ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಸುದ್ದಿಗಳು News

Posted by vidyamaana on 2023-06-29 12:19:28 |

Share: | | | | |


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.


ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,  ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು. 

ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು.  ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು. 

ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು. 

ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ  ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ  ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ  ಮುಸ್ಲಿಂ ಮಗುವೊಂದು ಮೃತಪಟ್ಟಿದೆ. 

ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.

 Share: | | | | |


ಮಹಾಲಿಂಗೇಶ್ವರನ ಜಾತ್ರೆಗೆ ಹೊರೆಕಾಣಿಕೆ ಸಮರ್ಪಣೆ

Posted by Vidyamaana on 2023-04-08 11:40:02 |

Share: | | | | |


ಮಹಾಲಿಂಗೇಶ್ವರನ ಜಾತ್ರೆಗೆ ಹೊರೆಕಾಣಿಕೆ ಸಮರ್ಪಣೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ. 10ರಿಂದ 20ರ ತನಕ ನಡೆಯಲಿರುವ ವೈಭವದ ಜಾತ್ರೋತ್ಸವಕ್ಕೆ ಶನಿವಾರ ಹೊರೆಕಾಣಿಕೆ ಸಮರ್ಪಣೆಯಾಯಿತು.

ಅಪರಾಹ್ನ 3.30ಕ್ಕೆ ಹೊರೆಕಾಣಿಕೆ ಮೆರವಣಿಗೆಗೆ ಪುತ್ತೂರು ಸೀಮೆ ಹಾಗೂ ವಿವಿಧ ಧಾರ್ಮಿಕ ಕ್ಷೇತ್ರಗಳಿಂದ ಹೊರೆಕಾಣಿಕೆ ದರ್ಬೆ ವೃತ್ತ ಹಾಗೂ ಬೊಳುವಾರಿನ ಸುಬ್ರಹ್ಮಣ್ಯ ನಗರದಲ್ಲಿ ಸೇರಿ ಏಕಕಾಲದಲ್ಲಿ ಚಾಲನೆ ನೀಡಲಾಯಿತು. ದರ್ಬೆ ವೃತ್ತದಲ್ಲಿ‌ ಶ್ರಿ ವಜ್ರದೇಹಿ ಮಠದ‌ ಶ್ರೀ ರಾಜಶೇಖರಾನಂದ‌ ಸ್ವಾಮಿಜಿ ತೆಂಗಿನಕಾಯಿ‌ ಒಡೆಯುವ ಮೂಲಕ‌ ಉದ್ಘಾಟಿಸಿದರು.ಬಳಿಕ ಹೊರೆಕಾಣಿಕೆ ಮೆರವಣಿಗೆ ಕೊಂಬು, ಕಹಳೆ, ಬ್ಯಾಂಡ್, ಕಲ್ಲಡ್ಕ ಗೊಂಬೆ ಕುಣಿತ, ಭಜನೆಯೊಂದಿಗೆ ಶ್ರೀ ದೇವಸ್ಥಾನಕ್ಕೆ ಆಗಮಿಸಿತು. ಹಸಿರುವಾಣಿ ಮೆರವಣಿಗೆಯಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ನಡೆಯುತ್ತಿರುವ 15 ಧಾರ್ಮಿಕ ಕೇಂದ್ರಗಳಲ್ಲಿ ಅಧ್ಯಯನ ಮಾಡುತ್ತಿರುವ ಮಕ್ಕಳು ಹೊರೆಕಾಣಿಕೆ ಮೆರವಣಿಗೆಯಲ್ಲಿ ಪಾಲ್ಗೊಂಡಿರುವುದು ವಿಶೇಷವಾಗಿತ್ತು.ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ಸದಸ್ಯರಾದ ಬಿ.ಕೆ. ಐತ್ತಪ್ಪ ನಾಯ್ಕ್, ರಾಮದಾಸ್ ಗೌಡ, ಶೇಖರ್ ನಾರಾವಿ, ರಾಮಚಂದ್ರ ಕಾಮತ್, ರವೀಂದ್ರನಾಥ ರೈ ಬಳ್ಳಮಜಲು, ಬಿ.ಕೆ. ವೀಣಾ, ಡಾ. ಸುಧಾ ಎಸ್. ರಾವ್, ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ಅರುಣ್ ಕುಮಾರ್ ಪುತ್ತಿಲ, ಜಯಂತ್ ನಡುಬೈಲು, ಸೀತಾರಾಮ ರೈ ಕೆದಂಬಾಡಿಗುತ್ತು, ಡಾ. ಪ್ರಸನ್ನ, ಜಯಕುಮಾರ್ ರೈ, ರಾಜೇಶ್ ಬನ್ನೂರು ಮೊದಲಾದವರು ಉಪಸ್ಥಿತರಿದ್ದರು.

ಇಂದು ಪ್ರಗತಿ ಸ್ಟಡಿ ಸೆಂಟರ್‌ನ ಪ್ರಾಯೋಜಕತ್ವದಲ್ಲಿ ಪ್ರಗತಿ ವೈಭವ ತಾಲೂಕು ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ

Posted by Vidyamaana on 2023-12-17 07:30:09 |

Share: | | | | |


ಇಂದು ಪ್ರಗತಿ ಸ್ಟಡಿ ಸೆಂಟರ್‌ನ ಪ್ರಾಯೋಜಕತ್ವದಲ್ಲಿ ಪ್ರಗತಿ ವೈಭವ ತಾಲೂಕು ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ

ಪುತ್ತೂರು: ಇಲ್ಲಿನ ಧರ್ಮಸ್ಥಳ ಬಿಲ್ಡಿಂಗ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಪ್ರೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ(ಸಮೂಹ), ಜಾನಪದ ನೃತ್ಯ (ಸಮೂಹ), ಮಾನ್ಯಾಧಾರಿತ ಹಾಸ್ಯ ಪ್ರಧಾನ ನಾಟಕ (ಸಮೂಹ), ದೇಶಭಕ್ತಿ ನೃತ್ಯ ರೂಪಕ (ಸಮೂಹ) ಕಾರ್ಯಕ್ರಮ ಡಿ.17 ರಂದು ಜೈನಭವನದಲ್ಲಿ ಬೆಳಗ್ಗೆ 10 ಗಂಟೆಯಿಂದ 8 ರವರೆಗೆ ನಡೆಯಲಿದೆ. ಕಾಠ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಇವರು ನೆರವೇರಿಸಲಿದ್ದಾರೆ.

ನಂತರ ವಿವಿಧ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಸ್ಪರ್ಧೆಗಳು ನಡೆಯಲಿದೆ. ಸಭಾಕಾಯಕ್ರಮ ಸಂಜೆ 4 ಗಂಟೆಗೆ ನಡೆಯಲಿದೆ. ಕಾಠ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಅಶೋಕ್ ಕುಮಾರ್ ರೈ ವಹಿಸಿಕೊಳ್ಳಲಿದ್ದಾರೆ. ಕಾಠ್ಯಕ್ರಮದ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್.. ಶ್ರೀ ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಯು. ಪಿ. ಶಿವಾನಂದ, ತಾಲೂಕು ಕ.ಸಾ.ಪ. ಅಧ್ಯಕ್ಷ ಉಮೇಶ್ ನಾಯಕ್, ಶಿಕ್ಷಣ ತಜ್ಞೆ ವಚನ ಜಯರಾಮ್, ನಿವೃತ್ತ ಶಿಕ್ಷಕ ನಾರಾಯಣ ರೈ ಕುಕ್ಕುವಳ್ಳಿ, ಅಪ್ಪಯ್ಯ ಪಿ.ಟಿ ಹಾಗೂ ಸರಿತ ಯಶೋಧ ಬೆಂಗಳೂರು, ವಿದ್ಯಾರ್ಥಿ ಪೋಷಕರು ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವೀಂದ್ರ ಶೆಟ್ಟಿ ನುಳಿಯಾಲು, ಸುಷ್ಮಾ ಡೆಪ್ಯೂಟಿ ಮ್ಯಾನೇಜರ್, ಐ.ಸಿ.ಐ.ಸಿ.ಐ ಬ್ಯಾಂಕ್ ಬೆಂಗಳೂರು ಹಾಗೂ ಹಿರಿಯ ವಿದ್ಯಾರ್ಥಿನಿ ಪ್ರಗತಿ ಸ್ಟಡಿ ಸೆಂಟರ್, ವಿನಿತಾ ಸಹಾಯಕ ಪ್ರಾಧ್ಯಾಪಕರು, ಕೆ.ಎಲ್.ಇ ಸೊಸೈಟಿ ನಿಜಲಿಂಗಪ್ಪ ಕಾಲೇಜು, ರಾಜಾಜಿ ನಗರ ಬೆಂಗಳೂರು ಹಾಗೂ ಹಿರಿಯ ವಿದ್ಯಾರ್ಥಿನಿ ಪ್ರಗತಿ ಸ್ಟಡಿ ಸೆಂಟರ್ ಹಾಗೂ ಧರ್ಮದೈವ ಚಿತ್ರ ತಂಡದ ಎಲ್ಲಾ ಸದಸ್ಯರು ಭಾಗವಹಿಸಲಿದ್ದಾರೆ. ರಾಜ್ಯ ಪ್ರಶಸ್ತಿ ಪುರಸ್ಕೃತೆ ಗುರುಪ್ರಿಯ ನಾಯಕ್ ಇವರ ತಂಡದವರಿಂದ ಗಾನನೃತ್ಯ ವೈಭವ ಕಾರ್ಯಕ್ರಮವು ಜರುಗಲಿದೆ. ನಂತರ ಪ್ರಗತಿ ಸ್ಟಡಿ ಸೆಂಟರ್ ವಿದ್ಯಾರ್ಥಿಗಳಿಂದ ವಿವಿಧ ಕಾರ್ಯಕ್ರಮಗಳು ಜರುಗಲಿದೆ ಎಂದು ಪ್ರಾಶುಪಾಲರಾದ ಕೆ ಹೇಮಲತಾ ಗೋಕುಲ್ ನಾಥ್ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಅಮ್ಮನ ಭರವಸೆಯ ರಶ್ಮಿ ಮರೆಯಾಯ್ತು

Posted by Vidyamaana on 2023-06-25 04:25:12 |

Share: | | | | |


ಅಮ್ಮನ ಭರವಸೆಯ ರಶ್ಮಿ ಮರೆಯಾಯ್ತು

ಬೆಳ್ತಂಗಡಿ : ಬಜಿರೆ ಗ್ರಾಮದ ನೀರಪಲ್ಕೆ ಮನೆ ರವಿ ಕುಲಾಲ್ ರವರ ಪುತ್ರಿ ರಶ್ಮಿತಾ ರವರು ಅಸೌಖ್ಯದಿಂದ ಜೂ.24 ರಂದು ನಿಧನರಾದರು.

ವೇಣೂರು ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ರಶ್ಮಿತಾ ಕಳೆದ 4 ದಿವಸದ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಕಳೆದ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು.

ಮೃತರು ತಾಯಿ ಸುಶೀಲ, ಬಂಧುಬಳಗವನ್ನು ಅಗಲಿದ್ದಾರೆ.

ಲೀಲಾಧರ ಶೆಟ್ಟಿಯವರ ಸಾಕು ಪುತ್ರಿ ಪ್ರಿಯಕರ ಗಿರೀಶ್ ಜೊತೆ ಪತ್ತೆ

Posted by Vidyamaana on 2023-12-18 12:53:55 |

Share: | | | | |


ಲೀಲಾಧರ ಶೆಟ್ಟಿಯವರ ಸಾಕು ಪುತ್ರಿ ಪ್ರಿಯಕರ ಗಿರೀಶ್ ಜೊತೆ ಪತ್ತೆ

ಕಾಪುವಿನ ಸಮಾಜ ಸೇವಕ ಲೀಲಾಧರ ಶೆಟ್ಟಿಯವರ ಅಪ್ರಾಪ್ತ ವಯಸ್ಸಿನ ಸಾಕು ಮಗಳ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಪು ಪೊಲೀಸರು ಆಕೆಯ ಸ್ನೇಹಿತ ಸೇರಿ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.


ಬಂಧಿತರನ್ನು ಆಕೆಯ ಸ್ನೇಹಿತ ಶಿರ್ವ ನಿವಾಸಿ ಗಿರೀಶ್ (20), ನಾಪತ್ತೆಯಾಗಲು ಸಹಕರಿಸಿದ ಶಿರ್ವದ ರೂಪೇಶ್ (22), ಜಯಂತ್ (23) ಮತ್ತು ಮಜೂರು ನಿವಾಸಿ ಮೊಹಮ್ಮದ್ ಅಜೀಝ್ ಎಂದು ಗುರುತಿಸಲಾಗಿದೆ.


ಆರೋಪಿಗಳನ್ನು ಮತ್ತು ಲೀಲಾಧರ ಶೆಟ್ಟಿಯವರ ಸಾಕು ಪುತ್ರಿಯನ್ನು ಪೊಲೀಸರು ಕುಂಬ್ಳೆ ಬಳಿ ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ.


ಲೀಲಾಧರ ಶೆಟ್ಟಿ ಯವರು 16 ವರ್ಷಗಳ ಹಿಂದೆ ಹೆಣ್ಣು ಮಗುವೊಂದನ್ನು ದತ್ತು ಪಡೆದಿದ್ದು, ಆಕೆ ಡಿಸೆಂಬರ್ 11 ರಂದು ಏಕಾಏಕಿ ನಾಪತ್ತೆಯಾಗಿದ್ದಳು. 


ಈ ಘಟನೆಯಿಂದ ನೊಂದು ಸಮಾಜಕ್ಕೆ ಹೆದರಿ ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ವಸುಂಧರಾ‌ ಶೆಟ್ಟಿ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆಗೆ ಸಂಬಂಧಪಟ್ಟಂತೆ ಕಾಪು ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ಮತ್ತು‌ ನಾಪತ್ತೆ‌ ಪ್ರಕರಣಗಳು ದಾಖಲಾಗಿದ್ದವು.


ಆರೋಪಿ ಗಿರೀಶ್ ವಿರುದ್ದ ಪೋಕ್ಸೋ, ಅತ್ಯಾಚಾರ, ಅಪಹರಣ ಪ್ರಕರಣ ಮತ್ತು ಸ್ನೇಹಿತರ ವಿರುದ್ದ ಪೋಕ್ಸೋ ಪ್ರಕರಣವನ್ನು ದಾಖಲಿಸಲಾಗಿದೆ.


ಜಿಲ್ಲಾ ಪೋಲಿಸ್ ವರಿಷ್ಟಾದಿಕಾರಿ ಡಾಕ್ಟರ್ ಅರುಣ್ ಕೆ, ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ, ಕಾರ್ಕಳ ಡಿವೈಎಸ್ ಪಿ ಅರವಿಂದ ಕಲ್ಲಗುಜ್ಜಿ ಮಾರ್ಗದರ್ಶನದಲ್ಲಿ ಕಾಪು ಎಸ್ ಐ ಅಬ್ದುಲ್ ಖಾದರ್ ಮತ್ತು ತಂಡ ಆರೋಪಿಗಳನ್ನು ಬಂಧಿಸಿದೆ.

ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ನಿಧನ ಹಿನ್ನೆಲೆ ಶೋಕಾಚರಣೆ

Posted by Vidyamaana on 2024-06-12 08:17:46 |

Share: | | | | |


ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ನಿಧನ ಹಿನ್ನೆಲೆ ಶೋಕಾಚರಣೆ

ಪುತ್ತೂರು: ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಅವರ ನಿಧನಕ್ಕೆ ಶಾಸಕರು‌ ಸಂತಾಪ ಸೂಚಿಸಿ ತನ್ನ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಪಕ್ಷದ ಅತ್ಯಂತ ಪ್ರಾಮಾಣಿಕ ಕಾರ್ಯಕರ್ತರಾಗಿ ಪಕ್ಷಕ್ಕಾಗಿ ಹಗಲಿರುಳು ಸೇವೆ ಮಾಡುತ್ತಿದ್ದ , ಸಮಾಜ ಸೇವಾ ಕೆಲಸದಲ್ಲೂ ತನನ್ನು ತೊಡಗಿಸಿಕೊಂಡಿರುವ ಪ್ರಕಾಶ್ ಅವರ ನಿಧನದಿಂದ ಅತ್ಯಂತ ದು:ಖಿತರಾಗಿರುವ ಶಾಸಕರು ತನ್ನ ಎಲ್ಲಾ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ. ಇವತ್ತಿನ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ಕೆಂಪೇಗೌಡ್ರ ನಾಡಿನಲ್ಲಿ ಕಂಬಳದ ಗೌಜಿ – ಸಿಲಿಕಾನ್ ಸಿಟಿಯಲ್ಲಿ ಕೋಣಗಳ ಓಟದ ಗೌಜಿ-ಗಮ್ಮತ್ತು

Posted by Vidyamaana on 2023-08-07 01:47:24 |

Share: | | | | |


ಕೆಂಪೇಗೌಡ್ರ ನಾಡಿನಲ್ಲಿ ಕಂಬಳದ ಗೌಜಿ – ಸಿಲಿಕಾನ್ ಸಿಟಿಯಲ್ಲಿ ಕೋಣಗಳ ಓಟದ ಗೌಜಿ-ಗಮ್ಮತ್ತು

ಬೆಂಗಳೂರು : ರಾಜ್ಯದಲ್ಲಿ ಹಲವು ಪ್ರಾದೇಶಿಕ ಸೊಗಡುಗಳನ್ನು ಹೊಂದಿದ ಕರಾವಳಿ ತೀರದ ಯಕ್ಷಗಾನ ಬೆಂಗಳೂರಿಗೆ ಕಾಲಿಟ್ಟು ದಶಕಗಳೇ ಕಳೆದಿವೆ. ಈಗ ಕಾಂತಾರ ಸಿನಿಮಾದ ಮೂಲಕ ಜಗತ್ತಿಗೆ ಅತಿಹೆಚ್ಚು ಚಿರಪರಿಚಿತವಾದ ಕೆಸರಿನ ಗದ್ದೆಯಲ್ಲಿ ಶರವೇಗದಲ್ಲಿ ಓಡುವ ಕೋಣಗಳ ಕಂಬಳವನ್ನು ಈಗ ಬೆಂಗಳೂರಿನಲ್ಲಿ ಆಯೋಜನೆ ಮಾಡಲಾಗುತ್ತಿದೆ.ಇದಕ್ಕೆ ದಿನಗಣನೆ ಆರಂಭವಾಗಿದ್ದು, ತುಳು ಕೂಟದಿಂದ ಭರ್ಜರಿಯಾಗಿ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ. 


ಇನ್ನು ರಾಜ್ಯದಲ್ಲಿ ನಮಗೆ ಕಂಬಳ ಎಂದಾಕ್ಷಣ ಕರಾವಳಿಯ ಪ್ರದೇಶಗಳು ನೆನಪಿಗೆ ಬರುತ್ತವೆ. ಅದರಲ್ಲೂ ಜಾಗತಿಕವಾಗಿ ಭರ್ಜರಿ ಯಶಸ್ಸು ಕಂಡ "ಕಾಂತಾರ" ಸಿನಿಮಾ ಬಂದ ಮೇಲಂತೂ ಕಂಬಳ ಪ್ರಸಿದ್ಧಿಯೂ ಮತ್ತಷ್ಟು ಹೆಚ್ಚಾಗಿತ್ತು. ಇನ್ನು ಕಂಬಳ ಎಂದಾಕ್ಷಣ ಕಾಂತಾರ ಸಿನಿಮಾದ ನೆನಪು ಬರುವಷ್ಟರ ಮಟ್ಟಿಗೆ ಜನಜನಿತವಾಯಿತು. ಕರಾವಳಿಯಲ್ಲಷ್ಟೇ ನಡೆಯುವ ಹಾಗೂ ಅಲ್ಲಿ ಮಾತ್ರ ನಡೆಸಬಹುದಾದ ಕಂಬಳ ಕ್ರೀಡೆಯನ್ನು ಅಥವಾ ಪ್ರಾದೇಶಿಕ ಸೊಗಡನನ್ನು ರಾಜಧಾನಿ ಬೆಂಗಳೂರಿನಲ್ಲಿ ನಡೆಸಲು ಮುಂದಾಗಿದ್ದಾರೆಅದಕ್ಕೆ ಭರದ ಸಿದ್ಧತೆಯೀ ನಡೆಸಲಾಗಿದೆ 

ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಬೆಂಗಳೂರು ತುಳು ಕೂಟದ 50ನೇ ವರ್ಷಾಚರಣೆ: ಕರಾವಳಿಗೆ ಸೀಮಿತವಾಗಿರುವ ಕಂಬಳ ಬೆಂಗಳೂರಿನಲ್ಲಿ ನಡೆದರೆ ಹೇಗೆ? ಎಂಬ ಯೋಚನೆ ಕಳೆದ ಕೆಲವು ವರ್ಷದಿಂದ ಕರಾವಳಿಗರ ಅನೇಕರ ಮನಸ್ಸಲ್ಲಿದೆ. ಇದೀಗ ಅದಕ್ಕೂ ಕಾಲ ಕೂಡಿ ಬಂದಿದೆ. ಬೆಂಗಳೂರಿನಲ್ಲೇ ಕಂಬಳವನ್ನು ನಡೆಸಲು ಒಂದು ತಂಡವೇ ಸಿದ್ಧವಾಗಿದೆ. ಇದಕ್ಕಾಗಿ ಸೂಕ್ತ ಸ್ಥಳವನ್ನು ಸ್ಥಳವನ್ನು ಪರಿಶೀಲನೆ ಕೂಡ ನಡೆಸಲಾಗಿದೆ. ಅದನ್ನು ಆಯೋಜನೆ ಮಾಡುವುದಕ್ಕೂ ಈಗ ಸೂಕ್ತ ಮತ್ತು ಸಕಾಲವೂ ಒದಗಿಬಂದಿದೆ. ಅದೇನೆಂದರೆಮ ಬೆಂಗಳೂರಿನ ತುಳು ಕೂಟದ 50ನೇ ವರ್ಷದ ಸಂಭ್ರಮಾಚರಣೆ ಸಲುವಾಗಿ ಬೆಂಗಳೂರಿನಲ್ಲೇ ಕಂಬಳ ನಡೆಸಲು ನಿರ್ಧರಿಸಲಾಗಿದೆ. ಅದರಲ್ಲೂ ಬೆಂಗಳೂರಿನ ಅರಮನೆ ಮೈದಾನದಲ್ಲೇ ಈ ಕಂಬಳ ನಡೆಯಲಿದೆ ಎನ್ನುವುದು ಅತ್ಯಂತ ಸಂತಸದಾಯಕ ವಿಚಾರವಾಗಿದೆ. 


ಕಂಬಳ ನಡೆಸಲು ಸ್ಥಳ ಪರಿಶೀಲನೆಯೂ ಮುಕ್ತಾಯ:

ಬೆಂಗಳೂರಿನಲ್ಲಿ ಕಂಬಳ ಆಯೋಜನೆ ಮಾಡುವ ಕುರಿತು ಪುತ್ತೂರು ಶಾಸಕ ಹಾಗೂ ಉಪ್ಪಿನಂಗಡಿ ವಿಜಯವಿಕ್ರಮ ಜೋಡುಕೆರೆ ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಕಂಬಳಕ್ಕಾಗಿ ಅರಮನೆ ಮೈದಾನದಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಆದರೆ ಕಂಬಳ ಯಾವತ್ತು ನಡೆಯಲಿದೆ ಎನ್ನುವ ಕುರಿತು ಇನ್ನೂ ದಿನಾಂಕವನ್ನು ಮಾತ್ರ ನಿಗದಿ ಮಾಡಿಲ್ಲ. ಜೊತೆಗೆ, ಯಾವ ಕೋಣಗಳನ್ನು ಇಲ್ಲಿನ ಕಂಬಳಕ್ಕೆ ಆಯ್ಕೆ ಮಾಡಬೇಕು, ಅವುಗಳನ್ನು ಊರಿನಿಂದ ಬೆಂಗಳೂರಿಗೆ ಹೇಗೆ ತರಬೇಕು ಎಂಬ ನಿಟ್ಟಿನಲ್ಲಿಯೂ ಚರ್ಚೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಶಾಸಕ ಅಶೋಕ್‌ ಕುಮಾರ್‌ ರೈ ಅವರೊಂದಿಗೆ ತುಳು ಕೂಟದ ಅಧ್ಯಕ್ಷ ಸುಂದರ್ ರಾಜ್ ರೈ, ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗ್ಡೆ ಕೆ., ತುಳುಕೂಟದ ಗೌರವಾಧ್ಯಕ್ಷ ಹಾಗೂ ಮಹಾನಗರ ಪಾಲಿಕೆ ಮಾಜಿ ಸದಸ್ಯ ರಾಜೇಂದ್ರ ಕುಮಾರ್ ಕೆ.ವಿ., ಮಾಜಿ ಅಧ್ಯಕ್ಷ ದಿನೇಶ್ ಹೆಗ್ಡೆ ಬಿ., ಜಯರಾಮ್ ಸೂಡ, ಚಂದ್ರಹಾಸ ರೈ, ಮಹಾನಗರ ಪಾಲಿಕೆ ಮಾಜಿ ಸದಸ್ಯ ಸಂಪತ್ ಕುಮಾರ್, ಅಕ್ಷಯ್ ರೈ ದಂಬೆಕಾನ ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರು ಕೂಡ ಕಂಬಳ ನಡೆಯುವ ಅರಮನೆ ಮೈದಾನದ ಸ್ಥಳವನ್ನು ಪರಿಶೀಲನೆ ಮಾಡಿದ್ದಾರೆ.



Leave a Comment: