ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಸುದ್ದಿಗಳು News

Posted by vidyamaana on 2024-07-03 13:36:16 |

Share: | | | | |


ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಬೆಂಗಳೂರು (ಜು.3): ಇಲ್ಲಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು.

ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು. ಆದರೆ ಯುವಜೋಡಿಯ ಪ್ರೀತಿಗೆ ವಿದ್ಯಾರ್ಥಿನಿ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ವಿದ್ಯಾರ್ಥಿನಿ ತಲಘಟ್ಟಪುರ ಸಮೀಪದ ಅಂಜನಾಪುರ ಬಳಿ ವಾಸವಿದ್ದಳು. ಯುವಕ ಶ್ರೀಕಾಂತ್ ಕೋಣನಕುಂಟೆ ನಿವಾಸಿಯಾಗಿದ್ದ. ಇಬ್ಬರೂ ನಾಪತ್ತೆಯಾಗಿದ್ದರು. ನಾಪತ್ತೆ ಹಿನ್ನಲೆ ಎರಡೂ ಕಡೆಯವರ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.

ಮದುವೆಯಾಗಿದ್ದ ಶ್ರೀಕಾಂತ್!

ಶ್ರೀಕಾಂತ್ ಗೆ ಬೇರೊಬ್ಬರ ಜೊತೆಗೆ ವಿವಾಹವಾಗಿದೆ. ಆದರೂ ಅಂಜನಾಳನ್ನ ಪ್ರೀತಿ ಮಾಡ್ತಿದ್ದ. ಇಬ್ಬರು ಒಟ್ಟಿಗೆ ಬದುಕಲು ಅವಕಾಶ ಇಲ್ಲ ಎಂದು ಸಾಯೋ ನಿರ್ಧಾರ ಮಾಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನನ್ನ ಮೇಲೆತ್ತಿದ್ದ ನಂತರ ಅಂಜನಾ ಮೃತದೇಹ ಕೂಡ ಮೇಲೆ ಬಂದಿದೆ. ಅಂಜನಾ ಮೃತದೇಹದ ಬಗ್ಗೆ ಪೊಲೀಸರಿಗೂ ಮಾಹಿತಿ ಇರುದಿಲ್ಲ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆ. ಮೊಬೈಲ್ ನಲ್ಲಿ ವೀಡಿಯೊ ಮಾಡಿರುವ ಯುವತಿ ಅಂಜನಾ ಅದನ್ನ ಆಟೋದಲ್ಲಿ ಬಿಟ್ಟು ಶ್ರೀಕಾಂತ್ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋ ಮಾಡಿದ್ದಾಳೆ. ಮೊಬೈಲ್ ವಶಕ್ಕೆ ಪಡೆದುಕೊಂಡಿರೊ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 Share: | | | | |


ಸಾಜ: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರವಾಗಿ ಮಹಾ ಸಂಪರ್ಕ ಅಭಿಯಾನಕ್ಕೆ ಚಾಲನೆ

Posted by Vidyamaana on 2023-04-30 06:05:43 |

Share: | | | | |


 ಸಾಜ: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರವಾಗಿ ಮಹಾ ಸಂಪರ್ಕ ಅಭಿಯಾನಕ್ಕೆ ಚಾಲನೆ

ಪುತ್ತೂರು: ವಿಧಾನ ಸಭಾ ಚುನಾವಣೆಯ ಪ್ರಯುಕ್ತ ಬಿಜೆಪಿ ಪಕ್ಷದ ಅಭ್ಯರ್ಥಿ ಆಶಾ ತಿಮ್ಮಪ್ಪ ರವರ ಪರವಾಗಿ ಸಾಜ ವಾರ್ಡ್ ನ ಶ್ರೀ ದುರ್ಗಾ-ವೆಂಕಟ್ರಮಣ ಭಜನಾ ಮಂದಿರದ ವಠಾರ 105ರಲ್ಲಿ ಮಹಾ ಸಂಪರ್ಕ ಅಭಿಯಾನ ಮತ್ತು ಪ್ರಣಾಳಿಕೆ ನೀಡುವ ಕಾರ್ಯಕ್ರಮ ಕ್ಕೆ ಚಾಲನೆ ನೀಡಲಾಯಿತು.

ಇಂದು ಪ್ರಥಮ ಪಿಯು ಫ‌ಲಿತಾಂಶ

Posted by Vidyamaana on 2024-03-30 09:03:45 |

Share: | | | | |


ಇಂದು ಪ್ರಥಮ ಪಿಯು ಫ‌ಲಿತಾಂಶ

ಬೆಂಗಳೂರು: ಪ್ರಥಮ ಪಿಯುಸಿ ಪರೀಕ್ಷಾ ಫ‌ಲಿತಾಂಶ ಶನಿವಾರ karresults.nic.inನಲ್ಲಿ ಮತ್ತು ಶಾಲಾಕಾಲೇಜುಗಳಲ್ಲಿ ಪ್ರಕಟಗೊಳ್ಳಲಿದೆ. ಬೆಳಗ್ಗೆ 9ರಿಂದ 11ರ ಮಧ್ಯೆ ಪ್ರಕಟಗೊಳ್ಳುವ ಸಾಧ್ಯತೆಯಿದೆ ಎಂದು ಮಂಡಳಿಯ ಮೂಲಗಳು ತಿಳಿಸಿವೆ.

ಬೆಂಗಳೂರು ಕಂಬಳ ನಮ್ಮ ಕಂಬಳ : ಕರೆ ವೀಕ್ಷಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Posted by Vidyamaana on 2023-11-24 20:03:56 |

Share: | | | | |


ಬೆಂಗಳೂರು ಕಂಬಳ ನಮ್ಮ ಕಂಬಳ : ಕರೆ ವೀಕ್ಷಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು : ಕಂಬಳದ ಕರೆ ಮತ್ತು ವ್ಯವಸ್ಥೆಯನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವೀಕ್ಷಿಸಿದರು.

ಇತಿಹಾಸದಲ್ಲೇ ಪ್ರಥಮ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಬೆಂಗಳೂರು ಕಂಬಳ ನಮ್ಮ ಕಂಬಳ ಕಾರ್ಯಕ್ರಮಕ್ಕೆ ಆಗಮಿಸಿದ ಕೇಂದ್ರ ಕೃಷಿ ಮತ್ತು ರೈತಕಲ್ಯಾಣ ಇಲಾಖೆ ರಾಜ್ಯ ಸಚಿವರು ಹಾಗೂ ಸಂಸದರಾದ ಶೋಭ ಕರಂದ್ಲಾಜೆ ಕರೆಯನ್ನು ವೀಕ್ಷಿಸಿದರು.

ಸಚಿವೆ ಕೋಣದ ಮಾಲಕರೊಂದಿಗೆ ಮಾತುಕತೆ ನಡೆಸಿ ಕೋಣಗಳ ಜೊತೆ ಪೋಟೋ ತೆಗೆದುಕೊಂಡರು.

ಈ ಸಂದರ್ಭ ಬೆಂಗಳೂರು ಕಂಬಳ ಸಮಿತಿಯ ಪದಾಧಿಕಾರಿಗಳು ಹಾಗೂ ಕಂಬಳದ ಅಭಿಮಾನಿಗಳು ಉಪಸ್ಥಿತರಿದ್ದರು.

ತಾಂತ್ರಿಕ ದೋಷ: ಬಾಹ್ಯಾಕಾಶ ನಿಲ್ದಾಣದಲ್ಲಿಯೇ ಉಳಿದ ಸುನಿತಾ ವಿಲಿಯಮ್ಸ್

Posted by Vidyamaana on 2024-06-29 11:21:28 |

Share: | | | | |


ತಾಂತ್ರಿಕ ದೋಷ: ಬಾಹ್ಯಾಕಾಶ ನಿಲ್ದಾಣದಲ್ಲಿಯೇ ಉಳಿದ ಸುನಿತಾ ವಿಲಿಯಮ್ಸ್

ವಾಷಿಂಗ್ಟನ್: ತಾಂತ್ರಿಕ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಮತ್ತು ಅವರ ಸಹಯಾತ್ರಿ ಬಚ್‌ ವಿಲ್ಮೋರ್ ಅವರು ಇನ್ನು ಕೆಲ ದಿನಗಳ ಕಾಲ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿಯೇ ಉಳಿಯಲಿದ್ದಾರೆ ಎಂದು ನಾಸಾ ತಿಳಿಸಿದೆ.ಜೂನ್ 5ರಂದು ಸುನಿತಾ ಮತ್ತು ವಿಲ್ಮೋರ್‌ ಅವರಿದ್ದ ಸ್ಟಾರ್‌ಲೈನರ್‌ ನೌಕೆಯನ್ನು ಫ್ಲಾರಿಡಾದ ಕೇಪ್‌ ಕ್ಯಾನವೆರಲ್‌ ಸ್ಪೇಸ್‌ ಫೋರ್ಸ್‌ ಕೇಂದ್ರದಿಂದ ಉಡಾವಣೆ ಮಾಡಲಾಗಿತ್ತು.

ಜೂನ್ 6ರ ಮಧ್ಯಾಹ್ನ 1.34ಕ್ಕೆ ಗಗನನೌಕೆಯನ್ನು ಬಾಹ್ಯಾಕಾಶ ನಿಲ್ದಾಣಕ್ಕೆ ಡಾಕ್‌ (ಕೂಡಿಕೊಳ್ಳುವ ಪ್ರಕ್ರಿಯೆ) ಮಾಡಲಾಗಿತ್ತು. 

ತಾಂತ್ರಿಕ ದೋಷಕ್ಕೆ ಕಾರಣಗಳೇನು ಎಂಬ ಬಗ್ಗೆ ಪರೀಕ್ಷೆಗಳು ನಡೆಯುತ್ತಿದ್ದು, ಗಗನಯಾತ್ರಿಗಳು ಸುರಕ್ಷಿತವಾಗಿದ್ದಾರೆ ಎಂದು ನಾಸಾ ತಿಳಿಸಿದೆ. ಆದರೆ, ಗಗನಯಾತ್ರಿಗಳು ಯಾವಾಗ ಭೂಮಿಗೆ ಹಿಂದಿರುಗಲಿದ್ದಾರೆ ಎಂಬ ಬಗ್ಗೆ ಮಾಹಿತಿ ನೀಡಿಲ್ಲ.

BIG NEWS: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಮೋಸ: ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರೆಸ್ಟ್

Posted by Vidyamaana on 2024-06-23 18:54:49 |

Share: | | | | |


BIG NEWS: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಮೋಸ: ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರೆಸ್ಟ್

ಶಿವಮೊಗ್ಗ: ಯುವತಿಗೆ ಮುದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಬಿಜೆಪಿ ಜಿಲ್ಲಾ ಪ್ರಧಾನಕಾರ್ಯದರ್ಶಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅರುಣ್ ಕುಗ್ವೆ ಬಂಧಿತ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ. ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಸಾಗರದ ನಿವಾಸದಲ್ಲಿ ಅರುಣ್ ಕುಗ್ವೆಯನ್ನು ಬಂಧಿಸಿದ್ದಾರೆ.

ಸಂತ್ರಸ್ತ ಯುವತಿ ಮೊದಲು ಸಾಗರ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ ಕಾರಣಾಂತರಗಳಿಂದ ಆರೋಪಿ ಅರುಣ್ ವಿರುದ್ಧ ಕ್ರಮ ಕೈಗೊಂಡಿರಲಿಲ್ಲ. ಇದರಿಂದ ಯುವತಿ ಶಿವಮೊಗ್ಗಕ್ಕೆ ಬಂದು ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಿಪಿಐ ಭರತ್ ಕುಮಾರ್ ನೇತೃತ್ವದ ತಂಡ ಅರುಣ್ ಕುಗ್ವೆಯನ್ನು ಬಂಧಿಸಿದೆ.

ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆದದ್ದಲ್ಲ: ದಾಖಲೆ ಸಹಿತ ಸ್ಪಷ್ಟಪಡಿಸಿದ ದಿನೇಶ್ ಗುಂಡೂರಾವ್

Posted by Vidyamaana on 2024-03-18 21:39:28 |

Share: | | | | |


ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆದದ್ದಲ್ಲ: ದಾಖಲೆ ಸಹಿತ ಸ್ಪಷ್ಟಪಡಿಸಿದ ದಿನೇಶ್ ಗುಂಡೂರಾವ್

ಬೆಂಗಳೂರು: ನಗರದ ನಗರತಪೇಟೆಯಲ್ಲಿ ಹನುಮಾನ್ ಜಾಲೀಸಾ ಹಾಕಿದ್ದಕ್ಕೇ ಮೊಬೈಲ್ ಸ್ಪೇರ್ ಪಾರ್ಟ್ಸ್ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಪ್ರಕರಣದ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ದಾಖಲೆ ನೀಡಿದ್ದು, ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಹಲ್ಲೆ ನಡೆದದ್ದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಎಕ್ಸ್ ಪೋಸ್ಟ್ ಮಾಡಿರುವಂತ ಅವರು, ಪ್ರಚೋದನೆಗೆ ಒಳಗಾಗದೆ ವಿವೇಚನೆಯಿಂದ ಯೋಚಿಸಿ. ಲಭ್ಯವಾದ ಎಫ್‌ಐಆರ್ ಪ್ರತಿ ಮತ್ತು ಮುಖೇಶ್ ಅವರು ಕೊಟ್ಟಿರುವ ಕೈ ಬರಹದ ದೂರಿನಲ್ಲಿ ಎಲ್ಲಿಯೂ ನಮಾಝ್ ಅಥವಾ ಆಝಾನ್ ಸಮಯದಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಮಾಡಿದ್ದಾರೆ ಎಂದು ಎಲ್ಲೂ ಉಲ್ಲೇಖಿಸಿಲ್ಲ ಎಂದು ದಾಖಲೆಯೊಂದಿಗೆ ತಿಳಿಸಿದ್ದಾರೆ.

ಅಲ್ಲದೆ, ಮಾಧ್ಯಮಗಳು ಮತ್ತು ಬಿಜೆಪಿ ನಾಯಕರು ಆರೋಪಿಸಿದಂತೆ ಪ್ರಕರಣದ ಆರೋಪಿಗಳಲ್ಲಿ ಮುಸ್ಲಿಮರು ಮಾತ್ರ ಇರುವುದಲ್ಲ. ಆರು ಆರೋಪಿಗಳಲ್ಲಿ ಮೂವರು ಮುಸ್ಲಿಮರು ಮತ್ತು ಇಬ್ಬರು ಹಿಂದೂ ಆರೋಪಿಗಳಿದ್ದಾರೆ. ಈ ಬಗ್ಗೆ ಹೆಚ್ಚಿನ ವಿವರಣೆ ಮತ್ತು ಸ್ಪಷ್ಟೀಕರಣವನ್ನು ತನಿಖೆಯ ಬಳಿಕ ಪೊಲೀಸರು ತಿಳಿಸಬೇಕಾಗಿದೆ ಎಂದು ಹೇಳಿದ್ದಾರೆ



Leave a Comment: