆ. ಮಧ್ಯಾಹ್ನ 2 ಗಂಟೆಗೆ ನೇರ ಪ್ರಸಾರ ಇರಲಿದ್ದು, ಟಾಸ್ ಪ್ರಕ್ರಿಯೆ 1.30ಕ್ಕೆ ನಡೆಯಲಿದೆ.


2019ರ ವಿಶ್ವಕಪ್​ ನಂತರ ಮತ್ತೆ ಮುಖಾಮುಖಿ


2019ರಲ್ಲಿ ಭಾರತದ ಫೈನಲ್​ ಕನಸಿಗೆ ಅಡ್ಡಿಯಾಗಿದ್ದ ನ್ಯೂಜಿಲೆಂಡ್ ತಂಡವೇ ಈ ಬಾರಿಯೂ ಸೆಮಿಫೈನಲ್​​ನಲ್ಲಿ ಎದುರಾಗಿದೆ. ಅಂದು ಇಂಗ್ಲೆಂಡ್​ನ ಓಲ್ಡ್​ ಟ್ರಾಫರ್ಡ್ ಕ್ರಿಕೆಟ್ ಗ್ರೌಂಡ್​​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ್ದ ಕಿವೀಸ್ 239 ರನ್ ಗಳಿಸಿತ್ತು. ಆದರೆ ಭಾರತ 221 ರನ್ ಗಳಿಸಿ 18 ರನ್​ ಗಳಿಂದ ಶರಣಾಗಿತ್ತು. ಇದೀಗ ಭಾರತ ಅಂದಿನ ಸೇಡು ತೀರಿಸಿಕೊಳ್ಳಲು ಭರ್ಜರಿ ತಯಾರಿ ನಡೆಸಿದೆ.ಯಾವ ತಂಡ ಎಷ್ಟು ಬಾರಿ ವಿಶ್ವಕಪ್ ಗೆದ್ದಿವೆ?


ಸದ್ಯ ಸೆಮಿಫೈನಲ್ ಪ್ರವೇಶಿಸಿರುವ ನಾಲ್ಕು ತಂಡಗಳ ಪೈಕಿ ಯಾವ ತಂಡ ಎಷ್ಟು ಬಾರಿ ವಿಶ್ವಕಪ್ ಗೆದ್ದಿವೆ ಎಂಬುದನ್ನು ನೋಡುವುದಾದರೆ, ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಒಂದು ಬಾರಿಯೂ ಏಕದಿನ ವಿಶ್ವಕಪ್ ಗೆದ್ದಿಲ್ಲ. 2019ರ ವಿಶ್ವಕಪ್ ಫೈನಲ್​​ನಲ್ಲಿ ನ್ಯೂಜಿಲೆಂಡ್ ಚೊಚ್ಚಲ ಏಕದಿನ ವಿಶ್ವಕಪ್ ಗೆಲ್ಲುವಲ್ಲಿ ವಿಫಲವಾಗಿತ್ತು. ಮತ್ತೊಂದೆಡೆ ಸೌತ್​ ಆಫ್ರಿಕಾ ಹಲವು ಸೆಮೀಸ್ ಪ್ರವೇಶಿಸಿದರೂ ಫೈನಲ್​​ಗೇರುತ್ತಿಲ್ಲ.


ವಿಶ್ವಕಪ್ ಇತಿಹಾಸದಲ್ಲಿ ಅತ್ಯಧಿಕ ಟ್ರೋಫಿ ಗೆದ್ದ ತಂಡ ಹೆಗ್ಗಳಿಕೆಗೆ ಆಸ್ಟ್ರೇಲಿಯಾ ಪಾತ್ರವಾಗಿದೆ. 1987, 1999, 2003, 2007 ಮತ್ತು 2015ರಲ್ಲಿ ಆಸೀಸ್​ ಪ್ರಶಸ್ತಿ ಗೆದ್ದಿದೆ. ಇನ್ನು ಟೀಮ್ ಇಂಡಿಯಾ ಎರಡು ಸಲ ಏಕದಿನ ವಿಶ್ವಕಪ್ ಕಿರೀಟಕ್ಕೆ ಮುತ್ತಿಕ್ಕಿದೆ. 1983ರಲ್ಲಿ 2011ರಲ್ಲಿ ಭಾರತ ಚಾಂಪಿಯನ್ ಆಗಿತ್ತು. ಇದೀಗ 3ನೇ ಟ್ರೋಫಿ ಎತ್ತಿ ಹಿಡಿಯಲು ರೋಹಿತ್ ಪಡೆ ಸಜ್ಜಾಗಿದೆ.

BREAKING : ಪೋಕೋ ಪ್ರಕರಣದಲ್ಲಿ ಬಿಎಸ್‌ವೈಗೆ ಬಂಧನದ ಭೀತಿ : ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ ಕೋರ್ಟ್

Posted by Vidyamaana on 2024-06-13 17:16:18 |

Share: | | | | |


BREAKING : ಪೋಕೋ ಪ್ರಕರಣದಲ್ಲಿ ಬಿಎಸ್‌ವೈಗೆ ಬಂಧನದ ಭೀತಿ : ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ ಕೋರ್ಟ್

ಬೆಂಗಳೂರು : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಇದೀಗ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ ಬೆಂಗಳೂರಿನ ಒಂದನೇ ತ್ವರಿತಗತಿ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ.

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಬಿಎಸ್ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಾರ್ಚ್​ ತಿಂಗಳಲ್ಲಿ ಎಫ್​ಐಆರ್ ದಾಖಲಾಗಿತ್ತು.

ಬೆಂಗಳೂರು ಕಂಬಳದ ಬಿಗ್ ಅಪ್ಡೇಟ್!

Posted by Vidyamaana on 2023-09-21 16:00:48 |

Share: | | | | |


ಬೆಂಗಳೂರು ಕಂಬಳದ ಬಿಗ್ ಅಪ್ಡೇಟ್!

ಪುತ್ತೂರು: ಬೆಂಗಳೂರಿನ ಕಂಬಳದಲ್ಲಿ ಭಾಗವಹಿಸಲು ಕಂಬಳ ಕೋಣಗಳಿಗೆ ಅವಕಾಶ ಕಲ್ಪಿಸಿದ್ದು, ಈ ಹಿನ್ನೆಲೆಯಲ್ಲಿ ಕಂಬಳ ಕೋಣಗಳ ಯಜಮಾನರುಗಳ ಸಭೆಯನ್ನು ಕರೆಯಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ಸೆ. 30ರಂದು ಸಂಜೆ 3 ಗಂಟೆಗೆ ಮಂಗಳೂರು ಹೊಟೇಲ್ ವುಡ್’ಲ್ಯಾಂಡಿನಲ್ಲಿ ಕೋಣಗಳ ಯಜಮಾನರುಗಳ ಸಭೆಯನ್ನು ಕರೆಯಲಾಗಿದೆ. ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ, ಸೂಚನೆ ನೀಡುವಂತೆ ತಿಳಿಸಲಾಗಿದೆ.

ನವಂಬರಿನಲ್ಲಿ ರಾಜ್ಯ ರಾಜಧಾನಿಯಾದ ಬೆಂಗಳೂರಿನಲ್ಲಿ ಕಂಬಳ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ಕಂಬಳ ಕೋಣಗಳ ಯಜಮಾನರುಗಳ ಸಭೆ ಕರೆದಿದ್ದು, ಬೆಂಗಳೂರು ಕಂಬಳದಲ್ಲಿ ಭಾಗವಹಿಸಲು ಹೆಸರು ನೋಂದಾಯಿಸಲು ಅವಕಾಶ ನೀಡಲಾಗಿದೆ.  ಮಾಹಿತಿಗೆ ರಾಜೀವ್ ಶೆಟ್ಟಿ ಎತ್ತೂರು 8861949607, ನಿರಂಜನ್ ರೈ ಮಠಂತಬೆಟ್ಟು 9972772505 ಅವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಬೆಂಗಳೂರಿನ ಸಂಡೇಬಜಾರ್ ನಲ್ಲಿ ವಿದೇಶಿ ಯೂಟ್ಯೂಬರ್ ಗೆ ಕಿರುಕುಳ

Posted by Vidyamaana on 2023-06-12 10:15:19 |

Share: | | | | |


ಬೆಂಗಳೂರಿನ ಸಂಡೇಬಜಾರ್ ನಲ್ಲಿ ವಿದೇಶಿ ಯೂಟ್ಯೂಬರ್ ಗೆ ಕಿರುಕುಳ

ಬೆಂಗಳೂರು :ತನ್ನ ಪಾಡಿಗೇ ವಿಡಿಯೋ ವ್ಲಾಗ್ ಮಾಡುತ್ತಿದ್ದ ವಿದೇಶಿ ಯೂಟ್ಯೂಬರ್ ಗೆ ಸ್ಥಳೀಯ ವ್ಯಾಪಾರಿಯೊಬ್ಬರು ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಸಂಡೇ ಬಜಾರ್ ನಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಬೆಂಗಳೂರು: ತನ್ನ ಪಾಡಿಗೇ ವಿಡಿಯೋ ವ್ಲಾಗ್ ಮಾಡುತ್ತಿದ್ದ ವಿದೇಶಿ ಯೂಟ್ಯೂಬರ್ ಗೆ ಸ್ಥಳೀಯ ವ್ಯಾಪಾರಿಯೊಬ್ಬರು ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಸಂಡೇ ಬಜಾರ್ ನಲ್ಲಿ ನಡೆದಿದೆ ಎಂದು ಹೇಳಲಾಗಿದೆ.ಬೆಂಗಳೂರು ನಗರದ ಚಿಕ್ಕಪಟೇಟೆಯಲ್ಲಿ ವ್ಯಾಪ್ತಿಯಲ್ಲಿ ನಡೆಯುವ ಸಂಡೇಬಜಾರ್ ನಲ್ಲಿ ಈ ಘಟನೆ ನಡೆದಿದ್ದು, ವಿದೇಶಿ ಯೂಟ್ಯೂಬರ್​ ಮೇಲೆ ವ್ಯಾಪಾರಿಯೊಬ್ಬರು ಹಲ್ಲೆ ಯತ್ನ ಮಾಡಿದ್ದಾರೆ ಎಂದು ಹೇಳಲಾಗಿದೆ. ಈ ವೈರಲ್ ವಿಡಿಯೋದಲ್ಲಿ ಉತ್ಸಾಹದಿಂದಲೇ ನೆದರ್ಲ್ಯಾಂಡ್​ನ ಪೆಡ್ರೋ ಮೊಟಾ ಎಂಬ ವ್ಯಕ್ತಿ ವಿಡಿಯೋ ಮಾಡುತ್ತಿದ್ದ. ಈ ವೇಳೆ ತಾನ್ನು ಇಷ್ಟು ದೊಡ್ಡ ಮಾರುಕಟ್ಟೆಯಲ್ಲಿ ತಾನು ಏನಾದರೂ ಖರೀದಿ ಮಾಡಿಯೇ ತೀರುತ್ತೇನೆ ಎಂದು ಹೇಳುವಾಗಲೇ ಸ್ಥಳೀಯ ವ್ಯಾಪಾರಿಯೋರ್ವ ಆತನ ಕೈ ಹಿಡಿದು ವಿಡಿಯೋ ರೆಕಾರ್ಡಿಂಗ್ ನಿಲ್ಲಿಸುವಂತೆ ಅಗ್ರಹಿಸಿದ್ದಾನೆ.ಆದರೆ ಆತನ ಮಾತು ಅರ್ಥವಾಗದ ವಿದೇಶಿ ಯೂಟ್ಯೂಬರ್ ಅಲ್ಲಿಂದ ತಪ್ಪಿಸಿಕೊಳ್ಳುವ ಯತ್ನ ಮಾಡಿದ್ದಾನೆ.


ಆದರೂ ಆತನನ್ನು ಆ ವ್ಯಾಪಾರಿ ಮತ್ತು ಇತರರು ಅಟ್ಟಾಡಿಸಿದ್ದಾರೆ. ಆದರೆ ಕೆಲವೇ ಕ್ಷಣಗಳ ಅಂತರದಲ್ಲಿ ವಿದೇಶಿ ಯೂಟ್ಯೂಬರ್ ಪಾರಾಗಿದ್ದಾನೆ. ಈ ಕೃತ್ಯಕ್ಕೆ ಭಾರೀ ಖಂಡನೆ ವ್ಯಕ್ತವಾಗುತ್ತಿದ್ದು, ಪಶ್ಚಿಮ ವಿಭಾಗದ ಡಿಸಿಪಿ ಗಮನಕ್ಕೂ ತರಲಾಗಿದೆವಿಡಿಯೋದಲ್ಲಿ ಏನಿದೆ..?


ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ವಿದೇಶಿ ಪ್ರಜೆ ಲೈವ್ ವಿಡಿಯೋ ಮಾಡುತ್ತ ರಸ್ತೆಯಲ್ಲಿ ಹೋಗುತ್ತಿರುತ್ತಾರೆ. ಈ ವೇಳೆ ಆತನ ವಿರುದ್ಧ ದಿಕ್ಕಿನಿಂದ ಬಂದ ಓರ್ವ ವ್ಯಕ್ತಿ ಆತನನ್ನು ತಡೆದು ನಿಲ್ಲಿಸಿದ್ದಾನೆ. ಆಗ ವಿದೇಶಿ ಪ್ರಜೆ ‘ನಮಸ್ತೆ, ನಮಸ್ಕಾರ್’ ಎಂದು ಮಾತನಾಡಿಸಲು ಮುಂದಾಗಿದ್ದಾರೆ. ಆಗ, ಕೈಹಿಡಿದುಕೊಂಡಿದ್ದ ವ್ಯಕ್ತಿ ಕೈ ತೋರಿಸುತ್ತ ‘ಏನ್ ನಮಸ್ಕಾರ್..?ಏನಿದು’ ಎಂದು ಪ್ರಶ್ನೆ ಮಾಡಿ, ವಿಡಿಯೋ ರೆಕಾರ್ಡಿಂಗ್ ನಿಲ್ಲಿಸು ಎಂದಿದ್ದಾರೆ. ನಂತರ, ಒಂದಷ್ಟು ಮಂದಿ ಯೂಟ್ಯೂಬರ್ ಸುತ್ತುವರಿದಿದ್ದಾರೆ. ಕೂಡಲೇ ಆತ ಪರಾರಿಯಾಗಿ ಅವರಿಂದ ತಪ್ಪಿಸಿಕೊಂಡಿದ್ದಾರೆಘಟನೆಯ ಕುರಿತು ಮುದಾಸಿರ್ ಅಹಮದ್ ಎಂಬುವವರು ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ಘಟನೆ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.


ಘಟನೆಯ ಕುರಿತು ಬೆಂಗಳೂರುನಗರ ಪೊಲೀಸರು ರಿ ಟ್ವೀಟ್​ ಮಾಡಿ, ಅಗತ್ಯ ಕ್ರಮಕ್ಕಾಗಿ ನಿಮ್ಮ ಮನವಿಯನ್ನು ಪಶ್ಚಿಮ ವಿಭಾಗದ ಡಿಸಿಪಿಯವರ ಗಮನಕ್ಕೆ ತರಲಾಗಿದೆ ಎಂದು ಬರೆದಿದ್ದಾರೆ.ಆರೋಪಿ ಬಂಧನ: ಕಾಟನ್ ಪೇಟೆ ಠಾಣಾ ಪೊಲೀಸರು ಈ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ನವಾಬ್​ ಹಯಾತ್​ ಶರೀಫ್ ಎಂಬಾತನನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆತಪ್ಪಿತಸ್ಥರ ವಿರುದ್ಧ ಕ್ರಮ ಇನ್ನು ಈ ವೈರಲ್ ವಿಡಿಯೋವನ್ನು ಪೊಲೀಸ್ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಈ ಕುರಿತು ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆಯುವುದಾಗಿ ಹೇಳಿದ್ದಾರೆ. ಅಲ್ಲದೆ ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಸೂಚಿಸಿದ್ದೇವೆ ಎಂದು ಭರವಸೆ ನೀಡಿದ್ದಾರೆಕಳೆದ ವರ್ಷ ಡಿಸೆಂಬರ್ನಲ್ಲಿ, ದಕ್ಷಿಣ ಕೊರಿಯಾದ ಯೂಟ್ಯೂಬರ್ಗೆ ಮುಂಬೈ ಬೀದಿಯಲ್ಲಿ ಇಬ್ಬರು ವ್ಯಕ್ತಿಗಳು ಲೈವ್ ಸ್ಟ್ರೀಮಿಂಗ್ ಮಾಡುವಾಗ ಕಿರುಕುಳ ನೀಡಿದ್ದರು.ಘಟನೆಯ ವಿಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಮುಂಬೈ ಪೊಲೀಸರು ಮೊಬೀನ್ ಚಂದ್ ಮೊಹಮ್ಮದ್ ಶೇಖ್ ಮತ್ತು ಮೊಹಮ್ಮದ್ ನಕೀಬ್ ಸದ್ರೇಲಂ ಅನ್ಸಾರಿ ಎಂಬ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದರು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ನಂತರ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಕೊರಿಯನ್ ಯೂಟ್ಯೂಬರ್ಗೆ ಸಂಪೂರ್ಣ ರಕ್ಷಣೆಯನ್ನು ಭರವಸೆ ನೀಡಿತ್ತು.

ಎರಡು ವರ್ಷಗಳ ಹಿಂದಿನ ಮನೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು

Posted by Vidyamaana on 2024-07-03 08:00:29 |

Share: | | | | |


ಎರಡು ವರ್ಷಗಳ ಹಿಂದಿನ ಮನೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು

ಬೆಳ್ಳಾರೆ : ಎರಡು ವರ್ಷಗಳ ಹಿಂದೆ ನಡೆದ ಮನೆ ಕಳ್ಳತನ ಪ್ರಕರಣವನ್ನು ಬೆಳ್ಳಾರೆ ಪೊಲೀಸರು ಭೇದಿಸಿದ್ದಾರೆ.


ಪೊಲೀಸ್ ಠಾಣಾ ವ್ಯಾಪ್ತಿಯ ಕಡಬ ತಾಲೂಕು ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿ ನಡೆದ ಸುಮಾರು 1,48,000 ರೂ. ಮೌಲ್ಯದ ಚಿನ್ನಾಭರಣಗಳು ಮತ್ತು ನಗದು ಹಣ 30,000 ರೂ. ಸೇರಿ ಒಟ್ಟು 1,78,000 ರೂ. ಮೌಲ್ಯದ ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆಯಲ್ಲಿ ಅಪರಾಧ ಕ್ರಮಾಂಕ. 22/2022 ಕಲಂ 457,380 ಭಾ. ದಂ. ಸಂ ರಂತೆ ಪ್ರಕರಣ ದಾಖಲಿಸಿಕೊಂಡು, ಕಳೆದ ಎರಡು ವರ್ಷಗಳಿಂದ ತನಿಖೆ ನಡೆಸಿದ್ದು, ಪ್ರಸ್ತುತ ಪ್ರಕರಣದ ಆರೋಪಿ ಬೆಳ್ತಂಗಡಿ ನೆರಿಯಾ ನಿವಾಸಿ ಶರತ್ (24) ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ಕಳವು ಮಾಡಿದ ಸೊತ್ತುಗಳನ್ನು ಪತ್ತೆ ಮಾಡಿ ಸ್ವಾದೀನಪಡಿಸಿಕೊಳ್ಳಲಾಗಿದೆ.



Leave a Comment: