ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ವಿಮಾನ ಪತನ: ಮಲಾವಿ ದೇಶದ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಸಹಿತ 10 ಮಂದಿ ಮೃತ್ಯು

Posted by Vidyamaana on 2024-06-11 17:30:29 |

Share: | | | | |


ವಿಮಾನ ಪತನ: ಮಲಾವಿ ದೇಶದ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಸಹಿತ 10 ಮಂದಿ ಮೃತ್ಯು

ಹೊಸದಿಲ್ಲಿ: ಮಲಾವಿ ದೇಶದ ಉಪಾಧ್ಯಕ್ಷ ಸೌಲೋಸ್‌ ಚಿಲಿಮಾ ಹಾಗೂ ಒಂಬತ್ತು ಮಂದಿ ಇತರರು ಇಂದು ವಿಮಾನ ದುರಂತವೊಂದರಲ್ಲಿ ಮೃತಪಟ್ಟಿದ್ದಾರೆಂದು ದೇಶದ ಅಧ್ಯಕ್ಷರ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.ಸೌಲೋಸ್‌ ಮತ್ತಿತರರು ಪ್ರಯಾಣಿಸುತ್ತಿದ್ದ ವಿಮಾನ ನಾಪತ್ತೆಯಾಗಿತ್ತೆಂದು ಈ ಹಿಂದೆ ವರದಿಯಾಗಿತ್ತು.

ಪಾಪೆತ್ತಡ್ಕ: ಜೀಪ್ ಬೈಕ್ ಗೆ ಡಿಕ್ಕಿ ಬೈಕ್ ಸವಾರ ಲೊಕೇಶ್ ಮೃತ್ಯು : ಇಬ್ಬರು ಮಕ್ಕಳು ಗಂಭೀರ

Posted by Vidyamaana on 2024-04-17 23:05:31 |

Share: | | | | |


ಪಾಪೆತ್ತಡ್ಕ: ಜೀಪ್ ಬೈಕ್ ಗೆ ಡಿಕ್ಕಿ ಬೈಕ್ ಸವಾರ ಲೊಕೇಶ್ ಮೃತ್ಯು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿ ನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ.

ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್(48) ಮೃತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ 

ಬಿಜೆಪಿ ನಾಯಕರ ಫೊಟೋಗೆ ಚಪ್ಪಲಿ ಹಾರ ಹಾಕಿದ ಪ್ರಕರಣ: ಆರೋಪಿಗಳಿಗೆ ಪೊಲೀಸ್ ದೌರ್ಜನ್ಯದ ಆರೋಪ

Posted by Vidyamaana on 2023-05-17 10:06:45 |

Share: | | | | |


ಬಿಜೆಪಿ ನಾಯಕರ ಫೊಟೋಗೆ ಚಪ್ಪಲಿ ಹಾರ ಹಾಕಿದ ಪ್ರಕರಣ: ಆರೋಪಿಗಳಿಗೆ ಪೊಲೀಸ್ ದೌರ್ಜನ್ಯದ ಆರೋಪ

ಪುತ್ತೂರು: ಬಿಜೆಪಿ ನಾಯಕರ ಭಾವಚಿತ್ರವಿರುವ ಬ್ಯಾನರಿಗೆ ಚಪ್ಪಲಿ ಹಾರ ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತರಾದ ಆರೋಪಿಗಳಿಗೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂಬ ಫೊಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಅವರ ಭಾವಚಿತ್ರವನ್ನು ಹಾಕಿ, ಅದರಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಎಂಬ ಶೀರ್ಷಿಕೆ ನೀಡಿ, ಅದಕ್ಕೆ ಚಪ್ಪಲಿ ಹಾರ ಹಾಕಿದ ಘಟನೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಟ್ಟು 9 ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದರು.

ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನುವ ಯುವಕರ ಫೊಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನಡೆದಾಡಲು ಕಷ್ಟಪಡುವ ರೀತಿಯ ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಕಂಡುಬಂದಿದೆ.

ಈ ಬಗ್ಗೆ ಡಿವೈಎಸ್ಪಿ ಅವರಲ್ಲಿ ವಿಚಾರಿಸಿದಾಗ ಪುತ್ತೂರು ನಗರ ಠಾಣೆಯಲ್ಲಿ ಅಪರಾಧ ಸಂಖ್ಯೆ 37/23 ರಲ್ಲಿ ದಸ್ತಗಿರಿ ಮಾಡಿದ ಆರೋಪಿತರಿಗೆ ಪೊಲೀಸರು ಹಲ್ಲೆ ಮಾಡಿರುವುದಾಗಿ ಸಾಮಾಜಿಕ ಜಾಲತಾಣ ಗಳಲ್ಲಿ ಸುದ್ದಿ ಪ್ರಸಾರ ವಾಗುತ್ತಿದ್ದು, ಈ ಬಗ್ಗೆ ಸತ್ಯಾಂಶ ತಿಳಿದುಕೊಳ್ಳಲು ವಿಚಾರಣೆ ಕೈಗೊಳ್ಳಲಾಗುವುದು ಎಂದಿದ್ದಾರೆ.

ಮಂಗಳೂರು: ವಿಷಾಹಾರ ಸೇವನೆ : 100ಕ್ಕೂ ಅಧಿಕ ಸಿಟಿ ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥ ; ಆಸ್ಪತ್ರೆಗೆ ದಾಖಲು

Posted by Vidyamaana on 2023-02-06 23:17:30 |

Share: | | | | |


ಮಂಗಳೂರು: ವಿಷಾಹಾರ ಸೇವನೆ : 100ಕ್ಕೂ ಅಧಿಕ ಸಿಟಿ ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥ ; ಆಸ್ಪತ್ರೆಗೆ ದಾಖಲು

ಮಂಗಳೂರಿನ ಶಕ್ತಿನಗರದಲ್ಲಿರುವ ಖಾಸಗಿ ಆಸ್ಪತ್ರೆಯ ಸಿಟಿ ನರ್ಸಿಂಗ್ ವಿದ್ಯಾರ್ಥಿನಿಯರ ಹಾಸ್ಟೆಲ್ ನಲ್ಲಿ ವಿಷಾಹಾರ ಸೇವನೆಯಿಂದ 100ಕ್ಕೂ ಅಧಿಕ ವಿದ್ಯಾರ್ಥಿನಿಯರು

ತೀವ್ರ ಅಸ್ವಸ್ಥಗೊಂಡಿದ್ದು, ಕೆಎಂಸಿ, ಸಿಟಿ ಆಸ್ಪತ್ರೆ ಸೇರಿ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಕೆಲವರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.ವಿಷಾಹಾರ ಸೇವನೆಯ ವಿದ್ಯಾರ್ಥಿನಿಯರನ್ನು ದಾಖಲು ಮಾಡಿದ ಸಿಟಿ ಆಸ್ಪತ್ರೆ ಬಳಿ ಭಾರಿ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದು ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿ ಕುಮಾರ್,

ಡಿಸಿಪಿಗಳು ಮತ್ತಿತರ ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದು ವಿಚಾರಣೆ ಮಾಡುತ್ತಿದ್ದಾರೆ. ವಿಷಾಹಾರ ಸೇವನೆಯ ಕಾರಣ ಇನ್ನು ಕೂಡ ಸ್ಪಷ್ಟವಾಗಿಲ್ಲ ಈ ಬಗ್ಗೆ ಪೊಲೀಸರು ವಿವಿಧ ತಜ್ಞರೊಂದಿಗೆತನಿಖೆ ಆರಂಭಿಸಿದ್ದಾರೆ.

ಎಪ್ರಿಲ್ 14ರಂದು ಮೋದಿ ಮಂಗಳೂರಿಗೆ ; ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

Posted by Vidyamaana on 2024-04-13 04:44:24 |

Share: | | | | |


ಎಪ್ರಿಲ್ 14ರಂದು ಮೋದಿ ಮಂಗಳೂರಿಗೆ ; ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

ಮಂಗಳೂರು, ಎ.12: ಪ್ರಧಾನ ಮಂತ್ರಿ ನರೇಂದ್ರ ಮೋದಿ ಏಪ್ರಿಲ್ 14ರಂದು ಮಂಗಳೂರಿನ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್‌ ವರೆಗೆ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 


ಪ್ರಧಾನ ಮಂತ್ರಿಗಳ ಭದ್ರತೆ ಹಾಗೂ ಸಾರ್ವಜನಿಕರ ಸಂಚಾರ ಸುವ್ಯವಸ್ಥೆಗೆ ಸಂಬಂಧಿಸಿ ಅಂದು ಮಧ್ಯಾಹ್ನ 2 ಗಂಟೆಯಿಂದ ಕಾರ್ಯಕ್ರಮ ಮುಗಿಯುವ ವರೆಗೆ ಮಂಗಳೂರು ನಗರದಲ್ಲಿ ವಾಹನಗಳ ಸಂಚಾರಕ್ಕಾಗಿ ಪರ್ಯಾಯ ವ್ಯವಸ್ಥೆ ಮಾಡಲಾಗಿದ್ದು, ವಾಹನಗಳ ಸಂಚಾರದ/ನಿಲುಗಡೆಯ ನಿಷೇಧಿತ ಸ್ಥಳ ಹಾಗೂ ಪಾರ್ಕಿಂಗ್ ಸ್ಥಳಗಳನ್ನು ನಿಗದಿಪಡಿಸಲಾಗಿದೆ. 


ಪ್ರಧಾನಮಂತ್ರಿಗಳ ರೋಡ್ ಶೋ ನಡೆಯುವ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತ – ಲಾಲ್‌ಬಾಗ್ – ಬಲ್ಲಾಳ್‌ಬಾಗ್ – ಕೊಡಿಯಾಲ್ ಗುತ್ತು – ಬಿ.ಜಿ ಸ್ಕೂಲ್ ಜಂಕ್ಷನ್ – ಪಿ.ವಿ.ಎಸ್ – ನವಭಾರತ ವೃತ್ತ – ಹಂಪನಕಟ್ಟೆ ವರೆಗೆ ಮಧ್ಯಾಹ್ನದಿಂದ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವ ವರೆಗೆ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.


1. ಕಾರ್ ಸ್ಟ್ರೀಟ್ – ಕುದ್ರೋಳಿ – ಕೂಳೂರು ಫೆರ್ರಿ ರಸ್ತೆ ಕಡೆಯಿಂದ ಅಡ್ಡ ರಸ್ತೆ ಮೂಲಕ ಎಂ.ಜಿ ರಸ್ತೆ ಪ್ರವೇಶಿಸುವ ಎಲ್ಲಾ ವಾಹನಗಳ ಸಂಚಾರವನ್ನು ನಿಷೇದಿಸಿದೆ.

2. ಕೆ.ಎಸ್.ಅರ್.ಟಿ.ಸಿ, ಶ್ರೀದೇವಿ ಕಾಲೇಜು ರಸ್ತೆ, ಕೊಡಿಯಾಲ್ ಗುತ್ತು ರಸ್ತೆ, ಜೈಲು ರಸ್ತೆ ಹಾಗೂ ಬಿಜೈ ಚರ್ಚ್ ರಸ್ತೆ ಮೂಲಕ ಎಂ.ಜಿ ರಸ್ತೆಗೆ ಬರುವ ಅಡ್ಡ ರಸ್ತೆ ಹಾಗೂ ಬಂಟ್ಸ್ ಹಾಸ್ಟೆಲ್ ಮೂಲಕ ಪಿ.ವಿ.ಎಸ್ ಕಡೆಗೆ ಎಲ್ಲಾ ವಾಹನಗಳ ಸಂಚಾರವನ್ನು ನಿಷೇದಿಸಿದೆ.

4. ಕೊಟ್ಟಾರ ಚೌಕಿ, ಉರ್ವಾ ಸ್ಟೋರ್, ಕೋಟೆಕಣಿ ಕ್ರಾಸ್‌ನಿಂದ (ಲೇಡಿಹಿಲ್) ನಾರಾಯಣಗುರು ವೃತ್ತದ ಕಡೆಗೆ ಬರುವ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇಧಿಸಿದೆ.

5. ಮಣ್ಣಗುಡ್ಡ ಜಂಕ್ಷನ್ ನಿಂದ ನಾರಾಯಣ ಗುರು ವೃತ್ತ (ಲೇಡಿಹಿಲ್) ದ ಕಡೆಗೆ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇದಿಸಿದೆ.

6. ಉರ್ವಾ ಮಾರ್ಕೆಟ್ ಕಡೆಯಿಂದ ನಾರಾಯಣ ಗುರು ವೃತ್ತ (ಲೇಡಿಹಿಲ್) ದ ಕಡೆಗೆ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇದಿಸಿದೆ.

7. ಕೆ.ಎಸ್.ಆರ್.ಟಿ.ಸಿ ಯಿಂದ ಲಾಲ್‌ಬಾಗ್ ಮುಖಾಂತರ ನಾರಾಯಣ ಗುರು ವೃತ್ತ (ಲೇಡಿಹಿಲ್)/ ಪಿವಿಎಸ್ ಕಡೆಗೆ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇದಿಸಿದೆ.

8. ಬಂಟ್ಸ್ ಹಾಸ್ಟೆಲ್, ಕರಂಗಲ್ಪಾಡಿ, ಕೋರ್ಟ್ ಕ್ರಾಸ್ ರಸ್ತೆಯಿಂದ ಪಿವಿಎಸ್, ಎಂ.ಜಿ. ರೋಡ್ ಗೆ ಬರುವ ಎಲ್ಲಾ ವಾಹನದ ಸಂಚಾರ ನಿಷೇಧಿಸಿದೆ.

9. ಕೆ.ಎಸ್.ರಾವ್ ರೋಡ್, ಡೊಂಗರಕೇರಿ ರಸ್ತೆ, ಗದ್ದೆಕೇರಿ ರೋಡ್, ವಿ.ಟಿ. ರೋಡ್, ಶಾರದಾ ವಿದ್ಯಾಲಯ ರಸ್ತೆ ಯಿಂದ ನವಭಾರತ್ ಸರ್ಕಲ್ ಕಡೆಗೆ ಬರುವ ಎಲ್ಲಾ ವಾಹನದ ಸಂಚಾರ ನಿಷೇಧಿಸಿದೆ.

10. ಎಂ.ಜಿ ರಸ್ತೆಯಿಂದ ಜೈಲ್ ರೋಡ್ ಮುಖಾಂತರ ಬಿಜೈ ಚರ್ಚ್ ರೋಡ್ ಕಡೆಗೆ ಬರುವ ಎಲ್ಲಾ ವಾಹನದ ಸಂಚಾರ ನಿಷೇಧಿಸಿದೆ.

ಪೋಷಕರೇ ಗಮನಿಸಿ : ಸುಕನ್ಯಾ ಸಮೃದ್ಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

Posted by Vidyamaana on 2024-06-22 11:31:59 |

Share: | | | | |


ಪೋಷಕರೇ ಗಮನಿಸಿ : ಸುಕನ್ಯಾ ಸಮೃದ್ಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ : ಬೇಟಿ ಬಚಾವೋ-ಬೇಟಿ ಪಡಾವೋ ಅಭಿಯಾನದ ಅಡಿಯಲ್ಲಿ ಭಾರತ ಸರ್ಕಾರದ ಸಣ್ಣ ಠೇವಣಿ ಯೋಜನೆಯಾದ ಸುಕನ್ಯಾ ಸಮೃದ್ಧಿ ಯೋಜನೆ (ಎಸ್‌ಎಸ್ವೈ ಯೋಜನೆ) ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು 2015 ರಲ್ಲಿ ಪ್ರಾರಂಭಿಸಿದರು. ಸುಕನ್ಯಾ ಸಮೃದ್ಧಿ ಯೋಜನೆ (ಎಸ್‌ಎಸ್ವೈ) ಅನ್ನು ದೇಶದಲ್ಲಿ ಹೆಣ್ಣು ಮಗುವಿನ ಭವಿಷ್ಯವನ್ನು ಭದ್ರಪಡಿಸಲು ವಿನ್ಯಾಸಗೊಳಿಸಲಾದ ಕಾರ್ಯತಂತ್ರದ ಹೂಡಿಕೆ ಯೋಜನೆಯಾಗಿ ಪರಿಚಯಿಸಲಾಯಿತು.

ಸುಕನ್ಯಾ ಸಮೃದ್ಧಿ ಯೋಜನೆ ಪೋಷಕರು ತಮ್ಮ ಹೆಣ್ಣುಮಕ್ಕಳಿಗೆ ಜನನದಿಂದ 10 ವರ್ಷದವರೆಗೆ ಖಾತೆಯನ್ನು ತೆರೆಯಲು ಅನುವು ಮಾಡಿಕೊಡುತ್ತದೆ, ಖಾತೆಯು 21 ವರ್ಷಗಳ ನಂತರ ಪರಿಪಕ್ವಗೊಳ್ಳುತ್ತದೆ. ಮುಕ್ತಾಯದ ನಂತರ, ಮಗಳ ಶಿಕ್ಷಣ ಅಥವಾ ಮದುವೆಯ ವೆಚ್ಚಗಳನ್ನು ಬೆಂಬಲಿಸಲು ಸಂಪೂರ್ಣ ಮೊತ್ತವನ್ನು ಹಿಂಪಡೆಯಬಹುದು.



Leave a Comment: