ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಸುದ್ದಿಗಳು News

Posted by vidyamaana on 2024-07-03 13:36:16 |

Share: | | | | |


ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಬೆಂಗಳೂರು (ಜು.3): ಇಲ್ಲಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು.

ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು. ಆದರೆ ಯುವಜೋಡಿಯ ಪ್ರೀತಿಗೆ ವಿದ್ಯಾರ್ಥಿನಿ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ವಿದ್ಯಾರ್ಥಿನಿ ತಲಘಟ್ಟಪುರ ಸಮೀಪದ ಅಂಜನಾಪುರ ಬಳಿ ವಾಸವಿದ್ದಳು. ಯುವಕ ಶ್ರೀಕಾಂತ್ ಕೋಣನಕುಂಟೆ ನಿವಾಸಿಯಾಗಿದ್ದ. ಇಬ್ಬರೂ ನಾಪತ್ತೆಯಾಗಿದ್ದರು. ನಾಪತ್ತೆ ಹಿನ್ನಲೆ ಎರಡೂ ಕಡೆಯವರ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.

ಮದುವೆಯಾಗಿದ್ದ ಶ್ರೀಕಾಂತ್!

ಶ್ರೀಕಾಂತ್ ಗೆ ಬೇರೊಬ್ಬರ ಜೊತೆಗೆ ವಿವಾಹವಾಗಿದೆ. ಆದರೂ ಅಂಜನಾಳನ್ನ ಪ್ರೀತಿ ಮಾಡ್ತಿದ್ದ. ಇಬ್ಬರು ಒಟ್ಟಿಗೆ ಬದುಕಲು ಅವಕಾಶ ಇಲ್ಲ ಎಂದು ಸಾಯೋ ನಿರ್ಧಾರ ಮಾಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನನ್ನ ಮೇಲೆತ್ತಿದ್ದ ನಂತರ ಅಂಜನಾ ಮೃತದೇಹ ಕೂಡ ಮೇಲೆ ಬಂದಿದೆ. ಅಂಜನಾ ಮೃತದೇಹದ ಬಗ್ಗೆ ಪೊಲೀಸರಿಗೂ ಮಾಹಿತಿ ಇರುದಿಲ್ಲ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆ. ಮೊಬೈಲ್ ನಲ್ಲಿ ವೀಡಿಯೊ ಮಾಡಿರುವ ಯುವತಿ ಅಂಜನಾ ಅದನ್ನ ಆಟೋದಲ್ಲಿ ಬಿಟ್ಟು ಶ್ರೀಕಾಂತ್ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋ ಮಾಡಿದ್ದಾಳೆ. ಮೊಬೈಲ್ ವಶಕ್ಕೆ ಪಡೆದುಕೊಂಡಿರೊ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 Share: | | | | |


ಪುತ್ತೂರು: ಪ್ರಭು ಚರುಂಬುರಿ ಅಂಗಡಿಯಲ್ಲಿ ಅಗ್ನಿ ಅವಘಡ ಅಪಾರ ಹಾನಿ

Posted by Vidyamaana on 2024-03-02 04:26:28 |

Share: | | | | |


ಪುತ್ತೂರು: ಪ್ರಭು ಚರುಂಬುರಿ ಅಂಗಡಿಯಲ್ಲಿ ಅಗ್ನಿ ಅವಘಡ ಅಪಾರ ಹಾನಿ

ಪುತ್ತೂರು : ಇಲ್ಲಿನ ಕೊಂಬೆಟ್ಟಿನಲ್ಲಿರುವ ಜಿ ಎಲ್ ಟ್ರೇಡ್ ಸೆಂಟರ್ ನ ಪ್ರಭು ಚರುಂಬುರಿ ಮಳಿಗೆಯಲ್ಲಿ‌ ಶುಕ್ರವಾರ ತಡರಾತ್ರಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಅಂಗಡಿಯಲ್ಲಿದ್ದ ಸಾಮಾಗ್ರಿಗಳು ಸುಟ್ಟು ಕರಕಲಾಗಿವೆ.

ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದೆ. ಅದೃಷ್ಟವಶಾತ್ ಯಾವುದೇ ರೀತಿಯಾದಂತಹ ಪ್ರಾಣಾಪಾಯ ಸಂಭವಿಸಿಲ್ಲ. ಅದರೆ ಘಟನೆಯಿಂದ ತೀವ್ರ ನಷ್ಟವಾಗಿದೆ.

ನಾಳೆ (ಜೂನ್ 3)ಪುತ್ತೂರು ಕಿಲ್ಲೆ ಮೈದಾನದ ಸಂತೆಗೆ ಹಿಂಬಾಗಿಲಿನಿಂದ ಪ್ರವೇಶಿಸಿ- ತಹಸೀಲ್ದಾ‌ರ್ ಕುಂಞ ಅಹಮ್ಮದ್

Posted by Vidyamaana on 2024-06-02 23:35:39 |

Share: | | | | |


ನಾಳೆ (ಜೂನ್ 3)ಪುತ್ತೂರು ಕಿಲ್ಲೆ ಮೈದಾನದ ಸಂತೆಗೆ ಹಿಂಬಾಗಿಲಿನಿಂದ ಪ್ರವೇಶಿಸಿ- ತಹಸೀಲ್ದಾ‌ರ್ ಕುಂಞ ಅಹಮ್ಮದ್

ಪುತ್ತೂರು: ಕರ್ನಾಟಕ ವಿಧಾನಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿ ಮತಗಟ್ಟೆ ಸಮೀಪ ಪುತ್ತೂರು ಕಿಲ್ಲೆ ಮೈದಾನದ ಸೋಮವಾರದ ಸಂತೆ ನಡೆಯಲಿರುವ ಹಿನ್ನೆಲೆಯಲ್ಲಿ ಸಂತೆಯನ್ನು ರದ್ದುಗೊಳಿಸದೆ ಸಂತೆಯ ಪ್ರವೇಶದ ಮುಖ್ಯ ದ್ವಾರವನ್ನು ಬಂದ್ ಮಾಡಲಾಗುವುದು.

ಹಿಂಬಂದಿಯ ಗೇಟಿನ ಮೂಲಕ ಸಾರ್ವಜನಿಕರಿಗೆ ಸಂತೆಗೆ ಆಗಮಿಸಲು ಅವಕಾಶ ಮಾಡಲಾಗಿದೆ ಎಂದು ಪುತ್ತೂರು ತಹಸೀಲ್ದಾರ್ ಕುಂಞ ಅಹಮ್ಮದ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮತದಾನ ಪ್ರಕ್ರಿಯೆ ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು ಮುಕ್ತ ಹಾಗು ನ್ಯಾಯೋಚಿತ ನಿಷ್ಪಕ್ಷವಾಗಿ ಚುನಾವಣೆಯನ್ನು ನಡೆಸುವ ಸಲುವಾಗಿ ಜಿಲ್ಲಾಧಿಕಾರಿಗಳ ಆದೇಶದಂತೆ ಕಿಲ್ಲೆ ಮೈದಾನದ ಸೋಮವಾರ ಸಂತೆಯು ಕೂಡಾ ಚುನಾವಣೆ ಸಂದರ್ಭದಲ್ಲಿ ನಡೆಯುತ್ತದೆ.

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಕಟ್ಟೆಚ್ಚರದಿಂದ ಇರುವಂತೆ ಅಧಿಕಾರಿಗಳಿಗೆ ಶಾಸಕರ ಸೂಚನೆ

Posted by Vidyamaana on 2023-07-04 05:47:56 |

Share: | | | | |


ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಕಟ್ಟೆಚ್ಚರದಿಂದ ಇರುವಂತೆ ಅಧಿಕಾರಿಗಳಿಗೆ ಶಾಸಕರ ಸೂಚನೆ

ಪುತ್ತೂರು: ಮುಂದಿನ ಕೆಲವು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವ ಇರುವ ಬಗ್ಗೆ ಹವಾಮಾನ ಇಲಾಖೆ ಸೂಚನೆಯನ್ನು ನೀಡಿದ್ದು ಈ ನಿಟ್ಟಿನಲ್ಲಿ ಅಧಿಕಾರಿಗಳು ಕಟ್ಟೆಚ್ಚರದಿಂದ ಇರುವಂತೆ ಶಾಸಕರಾದ ಅಶೋಕ್ ರೈ ಸೂಚನೆಯನ್ನು ನೀಡಿದ್ದಾರೆ.

ಮಳೆ ಈ ಬಾರಿ ತಡವಾಗಿ ಆರಂಭಗೊಂಡಿದ್ದರೂ ಜುಲೈ ಪ್ರಾರಂಭದಲ್ಲೇ ಹೆಚ್ಚಿನ ಮಳೆಯಾಗುತ್ತಿದೆ. ಮುಂದಿನ ಒಂದು ವಾರಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೇಯಾಗಲಿದೆ. ಪುತ್ತೂರು ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಯಾವುದೇ ಅನಾಹುತಗಳು ಸಂಭವಿಸುವ ಸಾಧ್ಯತೆ ಇದ್ದು ಅಧಿಕಾರಿಗಳು ದಿನದ ೨೪ ಗಂಟೆಯೂ ಸದಾ ಎಚ್ಚರದಿಂದ ಇರಬೇಕು ಎಂದು ಶಾಸಕರು ಸೂಚನೆಯನ್ನು ನೀಡಿದ್ದಾರೆ. ಮರಗಳು ಬಿದ್ದು ಹಾನಿಯಾಗುವುದು, ವಿದ್ಯುತ್ ಅವಘಡ ಸೇರಿದಂತೆ ಯಾವುದೇ ಅನಾಹುತ ನಡೆದರೂ ತಕ್ಷಣ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಬೇಕು. ಅನಾಹುತದಿಂದ ಯಾರೇ ಆಗಲಿ ಗಾಯಗೊಂಡರೆ ಅಂಥವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದಯ ಚಿಕಿತ್ಸೆ ಕೊಡಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಮರ ಬಿದ್ದು ಅಥವ ಧರೆ ಜರಿದು ಮನೆಗಳಿಗೆ ಹಾನಿಯಾದರೆ ಆ ಮನೆಗಳಲ್ಲಿ ಕುಟುಂಬಗಳಿಗೆ ವಾಸ್ತವ್ಯ ಮಾಡಲು ಸಾಧ್ಯವಿಲ್ಲದೇ ಹೋದಲ್ಲಿ ಅಥವಾ ವಾಸ್ತವ್ಯವಾಗಲು ಅಪಾಯಕಾರಿ ಸ್ಥಳ ಎಂದು ಗೊತ್ತಾದಲ್ಲಿ ತಕ್ಷಣ ಅವರಿಗೆ ವಾಸ್ತವ್ಯದ ವ್ಯವಸ್ಥೆಯನ್ನು ಮಾಡಬೇಕು. ಕುಡಿಯುವ ನೀರು , ವಿದ್ಯುತ್  ಸಮರ್ಪಕವಾಗಿರಬೇಕು. ನಗರಸಭಾ ವ್ಯಾಪ್ತಿಯಲ್ಲಿ ಎಚ್ಚರದಿಂದ ಕಾರ್ಯನಿರ್ವಹಿಸುವಂತೆಯೂ ನಗರಸಭಾ ಅದಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ. ಪುತ್ತೂರು ಸಹಾಯಕ ಆಯುಕ್ತರು, ತಹಸಿಲ್ದಾರ್, ಕಂದಾಯ ನಿರೀಕ್ಷಕರು , ಅಗ್ನಿ ಶಾಮಕದಳ, ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಸದಾ ಕಟ್ಟೆಚ್ಚರದಿಂದ ಇರುವಂತೆ ಶಾಸಕರು ಸೂಚನೆಯನ್ನು ನೀಡಿದ್ದಾರೆ.

ವಿಧಾನಸಭಾ ಅಧಿವೇಶನ ನಡೆಯುವ ಹಿನ್ನೆಲೆಯಲ್ಲಿ ನಾನು ಅಧಿವೇಶನದಲ್ಲಿ ಭಾಗವಹಿಸುತ್ತಿದ್ದು ಕ್ಷೇತ್ರದ ಆಗುಹೋಗುಗಳ ಬಗ್ಗೆ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿರುವುದಾಗಿ ಶಾಸಕರು ತಿಳಿಸಿದ್ದಾರೆ.


ತಡರಾತ್ರಿ ಕರೆ ಮಾಡಿದ ಶಾಸಕರು

ನಗರದ ಹೊರವಲಯದ ಸಿಂಹವನದಲ್ಲಿ ಭಾರೀ ಗಾತ್ರದಮರವೊಂದು ಗಾಳಿಗೆ ಉರುಳಿ ಬಿದ್ದಿದ್ದು ಮನೆಯೊಂದಕ್ಕೆ ಬಾಗಶ: ಹಾನಿಯಾಗಿದೆ. ವಿಷಯ ತಿಳಿದ ಶಾಸಕರು ತಡರಾತ್ರಿ ಸಹಾಯಕ ಆಯುಕ್ತರಿಂದ ಮಾಹಿತಿ ಪಡೆದುಕೊಂಡಿದ್ದು ತಕ್ಷಣವೇ ಮರವನ್ನು ತೆರವುಗೊಳಿಸಿ ಮನೆಗೆ ಹಾನಿಯಾಗಿದ್ದಲ್ಲಿ ತಕ್ಷಣ ದುರಸ್ಥಿಗೆ ನೆರವು ನೀಡುವಂತೆಯೂ ಸೂಚವನೆಯನ್ನು ನೀಡಿದ್ದಾರೆ. ಶಸಕರ ಸೂಚನೆಯ ಬಳಿಕ ತಡರಾತ್ರಿಯೇ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು ಮನೆಗೆ ಬಿದ್ದಿದ್ದ ಮರದ ಗೆಲ್ಲುಗಳನ್ನು ತೆರವು ಮಾಡಲಾಗಿದ್ದು ಯಾವುದೇ ಹಾನಿ ಸಂಭವಿಸಿಲ್ಲ. ಮರವನ್ನು ಬೆಳಿಗ್ಗೆ ಅರಣ್ಯ ಇಲಾಖಾ ಅಧಿಕಾರಿಗಳ ಜೊತೆಗೆ ಶಾಸಕ ಅಶೋಕ್ ರೈ ಅಭಿಮಾನಿಬಳಗದ ತಂಡದ ಸಹಕಾರದೊಂದಿಗೆ ಮರ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ.

ಪ್ರತೀಯೊಬ್ಬ ಫಲಾನುಭವಿಗೆ ಹಕ್ಕುಪತ್ರ ತಲುಪಿಸಲು ನಾನು ಬದ್ಧ – ಶಾಸಕ ಅಶೋಕ್ ಕುಮಾರ್ ರೈ

Posted by Vidyamaana on 2024-01-02 22:29:50 |

Share: | | | | |


ಪ್ರತೀಯೊಬ್ಬ ಫಲಾನುಭವಿಗೆ ಹಕ್ಕುಪತ್ರ ತಲುಪಿಸಲು ನಾನು ಬದ್ಧ – ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಪುತ್ತೂರು ಹಾಗೂ ಉಪ್ಪಿನಂಗಡಿ ಹೋಬಳಿಯಲ್ಲಿ ಬಾಕಿಯಿರುವ ಅಕ್ರಮ-ಸಕ್ರಮ, 94ಸಿ, 94ಸಿಸಿ ಹಕ್ಕುಪತ್ರ ವಿತರಣೆಯನ್ನು ಪ್ರಾಮಾಣಿಕವಾಗಿ, ಭ್ರಷ್ಟಾಚಾರ ರಹಿತವಾಗಿ ಕಾನೂನಿನ ಚೌಕಟ್ಟಿನಲ್ಲಿ, ಸಂಬಂಧ ಪಟ್ಟ ಅಧಿಕಾರಿಗಳ ಸಹಕಾರದೊಂದಿಗೆ ಮುಂದಿನ ದಿನಗಳಲ್ಲಿ ಪ್ರತಿಯೊಬ್ಬ ಫಲಾನುಭವಿಯ ಮನೆಗೆ ತಲುಪಿಸುವ ಕೆಲಸ ಮಾಡಲಾಗುವುದು ಎಂದು ಶಾಸಕ ಅಶೋಕ್‌ ಕುಮಾ‌ರ್ ರೈ ಹೇಳಿದರು.


ಅವರು ಶಾಸಕರ ಕಚೇರಿ ಎದುರು ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಪುತ್ತೂರು ಹಾಗೂ ಉಪ್ಪಿನಂಗಡಿ ಹೋಬಳಿಯ ಅಕ್ರಮ-ಸಕ್ರಮ, 94ಸಿ ಹಾಗೂ 94ಸಿಸಿ ಹಕ್ಕುಪತ್ರ ವಿತರಿಸಿ ಮಾತನಾಡಿದರು.


ಇಂದು ಸುಮಾರು 460 ಮಂದಿಗೆ ಹಕ್ಕುಪತ್ರ ವಿತರಣೆ ನಡೆದಿದೆ. ಮುಂದೆ -ವಿಟ್ಲ ಭಾಗದ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆಗಾಗಿ 260 ಕಡತಗಳು ರೆಡಿಯಾಗಿದೆ ಎಂದು ತಿಳಿಸಿದರು.


ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ ಮಾತನಾಡಿ, ಪುತ್ತೂರಿನಲ್ಲಿ ಸರಕಾರದ ಯೋಜನೆ ಪ್ರತಿಯೊಬ್ಬ ಬಡ ಫಲಾನುಭವಿಗೆ ತಲುಪುವ ನಿಟ್ಟಿನಲ್ಲಿ ಪುತ್ತೂರಿನ ಪ್ರತಿ ಸರಕಾರಿ ಕಚೇರಿಯಲ್ಲಿ ನನ್ನ ವೈಯಕ್ತಿಕ ಮೊಬೈಲ್ ನಂಬ‌ರ್ ಅಳವಡಿಸುತ್ತೇನೆ. ಏನಾದರೂ ಸಮಸ್ಯೆ ಉಂಟಾದಲ್ಲಿ ನನಗೆ ಕರೆ ಮಾಡಬಹುದು ಎಂದು ತಿಳಿಸಿದ ಅವರು, ಸರಕಾರಿ ಕೆಲಸವನ್ನು ಎಲ್ಲರೊಂದಿಗೆ ಕೈಜೋಡಿಸಿ ಶ್ರಮ ಪಟ್ಟು ಮಾಡುತ್ತೇನೆ ಎಂದರು.


ವೇದಿಕೆಯಲ್ಲಿ ತಹಶೀಲ್ದಾ‌ರ್ ಶಿವಶಂಕ‌ರ್, ಅಕ್ರಮ-ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು,ರಾಮಣ್ಣ ಪಿಲಿಂಜ, ರೂಪರೇಖಾ ಆಳ್ವ ಉಪಸ್ಥಿತರಿದ್ದರು.

ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸುಮಾ

Posted by Vidyamaana on 2023-08-14 03:17:04 |

Share: | | | | |


ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸುಮಾ

ಬೆಳ್ತಂಗಡಿ: ಅನಾರೋಗ್ಯದಿಂದ ಬಳಲಿ ಚಿಕಿತ್ಸೆ ಪಡೆದು ಮನೆಯಲ್ಲಿದ್ದ ಯುವತಿ ಲೋ ಬಿಪಿ ಆಗಿ ಹೃದಯಾಘಾತಗಾಗಿ ಮೃತಪಟ್ಟ ಘಟನೆ ಆ 13 ರಂದು  ನಡೆದಿದೆ.


ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲು ಜಾತಿಮಾರು ನಿವಾಸಿ  ರಾಜು ದೇವಾಡಿಗ ಮತ್ತು ಸರೋಜ ದಂಪತಿಗಳ ಮಗಳು ಸುಮಾ (19) ಮೃತಪಟ್ಟ ಯುವತಿಯಾಗಿದ್ದಾಳೆ.


ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತಿದ್ದ ವಿದ್ಯಾರ್ಥಿನಿ ಸುಮ ಮನೆಗೆ ಬಂದಿದ್ದಳು. ಆಗಸ್ಟ್ 9 ರಂದು ಅನಾರೋಗ್ಯದ ಕಾರಣದಿಂದ ಸ್ಥಳೀಯ ಆಸ್ಪತ್ರೆಗೆ ತೆರಳಿ ಮಾತ್ರೆಗಳನ್ನು ಪಡೆದು ಮನೆಗೆ ತೆರಳಿದ್ದಳು. ನಂತರ ಆಗಸ್ಟ್11 ರಂದು ಮತ್ತೆ ಅನಾರೋಗ್ಯ ಜಾಸ್ತಿಯಾದ ಕಾರಣ ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗೆ ಹೋಗಿದ್ದು ಗುಣಮುಖವಾಗಿರುವ ಕಾರಣ ತನ್ನ ಅಕ್ಕನ ಮನೆ ಬಳ್ಳಮಂಜಕ್ಕೆ ತೆರಳಿದ್ದು. ಆಗಸ್ಟ್ 13 ರಂದು ಸಂಜೆ ಮತ್ತೆ ಅಸ್ವಸ್ಥಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಲೋ ಬಿಪಿ ಉಂಟಾಗಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.

500 ಪರ್ಸೆಂಟ್ ಟಿಕೆಟ್ ಸಿಗುತ್ತದೆ ಎಂದಿದ್ದ ಸುಮಲತಾಗೆ ಹೆಚ್​​ಡಿಕೆ ಟಾಂಗ್

Posted by Vidyamaana on 2024-03-07 18:15:02 |

Share: | | | | |


500 ಪರ್ಸೆಂಟ್ ಟಿಕೆಟ್ ಸಿಗುತ್ತದೆ ಎಂದಿದ್ದ ಸುಮಲತಾಗೆ ಹೆಚ್​​ಡಿಕೆ ಟಾಂಗ್

ಬೆಂಗಳೂರು : ಮಂಡ್ಯ ಲೋಕಸಭೆ ಕ್ಷೇತ್ರದ (Mandya Loksabha Constituency) ಅಭ್ಯರ್ಥಿ ಆಯ್ಕೆ ಸಂಬಂಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (Former CM HD Kumaraswamy) ನೇತೃತ್ವದಲ್ಲಿ ಇಂದು ಸಭೆ ನಡೆದಿದೆ. ಜೆಪಿ ನಗರದ ಕುಮಾರಸ್ವಾಮಿ ಅವರ ನಿವಾಸದಲ್ಲಿ ನಡೆದ ಸಭೆ ಮಂಡ್ಯ ಜಿಲ್ಲೆಯ ಪ್ರಮುಖರು ಭಾಗಿಯಾಗಿದ್ದರು.ಸಭೆಯಲ್ಲಿ 500 ಪರ್ಸೆಂಟ್ ಟಿಕೆಟ್ ಸಿಗುತ್ತದೆ ಎಂದಿದ್ದ ಸಂಸದೆ ಸುಮಲತಾ ಅಂಬರೀಶ್ (MP Sumalatha Ambareesh) ಅವರಿಗೆ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಮಂಡ್ಯ ಕ್ಷೇತ್ರ ಸಿಗುವ ವಿಶ್ವಾಸ

ನಿಮ್ಮ ಪಾಡಿಗೆ ನೀವು ಕೆಲಸ ಮಾಡಿ, ನಾನು ಯಾರ ಹೆಸರನ್ನು ಘೋಷಣೆ ಮಾಡುತ್ತೇನೋ ಅವರ ಪರ ಕೆಲಸ ಮಾಡಿ. ಅಭ್ಯರ್ಥಿ ಆಯ್ಕೆ ವಿಷಯದಲ್ಲಿ ನಾನು ತೀರ್ಮಾನ ಮಾಡ್ತೀವಿ. ರಾಜ್ಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿ ಆಯ್ಕೆ ಮಾಡುತ್ತೇವೆ. ಯಾವುದೇ ಮಾತಿಗೆಲ್ಲ ತಲೆಕೆಡೆಸಿಕೊಳ್ಳಬೇಡಿ ಎಂದು ಹೇಳುವ ಮೂಲಕ ಪರೋಕ್ಷವಾಗಿ ಮಂಡ್ಯ ಕ್ಷೇತ್ರ ತಮಗೆ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಿ


ಈ ವೇಳೆ ಕುಮಾರಸ್ವಾಮಿ ಅವರು ಅಭ್ಯರ್ಥಿ ಆಯ್ಕೆ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಚುನಾವಣೆಯಲ್ಲಿ ಗೆಲುವು ಮುಖ್ಯ. ಮೈತ್ರಿ ಅಭ್ಯರ್ಥಿಯನ್ನು ನಾವು ಗೆಲ್ಲಿಸಿಕೊಳ್ಳಲೇಬೇಕು. ಹಿಂದಿನ ಘಟನೆಗಳಿಂದ ಪಾಠ ಕಲಿಯಬೇಕು ಹಾಗೂ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಮೈತ್ರಿ ಪಕ್ಷಕ್ಕೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವಂತೆ ಕಾರ್ಯಕರ್ತರಿಗೆ ಕುಮಾರಸ್ವಾಮ ಸೂಚಿಸಿದ್ದಾರೆ ಎನ್ನಲಾಗಿದೆ.

ಮೈತ್ರಿ ಧರ್ಮ ಮೀರುವುದು ಬೇಡ

ಯಾವ ಕಾರಣಕ್ಕೂ ಮೈತ್ರಿ ಧರ್ಮ ಮೀರುವುದು ಬೇಡ. ಜಿಲ್ಲೆಯ ಬಿಜೆಪಿ ನಾಯಕರು, ರಾಜ್ಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿ ಆಯ್ಕೆ ಮಾಡಲಾಗುವುದು. ಪಕ್ಷಕ್ಕೆ ಹಾಗೂ ಚುನಾವಣೆ ಗೆಲುವಿಗೆ ಹಾನಿ ಆಗುವಂತಹ ಯಾವುದೇ ಕೆಲಸವನ್ನು ಯಾರೂ ಮಾಡಬಾರದು. ಅಭ್ಯರ್ಥಿ ಯಾರು ಆಗುತ್ತಾರೆ ಎನ್ನುವುದು ಮುಖ್ಯವಲ್ಲ, ಗೆಲುವೇ ಮುಖ್ಯ ಎಂದು ಎಲ್ಲಾ ನಾಯಕರಿಗೆ ಕುಮಾರಸ್ವಾಮಿ ಪಾಠ ಮಾಡಿದ್ದಾರಂತೆ.


ಸುಮಲತಾ ಮಾತಿಗೆ ಪ್ರತಿಕ್ರಿಯಸದಂತೆ ಸೂಚೆನೆ

ಇದೇ ವೇಳೆ ಸುಮಲತಾ ಅಂಬರೀಶ್ ಮಾತಿಗೆಲ್ಲ ರಿಯಾಕ್ಟ್ ಮಾಡದಂತೆ ಎಚ್ಚರಿಕೆ ಕೊಟ್ಟಿರುವ ಹೆಚ್​​ಡಿಕೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ಥಳೀಯ ಜೆಡಿಎಸ್ ನಾಯಕರು ಸುಮಲತಾರನ್ನ ಟೀಕಿಸಿದ್ದೆ ಪಕ್ಷದ ಅಭ್ಯರ್ಥಿ ನಿಖಿಲ್ ಸೋಲಿಗೆ ಕಾರಣವಾಗಿತ್ತು. ಅದಕ್ಕಾಗಿ ಈ ಬಾರಿಯ ಚುನಾವಣೆಯಲ್ಲಿ ಆ ರೀತಿಯ ಮಾತುಗಳನ್ನು ಆಡದಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.



Leave a Comment: